ಟಿಕಾಯತ್‌ ಮೇಲಿನ ಪ್ರಕರಣ ಹಿಂಪಡೆಯಲು ಒತ್ತಾಯಿಸಿ ಗೃಹ ಸಚಿವ ಬೊಮ್ಮಾಯಿಗೆ ಪತ್ರ

ಮೈಸೂರು: ಸಂಯುಕ್ತ ಕಿಸಾನ್ ಮೋರ್ಚಾದ ನಾಯಕ ರಾಕೇಶ್ ಟಿಕಾಯತ್ ಅವರ ವಿರುದ್ಧ ಶಿವಮೊಗ್ಗದ ಕೋಟೆ ಠಾಣೆಯಲ್ಲಿ ದಾಖಲಿಸಿರುವ ಪ್ರಕರಣ ಹಾಗೂ ರಾಜ್ಯದ ಇತರೆ ಯಾವುದೇ ಠಾಣೆಗಳಲ್ಲಿ ದಾಖಲಿಸಿರುವ ಕೇಸುಗಳನ್ನು ಕೂಡಲೇ ಹಿಂಪಡೆಯಬೇಕು ಎಂದು ರೈತ ಸಂಘಟನೆಗಳ ಪ್ರಮುಖರು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಪತ್ರ ಬರೆದು ಒತ್ತಾಯಿಸಿದ್ದಾರೆ. ರೈತ ಚಳವಳಿಯ ಪರವಾಗಿ ಚುಕ್ಕಿ ನಂಜುಡಸ್ವಾಮಿ, … Continued

ಟಿಕಾಯತ್‌ ವಿರುದ್ಧ ಶಿವಮೊಗ್ಗದಲ್ಲಿ ಸ್ವಯಂ ಪ್ರೇರಿತ ದೂರು ದಾಖಲಿಸಿದ ಪೊಲೀಸರು

ಶಿವಮೊಗ್ಗ :ನಗರದಲ್ಲಿ ನಡೆದಂತ ರೈತರ ಮಹಾ ಪಂಚಾಯತ್ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಹಿನ್ನಲೆಯಲ್ಲಿ, ಸಂಯುಕ್ತ ಕಿಸಾನ್ ಮೋರ್ಚಾ ನಾಯಕ ರಾಕೇಶ್ ಟಿಕಾಯತ್ ವಿರುದ್ಧ ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಪ್ರಚೋದನಾಕಾರಿ ಭಾಷಣದ ಹಿನ್ನೆಲೆಯಲ್ಲಿ ಸ್ವಯಂ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಾರ್ಚ್ 20ರಂದು ಶಿವಮೊಗ್ಗ ನಗರದ ಬಿ ಹೆಚ್ ರಸ್ತೆಯ ಸೈನ್ಸ್ ಮೈದಾನದಲ್ಲಿ ರೈತರ ಮಹಾ … Continued

ಶಿವಮೊಗ್ಗ ವ್ಯಕ್ತಿಯಲ್ಲಿ ಮೊದಲ ದಕ್ಷಿಣ ಆಫ್ರಿಕಾ ರೂಪಾಂತರಿ ಕೊರೊನಾ ವೈರಸ್ ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ದಕ್ಷಿಣ ಆಫ್ರಿಕಾ ರೂಪಾಂತರಿ ಕೊರೊನಾ ವೈರಸ್ ಪತ್ತೆಯಾಗಿದೆ. ದುಬೈನಿಂದ ಬಂದಿದ್ದ ಶಿವಮೊಗ್ಗ ಮೂಲದ ೫೩ ವರ್ಷದ ವ್ಯಕ್ತಿಯೊಬ್ಬರಲ್ಲಿ ದಕ್ಷಿಣ ಆಫ್ರಿಕಾ ರೂಪಾಂತರಿ ವೈರಸ್ ಪತ್ತೆಯಾಗಿದ್ದು, ಇವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ದುಬೈನಿಂದ ಬಂದಿದ್ದ ಈ ವ್ಯಕ್ತಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನನಿಲ್ದಾಣದಲ್ಲಿ ಆರ್‌ಟಿಪಿಸಿಆರ್ ಪರೀಕ್ಷೆಗೆ ಒಳಪಟ್ಟು ಶಿವಮೊಗ್ಗಗೆ … Continued

ಶಿವಮೊಗ್ಗ ವಿಮಾನ ನಿಲ್ದಾಣದ ಬಳಿ ಸ್ಫೋಟಕ ತುಂಬಿದ್ದ ಎರಡು ವಾಹನಗಳು ಪತ್ತೆ

ಶಿವಮೊಗ್ಗ: ಶಿವಮೊಗ್ಗದ ವಿಮಾನ ನಿಲ್ದಾಣದ ಬಳಿ ಭಾರಿ ಪ್ರಮಾಣದ ಸ್ಫೋಟಕ ತುಂಬಿದ್ದ ಎರಡು ವಾಹನಗಳು ಪತ್ತೆಯಾಗಿವೆ. ಇವುಗಳಲ್ಲಿ 904 ಕೆ.ಜಿ. ಜಿಲೆಟಿನ್ ಕಡ್ಡಿ, 3,267 ಡಿಟೊನೇಟರ್‌ಗಳು ಸೇರಿದಂತೆ ಹಲವಾರು ಇತರ ವಸ್ತುಗಳು ಪತ್ತೆಯಾಗಿವೆ. ವಿಮಾನ ನಿಲ್ದಾಣ ಕಾಮಗಾರಿ ಸ್ಥಳದಲ್ಲಿ ಟಾಟಾ 407 ವಾಹನದಲ್ಲಿ 36 ಬಾಕ್ಸ್ ಜಿಲೆಟಿನ್ ಕಡ್ಡಿಗಳು, ಪಿಕ್ ಅಪ್ ವಾಹನದಲ್ಲಿ 3,267 ಎಲೆಕ್ಟ್ರಾನಿಕ್ … Continued

ಮಾ.೨೦ರಂದು ಶಿವಮೊಗ್ಗದಲ್ಲಿ ದಕ್ಷಿಣ ಭಾರತದ ಮೊದಲ ರೈತ ಮಹಾಪಂಚಾಯತ್‌

ನವ ದೆಹಲಿ: ವಿವಾದಾತ್ಮಕ ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ದೆಹಲಿಯಲ್ಲಿ ರೈತರು ಪ್ರತಿಭಟನೆ ಇದೀಗ ದಕ್ಷಿಣ ಭಾರತದ ಕಡೆ ವಿಸ್ತರಿಸಲು ರೈತರು ಮುಂದಾಗಿದ್ದಾರೆ. ಮಾರ್ಚ್ 20 ರಂದು ಮೊದಲ ಮಹಾ ಪಂಚಾಯತ್ ಶಿವಮೊಗ್ಗದಲ್ಲಿ ನಡೆಯಲಿದೆ. ಶಿವಮೊಗ್ಗದಲ್ಲಿ ನಡೆಯಲಿರುವ ದಕ್ಷಿಣ ಭಾರತದ ಮೊದಲ ರೈತ ಮಹಾಪಂಚಾಯತ್‍ಗೆ 20 ಸಾವಿರ ರೈತರು ಸೇರುವ ನಿರೀಕ್ಷೆಯಿದೆ. ಮಹಾಪಂಚಾಯತ್‍ನಲ್ಲಿ ಭಾಗವಹಿಸುವಂತೆ ಕರ್ನಾಟಕದ … Continued