ರಾಜ್ಯದ ಬಜೆಟ್​ ಮಂಡನೆಗೆ ಮುಹೂರ್ತ ಫಿಕ್ಸ್

ಬೆಂಗಳೂರು: 2025-26ನೇ ಸಾಲಿನ ರಾಜ್ಯದ ಬಜೆಟ್‌ ಅನ್ನು ಮಾರ್ಚ್ 7ರಂದು ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ವಿಧಾನಸೌಧದಲ್ಲಿ ತಿಳಿಸಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ರೈತ ಸಂಘದ ಮುಖಂಡರುಗಳೊಂದಿಗೆ 2025-26ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆ ನಡೆಸಿ, ರೈತ ಸಮುದಾಯದ ಕುಂದುಕೊರತೆ ಹಾಗೂ ಬೇಡಿಕೆಗಳ ಬಗ್ಗೆ ಚರ್ಚಿಸಿದ ಬಳಿಕ ಸುದ್ದಿಗಾರರಿಗೆ … Continued

ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಸಿಡಿದೆದ್ದರೇ ಆಳಂದ ಶಾಸಕ; ಸಿಎಂ ರಾಜಕೀಯ ಸಲಹೆಗಾರ ಹುದ್ದೆಗೆ ಬಿ.ಆರ್. ಪಾಟೀಲ ದಿಢೀರ್‌ ರಾಜೀನಾಮೆ…!

ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ಹಾಗೂ ಆಳಂದ ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ​ ಅವರು ಶನಿವಾರ ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರ ಹುದ್ದೆಗೆ ದಿಢೀರ್‌ ರಾಜೀನಾಮೆ ನೀಡಿದ್ದಾರೆ. ದಿಢೀರ್ ರಾಜೀನಾಮೆ ಕಾಂಗ್ರೆಸ್​​ನಲ್ಲಿ ತೀವ್ರ ಸಂಚಲನ ಮೂಡಿಸಿದೆ. ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರ ಹುದ್ದೆಗೆ ನಾನು ರಾಜೀನಾಮೆ ನೀಡಿದ್ದೇನೆ. ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈಗಾಗಲೇ … Continued

ಮುಡಾ ಹಗರಣ; ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ, ಸಚಿವ ಭೈರತಿ ಸುರೇಶಗೆ ಇ.ಡಿ. ನೋಟಿಸ್​

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣಕ್ಕೆ ಸಂಬಂಧಿಸಿದಂತೆ ಸೋಮವಾರ ಮತ್ತು ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ (ಇ.ಡಿ.) ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಮತ್ತು ಸಚಿವ ಭೈರತಿ ಸುರೇಶ ನೋಟಿಸ್​​ ಜಾರಿ ಮಾಡಿದೆ. ಜ. 9ರಂದು ವಿಚಾರಣೆಗೆ ಹಾಜರಾಗುವಂತೆ ಇ.ಡಿ. ಜನವರಿ 3ರಂದು ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ಮೊದಲ ನೋಟಿಸ್ ನೀಡಿತ್ತು. ನೋಟಿಸ್​ಗೆ … Continued

ಮುಡಾ ಹಗರಣ: 300 ಕೋಟಿ ರೂ. ಮೌಲ್ಯದ 142 ಸ್ಥಿರಾಸ್ತಿ ಮುಟ್ಟುಗೋಲು ಹಾಕಿಕೊಂಡ ಇ.ಡಿ.

