ಮುಡಾ ವಿಚಾರದಲ್ಲೇ ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ…: ಸರ್ಕಾರದಿಂದ ವಿವರ ಕೇಳಿದ ರಾಜ್ಯಪಾಲರು

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಡಾ ವಿಚಾರದಲ್ಲಿಯೇ ಮತ್ತೊಂದು ಸಂಕಷ್ಟ ಎದುರಾಗಿದೆ. ಮುಡಾ ವಿಚಾರದಲ್ಲಿ ರಾಜ್ಯಪಾಲರಿಗೆ ಮತ್ತೊಂದು ದೂರು ಸಲ್ಲಿಕೆಯಾಗಿದ್ದು, ಈ ಸಂಬಂಧ ರಾಜ್ಯಪಾಲರು ರಾಜ್ಯ ಸರ್ಕಾರಕ್ಕೆ ವರದಿ ಕೇಳಿದ್ದಾರೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ ಅವರಿಗೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಈ ಸಂಬಂಧ ಪತ್ರ ಬರೆದು ವರದಿ … Continued

ದಲಿತರ ನಿವೇಶನ ಕಬಳಿಸಿ ಮನೆ ನಿರ್ಮಾಣ ; ಸಿಎಂ ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಆರೋಪ

ಬೆಂಗಳೂರು : ನಾನು ತಪ್ಪು ಮಾಡಿಲ್ಲ, ಮುಂದೆಯೂ ಮಾಡುವುದಿಲ್ಲ, ನನಗೆ ನ್ಯಾಯ ಸಿಗುವ ವಿಶ್ವಾಸ ಇದೆ ಎಂದು ಮುಡಾ ಪ್ರಕರಣದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿರುವ ಬೆನ್ನಲ್ಲೇ ಅವರ ವಿರುದ್ಧ ಕೇಂದ್ರ ಸಚಿವ ಎಚ್​.ಡಿ. ಕುಮಾರಸ್ವಾಮಿ ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ. ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಹಿಂದೆ ಉಪಮುಖ್ಯಮಂತ್ರಿಯಾಗಿದ್ದಾಗ ಸಿದ್ದರಾಮಯ್ಯನವರು ಒಂದು … Continued

ಮತ್ತೆ ನಂದಿನಿ ಹಾಲಿನ ದರ ಹೆಚ್ಚಳ ; ಸುಳಿವು ನೀಡಿದ ಸಿಎಂ ಸಿದ್ದರಾಮಯ್ಯ

ರಾಮನಗರ: ಕಳೆದ ಜೂನ್ ತಿಂಗಳಲ್ಲಿ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರಿಗೆ 2 ರೂಪಾಯಿ ಹೆಚ್ಚಿಸಿದ್ದ ರಾಜ್ಯ ಸರ್ಕಾರ ವಮತ್ತೆ ಹಾಲಿನ ದರವನ್ನು ಹೆಚ್ಚಿಸುವ ಬಗ್ಗೆ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಸುಳಿವು ನೀಡಿದ್ದಾರೆ. ಶುಕ್ರವಾರ ರಾಮನಗರ ಜಿಲ್ಲೆಯ ಮಾಗಡಿ ಪಟ್ಟಣದಲ್ಲಿ ಹಲವು ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, … Continued

ಪ್ರಾಂಶುಪಾಲರ ‘ಅತ್ಯುತ್ತಮ ಶಿಕ್ಷಕ ಪ್ರಶಸ್ತಿ’ಗೂ ತಟ್ಟಿದ ಹಿಜಾಬ್‌ ವಿವಾದ ; ತಾನೇ ಘೋಷಿಸಿ ಪ್ರಶಸ್ತಿ ತಡೆಹಿಡಿದ ಸರ್ಕಾರ…!

ಬೆಂಗಳೂರು: ಎರಡು ವರ್ಷಗಳ ಹಿಂದೆ ರಾಜ್ಯದಲ್ಲಿ ಹಿಜಾಬ್ ವಿರೋಧಿ ನಿಲುವು ತೋರಿದ ಆರೋಪದ ಮೇಲೆ ಸರ್ಕಾರಿ ಕಾಲೇಜಿನ ಪ್ರಾಂಶುಪಾಲರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ನೀಡುವ ನಿರ್ಧಾರವನ್ನು ಕರ್ನಾಟಕ ಸರ್ಕಾರ ತಡೆಹಿಡಿದಿದೆ ಎಂದು ವರದಿಯಾಗಿದೆ. ಶಿಕ್ಷಕರ ದಿನಾಚರಣೆಯಂದು ಉಡುಪಿ ಜಿಲ್ಲೆಯ ಕುಂದಾಪುರದ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ರಾಮಕೃಷ್ಣ ಬಿ.ಜಿ. ಅವರು ಪ್ರಶಸ್ತಿ ಸ್ವೀಕರಿಸಬೇಕಿತ್ತು, ಆದರೆ … Continued

‘ನಾನು ಸಿಎಂ ರೇಸಲ್ಲಿ ಇಲ್ಲವೇ ಇಲ್ಲ, ಸಿದ್ದರಾಮಯ್ಯ ಅವರೇ 5 ವರ್ಷದ ವರೆಗೆ ಸಿಎಂ ; ವರಸೆ ಬದಲಿಸಿದ ದೇಶಪಾಂಡೆ

