ಕಾಂಗ್ರೆಸ್ ಸರ್ಕಾರದ ವಸೂಲಿ ದಂಧೆ ಹಾದಿಬೀದಿಗೆ: ಸಿಎಂ ಪುತ್ರನ ವೀಡಿಯೊ ಬಿಡುಗಡೆ ಮಾಡಿ ಜನರಿಗೆ ಉತ್ತರಕೊಡಿ ಎಂದು ಎಚ್‌ಡಿಕೆ ಸವಾಲು

ಬೆಂಗಳೂರು: ಕಾಸಿಗಾಗಿ ಹುದ್ದೆ (#CashForPosting) ದಂಧೆ ಕರ್ನಾಟಕದಲ್ಲಿ ಅವ್ಯಾಹತವಾಗಿ, ಎಗ್ಗಿಲ್ಲದೆ, ಲಜ್ಜೆಗೆಟ್ಟು ನಡೆದಿದೆ ಎನ್ನುವುದಕ್ಕೆ ಈ ವೀಡಿಯೊ ತುಣುಕೇ ಸಾಕ್ಷಿ. ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಸೂಲಿ ಬಿಸ್ನೆಸ್ ಹಾದಿಬೀದಿಗೆ ಬಂದಿದೆ. ನೈತಿಕತೆ, ಮೌಲ್ಯ, ಸಾಮಾಜಿಕ ನ್ಯಾಯದ ಡೋಂಗಿ ಹರಿಕಾರನ ಅಸಲಿ ಮುಖ ಅದೇ ಹಾದಿಬೀದಿಯಲ್ಲಿ ಮೂರು ಕಾಸಿಗೆ ಹರಾಜಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ … Continued

ರೈತರ ಕೃಷಿ ಪಂಪ್ ಸೆಟ್ ಗಳಿಗೆ ಪ್ರತಿದಿನ 7 ತಾಸು ವಿದ್ಯುತ್ : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ನೀರಾವರಿ ಪಂಪ್‍ಸೆಟ್‍ಗಳಿಗೆ ಪ್ರತಿದಿನ 7 ಗಂಟೆ ವಿದ್ಯುತ್ ಸರಬರಾಜು ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ. ಇಂಧನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ನಂತರ ಮಾತನಾಡಿದ ಅವರು, ಸರ್ಕಾರದ ಮೇಲೆ ಹೆಚ್ಚಿನ ಹೊರೆಯಾಗದಂತೆ ಪ್ರತಿದಿನ ಏಳು ತಾಸು ವಿದ್ಯುತ್‌ ನೀಡಲು ಇಂದಿನ ಸಭೆಯಲ್ಲಿ ನಿರ್ಧರಿಸಲಾಯಿತು. ಇದಕ್ಕಾಗಿ ಸುಮಾರು 1500 ಕೋಟಿ ರೂ. ಅಗತ್ಯವಿದೆ … Continued

ಡಿಕೆ ಶಿವಕುಮಾರ ನಾಳೆಯೇ ಸಿಎಂ ಆಗೋದಾದ್ರೆ ಅವ್ರಿಗೆ 19 ಜೆಡಿಎಸ್ ಶಾಸಕರ ಬೆಂಬಲ: ಆಫರ್‌ ನೀಡಿದ ಕುಮಾರಸ್ವಾಮಿ..!

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ​ ನಾಳೆ ಈ ರಾಜ್ಯದ ಮುಖ್ಯಮಂತ್ರಿ ಆಗುವುದಾದರೆ ಜೆಡಿಎಸ್​ನ 19 ​​ ಶಾಸಕರ ಬೆಂಬಲ ಇದೆ ಎಂದು ಮಾಜಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಬೆಂಬಲ ಘೋಷಣೆ ಮಾಡಿದ್ದಾರೆ…. ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ನಾಳೆ ಮುಖ್ಯಮಂತ್ರಿ ಆಗುವುದಾದರೆ ಆದರೆ ನಾವು ಬೆಂಬಲ ನೀಡುತ್ತೇವೆ ಎಂದರು. ಸುಮ್ಮನೆ ಜೆಡಿಎಸ್‌ನಿಂದ ಐದು ಜನ … Continued

