ವೀಡಿಯೊ…| ಹೆಚ್ಚುವರಿ ಎಸ್‌ಪಿ ಮೇಲೆ ವೇದಿಕೆಯಲ್ಲೇ ಹೊಡೆಯಲು ಮುಂದಾದ್ರಾ ಸಿದ್ದರಾಮಯ್ಯ ; ಪೊಲೀಸರ ಮೇಲೆ ಗರಂ ಆಗಿದ್ಯಾಕೆ ಸಿಎಂ..?

ಬೆಳಗಾವಿ: ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗರಂ ಆದ ಪ್ರಸಂಗ ನಡೆದಿದೆ.. ವೇದಿಕೆ ಮೇಲೆಯೇ ಧಾರವಾಡದ ಹೆಚ್ಚುವರಿ ಎಸ್‌ಪಿ ನಾರಾಯಣ ಭರಮನಿ ಅವರತ್ತ ಮುಖ್ಯಮಂತ್ರಿ ಕೈ ಎತ್ತಿದ ವೀಡಿಯೊ ಈಗ ಎಲ್ಲೆಡೆ ವೈರಲ್ ಆಗತೊಡಗಿದೆ. ಬೆಲೆ ಏರಿಕೆ ವಿರೋಧಿಸಿ ಇಂದು ಕಾಂಗ್ರೆಸ್‌ ಪ್ರತಿಭಟನಾ ಸಭಾ ಆಯೋಜಿಸಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡುವಾಗ ಬಿಜೆಪಿಯ ಮಹಿಳಾ … Continued

ಪಹಲ್ಗಾಮ್​ ದಾಳಿ: ಪಾಕ್​ ಮಾಧ್ಯಮಗಳಲ್ಲಿ ಸುದ್ದಿಯಾದ ಸಿದ್ದರಾಮಯ್ಯ

ಬೆಂಗಳೂರು : ಪಹಲ್ಗಾಮ್ ಉಗ್ರರ ದಾಳಿ ಸಂಬಂಧವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ ಹೇಳಿಕೆಯಿಂದ ಪಾಕಿಸ್ತಾನ ಮಾಧ್ಯಮಗಳಲ್ಲೂ ಸುದ್ದಿಯಾಗಿದ್ದಾರೆ. ಪಾಕಿಸ್ತಾನದ ಮೇಲೆ ಭಾರತ ಯುದ್ಧ ಮಾಡುವ ಅಗತ್ಯವಿಲ್ಲ ಎಂದು ಸಿದ್ದರಾಮಯ್ಯನವರು ನೀಡಿದ ಹೇಳಿಕೆ ಈಗ ಪಾಕಿಸ್ತಾನ ಮಾಧ್ಯಮಗಳಲ್ಲಿ ಹೈಲೈಟ್‌ ಆಗಿದೆ. ಈ ಹೇಳಿಕೆಯನ್ನು ಪಾಕ್ ಟಿವಿ ಮಾಧ್ಯಮಗಳು ಬ್ರೇಕ್​ ನ್ಯೂಸ್​ ಆಗಿ ಪ್ರಸಾರ ಮಾಡಿವೆ. ಇದನ್ನು ಪಾಕಿಸ್ತಾನ … Continued

ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಮೃತ ಕನ್ನಡಿಗರ ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರ

ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ಮಂಗಳವಾರ ಪ್ರವಾಸಿಗರ ಮೇಲೆ ನಡೆದ ಉಗ್ರರ ಭೀಕರ ದಾಳಿಯಲ್ಲಿ ಮೂವರು ಕನ್ನಡಿಗರು ಸೇರಿದಂತೆ 28 ಮಂದಿ ಮೃತಪಟ್ಟಿದ್ದಾರೆ. ಉಗ್ರರ ದಾಳಿಯಲ್ಲಿ ಮೃತಪಟ್ಟ ಕನ್ನಡಿಗರಿಗೆ ತಲಾ 10 ಲಕ್ಷ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಪ್ರಕಟಿಸಿದ್ದಾರೆ. ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟಿರುವ … Continued

ಮುಡಾ ಹಗರಣ | ಇ.ಡಿ ತನಿಖೆಗೆ ಹೈಕೋರ್ಟ್‌ ಅನುಮತಿ ; ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ..?

