ಬೆಂಗಳೂರು ನಗರ ವಿವಿಗೆ ಡಾ.ಮನಮೋಹನ ಸಿಂಗ್‌ ಹೆಸರು ; ಬಜೆಟ್‌ ನಲ್ಲಿ ಘೋಷಣೆ

ಬೆಂಗಳೂರು: ಜ್ಞಾನಭಾರತಿ ಕ್ಯಾಂಪಸ್​ ನಲ್ಲಿರುವ ಬೆಂಗಳೂರು ವಿಶ್ವವಿದ್ಯಾಲಯದ ಹೆಸರನ್ನು ಬದಲಾಯಿಸಲಾಗುತ್ತಿದ್ದು, ಅದಕ್ಕೆ ಮಾಜಿ ಪ್ರಧಾನಿ, ದಿವಂಗತ ಡಾ.ಮನಮೋಹನ್ ಸಿಂಗ್ ಅವರ ಹೆಸರನ್ನುಇಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಬಜೆಟ್ ​​ನಲ್ಲಿ ಘೋಷಣೆ ಮಾಡಿದ್ದಾರೆ. ಎರಡು ಅವಧಿಗೆ ಒಟ್ಟು ಹತ್ತು ವರ್ಷ ಕಾಲ ಭಾರತದ ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ 2024ರ ಡಿಸೆಂಬರ್ ತಿಂಗಳಲ್ಲಿ ನಿಧನರಾಗಿದ್ದಾರೆ. ಭಾರತದ ಆಧುನಿಕ … Continued

ಕರ್ನಾಟಕ ಬಜೆಟ್‌ 2025 | ಬೆಂಗಳೂರಿಗೆ ಭರ್ಜರಿ ಕೊಡುಗೆ ನೀಡಿದ ಸಿದ್ದರಾಮಯ್ಯ

ಬೆಂಗಳೂರು : ಕರ್ನಾಟಕ ಬಜೆಟ್‌ 2025ರಲ್ಲಿ ಬೆಂಗಳೂರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭರ್ಜರಿ ಕೊಡುಗೆ ನೀಡಿದ್ದಾರೆ. ಮಹಾನಗರಕ್ಕೆ ಕಳೆದ ವರ್ಷಕ್ಕೆ ಹೆಚ್ಚಿನ ಅನುದಾನ ನೀಡಿದ್ದಕಿಂತ 7 ಸಾವಿರ ಕೋಟಿ ರೂ.ಗಷ್ಟು ಹೆಚ್ಚಿಗೆ ನೀಡಲಾಗಿದೆ. ಅಲ್ಲದೆ, ಟನಲ್‌ ಯೋಜನೆಗೆ 40,000 ಕೋಟಿ ರೂ. ಮೀಸಲಿಡಲಾಗಿದೆ. ಬಿಬಿಎಂಪಿಯ ಅಂದಾಜು ಮೊತ್ತ 40,000 ಕೋಟಿ ರೂಪಾಯಿ ವೆಚ್ಚದ ಉತ್ತರ- ದಕ್ಷಿಣ ಮತ್ತು … Continued

ಕರ್ನಾಟಕ ಬಜೆಟ್‌ 2025 : ಬಜೆಟ್‌ ಗಾತ್ರ ₹4 ಲಕ್ಷ ಕೋಟಿ, ಅತಿಥಿ ಶಿಕ್ಷಕರು, ಬಿಸಿಯೂಟ ಕಾರ್ಯಕರ್ತೆಯರ ಗೌರವಧನ ಹೆಚ್ಚಳ, ಗ್ಯಾರಂಟಿ ಯೋಜನೆಗಳಿಗೆ 51,300 ಕೋಟಿ ರೂ. ಅನುದಾನ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ (ಮಾರ್ಚ್ 7) ಬೆಳಿಗ್ಗೆ 10:15ಕ್ಕೆ 2025-26ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಿದ್ದಾರೆ. ಅವರು ದಾಖಲೆಯ 16ನೇ ಬಜೆಟ್ ಮಂಡಿಸಿದ್ದಾರೆ. ಕುವೆಂಪು ಅವರ ಕವನವನ್ನು ವಾಚಿಸುವ ಮೂಲಕ ಬಜೆಟ್‌ ಮಂಡನೆ ಶುರು ಮಾಡಿದ ಅವರು ₹4 ಲಕ್ಷ ಕೋಟಿ ಗಾತ್ರದ ಬಜೆಟ್ ಮಂಡಿಸಿದ್ದಾರೆ. 2025-26ನೇ ಸಾಲಿನ ಕರ್ನಾಟಕ ಬಜೆಟ್ ಗಾತ್ರ 4,09,549 … Continued