ಧಾರವಾಡ : ಕೆಲವು ದಿನಗಳ ಹಿಂದೆ ಅವಕಾಶ ಸಿಕ್ಕರೆ ನಾನು ಕೂಡ ಮುಖ್ಯಮಂತ್ರಿಯಾಗುತ್ತೇನೆ ಎಂದು ಹೇಳಿಕೆ ನೀಡಿದ್ದ ಹಿರಿಯ ಕಾಂಗ್ರೆಸ್ ಮುಖಂಡ ಆರ್.ವಿ.ದೇಶಪಾಂಡೆ ಈಗ ಕಾಂಗ್ರೆಸ್ ಸರ್ಕಾರದ ಐದು ವರ್ಷಗಳ ಅವಧಿ ಮುಗಿಯುವವರೆಗೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ ಎಂದು ಹೇಳಿದ್ದಾರೆ. ಧಾರವಾಡದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಉತ್ತಮ ಕೆಲಸ … Continued

ಅಧಿಕಾರಿ ಅಮಾನತಿನಿಂದ ಮುಡಾ ನಿರ್ಣಯ ತಪ್ಪೆಂಬುದು ಸಾಬೀತು ; ರವಿಕುಮಾರ

ಬೆಂಗಳೂರು : ಅಕ್ರಮವಾಗಿ ನೀಡಲಾದ ಮೈಸೂರು ಮುಡಾದ 14 ನಿವೇಶನಗಳನ್ನು ವಾಪಸ್ ಮಾಡಬೇಕು ಹಾಗೂ ಅಕ್ರಮದ ಆ ತಪ್ಪಿಗೆ ಮುಖ್ಯಮಂತ್ರಿಗಳು ರಾಜೀನಾಮೆ ಕೊಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ಆಗ್ರಹಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ನಮ್ಮ ಕಾನೂನು, ನಿಯಮ, ನಿರ್ದೇಶನಗಳಿಗೆ ಅವರು … Continued

ಮುಡಾ ಹಗರಣದಲ್ಲಿ ಮೊದಲ ತಲೆದಂಡ ; ಮುಡಾದ ಹಿಂದಿನ ಆಯುಕ್ತ ಸಸ್ಪೆಂಡ್‌…

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇಕ್ಕಟ್ಟಿಗೆ ಸಿಲುಕಿಸಿರುವ ಮುಡಾ ಹಗರಣದಲ್ಲಿ (Muda Scam) ಮೊದಲ ತಲೆದಂಡವಾಗಿದೆ. ರಾಜ್ಯಪಾಲರ ಆದೇಶಾನುಸಾರ ಹಿಂದಿನ ಆಯುಕ್ತ ಜಿಟಿ ದಿನೇಶಕುಮಾರ (GT Dinesh Kumar) ಅವರನ್ನು ಸರ್ಕಾರ ಅಮಾನತು ಮಾಡಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸೈಟ್​ ಹಂಚಿಕೆ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ರಾಜ್ಯಪಾಲರಾದ … Continued

ಸಿದ್ದರಾಮಯ್ಯ ಅನುಮತಿ ಕೊಟ್ರೆ ನಾನು ಸಿಎಂ ಆಗ್ತೇನೆ: ಆರ್‌.ವಿ ದೇಶಪಾಂಡೆ ಅಚ್ಚರಿಯ ಹೇಳಿಕೆ

ಮೈಸೂರು : ಸಿಎಂ ಸಿದ್ದರಾಮಯ್ಯ ಅವರು ಅನುಮತಿ ನೀಡಿದರೆ ನಾನು ಮುಖ್ಯಮಂತ್ರಿ ಆಗುತ್ತೇನೆ, ಆದರೆ ಸದ್ಯಕ್ಕೆ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್‌.ವಿ.ದೇಶಪಾಂಡೆ ಅಚ್ಚರಿ ಹೇಳಿಕೆ ನೀಡುವ ಮೂಲಕ ಪರೋಕ್ಷವಾಗಿ ಮುಖ್ಯಮಂತ್ರಿ ಆಗುವ ಬಯಕೆ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ … Continued

ನಕಲಿ ಸಹಿ ಆರೋಪ ; ಸಿಎಂ ಸಿದ್ದರಾಮಯ್ಯ ಪತ್ನಿ ವಿರುದ್ಧ ದೂರು ದಾಖಲು

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿದೆ ಎನ್ನಲಾದ ಅಕ್ರಮ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ವಿರುದ್ಧ ದೂರು ದಾಖಲಾಗಿದೆ ಎಂದು ವರದಿಯಾಗಿದೆ. ನಕಲಿ ಸಹಿ ವಿಚಾರವಾಗಿ ಸಿದ್ದರಾಮಯ್ಯ ಅವರ ಪತ್ನಿ ವಿರುದ್ಧ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮೈಸೂರಿನ ಲಕ್ಷ್ಮೀಪುರಂ ಪೊಲೀಸ್ ಠಾಣೆಗೆ ಬುಧವಾರ … Continued

ನಟ ದರ್ಶನ್ -ಇತರರನ್ನು ಬೇರೆ ಜೈಲಿಗೆ ಸ್ಥಳಾಂತರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಪರಪ್ಪನ ಅಗ್ರಹಾತ ಜೈಲಿನಲ್ಲಿರುವ ನಟ ದರ್ಶನ್ ಮತ್ತು ಇತರರನ್ನು ಕೂಡಲೇ ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ ಮಾಡುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕಾರಾಗೃಹದಲ್ಲಿರುವ ನಟ ದರ್ಶನಗೆ ರಾಜಾತಿಥ್ಯ ನೀಡಲಾಗುತ್ತಿರುವ ಫೋಟೋ ವೈರಲ್ ಆಗಿದ್ದು, ಅದು … Continued