ರಾಜ್ಯಸಭಾ ಚುನಾವಣೆ: ಬಿಜೆಪಿಯಿಂದ ಮತ್ತೊಂದು ಪಟ್ಟಿ ಬಿಡುಗಡೆ ; ಜೆಪಿ ನಡ್ಡಾ, ಅಶೋಕ ಚವಾಣ ಸ್ಪರ್ಧೆ-ಶಿವಸೇನೆಯಿಂದ ಮಿಲಿಂದ್‌ ದಿಯೋರಾ ಕಣಕ್ಕೆ

ನವದೆಹಲಿ: ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಧ್ಯಕ್ಷ ಜೆಪಿ ನಡ್ಡಾ ಮತ್ತು ಕಾಂಗ್ರೆಸ್ ತೊರೆದು ಒಂದು ದಿನದ ಮೊದಲು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ ಚವಾಣ ಅವರು ಫೆಬ್ರವರಿ 27 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಕ್ರಮವಾಗಿ ಗುಜರಾತ್ ಮತ್ತು ಮಹಾರಾಷ್ಟ್ರದಿಂದ ಪಕ್ಷದಿಂದ ಸ್ಪರ್ಧಿಸಲಿದ್ದಾರೆ. ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಪ್ರಸ್ತುತ … Continued

ಬೆಚ್ಚಿಬೀಳಿಸುವ ಸಿಸಿಟಿವಿ ವೀಡಿಯೊ..| ಪೊಲೀಸ್‌ ಠಾಣೆಯಲ್ಲಿ ಶಿವಸೇನೆ ನಾಯಕನ ಮೇಲೆ ಗುಂಡಿನ ದಾಳಿ; ಬಿಜೆಪಿ ಶಾಸಕನ ಬಂಧನ

ಥಾಣೆ: ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಭೂ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರ ಶಿವಸೇನಾ ಬಣದ ಮುಖಂಡನ ಮೇಲೆ ಗುಂಡಿನ ದಾಳಿ ನಡೆದಿದ್ದು, ಗುಂಡಿನ ದಾಳಿ ನಡೆಸಿದ ಆರೋಪದ ಮೇಲೆ ಭಾರತೀಯ ಜನತಾ ಪಕ್ಷದ (ಬಿಜೆಪಿ) ಶಾಸಕನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಶುಕ್ರವಾರ ರಾತ್ರಿ ಹಿಲ್‌ಲೈನ್ ಪೊಲೀಸ್ ಠಾಣೆಯಲ್ಲಿ ಈ ಘಟನೆ … Continued

ಕಾಂಗ್ರೆಸ್ಸಿಗೆ ಗುಡ್‌ ಬೈ ಹೇಳಿದ ಮಾಜಿ ಕೇಂದ್ರ ಸಚಿವ ಮಿಲಿಂದ್ ದಿಯೋರಾ : ಇಂದೇ ಸಿಎಂ ಏಕನಾಥ ಶಿಂಧೆ ಶಿವಸೇನೆ ಸೇರುವ ಸಾಧ್ಯತೆ

ನವದೆಹಲಿ: ಮಾಜಿ ಕೇಂದ್ರ ಸಚಿವ ಮಿಲಿಂದ್ ದಿಯೋರಾ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ನೇತೃತ್ವದ ಶಿವಸೇನೆಗೆ ಸೇರುವ ನಿರೀಕ್ಷೆಯಿದೆ. ನಾನು ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ, ಪಕ್ಷದೊಂದಿಗಿನ ನನ್ನ ಕುಟುಂಬದ 55 ವರ್ಷಗಳ ಸಂಬಂಧವನ್ನು ಕೊನೆಗೊಳಿಸಿದ್ದೇನೆ” ಎಂದು ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ. “ಎಲ್ಲಾ ನಾಯಕರು, … Continued

ಸಾರ್ವಜನಿಕ ಆಸ್ತಿ ಖಾಸಗಿಗೆ ನೀಡುವುದೇ ಮೋದಿ ಸರ್ಕಾರದ ದೊಡ್ಡ ಸಾಧನೆ: ಶಿವಸೇನಾ ವ್ಯಂಗ್ಯ

ಮುಂಬೈ: ದೇಶದ ಸಾರ್ವಜನಿಕ ಸಂಸ್ಥೆಗಳನ್ನು ಖಾಸಗೀಕರಣಗೊಳಿಸುವುದಿಲ್ಲ ಎಂದು ಹೇಳುತ್ತಿರುವ ಕೇಂದ್ರ ಸರಕಾರ ಬಂದರುಗಳು ಹಾಗೂ ವಿಮಾನ ನಿಲ್ದಾಣಗಳನ್ನು ಖಾಸಗೀಯವರಿಗೆ ನೀಡುತ್ತಿರುವ ಕ್ರಮವನ್ನು ಖಂಡಿಸಿದ ಶಿವಸೇನಾ ಕೇಂದ್ರ ಸರಕಾರ ಇಬ್ಬಗೆ ನಿಲುವು ಹೊಂದಿದೆ ಎಂದು ಜರಿದಿದೆ. ರೈಲ್ವೆ ಖಾಸಗೀಕರಣ ಮಾಡುವುದಿಲ್ಲ ಎಂದು ರೈಲ್ವೆ ಸಚಿವ ಪಿಯುಷ್‌ ಗೋಯಲ್‌ ಹೇಳಿದರೆ, ಭಾರತೀಯ ಜೀವವಿಮಾ ಸಂಸ್ಥೆಯನ್ನು ಖಾಸಗೀಯವರಿಗೆ ನೀಡುವುದಿಲ್ಲ ಎಂದು … Continued

ವ್ಯಾಲೆಂಟೈನ್‌ ಡೇ: ವಿಧ್ವಂಸಕತೆಯಿಂದ ಮೌನಕ್ಕೆ ಶರಣಾದ ಶಿವಸೇನೆ, ಕಾರಣ..?

ಕಳೆದ ಭಾನುವಾರ, ದೇಶಾದ್ಯಂತ ಅನೇಕರು ಪ್ರೇಮಿಗಳ ದಿನ (ವ್ಯಾಲೆಂಟೈನ್‌ ಡೇ) ಆಚರಿಸಿದಾಗ, ಶಿವಸೇನೆ ಕಾರ್ಯಕರ್ತರೆಂದು ಹೇಳಿಕೊಳ್ಳುವ ಕೆಲವರು ಭೋಪಾಲ್‌ನ ರೆಸ್ಟೋರೆಂಟ್‌ಗೆ ದಾಳಿ ಆಸ್ತಿ ಧ್ವಂಸ ಮಾಡಿದರು. ಅವರು ಅಲ್ಲಿದ್ದವರೊಂದಿಗೆ ಕೆಟ್ಟದಾಗಿ ವರ್ತಿಸಿದರು ಮತ್ತು ಪ್ರೇಮಿಗಳ ದಿನವನ್ನು ಆಚರಿಸುವುದು ಭಾರತೀಯ ಸಂಸ್ಕೃತಿಯೇ ಎಂದು ಪ್ರಶ್ನಿಸಿದರು.. ಈ ಘಟನೆಯ ವಿಡಿಯೋ ವೈರಲ್ ಆಗುತ್ತಿದ್ದಂತೆ ಅಧಿಕಾರಕ್ಕೆ ಬಂದ ತಕ್ಷಣವೇ ‘ಉದಾರವಾದಿ’ … Continued