ಬಾಬು ಜಗಜೀವನರಾಂ ಅವರಿಗೆ ಕಾಂಗ್ರೆಸ್ ಕೊಟ್ಟ ಸನ್ಮಾನ ಏನೆಂದು ನಿಮಗೆ ಗೊತ್ತಾ: ಸಿದ್ದರಾಮಯ್ಯಗೆ ಮಾತಿನಲ್ಲಿ ತಿವಿದ ಸುರೇಶಕುಮಾರ

ಬೆಂಗಳೂರು: ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯನವರು ನೀಡಿದ ಹೇಳಿಕೆಗಳಿಗೆ ಮಾಜಿ ಸಚಿವ ಸುರೇಶಕುಮಾರ್ ತಿರುಗೇಟು ನೀಡಿದ್ದಾರೆ. ಡಾ.ಬಾಬು ಜಗಜೀವನ್ ರಾಮ್‍ರ ಜಯಂತಿ ಆಚರಣೆ ವೇಳೆ ಸಿದ್ದರಾಮಯ್ಯ ನೀಡಿದ್ದ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸುರೇಶಕುಮಾರ, ದಲಿತರ ಏಳಿಗೆಗೆ ದುಡಿದ ಬಾಬು ಜಗಜೀವನರಾಂ ಅವರಿಗೆ ಕಾಂಗ್ರೆಸ್ ಪಕ್ಷದವರು ಕೊಟ್ಟ ಸನ್ಮಾನ ನಿಮಗೆ ಗೊತ್ತಾ ಎಂದು ಪ್ರಶ್ನಿಸಿದ್ದಾರೆ. ಅಲ್ಲದೆ ಬಾಬು ಜಗಜೀವನ್ ರಾಮ್ … Continued

ನನಗೆ ಸ್ವಾಮೀಜಿಗಳ ಮೇಲೆ ಗೌರವವಿದೆ, ಹೇಳಿಕೆಯನ್ನು ಯಾವ್ಯಾವ್ದಕ್ಕೋ ಲಿಂಕ್‌ ಮಾಡ್ಬೇಡಿ: ಮಾಧ್ಯಮದವರ ಮೇಲೆ ಸಿದ್ದರಾಮಯ್ಯ ಗರಂ

ಮೈಸೂರು: ಸ್ವಾಮೀಜಿಗಳ ಜೊತೆ ನಾನು ಯಾವತ್ತೂ ಅಗೌರವದಿಂದ ನಡೆದುಕೊಂಡಿಲ್ಲ. ಮೊದಲಿನಿಂದಲೂ ಅವರೊಂದಿಗೆ ಸಂಬಂಧ ಚೆನ್ನಾಗಿದೆ. ಅಪಾರ ಗೌರವವಿಟ್ಟುಕೊಂಡಿದ್ದೇನೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಹಿಜಾಬ್‌ ವಿಚಾರವಾಗಿ ಪ್ರಶ್ನೆಯನ್ನೇ ಮಾಡಿಲ್ಲ. ಹಿಜಾಬ್‌ ಬೇರೆ, ದುಪ್ಪಟ್ಟಾ ಬೇರೆ. ಸಮವಸ್ತ್ರ ಜೊತೆಗೆ ಅದೇ ಬಣ್ಣದ ದುಪ್ಪಟ್ಟಾ ಹಾಕಿಕೊಂಡು ಪರೀಕ್ಷೆ … Continued

ಮುಂದಿನ ಚುನಾವಣೆಯೇ ನನ್ನ ಕೊನೆಯ ಚುನಾವಣೆ, ನಂತರ ಚುನಾವಣಾ ರಾಜಕೀಯದಿಂದ ನಿವೃತ್ತಿ : ಸಿದ್ದರಾಮಯ್ಯ

