ವಾಲ್ಮೀಕಿ ಅಭಿವೃದ್ದಿ ನಿಗಮ ಹಗರಣ: ತನಿಖೆಗೆ ಎಸ್‌ಐಟಿ ರಚಿಸಿದ ಸರ್ಕಾರ

ಬೆಂಗಳೂರು : ಶಿವಮೊಗ್ಗ ಜಿಲ್ಲೆಯ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧೀಕ್ಷಕರಾದ ಚಂದ್ರಶೇಖರನ್‌ ಆತ್ಮಹತ್ಯೆ ಪ್ರಕರಣ ಹಾಗೂ ನಿಗಮದಲ್ಲಿ ನಡೆದಿರುವ ಆರ್ಥಿಕ ಅವ್ಯವಹಾರಗಳ ಪ್ರಕರಣಗಳ ಸಮಗ್ರ ತನಿಖೆಯನ್ನು ವಿಶೇಷ ತನಿಖಾ ತಂಡ ರಚಿಸಿ ನಡೆಸಲು ರಾಜ್ಯ ಸರ್ಕಾರವು ನಿರ್ಧರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆಯ ನಂತರ ಎಸ್‌ಐಟಿ ರಚಿಸಿ ಸರ್ಕಾರದಿಂದ ಅಧಿಕೃತ ಆದೇಶ ಹೊಡಿಸಲಾಗಿದೆ. … Continued

ಚುನಾವಣೆ ವೇಳೆಯೇ ಬಿಜೆಪಿಗೆ ಗುಡ್‌ಬೈ ಹೇಳಿದ ಸಂಸದ ಕರಡಿ ಸಂಗಣ್ಣ : ಕಾಂಗ್ರೆಸ್‌ ಸೇರ್ಪಡೆ

ಬೆಂಗಳೂರು : ಕೊಪ್ಪಳದ ಬಿಜೆಪಿ ಸಂಸದರಾಗಿದ್ದ ಕರಡಿ ಸಂಗಣ್ಣ ಬುಧವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಅವರಿಗೆ ಟಿಕೆಟ್‌ ನಿರಾಕರಣೆ ಮಾಡಿ ಬಿಜೆಪಿ ಹೊಸಮುಖ ಡಾ. ಬಸವರಾಜ್‌ ಕ್ಯಾವಟರ್‌ ಅವರಿಗೆ ಕೊಪ್ಪಳ ಕ್ಷೇತ್ರದ ಟಿಕೆಟ್ ನೀಡಿದ್ದಕ್ಕೆ ಅಸಮಾಧಾನಗೊಂಡಿದ್ದ ಕರಡಿ ಸಂಗಣ್ಣ ಮಂಗಳವಾರ ಬಿಜೆಪಿ ಪ್ರಾಥಮಿ ಸದಸ್ಯತ್ವಕ್ಕೆ ಮತ್ತು ಸಂಸತ್​ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. … Continued

‘ಇಂಡಿಯಾ ಮೈತ್ರಿಕೂಟಕ್ಕೆ ಸಂಪೂರ್ಣ ಬಹುಮತ ಸಿಗದೇ ಇರಬಹುದು, ಆದರೆ…’: ಲೋಕಸಭೆ ಚುನಾವಣೆಗೂ ಮುನ್ನ ಸಿಎಂ ಸಿದ್ದರಾಮಯ್ಯ

ಬೆಂಗಳೂರು : 2024ರ ಲೋಕಸಭೆ ಚುನಾವಣೆಗೆ ಮುನ್ನ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಪಕ್ಷಗಳ ಇಂಡಿಯಾ ಮೈತ್ರಿಕೂಟಕ್ಕೆ ಸಂಪೂರ್ಣ ಬಹುಮತ ಸಿಗದೇ ಇರಬಹುದು ಎಂದು ಹೇಳಿದ್ದಾರೆ. ಆದರೆ  ಇದೇ ವೇಳೆ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಕೂಡ ಸಂಪೂರ್ಣ ಬಹುಮತ  ಪಡೆಯುವುದಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ. ಆದ್ದರಿಂದ, ಇಂಡಿಯಾ ಮೈತ್ರಿಕೂಟವು ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ, … Continued

