ಶಿಂಧೆ ಬಣದ ಶಿವಸೇನೆ ಸೇರಿದ ಬಾಲಿವುಡ್‌ ನಟ ಗೋವಿಂದ : 14 ವರ್ಷಗಳ ವನವಾಸದ ನಂತರ ರಾಜಕೀಯಕ್ಕೆ

ಮುಂಬೈ: ಲೋಕಸಭೆ ಚುನಾವಣೆಗೆ ಮುನ್ನ ಗುರುವಾರ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಸಮ್ಮುಖದಲ್ಲಿ ಬಾಲಿವುಡ್‌ ಜನಪ್ರಿಯ ನಟ ಗೋವಿಂದ ಅವರು ಶಿವಸೇನೆ (ಶಿಂಧೆ ಬಣ) ಸೇರಿದ್ದಾರೆ. ಹಿಂದಿನ ದಿನ ಮುಖ್ಯಮಂತ್ರಿಯನ್ನು ಭೇಟಿಯಾಗಿದ್ದ ಗೋವಿಂದ ಅವರು ಇಂದು, ಗುರುವಾರ (ಮಾರ್ಚ್‌ ೨೮) ಬಾಳಾಸಾಹೇಬ ಭವನದಲ್ಲಿ ಶಿವಸೇನೆಗೆ ಸೇರಿದರು. ಹಿಂದೂಸ್ತಾನ್ ಟೈಮ್ಸ್ ವರದಿ ಪ್ರಕಾರ, ಮುಂಬೈ ವಾಯವ್ಯ ಲೋಕಸಭಾ … Continued

ಉದ್ಧವ್‌ ಠಾಕ್ರೆ ಬಣಕ್ಕೆ ಹಿನ್ನಡೆ : ಸಿಎಂ ಏಕನಾಥ ಶಿಂಧೆ ಬಣವೇ ನಿಜವಾದ ಶಿವಸೇನೆ ಎಂದು ಮಹಾರಾಷ್ಟ್ರ ಸ್ಪೀಕರ್ ತೀರ್ಪು

ಮುಂಬೈ: ಏಕನಾಥ್ ಶಿಂಧೆ ಅವರಿಗೆ ದೊಡ್ಡ ಗೆಲುವಿನಲ್ಲಿ, ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ರಾಹುಲ್ ನಾರ್ವೇಕರ ಅವರು ಬಹುಪಾಲು ಪಕ್ಷದ ಶಾಸಕರ ಬೆಂಬಲ ಹೊಂದಿರುವುದರಿಂದ ಏಕನಾಥ ಶಿಂಧೆ ನೇತೃತ್ವದ ಶಿವಸೇನೆ ಬಣವೇ ನಿಜವಾದ ಶಿವಸೇನೆಯಾಗಿದೆ ಎಂದು ಬುಧವಾರ ತಮ್ಮ ತೀರ್ಪು ಪ್ರಕಟಿಸಿದ್ದಾರೆ. ಏಕನಾಥ ಶಿಂಧೆ ನೇತೃತ್ವದ ಶಿವಸೇನಾ ಮತ್ತು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾ (ಯುಬಿಟಿ) ಬಣಗಳು … Continued

ಮಹಾರಾಷ್ಟ್ರ ಗ್ರಾಮ ಪಂಚಾಯತ ಚುನಾವಣೆ ಫಲಿತಾಂಶ : ಬಿಜೆಪಿ ಪ್ರಾಬಲ್ಯ

ಮಹಾರಾಷ್ಟ್ರ ಗ್ರಾಮ ಪಂಚಾಯತ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಭಾರತೀಯ ಜನತಾ ಪಕ್ಷ (ಬಿಜೆಪಿ) ಗಮನಾರ್ಹ ಗೆಲುವು ಸಾಧಿಸಿದೆ. ಪ್ರಾಥಮಿಕ ಫಲಿತಾಂಶಗಳ ಪ್ರಕಾರ, ರಾಜ್ಯದ ಗ್ರಾಮ ಪಂಚಾಯಿತ ಚುನಾವಣೆಯಲ್ಲಿ ಬಿಜೆಪಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ, ಈಗಾಗಲೇ 724 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಬಿಜೆಪಿಯ ಜೊತೆಗೆ, ಅದರ ಮಿತ್ರಪಕ್ಷಗಳಾದ ಶಿವಸೇನೆಯ ಶಿಂಧೆ ಬಣ ಮತ್ತು ಎನ್‌ಸಿಪಿಯ ಅಜಿತ್ ಪವಾರ್‌ … Continued

ಸ್ಪೀಕರ್ ನಮ್ಮ ಆದೇಶ ಸೋಲಿಸಲು ಸಾಧ್ಯವಿಲ್ಲ : ಅನರ್ಹತೆ ಅರ್ಜಿಗೆ ಸಂಬಂಧಿಸಿದಂತೆ ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್‌ ಗೆ ಸುಪ್ರೀಂ ಕೋರ್ಟ್ ತರಾಟೆ

ನವದೆಹಲಿ: ಶುಕ್ರವಾರ (ಅಕ್ಟೋಬರ್ 13) ಮುಖ್ಯಮಂತ್ರಿ ಏಕನಾಥ ಶಿಂಧೆ ಮತ್ತು ಅವರನ್ನು ಬೆಂಬಲಿಸುವ ಶಿವಸೇನೆ ಶಾಸಕರ ವಿರುದ್ಧದ ಅನರ್ಹತೆ ಅರ್ಜಿಗಳನ್ನು ನಿರ್ಧರಿಸುವಲ್ಲಿ ವಿಳಂಬವಾದ ಬಗ್ಗೆ ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್‌ಗೆ ಸುಪ್ರೀಂ ಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿತು. ಮಹಾರಾಷ್ಟ್ರದ ಶಿಂಧೆ ಬಣದ ಶಾಸಕರ ಅನರ್ಹತೆ ಪ್ರಕರಣವನ್ನು ತುರ್ತಾಗಿ ನಿರ್ಧರಿಸುವಂತೆ ಕೋರಿ ಶಿವಸೇನೆಯ ಉದ್ಧವ್‌ ಠಾಕ್ರೆ ಬಣದ ಶಾಸಕ … Continued