ಕರ್ನಾಟಕ ಬಜೆಟ್‌ 2025 : ಕೃಷಿ ಕ್ಷೇತ್ರಕ್ಕೆ ಏನೇನು ಕೊಟ್ಟರು ಸಿದ್ದರಾಮಯ್ಯ..?

ಬೆಂಗಳೂರು : ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ 2025-26ರ ದಾಖಲೆಯ ಬಂಜೆಟ್ (State Budget)​ ಮಂಡಿಸಿದ್ದು, ದಾಖಲೆಯ 16ನೇ ಆಯವ್ಯಯ ಮಂಡಿಸಿದ್ದಾರೆ. ದೇಶದ ಬೆನ್ನೆಲಬು ರೈತರ ಪರವಾಗಿ ಕೃಷಿ ಕ್ಷೇತ್ರಕ್ಕೆ ಬಂಪರ್ ಕೊಡುಗೆಯನ್ನು ಸಿದ್ದರಾಮಯ್ಯ ನೀಡಿದ್ದಾರೆ. ಈ ಬಾರಿಯ ಬಜೆಟ್‌ನಲ್ಲಿ ಕೃಷಿ ಮತ್ತು ತೋಟಗಾರಿಕೆ ವಲಯಕ್ಕೆ ಒಟ್ಟು ₹7145 ಕೋಟಿ ಅನುದಾನ ಮೀಸಲಿಟ್ಟಿದೆ. ’ಕೃಷಿ … Continued

ಸಿಎಂ ಯಾರೆಂದು ನಿರ್ಧರಿಸುವುದು ಹೈಕಮಾಂಡ್‌ ; ಸಿದ್ದರಾಮಯ್ಯ

ಬೆಂಗಳೂರು: ಡಿಕೆ ಶಿವಕುಮಾರ ಮುಖ್ಯಮಂತ್ರಿಯಾಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದ ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹೇಳಿಕೆ ನೀಡಿರುವುದು ಕಾಂಗ್ರೆಸ್ ಪಕ್ಷದಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ. ಈ ಬಗ್ಗೆ ಸೋಮವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ್ದು, ಈ ವಿಷಯದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ.. ಹೈಕಮಾಂಡ್ ನೀಡುವ ಸೂಚನೆಯನ್ನು ನಾನು ಪಾಲಿಸುತ್ತೇನೆ … Continued

ಡಿಕೆ ಶಿವಕುಮಾರ ಸಿಎಂ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ : ವೀರಪ್ಪ ಮೊಯ್ಲಿ

ಉಡುಪಿ : ಡಿಕೆ ಶಿವಕುಮಾರ ಅವರಿಗೆ ಮೊದಲ ಬಾರಿ ಎಂಎಲ್ಎ ಟಿಕೆಟ್ ಕೊಡಿಸಿದ್ದೇ ನಾನು. ಇವತ್ತು ಅವರು ಯಶಸ್ವಿ ನಾಯಕರಾಗಿ ಬೆಳೆದಿದ್ದಾರೆ. ಅವರು ಮುಖ್ಯಮಂತ್ರಿ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹೇಳಿದ್ದಾರೆ. ಕಾರ್ಕಳದಲ್ಲಿ ನಡೆದ ಕಾಂಗ್ರೆಸ್ ಕುಟುಂಬೋತ್ಸವದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ … Continued

ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ : ಭವಿಷ್ಯ ನುಡಿದ ಕೋಡಿಮಠದ ಸ್ವಾಮೀಜಿ

