ಬನವಾಸಿ: ಫೆಬ್ರವರಿ 25, 26 ಎರಡು ದಿನಗಳ ಕದಂಬೋತ್ಸವ

ಶಿರಸಿ:ಐತಿಹಾಸಿಕ ಬನವಾಸಿಯ ಕದಂಬೋತ್ಸವ ಫೆಬ್ರವರಿ 25 ಹಾಗೂ 26ರಂದು ನಡೆಯಲಿದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರತಿಷ್ಠಿತ ಪಂಪ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ನಗರದ ಮಿನಿವಿಧಾನಸೌದದಲ್ಲಿ ಕದಂಬೋತ್ಸವ ಪೂರ್ವಭಾವಿ ಸಭೆ ಬಳಿಕ ಮಾತನಾಡಿದ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಅವರು, ಕಳೆದ ಎರಡು ವರ್ಷಗಳಿಂದ ಕೋವಿಡ್ ಕಾರಣದಿಂದ ಕದಂಬೋತ್ಸವ ಸ್ಥಗಿತಗೊಳಿಸಲಾಗಿತ್ತು. ಈ ವರ್ಷ ಕದಂಬೋತ್ಸವ ನಡೆಸಲು … Continued

ಕಾರ್ಮಿಕ ಮಕ್ಕಳಿಗೆ ನೇರ ವಿದ್ಯಾರ್ಥಿ ವೇತನ ವರ್ಗಾವಣೆಗೆ ಸಿಎಂ ಬೊಮ್ಮಾಯಿ ಹರ್ಷ

ಬೆಂಗಳೂರು : ರಾಜ್ಯದಲ್ಲಿ ಉದ್ಯೋಗ ನೀತಿ ಯುವಕರಿಗೆ, ಉದ್ಯೋಗಾಕಾಂಕ್ಷಿಗಳಿಗೆ ಲಾಭದಾಯಕವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಕರ್ನಾಟಕ ರಾಜ್ಯ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಆನ್‌ಲೈನ್ ಮೂಲಕ ವಿದ್ಯಾರ್ಥಿ ವೇತನ ವಿತರಣೆಗೆ ಚಾಲನೆ ನೀಡಿ ಮಾತನಾಡಿದ ಅವರು, ಕೆಳಸ್ಥರದ ಜನರಿಗೆ ನೀಡಲಾಗುವ ಈ ಮೊತ್ತವು … Continued

19 ಲಕ್ಷ ಮಂದಿ ಇ-ಕ್ರಮ ಪೋರ್ಟಲ್ ವ್ಯಾಪ್ತಿಗೆ : ಸಚಿವ ಹೆಬ್ಬಾರ

ಬೆಳಗಾವಿ: ಇ-ಕ್ರಮ ಪೋರ್ಟಲ್ ವ್ಯಾಪ್ತಿಗೆ 19 ಲಕ್ಷ ಜನರನ್ನು ತರಲಾಗಿದೆ ಎಂದು ಕಾರ್ಮಿಕ ಸಚಿವ ಅರಬೈಲ್ ಶಿವರಾಮ ಹೆಬ್ಬಾರ್ ವಿಧಾನಸಭೆಗೆ ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಒಂದು ವರ್ಷದ ಒಟ್ಟು ಉತ್ಪನ್ನದಲ್ಲಿ ಶೇ.10ರಷ್ಟನ್ನು ಕಾರ್ಮಿಕರ ಕಲ್ಯಾಣಕ್ಕೆ ನೀಡಬಹುದಾಗಿದೆ ಎಂದು ತಿಳಿಸಿದರು. ಕಾರ್ಮಿಕ ಇಲಾಖೆಯಲ್ಲಿ ಎಲ್ಲ ಕಾರ್ಮಿಕರನ್ನು ನೋಂದಣಿ … Continued

ಕಾರ್ಮಿಕರಿಗೆ ಸಹಾಯಧನ ಹೆಚ್ಚಳ, ಕಾರ್ಮಿಕರು ಮೃತಪಟ್ಟರೆ 5 ಲಕ್ಷ ಪರಿಹಾರ ನೀಡುವ ಮಸೂದೆ ಮಂಡನೆ: ಸಚಿವ ಹೆಬ್ಬಾರ