ಮೈಸೂರು: ಮುಂಬರುವ ವಿಧಾನಸಭಾ ಚುನಾವಣೆಯೇ ನನ್ನ ಕೊನೆಯ ಚುನಾವಣೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನ ಸಿದ್ದರಾಮನಹುಂಡಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಚುನಾವಣಾ ರಾಜಕಾರಣದಿಂದ ನಾನು ನಿವೃತ್ತಿ ಪಡೆದರೂ ಸಕ್ರಿಯ ರಾಜಕಾರಣದಲ್ಲಿ ಇರುತ್ತೇನೆ ಎಂದು ತಿಳಿಸಿದರು. ವರುಣ, ಚಾಮುಂಡೇಶ್ವರಿ, ಹುಣಸೂರು, ಹೆಬ್ಬಾಳ, ಚಾಮರಾಜಪೇಟೆ, ಬಾದಾಮಿ, ಕೋಲಾರ ಹೀಗೆ ಎಲ್ಲ ಕ್ಷೇತ್ರದ ಜನರೂ ನನ್ನನ್ನು ಆಹ್ವಾನಿಸಿದ್ದಾರೆ. ಆದರೆ … Continued

ರಾಜ್ಯದ ಶಾಲೆಗಳಲ್ಲಿ ಭಗವದ್ಗೀತೆ ಕಲಿಸಲು ವಿರೋಧವಿಲ್ಲ: ಸಿದ್ದರಾಮಯ್ಯ

ಮಂಗಳೂರು: ಮಕ್ಕಳಿಗೆ ನೈತಿಕ ಶಿಕ್ಷಣ ನೀಡಲು ರಾಜ್ಯದ ಶಾಲೆಗಳಲ್ಲಿ ಭಗವದ್ಗೀತೆ ಪರಿಚಯಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದ್ದು, ಈ ಕ್ರಮಕ್ಕೆ ನಮ್ಮ ಪಕ್ಷದ ವಿರೋಧವಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶನಿವಾರ ಮಾಧ್ಯಮದವರೊಂದೊಗೆ ಮಾತನಾಡಿದ ಅವರು, ನಾನು ಭಗವದ್ಗೀತೆಯ ವಿರೋಧಿಯಲ್ಲ. ಶಾಲೆಗಳಲ್ಲಿ ಭಗವದ್ಗೀತೆ, ಖುರಾನ್ ಮತ್ತು … Continued

ಭಗವದ್ಗೀತೆ ಓದಿ ಭಯೋತ್ಪಾದಕರಾದ ಉದಾಹರಣೆ ಇಲ್ಲ: ಸಿ.ಟಿ. ರವಿ

ಚಿಕ್ಕಮಗಳೂರು : ಭಗವದ್ಗೀತೆ ಓದಿದವರು ಭಯೋತ್ಪಾದಕರಾಗಿಲ್ಲ, ಬದಲಾಗಿ ಜೀವನದಲ್ಲಿ ಸಾರ್ಥಕತೆ ಮೆರೆದಿದ್ದಾರೆ. ಈ ಗ್ರಂಥವು ಉತ್ತಮ ದಾರಿಯಲ್ಲಿ ನಡೆಯಲು ಪ್ರೇರಣೆ ನೀಡುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ. ಶಾಲಾ ಪಠ್ಯದಲ್ಲಿ ಭಗವದ್ಗೀತೆ ಸೇರ್ಪಡೆ ಕುರಿತು ಶನಿವಾರ ಪ್ರತಿಕ್ರಿಯಿಸಿದ ಅವರು, ಭಗವದ್ಗೀತೆ ಓದಿ ಭಯೋತ್ಪಾದಕರಾದ ಉದಾಹರಣೆ ಇಲ್ಲ ಎಂದು ತಿಳಿಸಿದರು. ಭಗವದ್ಗೀತೆ ಯಾರಿಗೂ … Continued

