ಪೋಕ್ಸೊ ಪ್ರಕರಣ: ಮುರುಘಾ ಶರಣರ ಖುಲಾಸೆ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಮೇಲ್ಮನವಿ

ಬೆಂಗಳೂರು : ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಎಸಗಿದ ಕ್ರಿಮಿನಲ್‌ ಪ್ರಕರಣದಲ್ಲಿ ಚಿತ್ರದುರ್ಗದ ಮುರುಘರಾಜೇಂದ್ರ ಬೃಹನ್ಮಠದ ಶಿವಮೂರ್ತಿ ಮರುಘಾ ಶರಣರು ಹಾಗೂ ಇತರ ಇಬ್ಬರನ್ನು ಖುಲಾಸೆಗೊಳಿಸಿರುವ ಚಿತ್ರದುರ್ಗ ಸತ್ರ ನ್ಯಾಯಾಲಯದ ತೀರ್ಪನ್ನು ರದ್ದುಗೊಳಿಸಬೇಕು ಎಂದು ಕೋರಿ ಸಂತ್ರಸ್ತ ಬಾಲಕಿಯರು ಕರ್ನಾಟಕ ಹೈಕೋರ್ಟ್‌ಗೆ  ಮೇಲ್ಮನವಿ ಸಲ್ಲಿಸಿದ್ದಾರೆ. ಸಂತ್ರಸ್ತ ಬಾಲಕಿಯರು ಬುಧವಾರ ಪ್ರತ್ಯೇಕವಾಗಿ ಎರಡು ಕ್ರಿಮಿನಲ್ ಮೇಲ್ಮನವಿ ಸಲ್ಲಿಸಿದ್ದಾರೆ … Continued

ಪೋಕ್ಸೊ ಪ್ರಕರಣ : ಚಿತ್ರದುರ್ಗದ ಡಾ.ಶಿವಮೂರ್ತಿ ಮುರುಘಾ ಶರಣರನ್ನು ಖುಲಾಸೆಗೊಳಿಸಿದ ಕೋರ್ಟ್‌

ಚಿತ್ರದುರ್ಗ: ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ (POCSO case) ಸಂಬಂಧಿಸಿ ದಾಖಲಾಗಿದ್ದ ಮೊದಲ ಪೋಕ್ಸೊ ಕೇಸ್‌ನಲ್ಲಿ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರಿಗೆ ಬುಧವಾರ ಬಿಗ್‌ ರಿಲೀಫ್‌ ಸಿಕ್ಕಿದೆ.  ಪೋಕ್ಸೊ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣರು ಸೇರಿ ಮೂವರನ್ನು ಚಿತ್ರದುರ್ಗದ ಜಿಲ್ಲಾ ನ್ಯಾಯಾಲಯವು ನಿರ್ದೋಷಿಗಳು ಎಂದು  … Continued

ಸಾಕ್ಷಿಗಳ ವಿಚಾರಣೆ ಪೂರ್ಣ : ಚಿತ್ರದುರ್ಗ ಜೈಲಿನಿಂದ ಬಿಡುಗಡೆಯಾದ ಶಿವಮೂರ್ತಿ ಶರಣರು

ಚಿತ್ರದುರ್ಗ: ಪೋಕ್ಸೊ ಪ್ರಕರಣದಲ್ಲಿ ಸಂತ್ರಸ್ತೆಯರು ಹಾಗೂ ಪ್ರಮುಖ‌ ಸಾಕ್ಷಿಗಳ ವಿಚಾರಣೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ಪ್ರಮುಖ ಆರೋಪಿ ಮುರುಘಾ ಮಠದ ಶಿವಮೂರ್ತಿ ಶರಣರು ಸೋಮವಾರ ಚಿತ್ರದುರ್ಗ ಜಿಲ್ಲಾ ಕಾರಾಗೃಹದಿಂದ ಬಿಡುಗಡೆಯಾದರು. ಸುಪ್ರೀಂ ಕೋರ್ಟ್‌ ನಿರ್ದೇಶನದ ಮೇರೆಗೆ, ಇಬ್ಬರು ಸಂತ್ರಸ್ತೆಯರು ಸೇರಿದಂತೆ ಒಟ್ಟು 13 ಪ್ರಮುಖ ಸಾಕ್ಷಿಗಳ ವಿಚಾರಣೆ ಮುಗಿದಿದೆ. ಈ ಹಿನ್ನೆಲೆಯಲ್ಲಿ ಮುರುಘಾ ಶರಣರ ಜಾಮೀನಿಗೆ ಸುಪ್ರೀಂ … Continued