ಬೆಂಗಳೂರು: ಕಾರ್ಮಿಕರ ಕಲ್ಯಾಣಕ್ಕಾಗಿ ಮುಂದಿನ ವಿಧಾನಮಂಡಲದ ಅಧಿವೇಶನದಲ್ಲೇ ನೂತನ ಕಾರ್ಮಿಕ ಕಾಯ್ದೆಯನ್ನು ಮಂಡಿಸಲಾಗುತ್ತಿದೆ. ಹಾಗೆಯೇ ಕಾರ್ಮಿಕ ಇಲಾಖೆಯಿಂದ ಕಾರ್ಮಿಕರ ಕಲ್ಯಾಣಕ್ಕಾಗಿ ನೀಡಲಾಗುತ್ತಿರುವ ವಿವಿಧ ಸಹಾಯಧನವನ್ನು ದುಪ್ಪಟ್ಟು ಮಾಡುವ ತೀರ್ಮಾನ ಮಾಡಲಾಗಿದೆ ಎಂದು ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ ಹೇಳಿದರು. ವಿಧಾನಸೌಧದಲ್ಲಿ ಇಂದು (ಶುಕ್ರವಾರ) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಂದು ಕಾಲಕ್ಕೆ ನಾನೇ ಚಾಲಕನಾಗಿ ಕೆಲಸ ಮಾಡಿದ್ದೆ. … Continued

ಕಾಸರಕೋಡು ಬಂದರು ವಿಚಾರ: ಸರ್ವಪಕ್ಷಗಳ ಸಭೆ ನಡೆಸಲು ಸಿದ್ಧ

ಶಿರಸಿ:ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಸಮೀಪದ ಕಾಸರಕೋಡ ಬಂದರು ಅಭಿವೃದ್ಧಿ ಯೋಜನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಸಹಕಾರ ಅಗತ್ಯವಿದ್ದು, ಸರ್ವಪಕ್ಷದ ಸಭೆ ನಡೆಸಿ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲು ಸಿದ್ಧ ಎಂದು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಹೇಳಿದ್ದಾರೆ. ಶಿರಸಿಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಅಭಿವೃದ್ಧಿ ವಿಚಾರದಲ್ಲಿ ಅಹಂಕಾರ … Continued

ಸಾರಿಗೆ ನೌಕರರ ಮುಷ್ಕರ ಕಾನೂನು ಬಾಹಿರ,ಸಂಘಕ್ಕೆ ಗೌರವಾಧ್ಯಕ್ಷರ ನೇಮಕಕ್ಕೂ ಅನುಮತಿ ಇಲ್ಲ:ಕಾರ್ಮಿಕ ಸಚಿವ ಹೆಬ್ಬಾರ

ಕಲಬುರಗಿ: ಸಾರಿಗೆ ನೌಕರರು ಕಳೆದ ಐದು ದಿನಗಳಿಂದ ನಡೆಸುತ್ತಿರುವ ಸಾರಿಗೆ ಮುಷ್ಕರ ಕಾನೂನು ಬಾಹಿರವಾಗಿದೆ. ಸಾರ್ವಜನಿಕರಿಗೆ ಅಗತ್ಯ ಸೇವೆಗಳನ್ನು ಒದಗಿಸಬೇಕಾದ ಸಾರಿಗೆ ನೌಕರರು ಈ ರೀತಿ ಮುಷ್ಕರ ನಡೆಸುವುದು ನಿಯಮಾವಳಿಯಲ್ಲಿ ಇಲ್ಲ. ಹಾಗೂ ಸಂಘಕ್ಕೆ ಗೌರವ ಅಧ್ಯಕ್ಷರನ್ನು ನೇಮಿಸಿಕೊಳ್ಳಲೂ ಅನುಮತಿ ಇಲ್ಲ. ಹೀಗಾಗಿ ಕೂಡಲೇ ಮುಷ್ಕರವನ್ನು ಹಿಂಪಡೆದು ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಕಾರ್ಮಿಕ ಸಚಿವ ಶಿವರಾಮ … Continued