ನಾನು ಚಾಮುಂಡೇಶ್ವರಿ ಕ್ಷೇತದಲ್ಲಿ ಮತ್ತೆ ಸ್ಪರ್ಧಿಸುವುದಿಲ್ಲ: ಮಾಜಿ ಸಿಎಂ ಸಿದ್ಧರಾಮಯ್ಯ

ಮಂಡ್ಯ: ನಾನು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮತ್ತೆ ಸ್ಪರ್ಧೆ ಮಾಡುವುದಿಲ್ಲ‌ ಎಂದು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. ಭಾನುವಾರ ಮಂಡ್ಯದ ಮದ್ದೂರಿನಲ್ಲಿ ಮಾಧ್ಯಮದವರ ಮಾತನಾಡಿದ ಅವರು, ನನಗೆ ಈಗಾಗಲೇ ನಾಲ್ಕೈದು ಕ್ಷೇತ್ರದಿಂದ ನಿಲ್ಲಲು ಹೇಳುತ್ತಿದ್ದಾರೆ. ಆದರೆ ನಾನು ಈವರೆಗೂ ಎಲ್ಲಿ ನಿಲ್ಲಬೇಕು ಎಂದು ತೀರ್ಮಾನ ಮಾಡಿಲ್ಲ. ಈ ಬಗ್ಗೆ ಯೋಚನೆ ಮಾಡಿ ತೀರ್ಮಾನ ಮಾಡಲಿದ್ದೇನೆ. ಆದರೆ ಚಾಮುಂಡೇಶ್ವರಿ … Continued

ಕಾಂಗ್ರೆಸ್ ಸರ್ಕಾರ ಮತಾಂತರ ಬಿಲ್ ತರಲು ತಯಾರಿ ನಡೆಸಿತ್ತು ಎಂಬ ಬಿಜೆಪಿ ಆರೋಪಕ್ಕೆ ಉತ್ತರ ನೀಡಿದ ಸಿದ್ದರಾಮಯ್ಯ

ಬೆಳಗಾವಿ: 2016ರಲ್ಲಿ ಕಾಂಗ್ರೆಸ್ ಸರ್ಕಾರ ಮತಾಂತರ ಬಿಲ್ ತರಲು ತಯಾರಿ ನಡೆಸಿತ್ತು. ಅದನ್ನು ತಡೆದಿದ್ದು ಸೋನಿಯಾ ಗಾಂಧಿ. ಕುರ್ಚಿಗೆ ಕಂಟಕ ಬರುತ್ತದೆಯೆಂಬ ಭಯದಲ್ಲಿ ಸಿದ್ದರಾಮಯ್ಯ ಈ ಮಸೂದೆ ಜಾರಿಗೆ ಮುಂದಾಗಲಿಲ್ಲ ಎಂದು ಬಿಜೆಪಿ ಆರೋಪಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಬಲವಂತವಾಗಿ, ಆಸೆ ಆಮಿಷ ಒಡ್ಡಿ ಅಥವಾ ಮೋಸದಿಂದ ಮತಾಂತರ ಮಾಡಿದರೆ ಅದು ಶಿಕ್ಷಾರ್ಹ … Continued

