ಪಹಲ್ಗಾಮ್‌ ಭಯೋತ್ಪಾದಕ ದಾಳಿ : ತಾಯ್ನಾಡಿಗೆ ಬಂದ ಕನ್ನಡಿಗರ ಮೃತದೇಹ

ಬೆಂಗಳೂರು: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರ ಗುಂಡಿಗೆ ಸಾವಿಗೀಡಾದ ಕರ್ನಾಟಕದ ಮೂವರು ಪ್ರವಾಸಿಗರಲ್ಲಿ ಇಬ್ಬರ ಮೃತದೇಹಗಳು ಗುರುವಾರ ಬೆಳಿಗ್ಗೆ ಬೆಂಗಳೂರು ತಲುಪಿವೆ. ಬೆಂಗಳೂರಿನ ಭರತ ಭೂಷಣ ಮತ್ತು ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ ರಾವ್ ಅವರ ಮೃತದೇಹಗಳನ್ನು ಹೊತ್ತ ವಿಮಾನವು ಬೆಳಗಿನ ಜಾವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ. ಸಂತ್ರಸ್ತರ ಕುಟುಂಬಗಳ ಸದಸ್ಯರು ಸಹ … Continued

ನಿನ್ನನ್ನು ಕೊಲ್ಲಲ್ಲ, ಇದನ್ನು ಹೋಗಿ ಮೋದಿಗೆ ಹೇಳುʼ ; ಶಿವಮೊಗ್ಗದ ಉದ್ಯಮಿ ಸಾಯಿಸಿ ಪತ್ನಿಗೆ ಹೇಳಿದ ಭಯೋತ್ಪಾದಕ…

ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭೀಕರ ಭಯೋತ್ಪಾದಕ ದಾಳಿಗೆ (Terrorist Attack) ಇಡೀ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಈ ಭಯೋತ್ಪಾದಕ ದಾಳಿಯಲ್ಲಿ ಶಿವಮೊಗ್ಗದ ಉದ್ಯಮಿಯೊಬ್ಬರು ಮೃತಪಟ್ಟಿದ್ದಾರೆ. ಪತ್ನಿ ಹಾಗೂ ಮಗನ ಕಣ್ಣೆದುರೇ ಉದ್ಯಮಿ ಮಂಜುನಾಥ ಅವರನ್ನು ಉಗ್ರರು ಗುಂಡಿಕ್ಕಿ ಕೊಂದಿದ್ದಾರೆ. ತನ್ನ ಗಂಡನನ್ನು ಕಳೆದುಕೊಂಡ ಶಿವಮೊಗ್ಗ ಮೂಲದ ರಿಯಲ್‌ ಎಸ್ಟೇಟ್ … Continued

ಕಾಶ್ಮೀರದಲ್ಲಿ ಉಗ್ರರ ಗುಂಡಿನ ದಾಳಿ : ಶಿವಮೊಗ್ಗದ ನಿವಾಸಿ ಸಾವು, ಐವರು ಪ್ರವಾಸಿಗರಿಗೆ ಗಾಯ

ಬೆಂಗಳೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಶಿವಮೊಗ್ಗದ ನಿವಾಸಿಯೊಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಅವರ ಪತ್ನಿ ಮತ್ತು ಮಗ ಅಪಾಯದಿಂದ ಪಾರಾಗಿದ್ದಾರೆ. ಶಿವಮೊಗ್ಗದ ವಿಜಯನಗರ ನಿವಾಸಿ, ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ ರಾವ್ (47) ಅವರು ಭಯೋತ್ಪಾದಕರ ದಾಳಿಯಲ್ಲಿ ಮೃತಪಟ್ಟಿದ್ದು, ಐದು ಮಂದಿಗೆ ಗಂಭೀರ ಗಾಯಗಳಾಗಿವೆ. ಇವರ ಪತ್ನಿ ಪಲ್ಲವಿ … Continued

‌ ಸಿಇಟಿ ಪರೀಕ್ಷಾ ಕೇಂದ್ರ ಸಿಬ್ಬಂದಿ ಜನಿವಾರ ತೆಗೆಸಿದ್ದು ತಪ್ಪು; ಇಂಥ ನಿಯಮ ಇಲ್ಲ: ಕೆಇಎ ಸ್ಪಷ್ಟನೆ

