ಸಿದ್ದರಾಮಯ್ಯ ಕುಟುಂಬದ ಸೈಟ್‌ ವಿವಾದದ ನಡುವೆ ಮುಡಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಮರಿಗೌಡ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಮತ್ತು ಇತರ ಸದಸ್ಯರ ಮೇಲಿನ ಮುಡಾ ಭೂ ಹಗರಣದ ಆರೋಪಗಳ ಕುರಿತು ಲೋಕಾಯುಕ್ತ ತನಿಖೆ ನಡೆಯುತ್ತಿರುವ ಮಧ್ಯೆಯೇ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(MUDA)ದ ಅಧ್ಯಕ್ಷ ಕೆ. ಮರಿಗೌಡ ಅವರು ಬುಧವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮರೀಗೌಡ ಅವರು ಬುಧವಾರ ವಿಕಾಸಸೌಧದಲ್ಲಿರುವ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ದೀಪಾ ಚೋಳನ್‌ … Continued

ಸರ್ಕಾರದಿಂದ ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್‌ ; ಇದು ಓಲೈಕೆ ರಾಜಕಾರಣ ಎಂದು ಬಿಜೆಪಿ ಕಿಡಿ

ಬೆಂಗಳೂರು : ಹಳೇ ಹುಬ್ಬಳ್ಳಿಯಲ್ಲಿ 2022r ಏಪ್ರಿಲ್ ನಲ್ಲಿ ನಡೆದ ಗಲಭೆ ಪ್ರಕರಣ ಸೇರಿದಂತೆ ಒಟ್ಟು 43 ಪ್ರಕರಣಗಳನ್ನು ರದ್ದು ಮಾಡಲು ಸಚಿವ ಸಂಪುಟ ಕೈಗೊಂಡ ತೀರ್ಮಾನಕ್ಕೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದೆ. ಗುರುವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಹುಬ್ಬಳ್ಳಿ ಗಲಭೆಯಲ್ಲಿ ದಾಖಲಾಗಿದ್ದವರ ಮೇಲಿನ ಪ್ರಕರಣವನ್ನು ವಾಪಸ್‌ ಪಡೆಯುವ ನಿರ್ಧಾರ ಕೈಗೊಂಡಿದ್ದಕ್ಕೆ … Continued

ಹೆಲಿಕಾಪ್ಟರ್‌ನಲ್ಲಿ ಬಂದು ಮುಡಾ ಕಡತ ಒಯ್ದಿದ್ದಾರೆ : ಬೈರತಿ ಸುರೇಶ ವಿರುದ್ಧ ದೂರು

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ದಲ್ಲಿನ ಕಡತ ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ದೂರು ದಾಖಲಿಸಿದ್ದಾರೆ. ಹೆಲಿಕಾಪ್ಟರ್‌ನಲ್ಲಿ ಬಂದು ಮುಡಾ ಹಗರಣದ (MUDA Scam) ಕಡತಗಳನ್ನು ತೆಗೆದುಕೊಂಡು ಹೋಗಿದ್ದಾರೆ ಎಂದು ಆರೋಪಿಸಿ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ (Byrathi Suresh) ವಿರುದ್ಧ ಸ್ನೇಹಮಯಿ ಕೃಷ್ಣ ಅವರು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ದೂರು … Continued

ಸಿದ್ದರಾಮಯ್ಯ ಯಾಕೆ ರಾಜೀನಾಮೆ ಕೊಡಬೇಕು? ದಸರಾ ವೇದಿಕೆಯಲ್ಲಿ ಸಿದ್ದು ಪರ ಬ್ಯಾಟ್‌ ಬೀಸಿದ ಜೆಡಿಎಸ್‌ ನಾಯಕ..

ಮೈಸೂರು : ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವ ಅಗತ್ಯವಿಲ್ಲ ಎಂದು ಜೆಡಿಎಸ್‌ ನಾಯಕ ಜಿ.ಟಿ.ದೇವೇ ಗೌಡ ಹೇಳುವ ಮೂಲಕ ಸಿದ್ದರಾಮಯ್ಯ ಅವರ ಬ್ಯಾಟ್‌ ಬೀಸಿದ್ದಾರೆ. ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಮುಖ್ಯ ಸಿದ್ದರಾಮಯ್ಯ ಅವರು ಯಾಕೆ ರಾಜೀನಾಮೆ ಕೊಡಬೇಕು ಎಂದು ಪ್ರಶ್ನಿಸಿದರು. ಮುಡಾ ಹಗರಣದಲ್ಲಿ ಸಿದ್ದರಾಮಯ್ಯ … Continued

ಕಿತ್ತೂರು ಉತ್ಸವ ಚಾಲನೆ ವೇಳೆ ಸಿಎಂ ಸಿದ್ದರಾಮಯ್ಯ ಬಟ್ಟೆಗೆ ತಾಗಿದ ಬೆಂಕಿ

ಬೆಂಗಳೂರು: ಕಿತ್ತೂರು ಉತ್ಸವಕ್ಕೆ (Kittur Utsav 2024) ಚಾಲನೆ ನೀಡುವ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ಜುಬ್ಬಾದ ಕೈಗೆ ಸಣ್ಣ ಪ್ರಮಾಣದಲ್ಲಿ ಬೆಂಕಿಯ ಕಿಡಿ ತಾಗಿದೆ. ತಕ್ಷಣವೇ ಅವರ ಭದ್ರತಾ ಸಿಬ್ಬಂದಿ ಕೂಡಲೇ ಅದನ್ನು ನಂದಿಸಿದ್ದರಿಂದ ಅವಘಡ ತಪ್ಪಿದೆ. ಬುಧವಾರ ಬೆಳಗಾವಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಇಲಾಖೆಯ ವತಿಯಿಂದ … Continued