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಬಿ.ಎಂ. ಪಾರ್ವತಿ ಅವರಿಗೆ 14 ಬದಲಿ ನಿವೇಶನ (ಈಗ ವಾಪಸ್‌ ಮಾಡಲಾಗಿದೆ) ಹಂಚಿಕೆ ಮಾಡಿದ ಸಮಯದಲ್ಲಿ ಮುಡಾ ಆಯುಕ್ತರಾಗಿದ್ದ ಡಾ. ಡಿ ಬಿ ನಟೇಶ ಅವರಿಗೆ ಜಾರಿ ನಿರ್ದೇಶನಾಲಯ (ED) ಜಾರಿ ಮಾಡಿದ್ದ ಸಮನ್ಸ್‌ ರದ್ದುಪಡಿಸಿ ಏಕಸದಸ್ಯ ಪೀಠ ಮಾಡಿದ್ದ ಆದೇಶಕ್ಕೆ ತಡೆಯಾಜ್ಞೆ ನೀಡಲು ಕರ್ನಾಟಕ ಹೈಕೋರ್ಟ್‌ ಬುಧವಾರ … Continued

ಕರ್ನಾಟಕದ ಜನರಿಗೆ ಮತ್ತೊಂದು ಬೆಲೆ ಏರಿಕೆ ಶಾಕ್‌ ; ಡೀಸೆಲ್ ದರ ಹೆಚ್ಚಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಅನೇಕ ಅಗತ್ಯ ವಸ್ತುಗಳ ಬೆಲೆ ಹೆಚ್ಚಳ ಮಾಡಿರುವ ರಾಜ್ಯ ಸರ್ಕಾರ, ಈಗ ಮತ್ತೊಂದು ಬೆಲೆ ಏರಿಕೆಯ ಶಾಕ್ ನೀಡಿದ್ದು, ರಾಜ್ಯದಲ್ಲಿ ಡೀಸೆಲ್ ಬೆಲೆ ಹೆಚ್ಚಳ ಮಾಡಿದೆ. ಏಪ್ರಿಲ್ 1ರಿಂದ ಅನ್ವಯವಾಗುವಂತೆ ಹಾಲು, ವಿದ್ಯುತ್ ದರ ಏರಿಕೆ ಮಾಡಿರುವ ಸರ್ಕಾರ, ಈಗ ಈ ಪಟ್ಟಿಗೆ ಡೀಸೆಲ್ ಅನ್ನು ಸೇರಿಸಿದೆ. ಡೀಸೆಲ್ ಬೆಲೆ ಮೇಲಿನ ಮಾರಾಟ ತೆರಿಗೆಯನ್ನು … Continued

ಕರ್ನಾಟಕ ಬಜೆಟ್‌ 2025 | ₹1.16 ಲಕ್ಷ ಕೋಟಿ ಹೊಸ ಸಾಲ ಪಡೆಯಲು ನಿರ್ಧಾರ ; ರಾಜ್ಯದ ಒಟ್ಟು ಸಾಲ…?

ಬೆಂಗಳೂರು: ಹಣಕಾಸು ಸಚಿವರೂ ಆಗಿರುವ ಸಿಎಂ ಸಿದ್ದರಾಮಯ್ಯ 2025-26ನೇ ಸಾಲಿಗೆ ದಾಖಲೆಯ 4.09 ಲಕ್ಷ ಕೋಟಿ ರೂ. ಗಾತ್ರದ ಬಜೆಟ್‌ ಅನ್ನು ಮಂಡಿಸಿದ್ದಾರೆ. ಇದರಲ್ಲಿ 19,262 ಕೋಟಿ ರೂ.‌ ರಾಜಸ್ವ ಕೊರತೆಯನ್ನು ಅವರು ಉಲ್ಲೇಖಿಸಿದ್ದಾರೆ. ಈ ಬಾರಿಯೂ ಪಂಚ ಗ್ಯಾರಂಟಿಗೆ 51,034 ಕೋಟಿ ರೂ. ಅನುದಾನ ನೀಡಲಾಗಿದೆ. ಹಾಗೂ ಕೆಲವು ಹೊಸ ಯೋಜನೆಗಳನ್ನು ಘೋಷಣೆ ಮಾಡಲಾಗಿದೆ. … Continued

ಕರ್ನಾಟಕ ಬಜೆಟ್ 2025 | ಅಲ್ಪಸಂಖ್ಯಾತರಿಗೆ ಸಿದ್ದರಾಮಯ್ಯ ಭರಪೂರ ಕೊಡುಗೆ

ಬೆಂಗಳೂರು: ಕರ್ನಾಟಕದ ೨೦೨೫ರ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಬಜೆಟ್ ನಲ್ಲಿ ಮುಸ್ಲಿಮರಿಗೆ ಹಾಗೂ ರಾಜ್ಯದ ಇನ್ನುಳಿದ ಅಲ್ಪಸಂಖ್ಯಾತ ಸಮುದಾಯಗಳಿಗೆ ವಿವಿಧ ಯೋಜನೆಗಳನ್ನು ಘೋಷಿಸಿದ್ದಾರೆ. ಅವುಗಳಲ್ಲಿ ಪ್ರಮುಖವಾದವೆಂದರೆ, 2 ಕೋಟಿ ರೂ.ವರೆಗಿನ ಗುತ್ತಿಗೆ ಕಾಮಗಾರಿಗಳಲ್ಲಿ ಪ್ರವರ್ಗ 2, 2ಎ ವರ್ಗದವರಿಗೆ (ಅಲ್ಪಸಂಖ್ಯಾತರು) ಮೀಸಲಾತಿ ಕಲ್ಪಿಸಲು ನಿರ್ಧರಿಸಲಾಗಿದೆ. ವಕ್ಫ್ ಆಸ್ತಿಗಳ ರಕ್ಷಣೆಗಾಗಿ 150 ಕೋಟಿ … Continued