2ನೇ ಪೋಕ್ಸೋ ಪ್ರಕರಣ: ಮುರುಘಾ ಶರಣರನ್ನು ಮತ್ತೆ ಬಂಧಿಸಿದ ಪೊಲೀಸರು

ದಾವಣಗೆರೆ: ಜಾಮೀನಿನಲ್ಲಿ ಬಿಡುಗಡೆಯಾದ ವಾರದ ಒಳಗೆ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರನ್ನು ಸೋಮವಾರ (ನವೆಂಬರ್‌ 20)ಪೊಲೀಸರು ಮತ್ತೆ ಬಂಧಿಸಿದ್ದಾರೆ ಎಂದು ವರದಿಯಾಗಿದೆ. ದಾವಣಗೆರೆಯ ದೊಡ್ಡಪೇಟೆಯಲ್ಲಿನ ವಿರಕ್ತ ಮಠದಲ್ಲಿದ್ದ ಶರಣರನ್ನು ಚಿತ್ರದುರ್ಗ ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಎರಡನೇ ಪೋಕ್ಸೋ ಪ್ರಕರಣಕ್ಕೆ ಜಿಲ್ಲಾ ನ್ಯಾಯಾಲಯ ಜಾಮೀನು ರಹಿತ ಬಂಧನಕ್ಕೆ ಆದೇಶಿಸಿತ್ತು. ಚಿತ್ರದುರ್ಗ ನ್ಯಾಯಾಲಯ ಜಾರಿಗೊಳಿಸಿದ … Continued

ಪೋಕ್ಸೊ ಪ್ರಕರಣ: ಜಾಮೀನು ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ ಶಿವಮೂರ್ತಿ ಮುರುಘಾ ಶರಣರು

ಬೆಂಗಳೂರು : ಪೋಕ್ಸೊ ಕಾಯಿದೆ ಅಡಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರು ಜಾಮೀನು ಕೋರಿ ಬುಧವಾರ ಕರ್ನಾಟಕ ಹೈಕೋರ್ಟ್‌ ಮೊರೆ ಹೋಗಿದ್ದಾರೆ. ಮೈಸೂರಿನ ನಜರಾಬಾದ್‌ ಠಾಣೆಯಲ್ಲಿ ದಾಖಲಾಗಿರುವ ಪ್ರಥಮ ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಗ್ರಾಮೀಣ ಠಾಣೆಯ ಪೊಲೀಸರು ಎರಡು ಪ್ರತ್ಯೇಕ ಆರೋಪ ಪಟ್ಟಿ ಸಲ್ಲಿಸಿದ್ದಾರೆ. ಮೊದಲ ಆರೋಪ … Continued

ಮುರುಘಾ ಶರಣರ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ

ಚಿತ್ರದುರ್ಗ: ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣದಲ್ಲಿ ಬಂಧನದಲ್ಲಿರುವ ಶಿವಮೂರ್ತಿ ಮುರುಘಾ ಶರಣರ ನ್ಯಾಯಾಂಗ ಬಂಧನದ ಅವಧಿಯನ್ನು 14 ದಿನಗಳ ಅವಧಿಗೆ ವಿಸ್ತರಿಸಿ ಚತ್ರದುರ್ಗದ 2ನೇ ಹೆಚ್ಚುವರಿ ಸೆಷನ್ಸ್​ ಕೋರ್ಟ್​ ಆದೇಶ ನೀಡಿದೆ. ನ್ಯಾಯಾಂಗ ಬಂಧನದ ಅವಧಿಯನ್ನು ನವೆಂಬರ್‌ 3ರ ವರೆಗೆ ವಿಸ್ತರಿಸಲಾಗಿದೆ. ಮುರುಘಾ ಶರಣರೊಂದಿಗೆ ಮತ್ತೋರ್ವ ಆರೋಪಿ (ಎ2) ಮಹಿಳಾ ವಾರ್ಡನ್​ ನ್ಯಾಯಾಂಗ … Continued

ಜೈಲಿನಲ್ಲಿ ಮುರುಘಾ ಮಠದ ಶ್ರೀಗಳಿಗೆ ಎದೆನೋವು : ಆಸ್ಪತ್ರೆಗೆ ಸ್ಥಳಾಂತರ

ಚಿತ್ರದುರ್ಗ: ಬಾಲಕಿಯರಿಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇರೆಗೆ ಪೋಕ್ಸೋ ಕಾಯ್ದೆಯಡಿ ಚಿತ್ರದುರ್ಗದ ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರನ್ನು ಪೊಲೀಸರು ಗುರುವಾರ ರಾತ್ರಿ ಬಂಧಿಸಿದ್ದು, ಜೈಲಿನಲ್ಲಿ ಶ್ರೀಗಳಿಗೆ ಎದೆ ನೋವು ಕಾಣಿಸಿಕೊಂಡಿದ್ದರಿಂದ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಜಿಲ್ಲಾ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ವೈದ್ಯರು ಮುರುಘಾ ಶ್ರೀಗಳ ಇಸಿಜಿ ಸೇರಿದಂತೆ ವಿವಿಧ ಆರೋಗ್ಯ … Continued