ಮುಡಾ ಹಗರಣ | ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರ ಅನುಮತಿ ; ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ : ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಹುದ್ದೆಗೆ ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ, ನನ್ನ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದರ ಹಿಂದೆ ದೊಡ್ಡ ರಾಜಕೀಯ ಷಡ್ಯಂತ್ರ ನಡೆದಿದೆ. ನಾವು ಕಾನೂನು ಹೋರಾಟ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದೊಗೆ ಮಾತನಾಡಿದ ಅವರು, ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡುವುದನ್ನು ನಾನು ನಿರೀಕ್ಷೆ ಮಾಡಿದ್ದೆ. ಚುನಾಯಿತ … Continued

ಮುಡಾ ಹಗರಣ : ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ ಗೆ ರಾಜ್ಯಪಾಲರ ಅನುಮತಿ

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ (ಮುಡಾ) ಭೂ ಮಂಜೂರಾತಿ ಹಗರಣದ ಆರೋಪದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಚಾರಣೆಗೆ ಒಳಪಡಿಸಲು ಕರ್ನಾಟಕ ರಾಜ್ಯಪಾಲರು ಶನಿವಾರ ಅನುಮತಿ ನೀಡಿದ್ದಾರೆ ಎಂದು ತಿಳಿದುಬಂದಿದೆ. ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಆದೇಶವನ್ನು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ರವಾನೆ ಮಾಡಿದ್ದಾರೆ ಎನ್ನಲಾಗಿದೆ. ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ … Continued

ಮುಂದಿನ ವಾರ ಹೆಚ್ಚು ಮಳೆ: ಕಟ್ಟೆಚ್ಚರ ವಹಿಸಲು ಸೂಚನೆ

ಬೆಳಗಾವಿ: ಮುಂದಿನ ವಾರ ಹೆಚ್ಚು ಮಳೆಯಾಗುವ ಮುನ್ಸೂಚನೆ ಇದೆ. ಇದಕ್ಕಾಗಿ ಕಂದಾಯ, ವಿಪತ್ತು ನಿರ್ವಹಣೆ, ಅರಣ್ಯ ಇಲಾಖೆ, ಇಂಧನ, ನೀರಾವರಿ ಸೇರಿದಂತೆ ಎಲ್ಲ ಇಲಾಖೆಗಳು ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸೋಮವಾರ ಪ್ರವಾಹ ಪೀಡಿತ ಬೆಳಗಾವಿ ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಬೆಳಗಾವಿಯಲ್ಲಿ ಕಳೆದ 42 … Continued

ರಾಮನಗರಕ್ಕೆ ʼಬೆಂಗಳೂರು ದಕ್ಷಿಣ ಜಿಲ್ಲೆʼ ಎಂದು ಮರುನಾಮಕರಣ ಮಾಡಲು ಸಚಿವ ಸಂಪುಟ ಒಪ್ಪಿಗೆ

ಬೆಂಗಳೂರು : ರಾಮನಗರ ಜಿಲ್ಲೆಯನ್ನು ʼಬೆಂಗಳೂರು ದಕ್ಷಿಣ ಜಿಲ್ಲೆʼ ಯನ್ನಾಗಿ ಮರುನಾಮಕರಣ ಮಾಡುವ ಕುರಿತ ಮಹತ್ವದ ನಿರ್ಧಾರವನ್ನು ಇಂದು, ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ. ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಕಾನೂನು ಸಚಿವ ಎಚ್. ಕೆ.ಪಾಟೀಲ್ ಅವರು, ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆಯನ್ನಾಗಿ ಬದಲಾಯಿಸಲು … Continued

ಹಿರಿಯ ಪತ್ರಕರ್ತ ಶಶಿಧರ ಭಟ್ಟರಿಗೆ ಅನಾರೋಗ್ಯ : ಚಿಕಿತ್ಸಾ ವೆಚ್ಚ ಸರ್ಕಾರ ಭರಿಸಲಿದೆ ಎಂದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಹಿರಿಯ ಪತ್ರಕರ್ತರಾದ ಶಶಿಧರ ಭಟ್ ಅವರು ಅನಾರೋಗ್ಯದಿಂದ ಆಸ್ಪತ್ರೆ ದಾಖಲಾಗಿದ್ದು, ಅವ ಆಸ್ಪತ್ರೆ ಪೂರ್ತಿ ಖರ್ಚನ್ನು ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಶಶಿಧರ ಭಟ್ ಅವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಮೈಸೂರಿನ‌ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಷಯ ತಿಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಶಿಧರ್‌ ಭಟ್‌ ಅವರ ಆರೋಗ್ಯ … Continued

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪೂರ್ಣಗೊಳಿಸದೆ ಟೋಲ್ ಸಂಗ್ರಹಿಸುತ್ತೀರಿ ಏಕೆ : ಎನ್‌ಎಚ್‌ಎಐ ಅಧಿಕಾರಿಗಳ ವಿರುದ್ಧ ಸಿಎಂ ಗರಂ

ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ರಾಷ್ಟ್ರಿಯ ಹೆದ್ದಾರಿ ಕಾಮಗಾರಿಯನ್ನು ಪೂರ್ಣ ಗೊಳಿಸದೇ ಸಾರ್ವಜನಿಕರಿಂದ ಟೋಲ್ ಏಕೆ ಸಂಗ್ರಹ ಮಾಡುತ್ತಿದ್ದೀರಿ. ಕಾಮಗಾರಿಯು 2016 ಕ್ಕೆ ಮುಕ್ತಾಯಗೊಳಿಸಬೇಕಿದ್ದರೂ ಈವರೆಗೂ ಮುಕ್ತಾಯಗೊಳಿಸದೆ, ಕಾಮಗಾರಿ ಬಗ್ಗೆ ಕೇಂದ್ರ ಸಚಿವರಿಗೂ ಮಿಸ್ ಲೀಡಿಂಗ್ ಮಾಡುವುದಲ್ಲದೆ ರಾಜ್ಯ ಸರ್ಕಾರಕ್ಕೂ ತಪ್ಪು ಮಾಹಿತಿ ನೀಡುತ್ತಿದ್ದೀರಿ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ … Continued

ಮುಡಾ ಸೈಟ್ ಹಂಚಿಕೆ ಹಗರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ನಡೆದಿರುವ ಪರ್ಯಾಯ ಸೈಟ್ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಮುಖಂಡ ಎನ್.ಆರ್​. ರಮೇಶ ಶನಿವಾರ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಸಿದ್ದರಾಮಯ್ಯ ಅವರು ಹಣಕಾಸು ಸಚಿವ, ಉಪಮುಖ್ಯಮಂತ್ರಿ ಹಾಗೂ ಮುಖ್ಯಮಂತ್ರಿಯಾಗಿದ್ದ ವೇಳೆ ಭೂಹಗರಣ ಮತ್ತು ಮುಡಾ ಹಗರಣದಲ್ಲಿ ಭಾಗಿಯಾಗಿದ್ದಾರೆಂದು ಆರೋಪಿಸಿ ಎನ್.ಆರ್​. ರಮೇಶ್ ಅವರು 400ಕ್ಕೂ ಹೆಚ್ಚು … Continued

ನಾಳೆ ಅಂಕೋಲಾಕ್ಕೆ ಸಿಎಂ ಸಿದ್ದರಾಮಯ್ಯ, ಬಿಜೆಪಿ ರಾಜ್ಯಾಧ್ಯಕ್ಷರ ಭೇಟಿ

ಅಂಕೋಲಾ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ  ದುರಂತ ಸ್ಥಳ ಪರಿಶೀಲಿಸಲು ನಾಳೆ (ಜುಲೈ 21) ಭಾನುವಾರ ತೆರಳುತ್ತಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಳೆಯಿಂದ ರಸ್ತೆ, ಮನೆ ಬಿದ್ದಿರುವುದು ಹಾಗೂ ಬೆಳೆ ಹಾನಿಯಾಗಿರುವುದಕ್ಕೆ ಪರಿಹಾರ ಕಾರ್ಯಗಳನ್ನು ತುರ್ತಾಗಿ ಕೈಗೊಳ್ಳಬೇಕೆಂದು ಸೂಚಿಸಲಾಗಿದೆ ಎಂದು ತಿಳಿಸಿದರು. ಹಾಗೂ ಉತ್ತರ ಕನ್ನಡ ಜಿಲ್ಲೆಯ … Continued

ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ವಿಧೇಯಕಕ್ಕೆ ತಾತ್ಕಾಲಿಕ ತಡೆ…!

ಬೆಂಗಳೂರು : ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳು, ಕೈಗಾರಿಕೆಗಳು ಹಾಗೂ ಉದ್ದಿಮೆಗಳಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧ ಸಂಪುಟ ಅನುಮೋದನೆ ಪಡೆದ ನಂತರ ವಿಧಾನ ಮಂಡಳ ಅಧಿವೇಶನದಲ್ಲಿ ಮಂಡಿಸಲು ಉದ್ದೇಶಿಸಿದ್ದ ವಿಧೇಯಕವನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ. ನಡೆಯುತ್ತಿರುವ ವಿಧಾನ ಮಂಡಲದ ಅಧಿವೇಶನದಲ್ಲಿ ಈ ಮಸೂದೆ ಮಂಡನೆಗೆ ಮುಂದಾಗಿದ್ದ ಸಿದ್ದರಾಮಯ್ಯ ಸರ್ಕಾರದ ನಡೆಗೆ ಉದ್ಯಮಿಗಳಿಂದ ವಿರೋಧ ವ್ಯಕ್ತವಾದ ಬೆನ್ನಲ್ಲೇ ರಾಜ್ಯ … Continued

ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ : ವಿಧೇಯಕ ಮಂಡನೆಗೆ ಸಂಪುಟ ಒಪ್ಪಿಗೆ

ಬೆಂಗಳೂರು: ಕರ್ನಾಟಕ ರಾಜ್ಯದ ಖಾಸಗಿ ಕಂಪನಿಗಳಲ್ಲಿ ಗ್ರೂಪ್ ಸಿ ಮತ್ತು ಗ್ರೂಪ್ ಡಿ ಹುದ್ದೆಗಳಲ್ಲಿ ಕನ್ನಡಿಗರಿಗೆ ಶೇಕಡಾ 100 ರಷ್ಟು ಮೀಸಲಾತಿ ಕಡ್ಡಾಯಗೊಳಿಸುವ ಮಸೂದೆಗೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ … Continued