ಹಾವೇರಿ: ರಸ್ತೆ ಬದಿ ನಿಂತಿದ್ದ ವಾಹನಕ್ಕೆ ಕುರಿ ತುಂಬಿದ್ದ ವಾಹನ ಡಿಕ್ಕಿ ; ಮೂವರು ಸಾವು

ಹಾವೇರಿ: ಕುರಿ ತುಂಬಿದ್ದ ಬೊಲೆರೊ ವಾಹನವೊಂದು ರಸ್ತೆ ಬದಿ ನಿಂತಿದ್ದ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ವ್ಯಕ್ತಿಗಳು ಹಾಗೂ ಸುಮಾರು 20 ಕುರಿಗಳು ಸಾವಿಗೀಡಾದ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಂಕಾಪುರ ಟೋಲ್ ಬಳಿ ಮಂಗಳವಾರ ನಡೆದಿದೆ ಎಂದು ವರದಿಯಾಗಿದೆ. ಮಂಗಳವಾರ ಸಂಜೆ ಈ ಅಫಘಾತ ಸಂಭವಿಸಿದ್ದು, ಅಪಘಾತದಲ್ಲಿ ಮೃತಪಟ್ಟವರನ್ನು ರಾಣೆಬೆನ್ನೂರು ತಾಲೂಕಿನ … Continued

ಸೈಬರ್​ ವಂಚಕರು ಕಳುಹಿಸಿದ ಲಿಂಕ್​ ಕ್ಲಿಕ್​ ಮಾಡಿ ಹಣ ಕಳಕೊಂಡ ವಿವಿ ಕುಲಪತಿ

ಹಾವೇರಿ : ಶಿಗ್ಗಾವಿ ತಾಲೂಕಿನ ಗೊಟಗೋಡಿ ಜಾನಪದ ವಿಶ್ವವಿದ್ಯಾಲಯದ ಕುಲಪತಿ ಡಾ. ಟಿ.ಎಂ. ಭಾಸ್ಕರ ಅವರಿಗೆ ಸೈಬರ್ ವಂಚಕರು 60 ಸಾವಿರ ರೂ. ಪಂಗನಾಮ ಹಾಕಿದ್ದಾರೆ ಎಂದು ವರದಿಯಾಗಿದೆ. ಪ್ರಕರಣದ ಕುರಿತು ಅವರೇ ಶಿಗ್ಗಾವಿ ಪೊಲೀಸರಿಗೆ ದೂರು ನೀಡಿದ್ದಾರೆ. ಮಧ್ಯಾಹ್ನದ ಸಮಯದಲ್ಲಿ ಧಾರವಾಡ ಎಸ್‌ಬಿಐ ಬ್ಯಾಂಕ್‌ನ ನವೀಕುಮಾರ ಎಂದು ಹೇಳಿಕೊಂಡು ವ್ಯಕ್ತಿಯೊಬ್ಬ ನನಗೆ ಫೋನ್ ಮಾಡಿದ್ದ. … Continued

ಶಿಗ್ಗಾಂವಿ : ಹೆದ್ದಾರಿ ಪಕ್ಕ ನಿಂತಿದ್ದವರಿಗೆ ಕಾರು ಡಿಕ್ಕಿ ; ಇಬ್ಬರು ಸಾವು

ಹಾವೇರಿ: ಊರಿಗೆ ತೆರಳಲು ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ ಹೊಡೆದು ಇಬ್ಬರು ಮೃತಪಟ್ಟ ಘಟನೆ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ನೀರಲಗಿ ಗ್ರಾಮದ ಬಳಿ ಇರುವ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಮೃತರನ್ನು ವಿರೂಪಾಕ್ಷಪ್ಪ ಕಾಳಿ (60) ಮತ್ತು ಚಿದಾನಂದ ಕುರುಬರ (53) ಎಂದು ಗುರುತಿಸಲಾಗಿದೆ. ಇಬ್ಬರೂ ನೀರಲಗಿ ಗ್ರಾಮದಿಂದ ಶಿಗ್ಗಾಂವಿ ಪಟ್ಟಣಕ್ಕೆ ಹೋಗಲು … Continued

ಕರ್ನಾಟಕ ವಿಧಾನಸಭೆ ಚುನಾವಣೆ: ಕಾಂಗ್ರೆಸ್ ಪಕ್ಷದ 5ನೇ ಪಟ್ಟಿ ಬಿಡುಗಡೆ, ಸಿಎಂ ಬೊಮ್ಮಾಯಿ ವಿರುದ್ಧದ ಅಭ್ಯರ್ಥಿ ದಿಢೀರ್‌ ಬದಲು