ಬರ ಪರಿಹಾರ ನೀಡದ ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ಗೆ ರಿಟ್ ಅರ್ಜಿ : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ತೀವ್ರ ಬರಗಾಲದಿಂದ ತತ್ತರಿಸಿರುವ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಪದೇಪದೇ ಮನವಿ ಮಾಡಿದರೂ ಹಣ ಬಿಡುಗಡೆ ಮಾಡದ ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಶನಿವಾರ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ತೀವ್ರ ಬರ ಆವರಿಸಿದ್ದರೂ ಕೂಡ ಕೇಂದ್ರ … Continued

ಬೆಂಗಳೂರಲ್ಲಿ ದಿನಕ್ಕೆ 500 ಮಿಲಿಯನ್ ಲೀಟರ್ ನೀರಿನ ಕೊರತೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬೆಂಗಳೂರು ನಗರದಲ್ಲಿ ಪ್ರತಿದಿನ 2,600 ಎಂಎಲ್‌ಡಿ ನೀರು (ಎಂಎಲ್‌ಡಿ) ಕೊರತೆ ಎದುರಾಗಿದ್ದು, ಪ್ರತಿದಿನ ಸಭೆ ನಡೆಸಿ ವಾರಕ್ಕೊಮ್ಮೆ ಕ್ರಿಯಾ ಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಹೇಳಿದ್ದಾರೆ. ಮುಖ್ಯಮಂತ್ರಿಗಳ ಪ್ರಕಾರ, ಬೆಂಗಳೂರಿನಲ್ಲಿ 14,000 ಬೋರ್‌ವೆಲ್‌ಗಳಿದ್ದು, ಅವುಗಳಲ್ಲಿ 6,900 ಬತ್ತಿ ಹೋಗಿವೆ. ಜಲಮೂಲಗಳು ಅತಿಕ್ರಮಿಸಲ್ಪಟ್ಟಿವೆ ಅಥವಾ ಸತ್ತಿವೆ. ಬೆಂಗಳೂರಿಗೆ 2,600 ಎಂಎಲ್‌ಡಿ … Continued

ಸಿದ್ದರಾಮಯ್ಯ, ಡಿಕೆಶಿ ಫ್ಲೆಕ್ಸ್ ಹಾಕಿ ಸ್ವಾಗತ ಕೋರಿದ ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ ನಡೆ ಚರ್ಚೆಗೆ ಗ್ರಾಸ…!

ಶಿರಸಿ: ಇತ್ತೀಚಿಗೆ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ಪಕ್ಷದ ವಿಪ್‌ ಇದ್ದರೂ ಮತದಾನಕ್ಕೆ ಗೈರಾಗುವ ಮೂಲಕ ಸುದ್ದಿಯಲ್ಲಿದ್ದ ಯಲ್ಲಾಪುರ-ಮುಂಡಗೋಡ ಕ್ಷೇತ್ರದ ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ ಅವರು ಫ್ಲೆಕ್ಸ್‌ ಮೂಲಕ ಮತ್ತೆ ಸುದ್ದಿಯಲ್ಲಿದ್ದಾರೆ. ಬನವಾಸಿಯ ಕದಂಬೋತ್ಸವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ಭಾವಚಿತ್ರ ಇರುವ ಫ್ಲೆಕ್ಸ್ ಹಾಕಿ ಸ್ವಾಗತ ಕೋರುವ … Continued

ಅತಿಥಿ ಉಪನ್ಯಾಸಕರಿಗೆ ಗುಡ್‌ ನ್ಯೂಸ್ ;‌ ಗೌರವಧನ ಹೆಚ್ಚಳಕ್ಕೆ ಸರ್ಕಾರ ಆದೇಶ-ಜನವರಿ 1ರಿಂದಲೇ ಅನ್ವಯ