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನಗಳ ಅಕ್ರಮ ಹಂಚಿಕೆ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ವಿರುದ್ಧ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯವು ಸುಮಾರು 300 ಕೋಟಿ ರೂ. ಮೌಲ್ಯದ 142 ಸ್ಥಿರಾಸ್ತಿ ಮುಟ್ಟುಗೋಲು ಹಾಕಿಕೊಂಡಿದೆ. ಅಕ್ರಮ ಹಣ ವರ್ಗಾವಣೆ ತಡೆ (ಪಿಎಂಎಲ್ಎ) ಕಾಯ್ದೆಯಡಿ ಈ ಕ್ರಮ ಕೈಕೊಳ್ಳಲಾಗಿದೆ ಎಂದು ಇ.ಡಿ. (ED) ಟ್ವೀಟ್ … Continued

ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ; ಸಿಎಂ ಸಿದ್ದರಾಮಯ್ಯ

ವಿಜಯನಗರ/ ಬೆಂಗಳೂರು : ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದ ಪ್ರಕರಣಕ್ಕೆ ಸಂಬಂಧಿಸಿ, ‘ತಪ್ಪಿತಸ್ಥರನ್ನು ಪತ್ತೆ ಹಚ್ಚಿ ಶಿಕ್ಷೆಗೆ ಒಳಪಡಿಸಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿ ಅವರು, ‘ಪ್ರಾಣಿ ಹಿಂಸೆ ಮಾಡುವುದು ಅಪರಾಧ. ತಪ್ಪಿತಸ್ಥರ ಮಾಹಿತಿ ದೊರೆತಿಲ್ಲ. ತಪ್ಪಿತಸ್ಥರನ್ನು ಕೂಡಲೇ ಪತ್ತೆ ಹಚ್ಚಿ, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಬೆಂಗಳೂರು … Continued

ಸಿಎಂ ಮುಂದೆ ಶರಣಾಗಿದ್ದ 6 ನಕ್ಸಲರಿಗೆ ನ್ಯಾಯಾಂಗ ಬಂಧನ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದೆ ಶರಣಾದ ಆರು ನಕ್ಸಲೀಯರಿಗೆ ಎನ್‌ಐಎ ವಿಶೇಷ ಕೋರ್ಟ್‌ ಜನವರಿ 31ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ಶರಣಾಗಿದ್ದ ನಕ್ಸಲರಾದ ಮುಂಡಗಾರು ಲತಾ, ಸುಂದರಿ ಕೊತ್ಲೂರು, ವನಜಾಕ್ಷಿ ಬಾಳೆಹೊಳೆ, ಜಿಶಾ, ವಸಂತ ಟಿ.ಎನ್, ಮಾರೆಪ್ಪ ಅರೋಲಿ ಅವರಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿದ ನಂತರ ಚಿಕ್ಕಮಗಳೂರು ಡಿವೈಎಸ್‌ಪಿ ಬಾಲಾಜಿ ಸಿಂಗ್ ಅವರು … Continued

ಶಸ್ತ್ರಾಸ್ತ್ರ ತ್ಯಜಿಸಿ ಸಿಎಂ ಸಿದ್ದರಾಮಯ್ಯ ಎದುರು 6 ನಕ್ಸಲರು ಶರಣಾಗತಿ

ಬೆಂಗಳೂರು: ಬುಧವಾರ (ಜ. 8) 6 ಮಂದಿ ನಕ್ಸಲೀಯರು ಶಸ್ತ್ರಾಸ್ತ್ರಗಳನ್ನು ತ್ಯಜಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂದೆ ಶರಣಾಗಿದ್ದಾರೆ. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ನಕ್ಸಲರಾದ ಮುಂಡಗಾರು ಲತಾ, ವನಜಾಕ್ಷಿ, ದಕ್ಷಿಣ ಕನ್ನಡ ಜಿಲ್ಲೆ ಕುಂತಲೂರು ಮೂಲದ ಸುಂದರಿ, ಮಾರಪ್ಪ ಅರೋಳಿ, ವನಜಾಕ್ಷಿ ಬಾಳೆಹೊಳೆ ಹಾಗೂ ಕೇರಳದ ವೈನಾಡಿನ ಎನ್. ಜೀಶಾ … Continued

ಚಂದ್ರಬಾಬು ನಾಯ್ಡು ದೇಶದ ಅತಿ ಶ್ರೀಮಂತ ಸಿಎಂ ; ಮಮತಾ ಬ್ಯಾನರ್ಜಿ ಬಡ ಸಿಎಂ ; ಸಿದ್ದರಾಮಯ್ಯ ಎಷ್ಟನೇ ಸಿರಿವಂತ ಸಿಎಂ ಗೊತ್ತೆ..?