ಬೆಂಗಳೂರು ನಗರ ವಿವಿಗೆ ಡಾ.ಮನಮೋಹನ ಸಿಂಗ್‌ ಹೆಸರು ; ಬಜೆಟ್‌ ನಲ್ಲಿ ಘೋಷಣೆ

ಬೆಂಗಳೂರು: ಜ್ಞಾನಭಾರತಿ ಕ್ಯಾಂಪಸ್​ ನಲ್ಲಿರುವ ಬೆಂಗಳೂರು ವಿಶ್ವವಿದ್ಯಾಲಯದ ಹೆಸರನ್ನು ಬದಲಾಯಿಸಲಾಗುತ್ತಿದ್ದು, ಅದಕ್ಕೆ ಮಾಜಿ ಪ್ರಧಾನಿ, ದಿವಂಗತ ಡಾ.ಮನಮೋಹನ್ ಸಿಂಗ್ ಅವರ ಹೆಸರನ್ನುಇಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಬಜೆಟ್ ​​ನಲ್ಲಿ ಘೋಷಣೆ ಮಾಡಿದ್ದಾರೆ. ಎರಡು ಅವಧಿಗೆ ಒಟ್ಟು ಹತ್ತು ವರ್ಷ ಕಾಲ ಭಾರತದ ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ 2024ರ ಡಿಸೆಂಬರ್ ತಿಂಗಳಲ್ಲಿ ನಿಧನರಾಗಿದ್ದಾರೆ. ಭಾರತದ ಆಧುನಿಕ … Continued

ಕರ್ನಾಟಕ ಬಜೆಟ್‌ 2025 | ಬೆಂಗಳೂರಿಗೆ ಭರ್ಜರಿ ಕೊಡುಗೆ ನೀಡಿದ ಸಿದ್ದರಾಮಯ್ಯ

ಬೆಂಗಳೂರು : ಕರ್ನಾಟಕ ಬಜೆಟ್‌ 2025ರಲ್ಲಿ ಬೆಂಗಳೂರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭರ್ಜರಿ ಕೊಡುಗೆ ನೀಡಿದ್ದಾರೆ. ಮಹಾನಗರಕ್ಕೆ ಕಳೆದ ವರ್ಷಕ್ಕೆ ಹೆಚ್ಚಿನ ಅನುದಾನ ನೀಡಿದ್ದಕಿಂತ 7 ಸಾವಿರ ಕೋಟಿ ರೂ.ಗಷ್ಟು ಹೆಚ್ಚಿಗೆ ನೀಡಲಾಗಿದೆ. ಅಲ್ಲದೆ, ಟನಲ್‌ ಯೋಜನೆಗೆ 40,000 ಕೋಟಿ ರೂ. ಮೀಸಲಿಡಲಾಗಿದೆ. ಬಿಬಿಎಂಪಿಯ ಅಂದಾಜು ಮೊತ್ತ 40,000 ಕೋಟಿ ರೂಪಾಯಿ ವೆಚ್ಚದ ಉತ್ತರ- ದಕ್ಷಿಣ ಮತ್ತು … Continued

ಕರ್ನಾಟಕ ಬಜೆಟ್‌ 2025 : ಬಜೆಟ್‌ ಗಾತ್ರ ₹4 ಲಕ್ಷ ಕೋಟಿ, ಅತಿಥಿ ಶಿಕ್ಷಕರು, ಬಿಸಿಯೂಟ ಕಾರ್ಯಕರ್ತೆಯರ ಗೌರವಧನ ಹೆಚ್ಚಳ, ಗ್ಯಾರಂಟಿ ಯೋಜನೆಗಳಿಗೆ 51,300 ಕೋಟಿ ರೂ. ಅನುದಾನ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ (ಮಾರ್ಚ್ 7) ಬೆಳಿಗ್ಗೆ 10:15ಕ್ಕೆ 2025-26ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಿದ್ದಾರೆ. ಅವರು ದಾಖಲೆಯ 16ನೇ ಬಜೆಟ್ ಮಂಡಿಸಿದ್ದಾರೆ. ಕುವೆಂಪು ಅವರ ಕವನವನ್ನು ವಾಚಿಸುವ ಮೂಲಕ ಬಜೆಟ್‌ ಮಂಡನೆ ಶುರು ಮಾಡಿದ ಅವರು ₹4 ಲಕ್ಷ ಕೋಟಿ ಗಾತ್ರದ ಬಜೆಟ್ ಮಂಡಿಸಿದ್ದಾರೆ. 2025-26ನೇ ಸಾಲಿನ ಕರ್ನಾಟಕ ಬಜೆಟ್ ಗಾತ್ರ 4,09,549 … Continued