ಶರಾವತಿ ಪಂಪ್ಡ್ ಸ್ಟೋರೇಜ್ ವಿದ್ಯುತ್ ಉತ್ಪಾದನಾ ಯೋಜನೆಗೆ ಷರತ್ತುಬದ್ಧ ಅನುಮೋದನೆ

ಬೆಂಗಳೂರು: ತಜ್ಞರು, ಸಂರಕ್ಷಣಾವಾದಿಗಳು, ನಿವೃತ್ತ ಅರಣ್ಯ ಇಲಾಖೆ ಅಧಿಕಾರಿಗಳ ತೀವ್ರ ವಿರೋಧದ ಹೊರತಾಗಿಯೂ, ಮುಖ್ಯಮಂತ್ರಿ ಸಿದ್ದರಾಮಯ್ಯ ಜೋಗ ಮೀಸಲು ಅರಣ್ಯದಲ್ಲಿ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಕೈಗೊಳ್ಳುವ ಇಂಧನ ಇಲಾಖೆಯ ಪ್ರಸ್ತಾವನೆಯನ್ನು ಅನುಮೋದಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ನಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ವನ್ಯಜೀವಿ ಮಂಡಳಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಶರಾವತಿ … Continued

ಟಿವಿ ರಿಮೋಟ್ ; ಅಜ್ಜಿ ಬೈದಿದ್ದಕ್ಕೆ ಬಾಲಕಿ ಆತ್ಮಹತ್ಯೆ

ಶಿವಮೊಗ್ಗ: ಟಿವಿ ರಿಮೋಟ್ ಕೊಡಲಿಲ್ಲ ಎಂಬ ಕಾರಣಕ್ಕೆ ಇಲಿ ಪಾಷಾಣ ಸೇವಿಸಿ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಭದ್ರಾವತಿ ತಾಲೂಕಿನ ಸೂಳೆಬೈಲಿನಲ್ಲಿ ಎಂಬಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತ ಬಾಲಕಿಯನ್ನು ಭದ್ರಾವತಿ ತಾಲೂಕಿನ ಕಲ್ಲಿಹಾಳ ಗ್ರಾಮದ ಸಹನಾ (16) ಎಂದು ಗುರುತಿಸಲಾಗಿದೆ. ಟಿವಿ ರಿಮೋಟ್‍ಗಾಗಿ ಮಕ್ಕಳ ನಡುವೆ ಗಲಾಟೆ ನಡೆಯುತ್ತಿತ್ತು. ಈ ವೇಳೆ ಮೊಮ್ಮಗಳಿಗೆ … Continued

ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಪ್ರಕರಣ ದಾಖಲು

ಶಿವಮೊಗ್ಗ : ಕೋಮು ಭಾವನೆ ಕೆರಳಿಸುವಂತಹ ಹೇಳಿಕೆ ನೀಡಿದ ಆರೋಪದ ಮೇಲೆ ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ವಿರುದ್ಧ ಶಿವಮೊಗ್ಗದಲ್ಲಿ ಪೊಲೀಸರು ಸ್ವಯಂ ಪ್ರೇರಿತವಾಗಿ ಪ್ರಕರಣ (FIR) ದಾಖಲು ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಇತ್ತೀಚಿಗೆ ಶಿವಮೊಗ್ಗದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವೇಳೆ … Continued

ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ಮೂವರು ನಾಪತ್ತೆ

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮುಗುಚಿ ಬಿದ್ದು ಹೊಳೆ ಊಟಕ್ಕೆ ಹೋಗಿದ್ದ ಐವರಲ್ಲಿ ಮೂವರು ನೀರು ಪಾಲಾಗಿದ್ದಾರೆ ಎಂದು ವರದಿಯಾಗಿದೆ. ಹುಲಿದೇವರ ಬನದ ಸಂದೀಪ (35), ಸಿಗಂದೂರಿನ ಚೇತನ್ (30) ಹಾಗೂ ಗಿಣಿವಾರದ ರಾಜು (28) ನಾಪತ್ತೆಯಾದವರು ಎಂದು ಹೇಳಲಾಗಿದೆ. ಬುಧವಾರ ಮಧ್ಯಾಹ್ನ ಹೊಳೆ ಊಟಕ್ಕೆಂದು ಐವರು ಯುವಕರು ಕಳಸವಳ್ಳಿ ಬಳಿಯ … Continued

ವೀಡಿಯೊ..| ಶಿವಮೊಗ್ಗ: ಕಾರು ನಿಲ್ಲಿಸುವಂತೆ ಸೂಚಿಸಿದ್ದಕ್ಕೆ ಪೊಲೀಸ್ ಸಿಬ್ಬಂದಿಯನ್ನೇ ಬಾನೆಟ್ ಮೇಲೆ ಎಳೆದೊಯ್ದ ಕಾರು ಚಾಲಕ…!

