ಮುಡಾ ಹಗರಣ | ನೋಂದಣಿಗೂ ಮೊದಲೇ ಶುಲ್ಕ ಪಾವತಿ : ಸ್ನೇಹಮಯಿ ಕೃಷ್ಣ ಆರೋಪ ; ಸಿದ್ದರಾಮಯ್ಯ ವಿರುದ್ಧ ದಾಖಲೆ ಬಿಡುಗಡೆ

ಬೆಂಗಳೂರು: ಮುಡಾ ಹಗರಣದ (MUDA Scam) ತನಿಖೆ ನಡೆಯುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ವಿರುದ್ಧ ದೂರುದಾರರಾದ ಸ್ನೇಹಮಯಿ ಕೃಷ್ಣ ಮತ್ತೊಂದು ಆರೋಪ ಮಾಡಿದ್ದು, ಈ ಸಂಬಂದ ದಾಖಲೆ ಬಿಡುಗಡೆ ಮಾಡಿದ್ದಾರೆ. ನಿವೇಶನ ನೋಂದಣಿಯಾಗುವ ಮುನ್ನವೇ ನೋಂದಣಿ ಶುಲ್ಕ ಪಾವತಿ ಮಾಡಲಾಗಿದೆ ಎಂದು ಸ್ನೇಹಮಯಿ ಕೃಷ್ಣ ಅವರು ಆರೋಪಿಸಿದ್ದು, ಈ ಸಂಬಂಧ ಫೇಸ್‌ಬುಕ್‌ನಲ್ಲಿ ದಾಖಲೆಯೊಂದನ್ನು ಹಂಚಿಕೊಂಡಿದ್ದಾರೆ. … Continued

ಸಚಿವ ಜಮೀರ್ ಅಹ್ಮದ್‌ ಗೆ ಕಾನೂನು ಸಂಕಷ್ಟ ; ಅಗತ್ಯ ಕ್ರಮಕ್ಕೆ ರಾಜ್ಯಪಾಲರ ಸೂಚನೆ

ಬೆಂಗಳೂರು: ನ್ಯಾಯಾಂಗ ನಿಂದನೆ ಆರೋಪದ ಹಿನ್ನೆಲೆಯಲ್ಲಿ ಸಚಿವ ಜಮೀರ್ ಅಹಮದ್ ಖಾನ್ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಲು ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಅವರು ಅಡ್ವೊಕೇಟ್ ಜನರಲ್​ಗೆ ಸೂಚನೆ ನೀಡಿದ್ದಾರೆ ಎಂದು ವರದಿಯಾಗಿದೆ. ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದ ಸಾಮಾಜಿಕ ಕಾರ್ಯಕರ್ತ ಹಾಗೂ ವಕೀಲರಾದ ಟಿ.ಜೆ. ಅಬ್ರಹಾಂ ಅವರು, ವಸತಿ ಸಚಿವ ಜಮೀರ್‌ ಅಹಮದ್ ಖಾನ್‌ ಮುಡಾ ಪ್ರಕರಣ … Continued

ಮುಡಾ ಹಗರಣ ಸಿಬಿಐ ತನಿಖೆಗೆ ಕೋರಿ ಅರ್ಜಿ | ಸಿಎಂಗೆ ಹೈಕೋರ್ಟ್‌ ನೋಟಿಸ್‌ : ತನಿಖಾ ವರದಿ ಸಲ್ಲಿಸಲು ಲೋಕಾಯುಕ್ತ ಪೊಲೀಸರಿಗೆ ನಿರ್ದೇಶನ

ಬೆಂಗಳೂರು : ಮುಡಾ ಹಗರಣ (MUDA scam)ಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಬಿಎಂ ಪಾರ್ವತಿ ಸೇರಿದಂತೆ ಹಲವರಿಗೆ ನೋಟಿಸ್ ಜಾರಿ ಮಾಡಿದೆ. ಹಾಗೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನವೆಂಬರ್‌ 25ರ ವರೆಗೆ ಏನೆಲ್ಲ ತನಿಖೆ ನಡೆಸಲಾಗಿದೆ ಎಂಬುದರ ವಸ್ತುಸ್ಥಿತಿ ವರದಿ ಸಲ್ಲಿಸುವಂತೆ ಮೈಸೂರು ಲೋಕಾಯುಕ್ತ ಪೊಲೀಸರಿಗೆ ಕರ್ನಾಟಕ ಹೈಕೋರ್ಟ್‌ … Continued

ವಕ್ಫ್ ವಿವಾದ | ರೈತರಿಗೆ ನೀಡಿದ್ದ ನೋಟಿಸ್ ತಕ್ಷಣ ವಾಪಸ್ ಪಡೆಯಿರಿ ; ಸಿಎಂ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ

ಬೆಂಗಳೂರು : ವಕ್ಫ್‌ ವಿಚಾರದಲ್ಲಿ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರೈತರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್‌ ಪಡೆಯುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಶನಿವಾರ ಕಂದಾಯ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಮತ್ತು ವಕ್ಫ್‌ ಮಂಡಳಿಯ ಹಿರಿಯ ಅಧಿಕಾರಿಗಳ ಜೊತೆ ಸುದೀರ್ಘ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಇನ್ಮುಂದೆ ರೈತರಿಗೆ ಯಾವುದೇ ರೀತಿಯ … Continued