 ನವದೆಹಲಿ: ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು 931 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಹೊಂದಿರುವ ಭಾರತದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿಯಾಗಿದ್ದಾರೆ. ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಕೇವಲ 15 ಲಕ್ಷ ರೂ.ಗಳೊಂದಿಗೆ ಅತ್ಯಂತ ಬಡವರು ಎಂದು ಸೋಮವಾರ ಬಿಡುಗಡೆಯಾದ ಅಸೋಸಿಯೇಷನ್ ​​​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ವರದಿ ತಿಳಿಸಿದೆ. ವಿವಿಧ ರಾಜ್ಯಗಳು ಮತ್ತು … Continued

ನನ್ನ ಜೀವಕ್ಕೆ ಅಪಾಯವಿದೆ.. ನನಗೆ ಏನೇ ತೊಂದರೆಯಾದ್ರೂ ಅದಕ್ಕೆ ಡಿ.ಕೆ. ಶಿವಕುಮಾರ, ಹೆಬ್ಬಾಳ್ಕರ್ ಕಾರಣ ; ಸಿ.ಟಿ.ರವಿ ವೀಡಿಯೊ ಹೇಳಿಕೆ

ಬೆಂಗಳೂರು: ನನ್ನ ಜೀವಕ್ಕೆ ಅಪಾಯವಿದ್ದು ನನಗೆ ಏನೇ ಆದರೂ ಅದಕ್ಕೆ ಪೊಲೀಸರು, ಕಾಂಗ್ರೆಸ್ ಸರ್ಕಾರವೇ ಕಾರಣ. ವಿಶೇಷವಾಗಿ ಡಿಸಿಎಂ ಡಿಕೆ ಶಿವಕುಮಾರ್, ಸಚಿವೆ ಹೆಬ್ಬಾಳ್ಕರ್ ಕಾರಣ ಎಂದು ವಿಡಿಯೋ ಸಂದೇಶ ಪ್ರಕಟಿಸಿದ್ದಾರೆ. ವೀಡಿಯೊ ಹೇಳಿಕೆ ಬಿಡುಗಡೆ ಮಾಡಿರುವ ಅವರು, ರಾತ್ರಿ ಸುಮಾರು 8 ಗಂಟೆ ಸುಮಾರಿಗೆ ನನ್ನನ್ನು ಖಾನಾಪುರ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದಿದ್ದಾರೆ. ಯಾವ … Continued

ಮುಡಾ ಪ್ರಕರಣದಲ್ಲಿ ದೂರು ಹಿಂಪಡೆಯಲು ಹಣದ ಆಮಿಷ : ಮತ್ತೊಂದು ಗಂಭೀರ ಆರೋಪ ಮಾಡಿದ ಸ್ನೇಹಮಯಿ ಕೃಷ್ಣ

ಮೈಸೂರು : ‘ಮುಡಾ ನಿವೇಶನಗಳ ಹಂಚಿಕೆ ಪ್ರಕರಣವನ್ನು ಸಿಬಿಐ‌ ತನಿಖೆಗೆ ಕೋರಿ ನ್ಯಾಯಾಲಯದಲ್ಲಿ ನಾನು ಸಲ್ಲಿಸಿರುವ ಅರ್ಜಿ ಹಿಂಪಡೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರ ಕಡೆಯವರು ಎಂದು ಹೇಳಿಕೊಂಡ ಇಬ್ಬರು ನನಗೆ ಹಾಗೂ ನನ್ನ ಕುಟುಂಬಕ್ಕೆ ಹಣದ ಆಮಿಷ ಒಡ್ಡಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಮಾಡಿದ್ದಾರೆ. ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ … Continued