ಭಾರತದ ಟಾಪ್ 3 ಶ್ರೀಮಂತ- ಬಡ ಸಿಎಂಗಳು : ಸಿಎಂ ಸಿದ್ದರಾಮಯ್ಯಗೆ ಎಷ್ಟನೇ ಸ್ಥಾನ ಗೊತ್ತೆ..?

ನವದೆಹಲಿ: ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ದೇಶದ ಮುಖ್ಯಮಂತ್ರಿಗಳ ಸಂಪತ್ತನ್ನು ಒಳಗೊಂಡ ಪಟ್ಟಿಯನ್ನು ತನ್ನ ಇತ್ತೀಚಿನ ವರದಿಯನ್ನು ಬಿಡುಗಡೆ ಮಾಡಿದ್ದು, ಈ ಪಟ್ಟಿಯು ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಯಾರು ಮತ್ತು ಅತ್ಯಂತ ಬಡವ ಮುಖ್ಯಮಂತ್ರಿ ಯಾರು ಎಂಬುದನ್ನು ಬಹಿರಂಗಪಡಿಸಿದೆ. ದೇಶದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಲ್ಲಿ ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್‌.ಚಂದ್ರಬಾಬು ನಾಯ್ಡು ದೇಶದ ಅತ್ಯಂತ … Continued

ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕರಿಂದ ಈ ಬಾರಿಯ ದಸರಾ ಉದ್ಘಾಟನೆ

ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವನ್ನು (Mysuru Dasara) ಈ ಬಾರಿ ಬೂಕರ್ ಪ್ರಶಸ್ತಿ ಪುರಸ್ಕೃತ ಕನ್ನಡದ ಲೇಖಕಿ ಬಾನು ಮುಷ್ತಾಕ್ ಉದ್ಘಾಟಿಸಲಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಪ್ರಕಟಿಸಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಬಾರಿ ವಿಶ್ವ ವಿಖ್ಯಾತ ದಸರಾ ಮಹೋತ್ಸವವನ್ನು ಬೂಕರ್ ಪ್ರಶಸ್ತಿ ಪುರಸ್ಕೃತ ಬಾನು ಮುಷ್ತಾಕ್ ಅವರು ಉದ್ಘಾಟಿಸಲಿದ್ದು, … Continued

ಪರಿಶಿಷ್ಟ ಜಾತಿ ಎಡಗೈ, ಬಲಗೈ ಸಮುದಾಯಕ್ಕೆ ತಲಾ ಶೇ. 6 ರಷ್ಟು ಒಳ ಮೀಸಲಾತಿ: ಸದನದಲ್ಲಿ ಪ್ರಕಟಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಕುರಿತು ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ ದಾಸ್ ಆಯೋಗದ ವರದಿಯನ್ನು ಕೆಲವು ಮಾರ್ಪಾಡುಗಳೊಂದಿಗೆ ರಾಜ್ಯ ಸರ್ಕಾರವು ಔಪಚಾರಿಕವಾಗಿ ಸ್ವೀಕರಿಸಲು ನಿರ್ಧರಿಸಿದೆ. ಮಂಗಳವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾವನೆಗೆ ಅನುಮೋದನೆ ದೊರೆತ ನಂತರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ವಿಧಾನಸಭೆಯಲ್ಲಿ ಈ ನಿರ್ಧಾರವನ್ನು ಪ್ರಕಟಿಸಿದರು. ನವೆಂಬರ್ 2024 ರಲ್ಲಿ ರಚಿಸಲಾದ … Continued

ಸಚಿವ ಸ್ಥಾನದಿಂದ ಸಿಎಂ ಸಿದ್ದರಾಮಯ್ಯ ಆಪ್ತ ಕೆ.ಎನ್‌.ರಾಜಣ್ಣ ವಜಾಗೊಳಿಸಿದ್ದರ ಹಿಂದಿನ ಕಾರಣಗಳೇನು..?

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿಷ್ಠಾವಂತರೆಂದು ಪರಿಗಣಿಸಲ್ಪಟ್ಟ ರಾಜ್ಯದ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ಹೈಕಮಾಂಡ್‌ ಸೂಚನೆಯ ಮೇರೆಗೆ ರಾಜೀನಾಮೆ ನೀಡಿದ್ದಾರೆ. ರಾಜ್ಯದ ಒಂದು ವಿಧಾನಸಭಾ ಕ್ಷೇತ್ರದಲ್ಲಿ ನಡೆದ “ಮತ ಕಳ್ಳತನ”ಕ್ಕೆ ಕರ್ನಾಟಕದಲ್ಲಿ ತಮ್ಮದೇ ಪಕ್ಷದ ಸರ್ಕಾರವನ್ನು ದೂಷಿಸಿದ ಆರೋಪದ ಮೇಲೆ ಕಾಂಗ್ರೆಸ್ ಹೈಕಮಾಂಡ್ ಮುಜುಗರಕ್ಕೆ ಒಳಗಾದ ನಂತರ ಹೈಕಮಾಂಡ್‌ ಸೂಚನೆಯ ಮೇರೆಗೆ ಅವರನ್ನು … Continued

ಸಚಿವ ಸ್ಥಾನಕ್ಕೆ ಕೆ.ಎನ್‌.ರಾಜಣ್ಣ ದಿಢೀರ್‌ ರಾಜೀನಾಮೆ..!

ಬೆಂಗಳೂರು: ಮತಗಳ್ಳತನ ಆರೋಪದ ವಿರುದ್ಧ ಕಾಂಗ್ರೆಸ್‌ ನಿಲುವಿನ ವಿರುದ್ಧ ಹೇಳಿಕೆ ನೀಡಿದ್ದ ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅಂಗೀಕರಿಸಿದ್ದಾರೆ. ಇಡೀ ಕಾಂಗ್ರೆಸ್‌‍ ಪಕ್ಷವೇ ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿದೆ ಎಂದು ಆರೋಪಿಸಿ ಚುನಾವನಾ ಆಯೋಗದ ವಿರುದ್ಧವಾಗಿ ಹೋರಾಟ ನಡೆಸಿದರೆ, ಸಚಿವ ಕೆ.ಎನ್‌.ರಾಜಣ್ಣ ವ್ಯತಿರಿಕ್ತ ಹೇಳಿಕೆ … Continued

ಮುಡಾ ಹಗರಣ : ಸರ್ಕಾರಕ್ಕೆ ವರದಿ ಸಲ್ಲಿಸಿದ ನ್ಯಾ. ದೇಸಾಯಿ ಆಯೋಗ

ಬೆಂಗಳೂರು : ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಅಕ್ರಮವಾಗಿ ಸೈಟುಗಳನ್ನು ಹಂಚಿಕೆ ಆರೋಪದ ಬಗ್ಗೆ ತನಿಖೆಗಾಗಿ ನೇಮಕ ಮಾಡಿದ್ದ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಪಿ.ಎನ್‌. ದೇಸಾಯಿ ಅವರ ನೇತೃತ್ವದ ವಿಚಾರಣಾ ಆಯೋಗವು ಒಂದು ವರ್ಷದ ಬಳಿಕ ರಾಜ್ಯ ಸರ್ಕಾರಕ್ಕೆ ಆರು ಸಂಪುಟಗಳ ವರದಿಯನ್ನು ಗುರುವಾರ ಸಲ್ಲಿಸಿದೆ. ತಮ್ಮ ತಂಡದೊಂದಿಗೆ ಆಗಮಿಸಿದ ನ್ಯಾಯಮೂರ್ತಿ … Continued

ರಾಜ್ಯದಲ್ಲಿ ಹೊಸದಾಗಿ ನಿರ್ಮಿಸುವ ಬಹುಮಹಡಿ ಕಟ್ಟಡಗಳಿಗೆ 1%ರಷ್ಟು ಫೈರ್ ಸೆಸ್ : ಸಚಿವ ಸಂಪುಟ ತೀರ್ಮಾನ

ಬೆಂಗಳೂರು: ರಾಜ್ಯಾದ್ಯಂತ ಹೊಸದಾಗಿ ನಿರ್ಮಾಣವಾಗುತ್ತಿರುವ ಬಹುಮಹಡಿ ಕಟ್ಟಡಗಳಿಗೆ ಶೇ1ರಷ್ಟು ಫೈರ್ ಸೆಸ್ ವಿಧಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.‌ ಈ ಸಂಬಂಧ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ದಿ ಕರ್ನಾಟಕ ಫೈರ್‌ ಫೋರ್ಸ್‌ ಆಕ್ಟ್‌ (The Karnataka Fire Force Act) 1964ಕ್ಕೆ ತಿದ್ದುಪಡಿ ತರಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ … Continued

ಬೆಂಗಳೂರು ಕಾಲ್ತುಳಿತದ ಪ್ರಕರಣ: ಆರ್​ಸಿಬಿ, ಡಿಎನ್​ಎ ವಿರುದ್ಧ ಕ್ರಿಮಿನಲ್‌ ಪ್ರಕರಣ, ಪೊಲೀಸರ ವಿರುದ್ಧ ಇಲಾಖಾ ತನಿಖೆಗೆ ಸಂಪುಟ ನಿರ್ಧಾರ

ಬೆಂಗಳೂರು: ಜೂನ್ 4ರಂದು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತದಲ್ಲಿ 11 ಜನರು ಸಾವಿಗೀಡಾಗಿ, ಅನೇಕರು ಗಾಯಗೊಂಡ ಘಟನೆಯ ಕುರಿತು ನ್ಯಾಯಮೂರ್ತಿ ಜಾನ್ ಮೈಕೆಲ್ ಡಿ’ಕುನ್ಹಾ ನೇತೃತ್ವದ ವರದಿಯನ್ನು ರಾಜ್ಯ ಸಚಿವ ಸಂಪುಟ ಅಂಗೀಕರಿಸಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB), ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (KSCA) ಮತ್ತು ಡಿಎನ್‌ಎ (DNA) ಎಂಟರ್‌ಟೈನ್‌ಮೆಂಟ್ ನೆಟ್‌ವರ್ಕ್ಸ್‌ ಸಂಸ್ಥೆಗಳ … Continued

ಮುಡಾ ಪ್ರಕರಣ | ಸಿದ್ದರಾಮಯ್ಯ ಪತ್ನಿ ವಿರುದ್ಧದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್‌; ಇ.ಡಿ.ಗೆ ತರಾಟೆ

ನವದೆಹಲಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣದಲ್ಲಿ ಆರೋಪಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ. ಪಾರ್ವತಿ ಅವರಿಗೆ ನೀಡಲಾದ ಸಮನ್ಸ್ ರದ್ದುಗೊಳಿಸಿದ್ದ ಕರ್ನಾಟಕ ಹೈಕೋರ್ಟ್ ತೀರ್ಪಿನ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ.) ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ. ಪಾರ್ವತಿ ಮತ್ತು ಸಿದ್ದರಾಮಯ್ಯ ಅವರ ಆಪ್ತ … Continued

ಡಿಸಿಎಂ ಡಿಕೆ ಶಿವಕುಮಾರ ಬೆಂಗಾವಲು ವಾಹನ ಪಲ್ಟಿ

ಮಂಡ್ಯ: ಮೈಸೂರಿನಲ್ಲಿ ನಡೆದ ಕಾಂಗ್ರೆಸ್ ಸಾಧನಾ ಸಮಾವೇಶ ಕಾರ್ಯಕ್ರಮ ಮುಗಿಸಿ ಬೆಂಗಳೂರಿಗೆ ವಾಪಸ್ಸಾಗುತ್ತಿದ್ದಾಗ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಅವರ ಬೆಂಗಾವಲು ವಾಹನ ಅಪಘಾತಕ್ಕೀಡಾದ ಘಟನೆ ನಡೆದಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ವ್ಯಾಪ್ತಿಯ ಎಕ್ಸ್‌ಪ್ರೆಸ್ ಹೈವೇಯ ಗೌಡಹಳ್ಳಿ ಟಿಎಂ ಹೊಸೂರು ಬಳಿಯ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೆಯಲ್ಲಿ ಈ ಘಟನೆ ನಡೆದಿದೆ. ಮೈಸೂರಿನಲ್ಲಿ ಕಾಂಗ್ರೆಸ್‌ ಕಾರ್ಯಕ್ರಮ ಮುಗಿಸಿ ಬೆಂಗಳೂರಿಗೆ … Continued