ಡಿಕೆಶಿಗೆ ಕಠೋರವಾಗಿಯೇ ಉತ್ತರ ಕೊಡ್ತೇನೆ, ಸಿದ್ದರಾಮಯ್ಯ ವೇಸ್ಟ್ ಬಾಡಿ: ರಮೇಶ್ ಜಾರಕಿಹೊಳಿ

ಬೆಳಗಾವಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಬೆಳಗಾವಿ ಕ್ಷೇತ್ರದಲ್ಲಿ ಬಿಜೆಪಿ ಸೋತಿದ್ದರಿಂದ ಪಕ್ಷಕ್ಕೆ ತೀವ್ರ ಮುಖಭಂಗವಾಗಿದೆ. ಸಾಹುಕಾರ್ ಸೋದರರು ಇದ್ದರೂ ಕೊನೆ ಕ್ಷಣದಲ್ಲಿ ಲಖನ್ ಜಾರಕಿಹೊಳಿ ಸ್ವತಂತ್ರವಾಗಿ ಸ್ಪರ್ಧಿಸಿ ಚುನಾವಣಾ ಕಣದ ಚಿತ್ರಣ ಬದಲಾಯಿತು. ಕಾಂಗ್ರೆಸ್‌ ಹಾಗೂ ಪಕ್ಷೇತರ ಲಖನ್‌ ಜಾರಕಿಹೊಳಿ ಗೆದ್ದರು., ಆದರೆ ಗೆಲ್ಲುವ ಕುದುರೆಯಾಗಿದ್ದ ಬಿಜೆಪಿ ಸೋಲನುಭವಿಸಿತು. ಈ ಚರ್ಚೆಗಳ ನಡುವೆ ಪಕ್ಷದ ಸೋಲಿನ … Continued

ಈಗ ನಾನ ಇಲಿಯಾಗಿದ್ದೇನೆ..:ಬದಾಮಿಯಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಬಗ್ಗೆ ವೇದಿಕೆಯಲ್ಲೇ ಅಸಮಾಧಾನ ವ್ಯಕ್ತಪಡಿಸಿದ ಚಿಮ್ಮನಕಟ್ಟಿ..!

ಬಾಗಲಕೋಟೆ: ವಿಧಾನ ಪರಿಷತ್​ ಚುನಾವಣೆ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಇಂದು ಸ್ವಕ್ಷೇತ್ರ ಬದಾಮಿಯಲ್ಲಿ ಪ್ರಚಾರ ನಡೆಸಿದರು. ನಗರದ ಅಕ್ಕಮಹಾದೇವಿ ಕಲ್ಯಾಣ ಮಂಟಪದಲ್ಲಿ ನಡೆದ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಸಿದ್ದರಾಮಯ್ಯ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತವಾಯಿತು. ಸಿದ್ದರಾಮಯ್ಯಗಾಗಿ ಕ್ಷೇತ್ರ ಬಿಟ್ಟು ಕೊಟ್ಟ ಮಾಜಿ ಸಚಿವ ಬಿ.ಬಿ.ಚಿಮ್ಮನಕಟ್ಟಿ ಮಾತಿನಿಂದ ಇಡೀ ಸಭೆ ಗೊಂದಲಕ್ಕೀಡಾಯಿತು. ವಸಿದ್ದರಾಮಯ್ಯ ಅವರು ವರುಣಾ … Continued

ಕಾರವಾರ: ಕದ್ರಾ ನೆರೆ ಪೀಡಿತ ಪ್ರದೇಶಕ್ಕೆ ಸಿದ್ದರಾಮಯ್ಯ ಭೇಟಿ

ಕಾರವಾರ:ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕಾರವಾರ ತಾಲೂಕಿನ ಕದ್ರಾದ ನೆರೆ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿ ಅವಲೋಕಿಸಿದರು. ಕದ್ರಾ ಜಲಾಶಯದಿಂದ ಸತತ ನೀರು ಬಿಟ್ಟು ಹಾನಿಯಾಗಿರುವ ಸ್ಥಳಗಳಿಗೆ ತೆರಳಿ, ಜನರ ಆಸ್ತಿ-ಪಾಸ್ತಿ, ಮನೆ ಹಾನಿಯಾಗಿರುವುದನ್ನು ಪರಿಶೀಲನೆ ನಡೆಸಿದರು. ಸ್ಥಳದಲ್ಲಿದ್ದ ಜನರು ಕದ್ರಾ ಜಲಾಶಯದಿಂದ ಸತತವಾಗಿ ನೀರು ಬಿಟ್ಟಿರುವುದರಿಂದ ತೀವ್ರ ತೊಂದರೆ ಆಗಿದೆ. … Continued