ಶಿವಮೊಗ್ಗ: ವಾಹನ ತಡೆದು ತಪಾಸಣೆಗೆ ಮುಂದಾದ ಸಂಚಾರಿ ಪೊಲೀಸ್ ಸಿಬ್ಬಂದಿಯನ್ನೇ ಕಾರೊಂದು ಹೊತ್ತೊಯ್ದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಶಿವಮೊಗ್ಗದ ಪೂರ್ವ ಸಂಚಾರಿ ಪೊಲೀಸರು ಸಹ್ಯಾದ್ರಿ ಕಾಲೇಜು ಮುಂಭಾಗ ವಾಹನ ತಪಾಸಣೆ ನಡೆಸುತ್ತಿದ್ದರು. ಸಹ್ಯಾದ್ರಿ ಕಾಲೇಜು ಬಳಿ ಅಧಿಕಾರಿಗಳು ನಿತ್ಯ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಆ ಮಾರ್ಗದಲ್ಲಿ ಹೋಗುತ್ತಿದ್ದ … Continued

ವಾಲಿಬಾಲ್ ತರಬೇತಿ ನೀಡುತ್ತಿದ್ದ ವೇಳೆ ಕುಸಿದು ಬಿದ್ದು ಶಿಕ್ಷಕ ಸಾವು

ಶಿವಮೊಗ್ಗ: ವಿದ್ಯಾರ್ಥಿಗಳಿಗೆ ವಾಲಿಬಾಲ್ ತರಬೇತಿ ನೀಡುತ್ತಿದ್ದಾಗ ಶಾಲೆ ಆವರಣದಲ್ಲಿಯೇ ಕುಸಿದು ಬಿದ್ದು ಶಿಕ್ಷಕರೊಬ್ಬರು ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಗಜಾನನ ಹಿರೇಮಠ (46) ಎಂಬವರು ಮೃತ ಶಿಕ್ಷಕರಾಗಿದ್ದಾರೆ. ಇವರು ಸಾಗರ ಪಟ್ಟಣದ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು. ಬುಧವಾರ ಮಧ್ಯಾಹ್ನ ಶಾಲಾ ಆವರಣದಲ್ಲಿ ವಿದ್ಯಾರ್ಥಿಗಳಿಗೆ ವಾಲಿಬಾಲ್ ತರಬೇತಿ ನೀಡುತ್ತಿದ್ದರು. ಈ … Continued

ಹೊಸನಗರ : ಮಕ್ಕಳೊಂದಿಗೆ ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ

ಶಿವಮೊಗ್ಗ : ತಾಯಿಯೊಬ್ಬಳು ತನ್ನಿಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಹೊಸನಗರ ತಾಲೂಕಿನ ಮತ್ತಿಕೈ ಎಂಬಲ್ಲಿ ಎರಡು ಪುಟ್ಟ ಮಕ್ಕಳನ್ನು ಬಾವಿಗೆ ಎಸೆದು, ನಂತರ ತಾನು ಕೂಡ ಬಾವಿಗೆ ಹಾರಿಕೊಂಡು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದ್ದು ಬುಧವಾರ ರಾತ್ರಿ ನಡೆದಿದೆ. ಚಂಪಕಾಪುರ ನಿವಾಸಿ ರಾಜೇಶ … Continued