ಬೆಂಗಳೂರು: ಸರ್ಕಾರ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಗೌರವ ಧನವನ್ನು ರಾಜ್ಯ ಸರ್ಕಾರ ಹೆಚ್ಚಳ ಮಾಡಿದೆ. ಜನವರಿ 1 ರಿಂದಲೇ ಜಾರಿಗೆ ಬರುವಂತೆ ಆದೇಶ ಹೊರಡಿಸಿದೆ. ಕನಿಷ್ಠ 5 ಸಾವಿರ ರೂ.ಗಳಿಂದ ಗರಿಷ್ಠ 8 ಸಾವಿರ ರೂ. ವರೆಗೆ ಗೌರವ ಧನ ಹೆಚ್ಚಳ ಮಾಡಲಾಗಿದೆ. ಹಾಗೂ 5 ಲಕ್ಷ ರೂ. ಆರೋಗ್ಯ ವಿಮೆ ಮತ್ತು … Continued

ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ‘40% ಕಮಿಷನ್’ ಆರೋಪದ ಪ್ರಕರಣ : ನ್ಯಾಯಾಲಯದಿಂದ ರಾಹುಲ್ ಗಾಂಧಿ, ಸಿದ್ದರಾಮಯ್ಯ, ಶಿವಕುಮಾರಗೆ ಸಮನ್ಸ್ ಜಾರಿ

ಬೆಂಗಳೂರು : ಹಿಂದಿನ ಬಿಜೆಪಿ ಸರ್ಕಾರರ ವಿರುದ್ಧ “40 ಪರ್ಸೆಂಟ್ ಕಮಿಷನ್” ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಬೆಂಗಳೂರಿನ ನ್ಯಾಯಾಲಯವು ಸಮನ್ಸ್‌ ಜಾರಿ ಮಾಡಿದೆ. ಮಾತ್ರವಲ್ಲದೇ ಖುದ್ದು ಹಾಜರಾಗುವಂತೆ ಸೂಚನೆ ನೀಡಿದೆ. ಕಳೆದ ವರ್ಷ ಕರ್ನಾಟಕ ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ, … Continued

ಧಾರ್ಮಿಕ ದತ್ತಿ ವಿಧೇಯಕ ಅಂಗೀಕಾರ, ದೇವಸ್ಥಾನದ ಆದಾಯದ ಶೇ.10 ರಷ್ಟು ಹಣ ಸರ್ಕಾರಕ್ಕೆ

ಬೆಂಗಳೂರು : ಹಿಂದು ಧಾರ್ಮಿಕ ಸಂಸ್ಥೆ ಮತ್ತು ಧರ್ಮದಾಯ ದತ್ತಿ ವಿಧೇಯಕ ವಿಧಾನಸಭೆಯಲ್ಲಿ ಬುಧವಾರ ಅಂಗೀಕಾರಗೊಂಡಿದೆ. ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳ ಮತ್ತು ಧರ್ಮದಾಯ ದತ್ತಿಗಳ ವಿಧೇಯಕದಲ್ಲಿ ಬದಲಾವಣೆ ಮಾಡಲಾಗಿದೆ. ವಿಧೇಯಕದಲ್ಲಿ ಸರ್ಕಾರದ ಮುಜರಾಯಿ ಇಲಾಖೆಗೆ ದೇವಸ್ಥಾನಗಳು ನೀಡುತ್ತಿದ್ದ ಆದಾಯದ ಹಣವನ್ನು ದ್ವಿಗುಣಗೊಳಿಸಲಾಗಿದೆ. ಇನ್ನು ಮುಂದೆ 10 ಲಕ್ಷ ರೂ.ಗಳಿಂದ 1 ಕೋಟಿ ರೂ.ಗಳ ವರೆಗಿನ … Continued