ಮುಡಾ ಹಗರಣ : 18 ಅಧಿಕಾರಿಗಳ ವಿರುದ್ಧ ಇಸಿಐಆರ್ ದಾಖಲಿಸಿದ ಇ.ಡಿ.; ಅಧಿಕಾರಿಗಳಿಗೆ ಶುರುವಾಯ್ತು ಭಯ…

ಬೆಂಗಳೂರು : ಮುಡಾ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ.) ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಕರ್ತವ್ಯ ನಿರ್ವಹಿಸಿದ್ದ 18 ಅಧಿಕಾರಿಗಳ ವಿರುದ್ಧ ಇಸಿಐಆರ್ ದಾಖಲಿಸಿಕೊಂಡಿದೆ ಎಂದು ವರದಿಯಾಗಿದೆ. ಸೋಮವಾರವಷ್ಟೇ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಬಾಮೈದು ಮಲ್ಲಿಕಾರ್ಜುನ, ಭೂಮಿ ಮಾರಾಟ ಮಾಡಿದ್ದ ದೇವರಾಜ ವಿರುದ್ಧ ಅಕ್ರಮ ಹಣ ವರ್ಗಾವಣೆ … Continued

ಮುಡಾ ಹಗರಣ : ಸಿಎಂ ಸಿದ್ದರಾಮಯ್ಯ ಪತ್ನಿ ವಾಪಸ್​ ನೀಡಿದ್ದ 14 ನಿವೇಶನಗಳ ಖಾತೆ ರದ್ದು…!

ಮೈಸೂರು : ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ, ಇ.ಡಿ ಎಫ್‌ಐಆರ್‌ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಸೇರಿದ್ದ 14 ನಿವೇಶನಗಳ ಖಾತೆ ಹಾಗೂ ಕ್ರಯಪತ್ರವನ್ನು ಮುಡಾ ರದ್ದುಗೊಳಿಸಿದೆ ಎಂದು ವರದಿಯಾಗಿದೆ. ಹಗರಣದ ಕೇಂದ್ರಬಿಂದುವಾಗಿರುವ 14 ನಿವೇಶನಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿಯಿಂದ ಹಿಂಪಡೆಯಲು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಒಪ್ಪಿಗೆ … Continued

ಮುಡಾ ಪ್ರಕರಣಕ್ಕೆ ಮಹತ್ವದ ಟ್ವಿಸ್ಟ್‌ : 14 ನಿವೇಶನ ಹಿಂದಿರುಗಿಸಲು ಸಿಎಂ ಸಿದ್ದರಾಮಯ್ಯ ಪತ್ನಿ ನಿರ್ಧಾರ ; ಮುಡಾ ಆಯುಕ್ತರಿಗೆ ಪತ್ರ….!

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎನ್. ಪಾರ್ವತಿ ಅವರು ತಮ್ಮ ಕುಟುಂಬದ ವಿರುದ್ಧದ ಪ್ರಕರಣಗಳ ಕೇಂದ್ರ ಬಿಂದುವಾಗಿರುವ ಭೂಮಿಯನ್ನು ಹಿಂದಿರುಗಿಸುವುದಾಗಿ ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ)ಕ್ಕೆ ಪತ್ರ ಬರೆದಿದ್ದಾರೆ. ತನ್ನ ಆತ್ಮಸಾಕ್ಷಿಯಂತೆ ನಡೆಯುತ್ತಿದ್ದೇನೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ. “ಈ ಪ್ಲಾಟ್‌ಗಳನ್ನು ಹಿಂದಿರುಗಿಸುವುದರ ಜೊತೆಗೆ, ಮುಡಾಕ್ಕೆ ಸಂಬಂಧಿಸಿದ ಎಲ್ಲಾ ಆರೋಪಗಳ ಬಗ್ಗೆ ಸಮಗ್ರ ತನಿಖೆಗೆ ನಾನು … Continued

ಮುಡಾ ಹಗರಣ ; ಸಿಎಂ ಸಿದ್ದರಾಮಯ್ಯಗೆ ಶುರುವಾಯ್ತು ಇ.ಡಿ.ಸಂಕಷ್ಟ ;ಇಸಿಐಆರ್ ದಾಖಲು

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ (ಮುಡಾ) ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಜಾರಿ ನಿರ್ದೇಶನಾಲಯ (ED) ಪ್ರಕರಣ ದಾಖಲಿಸಿದೆ. ಜಾರಿ ನಿರ್ದೇಶನಾಲವು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಪ್ರಕರಣದಡಿ ದಾಖಲಿಸಿದ್ದು, ಇದರಿಂದ ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಈಗ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಂಗಳೂರಿನ ವಿಶೇಷ ನ್ಯಾಯಾಲಯದ … Continued

ಮುಡಾ ಹಗರಣ: ಸಿಎಂ ವಿರುದ್ಧ ತನಿಖೆಗೆ ಲೋಕಾಯುಕ್ತದಿಂದ 4 ತಂಡಗಳ ರಚನೆ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಪ್ರಕರಣದ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶದ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಎಫ್ ಐಆರ್‌ದಾಖಲಿಸಿಕೊಂಡಿರುವ ಲೋಕಾಯುಕ್ತ ಪೊಲೀಸರು, ತನಿಖೆಗಾಗಿ ಶನಿವಾರ ನಾಲ್ಕು ತಂಡಗಳನ್ನು ರಚಿಸಿದ್ದಾರೆ. ಲೋಕಾಯುಕ್ತ ಮೈಸೂರು ಠಾಣೆಯ ಕೇಸ್ ನಂಬರ್11/2024 ಅಡಿ ದಾಖಲಾಗಿರುವ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ … Continued