ಲೋಕಸಭಾ ಚುನಾವಣೆ ಸನಿಹದಲ್ಲಿ ಕಾಂಗ್ರೆಸ್‌ ವರಿಷ್ಠರಿಗೆ ತಲೆನೋವಾದ ಕರ್ನಾಟಕದ ನಾಯಕರ ʼಸಿಎಂ ಕುರ್ಚಿʼ ಜಗಳ

ಕಾಂಗ್ರೆಸ್‌ನಲ್ಲಿ ಯಾವುದೇ ಅಸಮಧಾನವಿಲ್ಲ. ನಮ್ಮಲ್ಲಿ ಒಡಕಿಲ್ಲ, ನಾವೆಲ್ಲ ಒಂದೇ ಎಂದು ಎಷ್ಟೇ ಬಾರಿ ಪಕ್ಷದ ಮುಖಂಡರು ಮಾಧ್ಯಮಗಳ ಮುಂದೆ ಹೇಳಿಕೊಂಡರೂ ಒಡಕು ಹಾಗೂ ಅಸಮಾಧಾನ ಪದೇ ಪದೇ ಬಹಿರಂಗವಾಗುತ್ತಲೇ ಇದೆ. ಈಗ ಎರಡು ಬಣಗಳ ನಡುವೆ ಈಗ ಮುಖ್ಯಮಂತ್ರಿ ಕುರ್ಚಿಯ ಬಗ್ಗೆ ಹೇಳಿಕೆಗಳ ಸಮರ ಜೋರಾಗಿದೆ. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನಾನೇ ಐದು … Continued

ಜಾತಿ ಗಣತಿ ವರದಿ ತಿರಸ್ಕರಿಸಲು ಒಕ್ಕಲಿಗರ ಸಭೆಯಲ್ಲಿ ನಿರ್ಣಯ

ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗದಿಂದ ಸಿದ್ದಪಡಿಸಲಾದ ‘ಸಾಮಾಜಿಕ ಆರ್ಥಿಕ ಸಮೀಕ್ಷಾ ವರದಿಯನ್ನು ರಾಜ್ಯ ಸರ್ಕಾರ ಸ್ವೀಕರಿಸಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಲು ಒಕ್ಕಲಿಗ ಸಮುದಾಯದ ಸಭೆ ನಿರ್ಧರಿಸಿದೆ. ಎಚ್.ಕಾಂತರಾಜು ವರದಿ ಅವೈಜ್ಞಾನಿಕವಾಗಿದೆ, ಸಾಮಾಜಿಕ, ಆರ್ಥಿಕ ಸಮೀಕ್ಷೆ ಲೋಪ – ದೋಷಗಳಿಂದ ಕೂಡಿದೆ. ಶಂಕಾಸ್ಪದ ಮತ್ತು ತಪ್ಪು ಮಾಹಿತಿಯಿಂದ ಕೂಡಿರುವ ವರದಿ ಅಂಗೀಕರಿಸಿದರೆ ಒಕ್ಕಲಿಗ ಸಮುದಾಯಕ್ಕೆ … Continued

ಐದು ವರ್ಷವೂ ನಾನೇ ಮುಖ್ಯಮಂತ್ರಿ : ಸಿದ್ದರಾಮಯ್ಯ

ಹೊಸಪೇಟೆ : ಯಾವ ಉಹಾಪೋಹಗಳಿಗೂ ಕಿವಿಗೊಡಬೇಡಿ. ಪೂರ್ಣ ಐದು ವರ್ಷ ಕಾಂಗ್ರೆಸ್‌ ಪಕ್ಷವೇ ಅಧಿಕಾರ ನಡೆಸಲಿದೆ, ಮುಂದಿನ 5 ವರ್ಷವೂ ನಾನೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ಕೆಲಸ ಇಲ್ಲದೇ ಇರುವವರು ಮುಖ್ಯಮಂತ್ರಿ ಬದಲಾವಣೆ ವಿಚಾರದ ಬಗ್ಗೆ ಮಾತನಾಡುತ್ತಾರೆ ಎಂದು … Continued

ಪಕ್ಷ, ಸರ್ಕಾರದ ಆಂತರಿಕ ವಿಚಾರ ಸಾರ್ವಜನಿಕವಾಗಿ ಮಾತನಾಡಿದ್ರೆ ಪಕ್ಷದ ಯಾರೇ ಆದ್ರೂ ಶಿಸ್ತು ಕ್ರಮ : ಸುರ್ಜೇವಾಲ ಎಚ್ಚರಿಕೆ