ಮುಡಾ ಪ್ರಕರಣದಲ್ಲಿ ಬೆಳವಣಿಗೆ: ಮುಡಾ ಮಾಜಿ ಆಯುಕ್ತ ನಟೇಶ ವಶಕ್ಕೆ ಪಡೆದ ಇ.ಡಿ.ಅಧಿಕಾರಿಗಳು…

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (MUDA) ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯಾಗಿದ್ದು, ಮುಡಾ ಮಾಜಿ ಆಯುಕ್ತ ನಟೇಶ ಅವರನ್ನು ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ವಿಚಾರಣೆಗೆ ಸಹಕರಿಸದ ಹಿನ್ನೆಲೆಯಲ್ಲಿ ನಟೇಶ ಅವರನ್ನು ಶಾಂತಿನಗರದ ಇ.ಡಿ ಕಚೇರಿಗೆ ಅಧಿಕಾರಿಗಳು ಕರೆದೊಯ್ದಿದ್ದಾರೆ ಎನ್ನಲಾಗಿದೆ. ಮುಡಾದಿಂದ 50:50 … Continued

ಹಾಸನಾಂಬೆಗೆ ಖಡ್ಗಮಾಲಾ ಸ್ತೋತ್ರ ಅರ್ಚನೆ ಮಾಡಿಸಿದ ಸಿಎಂ ಸಿದ್ದರಾಮಯ್ಯ

ಹಾಸನ : ಹಾಸನದ ಅಧಿದೇವತೆಯಾದ ಹಾಸನಾಂಬೆಯ ದರ್ಶನ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ. ತಾಯಿ ಹಾಸನಾಂಬೆಗೆ ಖಡ್ಗಮಾಲಾ ಸ್ತೋತ್ರದ ಅರ್ಚನೆ ಮಾಡಿಸಿದ್ದಾರೆ ಎಂದು ವರದಿಯಾಗಿದೆ. ಹಾಸನಾಂಬೆ ದೇವಿ ದರ್ಶನ ಪಡೆಯುವಾಗ ಅಷ್ಟೋತ್ತರದಿಂದ ಪೂಜೆ ಮಾಡುವುದು ವಾಡಿಕೆಯಾಗಿದೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಡ್ಗಮಾಲಾ ಸ್ತೋತ್ರದ ಮೂಲಕ ದೇವಿಯನ್ನು ಅರ್ಚಿಸಿದ್ದು ವಿಶೇಷವಾಗಿತ್ತು. ಖಡ್ಗಮಾಲಾ ಸ್ತೋತ್ರ ಶಕ್ತಿ ದೇವಿಯ ಅತ್ಯಂತ … Continued

ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಜಾರಿಗೆ ಸಚಿವ ಸಂಪುಟ ಅಸ್ತು; ಆಯೋಗ ರಚನೆಗೆ ತೀರ್ಮಾನ

ಬೆಂಗಳೂರು: ಪರಿಶಿಷ್ಟ ಜಾತಿ(ಎಸ್‌ಸಿ)ಗಳಿಗೆ ಒಳಮೀಸಲಾತಿ ಜಾರಿ ಮಾಡುವ ಕುರಿತು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಆಯೋಗ ರಚಿಸಿ ದತ್ತಾಂಶಗಳನ್ನು ಸಂಗ್ರಹಿಸಲು ಸೋಮವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಎಚ್‌.ಕೆ. … Continued

ಮುಡಾ ಹಗರಣದ ತನಿಖೆ ಚುರುಕು : ಬೆಂಗಳೂರು ಸೇರಿ ರಾಜ್ಯದ 9 ಕಡೆ ‘ಇ.ಡಿ.’ ದಾಳಿ

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದದಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ (MUDA scam) ಸಂಬಂಧಿಸಿದಂತೆ ತನಿಖೆ ಚುರುಕುಗೊಂಡಿದ್ದು, ಸೋಮವಾರ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ಬೆಂಗಳೂರುಸೇರಿದಂತೆ ರಾಜ್ಯದ 9 ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ. ಮುಡಾ ಸೈಟ್ ಅಕ್ರಮ ಪ್ರಕರಣ ಸಂಬಂಧ ಸೋಮವಾರ ಇಡಿ ಅಧಿಕಾರಿಗಳು ಬೆಂಗಳೂರು ಸೇರಿದಂತೆ ಮುಂಜಾನೆಯೇ ರಾಜ್ಯದ 9 ಕಡೆ … Continued

ದೀಪಾವಳಿ..| ಹಸಿರು ಪಟಾಕಿ ಮಾತ್ರ ಮಾರಾಟ, ಪಟಾಕಿ ಸಿಡಿಸಲು 2 ಗಂಟೆ ಮಾತ್ರ ಅವಕಾಶ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ದೀಪಾವಳಿ ಹಬ್ಬದ ವೇಳೆ ಹಸಿರು ಪಟಾಕಿಗೆ ಮಾತ್ರ ಅವಕಾಶ ನೀಡಬೇಕು. ಹಾಗೂ ರಾತ್ರಿ 8 ಗಂಟೆಯಿಂದ 10 ಗಂಟೆ ಒಳಗೆ ಮಾತ್ರ ಪಟಾಕಿ ಹೊಡೆಯಲು ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ ಸಿಇಒಗಳೊಂದಿಗೆ ಗೃಹಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿದ ಅವರು, ಪಟಾಕಿ … Continued

ಮುಡಾ ಹಗರಣ : ಮೇಲ್ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರಚಂದ್‌ ಗೆಹ್ಲೋಟ್‌ ಅವರು ತಮ್ಮ ವಿರುದ್ಧದ ತನಿಖೆಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿದ್ದ ತಮ್ಮ ಅರ್ಜಿ ವಜಾ ಮಾಡಿದ್ದ ಕರ್ನಾಟಕ ಹೈಕೋರ್ಟ್‌ನ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಮೇಲ್ಮನವಿ ಸಲ್ಲಿಸಿದ್ದಾರೆ. ಅರ್ಜಿಯು ವಿಭಾಗೀಯ ಪೀಠದ ಮುಂದೆ … Continued