ಯಾದಗಿರಿ : ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆಗಳು ಜೋರಾಗಿ ನಡೆದಿವೆ. ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಬಲಿಗರು ಹಾಗೂ ಮುಖ್ಯಮಂತ್ರಿ ಆಕಾಂಕ್ಷಿಯಾಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಬೆಂಬಲಿಗರ ಮಧ್ಯೆ ವಾಗ್ಯುದ್ಧಕ್ಕೂ ಕಾರಣವಾಗಿದೆ. ಹೈಕಮಾಂಡ್‌ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ ಅವರ ವಿಚಾರದಲ್ಲಿ  ಅಧಿಕಾರ ಹಂಚಿಕೆ ಸೂತ್ರ ಸಿದ್ಧಪಡಿಸಿದೆ ಎನ್ನಲಾಗಿದೆ.ಕಳೆದ ದಿನಗಳಿಂದ ಡಿ.ಕೆ. ಶಿವಕುಮಾರ ಅವರ ಬಣದ ನಾಯಕರು ಮುಖ್ಯಮಂತ್ರಿಯನ್ನು … Continued

ಮುಡಾ ಹಗರಣ : ಲೋಕಾಯುಕ್ತದಿಂದ ನ್ಯಾಯಾಲಯಕ್ಕೆ 11000 ಪುಟಗಳ ವರದಿ ಸಲ್ಲಿಕೆ

ಬೆಂಗಳೂರು: ಮುಡಾ ಹಗರಣಕ್ಕೆ (MUDA scam) ಸಂಬಂಧಿಸಿದಂತೆ ಇಂದು, ಗುರುವಾರ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಲೋಕಾಯುಕ್ತ (Lokayukta) ಪೊಲೀಸ್ ಟಿ.ಉದೇಶ ಅವರು ಒಟ್ಟು 11 ಸಾವಿರ ಪುಟಗಳ ತನಿಖೆಯ ಅಂತಿಮ ವರದಿಯನ್ನು ಸಲ್ಲಿಸಿದ್ದಾರೆ. ಈ ವರದಿಯಲ್ಲಿ,  ಸಿದ್ಧಾರಮಯ್ಯ ಹಾಗೂ ಇತರ ಮೂವರ ವಿರುದ್ಧ ಸಾಕ್ಷ್ಯಾಧಾರಗಳ ಕೊರತೆ ಇದೆ ಎಂದು ಲೋಕಾಯುಕ್ತ ಪೊಲೀಸರು ಅವರಿಗೆ ಕ್ಲೀನ್‌ಚಿಟ್‌ನೀಡಿದ್ದಾರೆ. … Continued

ರಾಜ್ಯದ ಬಜೆಟ್​ ಮಂಡನೆಗೆ ಮುಹೂರ್ತ ಫಿಕ್ಸ್

ಬೆಂಗಳೂರು: 2025-26ನೇ ಸಾಲಿನ ರಾಜ್ಯದ ಬಜೆಟ್‌ ಅನ್ನು ಮಾರ್ಚ್ 7ರಂದು ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ವಿಧಾನಸೌಧದಲ್ಲಿ ತಿಳಿಸಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ರೈತ ಸಂಘದ ಮುಖಂಡರುಗಳೊಂದಿಗೆ 2025-26ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆ ನಡೆಸಿ, ರೈತ ಸಮುದಾಯದ ಕುಂದುಕೊರತೆ ಹಾಗೂ ಬೇಡಿಕೆಗಳ ಬಗ್ಗೆ ಚರ್ಚಿಸಿದ ಬಳಿಕ ಸುದ್ದಿಗಾರರಿಗೆ … Continued

ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಸಿಡಿದೆದ್ದರೇ ಆಳಂದ ಶಾಸಕ; ಸಿಎಂ ರಾಜಕೀಯ ಸಲಹೆಗಾರ ಹುದ್ದೆಗೆ ಬಿ.ಆರ್. ಪಾಟೀಲ ದಿಢೀರ್‌ ರಾಜೀನಾಮೆ…!

ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ಹಾಗೂ ಆಳಂದ ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ​ ಅವರು ಶನಿವಾರ ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರ ಹುದ್ದೆಗೆ ದಿಢೀರ್‌ ರಾಜೀನಾಮೆ ನೀಡಿದ್ದಾರೆ. ದಿಢೀರ್ ರಾಜೀನಾಮೆ ಕಾಂಗ್ರೆಸ್​​ನಲ್ಲಿ ತೀವ್ರ ಸಂಚಲನ ಮೂಡಿಸಿದೆ. ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರ ಹುದ್ದೆಗೆ ನಾನು ರಾಜೀನಾಮೆ ನೀಡಿದ್ದೇನೆ. ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈಗಾಗಲೇ … Continued