ವೀಡಿಯೊ| ಹಿಂದಿನ ರಾಜ್ಯಪಾಲರ ಕ್ರಮ ಸಮರ್ಥಿಸಿಕೊಂಡಿದ್ದ ಸಿದ್ದರಾಮಯ್ಯನವರ ಹಳೆ ವೀಡಿಯೊ ಹಂಚಿಕೊಂಡು ಟಾಂಗ್‌ ನೀಡಿದ ಸ್ನೇಹಮಯಿ ಕೃಷ್ಣ…!

ಬೆಂಗಳೂರು : ರಾಜ್ಯಪಾಲ ಥಾವರಚಂದ ಗೆಹ್ಲೋಟ್‌ ಕಾರ್ಯ ವೈಖರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್‌‍ ನಾಯಕರು ಟೀಕಿಸುತ್ತಿರುವ ಬೆನ್ನಲ್ಲೇ ಈಗ, ಸಿದ್ದರಾಮಯ್ಯ ಈ ಹಿಂದೆ ರಾಜ್ಯಪಾಲರ ಪಾತ್ರದ ಕುರಿತು ಆಡಿರುವ ಮಾತು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದೆ. ದೂರುದಾರ ಸ್ನೇಹಮಯಿ‌ ಕೃಷ್ಣ (Snehamayi Krishna) ಅವರು ಸಾಮಾಜಿಕ ಜಾಲತಾಣವಾದ ಫೇಸ್‌ಬುಕ್‌ನಲ್ಲಿ ಸಿದ್ದರಾಮಯ್ಯ ಅವರ 2011ರ ವೀಡಿಯೊ … Continued

ಮುಡಾ ಹಗರಣ : ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ​ಐಆರ್ ದಾಖಲು

ಮೈಸೂರು : ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಆದೇಶದ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇತರರ ವಿರುದ್ಧ ಲೋಕಾಯುಕ್ತ ಪೊಲೀಸರು ಶುಕ್ರವಾರ ಪ್ರಥಮ ಮಾಹಿತಿ ವರದಿ (FIR) ದಾಖಲಿಸಿದ್ದಾರೆ. ಲೋಕಾಯುಕ್ತ ಎಡಿಜಿಪಿ ಮನೀಶ ಖರ್ಬೀಕರ್ ಸೂಚನೆ ಮೇರೆಗೆ ಮೈಸೂರು ಲೋಕಾಯುಕ್ತ ಎಸ್‌ ಪಿ ಉದೇಶ ನೇತೃತ್ವದಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ. ಜನಪ್ರತಿನಿಧಿಗಳ ನ್ಯಾಯಾಲಯವು ಸಿದ್ದರಾಮಯ್ಯ … Continued

ಮುಡಾ ಹಗರಣ | ಪಕ್ಷಕ್ಕೆ ಮುಜುಗರ ತಪ್ಪಿಸಲು ಸಿದ್ದರಾಮಯ್ಯ ರಾಜೀನಾಮೆ ಕೊಡುವುದು ಸೂಕ್ತ : ಕಾಂಗ್ರೆಸ್‌ ನಾಯಕನಿಂದಲೇ ಒತ್ತಾಯ

ಬೆಂಗಳೂರು: ಮುಡಾ ಹಗರಣದಲ್ಲಿ ಲೋಕಾಯುಕ್ತ ತನಿಖೆಗೆ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶಿರುವ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಪ್ರತಿಪಕ್ಷಗಳು ಆಗ್ರಹಿಸುವೆ. ಈಗ ಆಡಳಿತ ಪಕ್ಷವಾದ ಕಾಂಗ್ರೆಸ್‌ ನಾಯಕನಿಂದಲೇ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂಬ ಒತ್ತಾಯ ಕೇಳಿಬಂದಿದೆ. ಹೈಕೋರ್ಟ್ ಹಾಗೂ ಜನಪ್ರತಿನಿಧಿಗಳ ಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಉತ್ತಮ ಎಂದು … Continued

ಮುಡಾ ಪ್ರಕರಣ | ‘ನನಗೆ ಯಾವುದೇ ಭಯವಿಲ್ಲ’: ಲೋಕಾಯುಕ್ತ ತನಿಖೆಗೆ ನ್ಯಾಯಾಲಯದ ಆದೇಶದ ನಂತರ ಸಿದ್ದರಾಮಯ್ಯ ಪ್ರತಿಕ್ರಿಯೆ

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಪ್ರಕರಣದ ತನಿಖೆ ಎದುರಿಸಲು ಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಪುನರುಚ್ಚರಿಸಿದ್ದಾರೆ. ಪ್ರಕರಣದಲ್ಲಿ ತಮ್ಮ ವಿರುದ್ಧ ಲೋಕಾಯುಕ್ತ ಪೊಲೀಸರ ತನಿಖೆಗೆ ವಿಶೇಷ ನ್ಯಾಯಾಲಯ ಆದೇಶಿಸಿದ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಯಾವುದೇ ತನಿಖೆಗೆ ಹೆದರುವುದಿಲ್ಲ. ಕಾನೂನು ಹೋರಾಟ ಮಾಡಲು ತಯಾರಾಗಿದ್ದೇವೆ  ಎಂದು ಹೇಳಿದ್ದಾರೆ. ಮಾಧ್ಯಮದವರೊಂದಿಗೆ … Continued

ಸಿದ್ದರಾಮಯ್ಯ ವಿರುದ್ಧ ತನಿಖೆ ಏಕೆ ಅಗತ್ಯ ? ಹೈಕೋರ್ಟ್ ಹೇಳಿದ್ದೇನು…?

ಬೆಂಗಳೂರು: ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೆರೆಮರೆಯಲ್ಲಿ ಇಲ್ಲ ಎಂದು ಒಪ್ಪಿಕೊಳ್ಳುವುದು ಕಷ್ಟ. ಮುಖ್ಯಮಂತ್ರಿ ಕುಟುಂಬದವರೇ ಫಲಾನುಭವಿ ಆಗಿರುವುದರಿಂದ ಮುಡಾ ಪ್ರಕರಣದಲ್ಲಿ ತನಿಖೆ ಅಗತ್ಯವಿದೆ ಎಂದು ಹೈಕೋರ್ಟ್‌ (High Court) ತೀರ್ಪಿನಲ್ಲಿ ಹೇಳಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(MUDA) ಹಗರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಸೆಕ್ಷನ್ 17 ಎ ಭ್ರಷ್ಟಾಚಾರ ನಿರ್ಮೂಲನೆ … Continued

ಮುಡಾ ಪ್ರಕರಣ | ಸಿದ್ದರಾಮಯ್ಯಗೆ ಹಿನ್ನಡೆ ; ರಾಜ್ಯಪಾಲರ ಪ್ರಾಸಿಕ್ಯೂಷನ್‌ ಆದೇಶ ಎತ್ತಿಹಿಡಿದ ಹೈಕೋರ್ಟ್‌ : ಸಿದ್ದರಾಮಯ್ಯ ಅರ್ಜಿ ವಜಾ

ಬೆಂಗಳೂರು : ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರಚಂದ ಗೆಹ್ಲೋಟ್‌ ಅವರು ತಮ್ಮ ವಿರುದ್ಧ ಅಭಿಯೋಜನಾ (ಪ್ರಾಸಿಕ್ಯೂಷನ್) ಮಂಜೂರಾತಿ ನೀಡಿರುವುದನ್ನು ಪ್ರಶ್ನಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ಮಂಗಳವಾರ ವಜಾ ಮಾಡಿದೆ. ಹೀಗಾಗಿ ಮೊದಲ ಹಂತದ ಕಾನೂನು ಹೋರಾಟದಲ್ಲಿ ಸಿದ್ದರಾಮಯ್ಯ ಅವರಿಗೆ ತೀವ್ರ ಹಿನ್ನಡೆಯಾದಂತಾಗಿದೆ. ರಾಜ್ಯಪಾಲರ ಆದೇಶ ರದ್ದತಿಗೆ ಕೋರಿ … Continued

ಈ ಬಾರಿ ಮೈಸೂರು ದಸರಾ ಉದ್ಘಾಟಿಸಲಿದ್ದಾರೆ ಹಿರಿಯ ಸಾಹಿತಿ ಹಂ.ಪ. ನಾಗರಾಜಯ್ಯ

ಬೆಂಗಳೂರು: ಈ ಬಾರಿಯ ಮೈಸೂರು ದಸರಾವನ್ನು ಖ್ಯಾತ ಸಾಹಿತಿ ಹಂ.ಪ.ನಾಗರಾಜಯ್ಯ ಅವರು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ. ನಗರದ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ದಸರಾ ಉದ್ಘಾಟಕರ ಆಯ್ಕೆಯನ್ನು ನನ್ನ ತೀರ್ಮಾನಕ್ಕೆ ಬಿಡಲಾಗಿತ್ತು. ನಾನು ಖ್ಯಾತ ಸಾಹಿತಿ ಹಂ.ಪ.ನಾಗರಾಜಯ್ಯ ಅವರನ್ನು ಆಯ್ಕೆಮಾಡಿದ್ದೇನೆ. ಅವರಿಗೆ ದಸರಾ ಉದ್ಘಾಟನೆಗೆ ಅಧಿಕೃತವಾಗಿ ಆಹ್ವಾನ … Continued

ಮುಡಾ ವಿಚಾರದಲ್ಲೇ ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ…: ಸರ್ಕಾರದಿಂದ ವಿವರ ಕೇಳಿದ ರಾಜ್ಯಪಾಲರು

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಡಾ ವಿಚಾರದಲ್ಲಿಯೇ ಮತ್ತೊಂದು ಸಂಕಷ್ಟ ಎದುರಾಗಿದೆ. ಮುಡಾ ವಿಚಾರದಲ್ಲಿ ರಾಜ್ಯಪಾಲರಿಗೆ ಮತ್ತೊಂದು ದೂರು ಸಲ್ಲಿಕೆಯಾಗಿದ್ದು, ಈ ಸಂಬಂಧ ರಾಜ್ಯಪಾಲರು ರಾಜ್ಯ ಸರ್ಕಾರಕ್ಕೆ ವರದಿ ಕೇಳಿದ್ದಾರೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ ಅವರಿಗೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಈ ಸಂಬಂಧ ಪತ್ರ ಬರೆದು ವರದಿ … Continued

ದಲಿತರ ನಿವೇಶನ ಕಬಳಿಸಿ ಮನೆ ನಿರ್ಮಾಣ ; ಸಿಎಂ ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಆರೋಪ

ಬೆಂಗಳೂರು : ನಾನು ತಪ್ಪು ಮಾಡಿಲ್ಲ, ಮುಂದೆಯೂ ಮಾಡುವುದಿಲ್ಲ, ನನಗೆ ನ್ಯಾಯ ಸಿಗುವ ವಿಶ್ವಾಸ ಇದೆ ಎಂದು ಮುಡಾ ಪ್ರಕರಣದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿರುವ ಬೆನ್ನಲ್ಲೇ ಅವರ ವಿರುದ್ಧ ಕೇಂದ್ರ ಸಚಿವ ಎಚ್​.ಡಿ. ಕುಮಾರಸ್ವಾಮಿ ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ. ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಹಿಂದೆ ಉಪಮುಖ್ಯಮಂತ್ರಿಯಾಗಿದ್ದಾಗ ಸಿದ್ದರಾಮಯ್ಯನವರು ಒಂದು … Continued

ಮತ್ತೆ ನಂದಿನಿ ಹಾಲಿನ ದರ ಹೆಚ್ಚಳ ; ಸುಳಿವು ನೀಡಿದ ಸಿಎಂ ಸಿದ್ದರಾಮಯ್ಯ

ರಾಮನಗರ: ಕಳೆದ ಜೂನ್ ತಿಂಗಳಲ್ಲಿ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರಿಗೆ 2 ರೂಪಾಯಿ ಹೆಚ್ಚಿಸಿದ್ದ ರಾಜ್ಯ ಸರ್ಕಾರ ವಮತ್ತೆ ಹಾಲಿನ ದರವನ್ನು ಹೆಚ್ಚಿಸುವ ಬಗ್ಗೆ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಸುಳಿವು ನೀಡಿದ್ದಾರೆ. ಶುಕ್ರವಾರ ರಾಮನಗರ ಜಿಲ್ಲೆಯ ಮಾಗಡಿ ಪಟ್ಟಣದಲ್ಲಿ ಹಲವು ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, … Continued