ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಹೆಚ್ಚು ಸ್ಥಾನ ಗೆದ್ರೆ ಸಿದ್ದರಾಮಯ್ಯನವರೇ 5 ವರ್ಷ ಸಿಎಂ: ಕಾಂಗ್ರೆಸ್‌ನಲ್ಲಿ ಚರ್ಚೆಗೆ ಕಾರಣವಾದ ಯತೀಂದ್ರ ಹೇಳಿಕೆ

ಹಾಸನ: 2024ರ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಹೆಚ್ಚು ಸ್ಥಾನ ಗೆದ್ದರೆ ಸಿದ್ದರಾಮಯ್ಯ ಅವರೇ ಪೂರ್ಣಾವಧಿ ಸಿಎಂ ಎಂದು ಮಾಜಿ ಶಾಸಕ ಹಾಗೂ ಪುತ್ರ ಯತೀಂದ್ರ ಸಿದ್ದರಾಮಯ್ಯ ಹೇಳಿರುವುದು ಈಗ ಪುನಃ ಮುಖ್ಯಮಂತ್ರಿ ಹುದ್ದೆಯ ಬಗ್ಗೆ ಚರ್ಚೆಯನ್ನು ಮತ್ತೆ ಮುನ್ನೆಲೆಗೆ ತಂದಿದೆ. ಹಾಸನ ಜಿಲ್ಲೆಯ ಹೊಳೆನರಸಿಪುರ ತಾಲೂಕಿನ ಅಣ್ಣೇಚಾಕನಹಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ … Continued

ಕಾಂಗ್ರೆಸ್ಸಿನವರಿಗೆ ಇಲ್ಲದ ಸಭ್ಯತೆ ಬಿಜೆಪಿಯವರಿಗೆ ಮಾತ್ರ ಯಾಕೆ..? ಸಭ್ಯತೆ ವಿಷಯದಲ್ಲಿ ಸಿದ್ದರಾಮಯ್ಯ ಬಹಿರಂಗ ಚರ್ಚೆಗೆ ಬರಲಿ: ಅನಂತಕುಮಾರ ಹೆಗಡೆ

ಶಿರಸಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೇರೆಯವರ ವಿರುದ್ಧ ಏಕವಚನದಲ್ಲಿ ಮಾತನಾಡಿದ್ದು ಸರಿ ಎಂದಾದರೆ ನಾನು ಏಕವಚನದಲ್ಲಿ ಮಾತನಾಡಿದ್ದು ಹೇಗೆ ತಪ್ಪಾಗುತ್ತದೆ ಎಂದು ಸಂಸದ ಅನಂತಕುಮಾರ ಹೆಗಡೆ ಪ್ರಶ್ನಿಸಿದ್ದಾರೆ. ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಹಾಗೂ ಸಿದ್ದರಾಮಯ್ಯ ಅವರಿಗೆ ಇಲ್ಲದ ಸಭ್ಯತೆ ಬಿಜೆಪಿಯವರಿಗೆ ಮಾತ್ರ ಯಾಕೆ ಎಂದು ಕೇಳಿದ್ದಾರೆ.ಸಂಸ್ಕೃತಿ ಹಾಗೂ ಸಭ್ಯತೆ ಬಗ್ಗೆ ಪಾಠ … Continued

ನಾಮಫಲಕಗಳಲ್ಲಿ ಶೇ.60 ಕನ್ನಡ ಭಾಷೆ ಬಳಕೆ ಕಡ್ಡಾಯ ; ಫೆಬ್ರವರಿ 28 ಗಡುವು ಕೊಟ್ಟ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ ಕಾಯ್ದೆಗೆ ತಿದ್ದುಪಡಿ ತಂದು 2024ರ ಫೆಬ್ರವರಿ 28ರೊಳಗೆ ವಾಣಿಜ್ಯ ಮಳಿಗೆಗಳ ನಾಮ ಫಲಕದಲ್ಲಿ ಶೇ. 60 ಕನ್ನಡ ಭಾಷೆಯಲ್ಲಿ ಇರಬೇಕೆಂದು ಗಡುವು ನೀಡಲಾಗುವುದು. ಅಲ್ಲಿವರೆಗೆ ಎಲ್ಲರೂ ಶಾಂತಿಯುತವಾಗಿ ಕಾನೂನು ಸುವ್ಯವಸ್ಥೆ ಕಾಪಾಡುವ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. ಅಂಗಡಿ ಮುಂಗಟ್ಟುಗಳಲ್ಲಿ ಕನ್ನಡ ನಾಮಫಲಕ … Continued

ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪದ ಬಳಕೆ ಆರೋಪ: ಸಂಸದ ಪ್ರತಾಪ ಸಿಂಹ ವಿರುದ್ಧ ಎಫ್ಐಆರ್ ದಾಖಲು

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ನೀಡಿದ ಹೇಳಿಕೆಗಾಗಿ ಬಿಜೆಪಿ ಸಂಸದ ಪ್ರತಾಪ ಸಿಂಹ‌ ಅವರ ವಿರುದ್ಧ ಎಫ್‌ ಐ ಆರ್‌ ದಾಖಲಾಗಿದೆ. ಹುಣಸೂರಿನಲ್ಲಿ ನಡೆದ ಹನುಮ ಜಯಂತಿ ಕಾರ್ಯಕ್ರಮದಲ್ಲಿ ಸೋಮಾರಿ ಸಿದ್ಧ ಎಂಬ ಪದ ಬಳಕೆ ಮಾಡಿದ ಹಿನ್ನಲೆಯಲ್ಲಿ ಅವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಇದು ಅವಹೇನಕಾರಿ ಪದವಾಗಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು … Continued

ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧ ಹಿಂಪಡೆಯುವ ಕುರಿತು ಚರ್ಚಿಸಿ ನಿರ್ಧಾರ: ಸಿಎಂ ಸಿದ್ದರಾಮಯ್ಯ ಯೂಟರ್ನ್

ಮೈಸೂರು : ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದರ ಮೇಲಿನ ನಿಷೇಧ ಹಿಂಪಡೆಯುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ ಮತ್ತು ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಸಿದ ನಂತರ ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಸ್ಪಷ್ಟಪಡಿಸಿದ್ದಾರೆ. ಮಾದ್ಯಮದವರ ಜೊತೆ ಮಾತನಾಡಿದ ಅವರು, ‘ನಾವು ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ನಿಷೇಧ ಮಾಡಿರುವ ಆದೇಶ … Continued

ಹಿಜಾಬ್ ನಿಷೇಧ ಹಿಂಪಡೆಯಲು ಸೂಚನೆ ನೀಡಿದ್ದೇನೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತರಲಾಗಿದ್ದ ಹಿಬಾಬ್‌ ನಿಷೇಧ ಆದೇಶ ಹಿಂಪಡೆಯಲು ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ಜಿಲ್ಲೆಯ ನಂಜನಗೂಡು ಕ್ಷೇತ್ರದಲ್ಲಿ ನೂತನವಾಗಿ ನಿರ್ಮಿಸಿರುವ ಕವಲಂದೆ, ಅಂತರಸಂತೆ, ಜಯಪುರ ಪೊಲೀಸ್ ಠಾಣೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು. ಬಟ್ಟೆ, ಉಡುಪು, ಜಾತಿ, ಆಧಾರದ ಮೇಲೆ ಸಮಾಜವನ್ನು ವಿಭಜಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. … Continued

ಪ್ರಧಾನಿ ಮೋದಿ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ : ರಾಜ್ಯಕ್ಕೆ ಬರ ಪರಿಹಾರ ಹಣ ತುರ್ತು ಬಿಡುಗಡೆಗೆ ಮನವಿ

ನವದೆಹಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ (ಡಿಸೆಂಬರ್‌ 19) ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಬರಪರಿಹಾರದ ಹಣವನ್ನು ಶೀಘ್ರವೇ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಇದ್ದರು. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಬರ ಪರಿಸ್ಥಿತಿಯ ಕುರಿತು … Continued