ಲಿಂಗನಮಕ್ಕಿ ಜಲಾಶಯದಿಂದ 10 ಸಾವಿರ ಕ್ಯುಸೆಕ್ ನೀರು ಬಿಡುಗಡೆ

ಶಿವಮೊಗ್ಗ: ರಾಜ್ಯದಲ್ಲಿ ಜಲವಿದ್ಯುತ್ ಉತ್ಪಾದನೆ ಮಾಡುವ ಅತಿದೊಡ್ಡ ಜಲಾಶಯವಾದ ಲಿಂಗನಮಕ್ಕಿ ಅಣೆಕಟ್ಟು ಭರ್ತಿಯಾಗುತ್ತಿದ್ದು, ಗುರುವಾರ 3 ಕ್ರಸ್ಟ್ ಗೇಟ್ ಮೂಲಕ 10 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಯಿತು. ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದ್ದು, ಜಲಾಶಯಕ್ಕೆ ಸುಮಾರು 52 ಸಾವಿರ ಕ್ಯೂಸೆಕ್ ಒಳಹರಿವು ನೀರು ಹರಿದು ಬರುತ್ತಿದೆ. ಅಣೆಕಟ್ಟಿನಲ್ಲಿ 1,814 ಅಡಿ ನೀರು ಸಂಗ್ರಹವಾಗಿದೆ. ಹೀಗಾಗಿ … Continued

ವೀಡಿಯೊ..| ಸಾಗರ : ಬಾಳೆಹಳ್ಳಿಯಲ್ಲಿ ಮನೆಯಂಗಳಕ್ಕೇ ಬಂದು ವಿಹರಿಸಿದ ಕಾಡೆಮ್ಮೆಗಳ ಹಿಂಡು ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಸಾಗರ: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ವರದಹಳ್ಳಿ ಸಮೀಪದ ಬಾಳೆಹಳ್ಳಿಯಲ್ಲಿ ಮನೆಯ ಅಂಗಳಕ್ಕೇ ಕಾಡೆಮ್ಮೆಗಳ ಹಿಂಡು ಸೋಮವಾರ ಬೆಳಗಿನ ಜಾವ ಆಗಮಿಸಿದ್ದವು. ಸಾಗರ ತಾಲೂಕಿನ ಕರ್ಕಿಕೊಪ್ಪದ ಬಾಳೆಹಳ್ಳಿಯ ರವೀಂದ್ರಮೂರ್ತಿ ಅವರ ಮನೆ ಅಂಗಳದಲ್ಲಿ ಸೋಮವಾರ ಬೆಳಿಗ್ಗೆ ೪:೩೦ರ ಸುಮಾರಿಗೆ ಕಾಡೆಮ್ಮೆಗಳ ಗುಂಪು ಕಾಣಿಸಿಕೊಂಡಿವೆ. ಗುಂಪಿನಲ್ಲಿ ದೊಡ್ಡದು-ಸಣ್ಣದು ಸೇರಿ ಸುಮಾರು ೮-೧೦- ಕಾಡೆಮ್ಮೆ-ಕಾಡುಕೋಣಗಳು ಇದ್ದವು. ಈ ಗುಂಪು … Continued

ಶಿವಮೊಗ್ಗ : ತೈಲ ಬೆಲೆ ಏರಿಕೆ ಪ್ರತಿಭಟನೆ ವೇಳೆ ಹೃದಯಾಘಾತ ; ಬಿಜೆಪಿ ನಾಯಕ ಭಾನುಪ್ರಕಾಶ ನಿಧನ

ಶಿವಮೊಗ್ಗ: ತೈಲ ಬೆಲೆ ಏರಿಕೆ ಖಂಡಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಸೋಮವಾರ ಪ್ರತಿಭಟನಾ ಸಭೆಯಲ್ಲಿ ಪಾಲ್ಗೊಂಡಿದ್ದ ಬಿಜೆಪಿಯ ಹಿರಿಯ ಮುಖಂಡ ಮತ್ತೂರಿನ ಎಂ.ಬಿ‌.ಭಾನುಪ್ರಕಾಶ ಅವರು ತೀವ್ರವಾಗಿ ಅಸ್ವಸ್ಥಗೊಂಡು ಕುಸಿದುಬಿದ್ದು ಮೃತಪಟ್ಟಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು. ಗೋಪಿ ಸರ್ಕಲ್‌ನಲ್ಲಿ ಸೋಮವಾರ ನಡೆದ ಬಿಜೆಪಿ ಪ್ರತಿಭಟನೆ ಕಾರ್ಯಕ್ರಮದ ನಂತರ ಭಾನುಪ್ರಕಾಶ ಅವರಿಗೆ ಹೃದಯಾಘಾತವಾಗಿದೆ. ಅವರು ಅಲ್ಲಿಯೇ … Continued