ಬೆಂಗಳೂರು: ಬೀದರ ಹಾಗೂ ಶಿವಮೊಗ್ಗದಲ್ಲಿ ಸಿಇಟಿ ಪರೀಕ್ಷೆ (CET 2025) ಬರೆಯಲು ಹೋದ ಇಬ್ಬರು ವಿದ್ಯಾರ್ಥಿಗಳಿಗೆ ಜನಿವಾರ ತೆಗೆಸಿರುವ ಅಧಿಕಾರಿಗಳ ಕ್ರಮದ ವಿರುದ್ಧ ಬ್ರಾಹ್ಮಣ ಸಮುದಾಯದಿಂದ ವ್ಯಾಪಕ ಆಕ್ರೋಶವಾದ ಬೆನ್ನಲ್ಲೇ ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಕೆಇಎ (KEA)ಅಂತಹ ಯಾವುದೇ ಮಾರ್ಗಸೂಚಿ ನೀಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ … Continued

ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ್ದಕ್ಕೆ ಬ್ರಾಹ್ಮಣ ಮಹಾಸಭಾ ಆಕ್ಷೇಪ

ಶಿವಮೊಗ್ಗ : ಏಪ್ರಿಲ್ 16 ರಂದು ಆದಿಚುಂಚನಗಿರಿ ಇಂಡಿಪೆಂಡೆಂಟ್ ಪಿಯು ಕಾಲೇಜಿನಲ್ಲಿ ಸಿಇಟಿ ಪರೀಕ್ಷೆ ಬರೆಯಲು ಕೇಂದ್ರಕ್ಕೆ ಪ್ರವೇಶಿಸುವಾಗ ವಿದ್ಯಾರ್ಥಿಗಳು ಧರಿಸಿದ್ದ ‘ಜನಿವಾರ’ವನ್ನು ಭದ್ರತಾ ಸಿಬ್ಬಂದಿ ಬಲವಂತವಾಗಿ ಹೊರತೆಗೆಸಿದ್ದಾರೆ ಎಂದು ಅಖಿಲ ಭಾರತ ಬ್ರಾಹ್ಮಣ ಸಭಾ ಹಾಗೂ ವಿವಿಧ ಬ್ರಾಹ್ಮಣ ಸಂಘಗಳು ಆರೋಪಿಸಿವೆ. ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ ನೇತೃತ್ವದ ಬ್ರಾಹ್ಮಣ ಸಮುದಾಯದ ನಿಯೋಗವು ಗುರುವಾರ … Continued

ಶಿವಮೊಗ್ಗ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಮಂಜುನಾಥ ಗೌಡ ನಿವಾಸದ ಮೇಲೆ ಇ.ಡಿ. ದಾಳಿ

ಶಿವಮೊಗ್ಗ/ಬೆಂಗಳೂರು : ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ (DCC Bank Shivamogga) ಮೇಲೆ ಜಾರಿ ನಿರ್ದೇಶನಾಲಯ (ED0 ದಾಳಿ ಮಾಡಿ ದಾಖಲೆಗಳನ್ನು ಪರಿಶೀಲಿಸುತ್ತಿದೆ. ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥ ಗೌಡ ನಿವಾಸ ಸೇರಿದಂತೆ ಬೆಂಗಳೂರು ಸೇರಿದಂತೆ 8 ಕಡೆ ಇಡಿ ದಾಳಿ ನಡೆಸಿದೆ. ಬ್ಯಾಂಕ್‌ಗೆ ನಕಲಿ ಚಿನ್ನ ಅಡವಿಟ್ಟು 62 ಕೋಟಿ ಸಾಲ … Continued