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಐದನೇ ಪಟ್ಟಿ ಬಿಡುಗಡೆ ಮಾಡಿದೆ. ಮುಖ್ಯಮಂತ್ರಿ ಬೊಮ್ಮಾಯಿ ಸ್ಪರ್ಧಿಸುವ ಶಿಗ್ಗಾಂವಿ ಮತ ಕ್ಷೇತ್ರದ ಅಭ್ಯರ್ಥಿಯನ್ನು ಬದಲಾಯಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪರ್ಧಿಸಿರುವ ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಪಕ್ಷವು ಈ ಮೊದಲು ಮಹಮ್ಮದ್ ಯೂಸುಫ್ ಸವಣೂರ ಅವರಿಗೆ ಟಿಕೆಟ್‌ ಘೋಷಣೆ ಮಾಡಿತ್ತು. ಆದರೆ ಈಗ ದಿಢೀರ್‌ ಅವರ ಹೆಸರನ್ನು … Continued

ಇಂದಿನಿಂದ ನಟ ಕಿಚ್ಚ ಸುದೀಪ ಪ್ರಚಾರ ಶುರು: ಇಂದು ಸಿಎಂ ಬೊಮ್ಮಾಯಿ ಪರ ಶಿಗ್ಗಾಂವಿಯಲ್ಲಿ ಪ್ರಚಾರ

ಬೆಂಗಳೂರು: ನಟ ಕಿಚ್ಚ ಸುದೀಪ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪರವಾಗಿ ಇಂದು ಪ್ರಚಾರ ಮಾಡಲಿದ್ದಾರೆ. ಮುಖ್ಯಮಂತ್ರಿ ಬೊಮ್ಮಾಯಿಯವರು ಇಂದು (ಏ.19) ಶಿಗ್ಗಾಂವಿಯಲ್ಲಿ ಮಧ್ಯಾಹ್ನ 2 ಗಂಟೆಗೆ ಮತ್ತೊಮ್ಮೆ ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆ ಮುನ್ನ ಬೆಳಿಗ್ಗೆ 10 ಗಂಟೆಗೆ ನಡೆಯುವ ರೋಡ್​ ಶೋನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹಾಗೂ ನಟ … Continued

ಸಿಎಂ ಬೊಮ್ಮಾಯಿ ಆಸ್ತಿ ವಿವರ: ಸ್ವಂತ ವಾಹನವಿಲ್ಲ, 5.98 ಕೋಟಿ ರೂ. ಚರಾಸ್ತಿ, 22.95 ಕೋಟಿ ರೂ. ಸ್ಥಿರಾಸ್ತಿ

ಹಾವೇರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ( ಅವರ ಇಂದು(ಏಪ್ರಿಲ್ 15) ಶಿಗ್ಗಾಂವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಬೊಮ್ಮಾಯಿ ಅವರು ನಾಮಪತ್ರದಲ್ಲಿ ತಮ್ಮ ವೈಯಕ್ತಿ ಮತ್ತು ಕಟುಂಬದ ಆಸ್ತಿ ವಿವರ ನೀಡಿದ್ದು, 5.98 ಕೋಟಿ ರೂ. ಚರಾಸ್ತಿ ಹಾಗೂ 22.95 ಕೋಟಿ ರೂ. ಸ್ಥಿರಾಸ್ತಿ ಘೋಷಿಸಿಕೊಂಡಿದ್ದಾರೆ. ತಮ್ಮ ಬಳಿ ಯಾವುದೇ ವಾಹನಗಳಿಲ್ಲ ಎಂದು ಬೊಮ್ಮಾಯಿ ಅಫಿಡವಿಟ್‌ನಲ್ಲಿ … Continued