ಬೆಂಗಳೂರು: ಪಕ್ಷದ ಸಂಘಟನೆ ಹಾಗೂ ಸರ್ಕಾರದ ವಿಚಾರವಾಗಿ ಕಾಂಗ್ರೆಸ್ ಪಕ್ಷದ ಯಾವುದೇ ನಾಯಕರು ಸಾರ್ವಜನಿಕವಾಗಿ ಮಾತನಾಡಬಾರದು. ಪಕ್ಷದ ಶಿಸ್ತು ಮೀರಿ ಮಾತನಾಡಿದರೆ ಯಾರೇ ಆದರೂ ಅವರ ಮೇಲೆ ಕ್ರಮ ಕೈಗೊಳ್ಳಲಾಗುವುದು” ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರು ಸಚಿವರು ಹಾಗೂ ಪಕ್ಷದ ಶಾಸಕರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಕ್ವೀನ್ಸ್ ರಸ್ತೆಯ ಕೆಪಿಸಿಸಿ … Continued

ಸಚಿವ ಸಂಪುಟ ಪುನಾರಚನೆ ಚರ್ಚೆ : ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

ಮೈಸೂರು: ಆಡಳಿತ ಪಕ್ಷದ ವಲಯದಲ್ಲಿ ಸಚಿವ ಸಂಪುಟ ಪುನಾರಚನೆ ಸಾಧ್ಯತೆ ಬಗ್ಗೆ ಚರ್ಚೆ ನಡೆಯುತ್ತಿದ್ದು, ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇದಕ್ಕೆ ಪ್ರತಿಕ್ರಿಯಿಸಿದ್ದು, ಕಾಂಗ್ರೆಸ್ ವರಿಷ್ಠರು ಈ ಬಗ್ಗೆ ತೀರ್ಮಾನಿಸಲಿದ್ದಾರೆ ಎಂದು ಬುಧವಾರ ಹೇಳಿದ್ದಾರೆ. ಸಚಿವ ಸ್ಥಾನ ಆಕಾಂಕ್ಷಿಯಾಗುವುದರಲ್ಲಿ ತಪ್ಪೇನಿಲ್ಲ, ಆದರೆ ಸಚಿವ ಸಂಪುಟ ವಿಸ್ತರಣೆ ಮಾಡಬೇಕೋ ಅಥವಾ ಬೇಡವೋ ಎಂಬ ಬಗ್ಗೆ ಪಕ್ಷದ ಹೈಕಮಾಂಡ್ … Continued

ಕುತೂಹಲ ಮೂಡಿಸಿದ ದೇವೇಗೌಡ-ಸಿದ್ದರಾಮಯ್ಯ ಭೇಟಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡರನ್ನು (HD DeveGowda) ಅವರನ್ನು ಭಾನುವಾರ ಅನಿರೀಕ್ಷಿತವಾಗಿ ಭೇಟಿಯಾಗಿದ್ದಾರೆ. ಬಿಜೆಪಿ- ಜೆಡಿಎಸ್​ ಮೈತ್ರಿ ಚರ್ಚೆ ನಡೆಯುತ್ತಿರುವ ವೇಳೆಯೇ ಈ ಭೇಟಿ ನಡೆದಿರುವುದುಕುತೂಹಲಕ್ಕೆ ಕಾರಣವಾಗಿದೆ. ಕಾಂಗ್ರೆಸ್​ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳಲು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ, … Continued

ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ತಂದಿಟ್ಟ ಪುತ್ರನ ಹೇಳಿಕೆ : ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಬೆಂಗಳೂರು: ಕರ್ನಾಟಕದ ಕಳೆದ 2023ರ ವಿಧಾನಸಭಾ ಚುನಾವಣೆಯಲ್ಲಿ ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿ ಮುಖ್ಯಮಂತ್ರಿ ಆಗಿದ್ದಾರೆ ಎಂದು  ಆರೋಪಿಸಿ  ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಒಬ್ಬ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಿರುವ ಕ್ಷೇತ್ರದಲ್ಲೇ ಈ ರೀತಿ ಚುನಾವಣಾ ಅಕ್ರಮ ನಡೆದಿರುವುದು ಆಘಾತಕಾರಿ. ಕುಕ್ಕರ್‌, ಐರನ್‌ … Continued