ತುಂಗಾ ಹಿನ್ನೀರಿನಲ್ಲಿ ಮಹಿಳೆ ಸೇರಿ ಮೂವರ ಮೃತದೇಹ ಪತ್ತೆ

ಶಿವಮೊಗ್ಗ : ಜಿಲ್ಲೆಯ ಸಕ್ರೆಬೈಲ್‌ ಆನೆ ಬಿಡಾರದ ಸಮೀಪ ತುಂಗಾ ನದಿಯ ಹಿನ್ನೀರಿನಲ್ಲಿ ಮೂವರ ಮೃತದೇಹಗಳು ಪತ್ತೆಯಾಗಿದೆ ಎಂದು ವರದಿಯಾಗಿದೆ. ಇದರಲ್ಲಿ ಎರಡು ಶವಗಳು ಪರುಷರಾಗಿದ್ದು, ಮತ್ತೊಂದು ಶವ ಮಹಿಳೆಯದ್ದು ಎಂದು ತಿಳಿದುಬಂದಿದೆ. ಮಾಹಿತಿ ಸಿಕ್ಕ ತಕ್ಷಣ ಸ್ಥಳಕ್ಕೆ ತುಂಗಾನಗರ ಪೊಲೀಸ್‌ ಠಾಣೆಯ ಪೊಲೀಸರು ತೆರಳಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಕ್ರೆಬೈಲ್‌ ಆನೆ ಬಿಡಾರದ ಬಳಿ 10 … Continued

ಶರಾವತಿ ಪಂಪ್ಡ್ ಸ್ಟೋರೇಜ್ ವಿದ್ಯುತ್ ಉತ್ಪಾದನಾ ಯೋಜನೆಗೆ ಷರತ್ತುಬದ್ಧ ಅನುಮೋದನೆ

ಬೆಂಗಳೂರು: ತಜ್ಞರು, ಸಂರಕ್ಷಣಾವಾದಿಗಳು, ನಿವೃತ್ತ ಅರಣ್ಯ ಇಲಾಖೆ ಅಧಿಕಾರಿಗಳ ತೀವ್ರ ವಿರೋಧದ ಹೊರತಾಗಿಯೂ, ಮುಖ್ಯಮಂತ್ರಿ ಸಿದ್ದರಾಮಯ್ಯ ಜೋಗ ಮೀಸಲು ಅರಣ್ಯದಲ್ಲಿ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಕೈಗೊಳ್ಳುವ ಇಂಧನ ಇಲಾಖೆಯ ಪ್ರಸ್ತಾವನೆಯನ್ನು ಅನುಮೋದಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ನಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ವನ್ಯಜೀವಿ ಮಂಡಳಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಶರಾವತಿ … Continued

ಟಿವಿ ರಿಮೋಟ್ ; ಅಜ್ಜಿ ಬೈದಿದ್ದಕ್ಕೆ ಬಾಲಕಿ ಆತ್ಮಹತ್ಯೆ

ಶಿವಮೊಗ್ಗ: ಟಿವಿ ರಿಮೋಟ್ ಕೊಡಲಿಲ್ಲ ಎಂಬ ಕಾರಣಕ್ಕೆ ಇಲಿ ಪಾಷಾಣ ಸೇವಿಸಿ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಭದ್ರಾವತಿ ತಾಲೂಕಿನ ಸೂಳೆಬೈಲಿನಲ್ಲಿ ಎಂಬಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತ ಬಾಲಕಿಯನ್ನು ಭದ್ರಾವತಿ ತಾಲೂಕಿನ ಕಲ್ಲಿಹಾಳ ಗ್ರಾಮದ ಸಹನಾ (16) ಎಂದು ಗುರುತಿಸಲಾಗಿದೆ. ಟಿವಿ ರಿಮೋಟ್‍ಗಾಗಿ ಮಕ್ಕಳ ನಡುವೆ ಗಲಾಟೆ ನಡೆಯುತ್ತಿತ್ತು. ಈ ವೇಳೆ ಮೊಮ್ಮಗಳಿಗೆ … Continued

ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಪ್ರಕರಣ ದಾಖಲು

ಶಿವಮೊಗ್ಗ : ಕೋಮು ಭಾವನೆ ಕೆರಳಿಸುವಂತಹ ಹೇಳಿಕೆ ನೀಡಿದ ಆರೋಪದ ಮೇಲೆ ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ವಿರುದ್ಧ ಶಿವಮೊಗ್ಗದಲ್ಲಿ ಪೊಲೀಸರು ಸ್ವಯಂ ಪ್ರೇರಿತವಾಗಿ ಪ್ರಕರಣ (FIR) ದಾಖಲು ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಇತ್ತೀಚಿಗೆ ಶಿವಮೊಗ್ಗದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವೇಳೆ … Continued