ಕರ್ನಾಟಕ ವಿಧಾನಸಭೆ ಚುನಾವಣೆ: ಶಿಗ್ಗಾಂವಿಯಲ್ಲಿ ನಾಮಪತ್ರ ಸಲ್ಲಿಸಿದ ಸಿಎಂ ಬೊಮ್ಮಾಯಿ

ಹಾವೇರಿ: ಮೇ 10ರಂದು ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಾವೇರಿ ಜಿಲ್ಲೆ ಶಿಗ್ಗಾಂವಿಯಲ್ಲಿ ಶನಿವಾರ ನಾಮಪತ್ರ ಸಲ್ಲಿಸಿದ್ದಾರೆ. ಬೊಮ್ಮಾಯಿ ಅವರು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದರು. ಈ ವೇಳೆ ಸಂಸದ ಸಚಿವ ಸಿ.ಸಿ ಪಾಟೀಲ, ಶಿವಕುಮಾರ ಉದಾಸಿ ಮೊದಲಾದವರು ಸಾಥ್ ನೀಡಿದರು. ನಾಮಪತ್ರ ಸಲ್ಲಿಕೆಗೂ ಮುನ್ನ ಮುಖ್ಯಮಂತ್ರಿ ಬೊಮ್ಮಾಯಿ ಹುಬ್ಬಳ್ಳಿ ಸಿದ್ಧಾರೂಢ … Continued

ನನ್ನ ಮರಣದ ನಂತರ ನನ್ನ ದೇಹವನ್ನು ಶಿಗ್ಗಾಂವಿ ಕ್ಷೇತ್ರದ ಮಣ್ಣಿನಲ್ಲೇ ಹೂಳಬೇಕು: ಸಿಎಂ ಬೊಮ್ಮಾಯಿ ಭಾವುಕ ಮಾತು

ಹಾವೇರಿ: ಯಾವ ಜನ್ಮದ ಋಣವೋ ನನಗೆ ಗೊತ್ತಿಲ್ಲ, ನಾನು ಬಂದಾಗ ಪ್ರೀತಿ ವಿಶ್ವಾಸ ತೋರಿಸಿದ್ದೀರಿ. ನಾನು ಸತ್ತ ಮೇಲೆ ನನ್ನ ಅಂತ್ಯಕ್ರಿಯೆ ಇದೇ ಕ್ಷೇತ್ರದಲ್ಲಿ ಮಾಡಬೇಕು, ನನ್ನನ್ನು ಇದೇ ಮಣ್ಣಿನಲ್ಲಿ ಹೂಳಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾವುಕರಾಗಿ ಮಾತನಾಡಿದ್ದಾರೆ. ಹಾವೇರಿ ಜಿಲ್ಲೆ ಶಿಗ್ಗಾಂವಿಯ ಬಾಡ ಗ್ರಾಮದಲ್ಲಿ ನಡೆದ ಕಂದಾಯ ಸಚಿವ ಆರ್‌. ಅಶೋಕ ಅವರ … Continued

ಕೆಜಿಎಫ್‌2 ಸಿನಿಮಾ ವೀಕ್ಷಣೆ ವೇಳೆ ಥಿಯೇಟರ್​ನಲ್ಲೇ ಗುಂಡಿನ ದಾಳಿ: ಯುವಕನಿಗೆ ಗಂಭೀರ ಗಾಯ

ಹಾವೇರಿ : ಶಿಗ್ಗಾವಿ ಪಟ್ಟಣದ ರಾಜಶ್ರೀ ಚಿತ್ರಮಂದಿರದಲ್ಲಿ ಮಂಗಳವಾರ ರಾತ್ರಿ 10:30ರ ಸಮಯದಲ್ಲಿ ‘ಕೆಜಿಎಫ್‌-2’ ಸಿನಿಮಾ ನೋಡುವ ಸಂದರ್ಭ ಕ್ಷುಲ್ಲಕ ಕಾರಣಕ್ಕಾಗಿ ಪ್ರೇಕ್ಷಕರಿಬ್ಬರ ನಡುವೆ ಜಗಳ ನಡೆದು, ಪಿಸ್ತೂಲಿನಿಂದ ಗುಂಡು ಹೊಡೆದಿರುವ ಘಟನೆ ನಡೆದ ಬಗ್ಗೆ ವರದಿಯಾಗಿದೆ. ಶಿಗ್ಗಾವಿ ತಾಲ್ಲೂಕಿನ ಮುಗಳಿ ಗ್ರಾಮದ ವಸಂತಕುಮಾರ ಸಣ್ಣಕಲ್ಲಪ್ಪ ಶಿವಪುರ (28) ಗುಂಡೇಟು ತಿಂದು ಗಾಯಗೊಂಡ ಪ್ರೇಕ್ಷಕ. ಗಂಭೀರವಾಗಿ … Continued