ಕಾಂಗ್ರೆಸ್ ಸರ್ಕಾರದ ಐದನೇ ಗ್ಯಾರಂಟಿ ‘ಯುವ ನಿಧಿ’ ಯೋಜನೆ ಜನವರಿ 1ರಿಂದ ಆರಂಭ

ಬೆಂಗಳೂರು: ಪದವೀಧರರಿಗೆ 3 ಸಾವಿರ ರೂ.ಗಳು ಮತ್ತು ಡಿಪ್ಲೊಮಾ ಮಾಡಿದ ನಿರುದ್ಯೋಗಿ ಯುವಕರಿಗೆ ಪ್ರತಿ ತಿಂಗಳು 1500 ರೂ.ಗಳ ಭತ್ಯೆ ನೀಡುವ ರಾಜ್ಯದ ಕಾಂಗ್ರೆಸ್ ಸರ್ಕಾರದ ಐದನೇ ಗ್ಯಾರಂಟಿ ‘ಯುವ ನಿಧಿ’ ಯೋಜನೆಗೆ ಡಿಸೆಂಬರ್ 26 ರಿಂದ ನೋಂದಣಿ ಪ್ರಾರಂಭವಾಗಲಿದೆ ಹಾಗೂ ಯೋಜನೆ ಜನವರಿ 1ರಿಂದ ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಪ್ರಕಟಿಸಿದ್ದಾರೆ. ಈ … Continued

ಯತ್ನಾಳರ ನಿಜವಾದ ಗುರಿ ಪ್ರಧಾನಿ ಮೋದಿ; ಸಿಎಂ ಸಿದ್ದರಾಮಯ್ಯ ಟ್ವೀಟ್

ಬೆಂಗಳೂರು: ಮೌಲ್ವಿ ತನ್ವೀರ್ ಹಾಶ್ಮಿ ಅವರ ಜೊತೆಗಿನ ನನ್ನ ಫೋಟೋ ಹಿಡ್ಕೊಂಡು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ನನ್ನ ವಿರುದ್ದ ಆರೋಪ ಮಾಡಿದರೂ ಅವರ ನಿಜವಾದ ಗುರಿ ಪ್ರಧಾನಿ ನರೇಂದ್ರ ಮೋದಿ ಎನ್ನುವುದು ನಿಧಾನವಾಗಿ ಬಯಲಾಗತೊಡಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಪೋಸ್ಟ್ ಮಾಡಿರುವ ಸಿದ್ದರಾಮಯ್ಯ ಅವರು ಮೌಲ್ವಿ ಹಾಶ್ಮಿ … Continued

ಸಿಎಂಗೆ ಪತ್ರ ಬರೆದ ಶಾಸಕ ಬಿಆರ್ ಪಾಟೀಲ ; ಶಾಸಕ ಸ್ಥಾನಕ್ಕೆ ರಾಜೀನಾಮೆ ಎಚ್ಚರಿಕೆ

ಬೆಂಗಳೂರು : ಕೆಆರ್ ಐಡಿಎಲ್ ಕಾಮಗಾರಿ ಸಂಬಂಧ ಆಳಂದ ಕಾಂಗ್ರೆಸ್ ಶಾಸಕ ಬಿ.ಆರ್ ಪಾಟೀಲ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಪತ್ರ ಬರೆದಿದ್ದಾರೆ ಎಂದು ಹೇಳಲಾಗಿದ್ದು, ಇದು ಸರ್ಕಾರವನ್ನು ಮುಜುಗರಕ್ಕೆ ಸಿಲುಕಿಸಿದೆ. ಅದರಲ್ಲಿ ಅವರು ರಾಜೀನಾಮೆ ಬಗ್ಗೆ ಪ್ರಸ್ತಾಪಿಸಿದ್ದಾರೆ. ಕಳೆದ ವಿಧಾನಸಭೆ ಅಧಿವೇಶನದ ವಿಷಯ ಪ್ರಸ್ತಾಪಿಸಿ ಬಿ.ಆರ್‌. ಪಾಟೀಲ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ … Continued