ಮುಂದಿನ ಚುನಾವಣೆಯಲ್ಲಿ ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧೆ: ಶಾಸಕ ನಾರಾಯಣಸ್ವಾಮಿ

ಕೋಲಾರ: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೋಲಾರ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಬಂಗಾರಪೇಟೆ ಶಾಸಕ ಎಸ್‌.ಎನ್‌.ನಾರಾಯಣಸ್ವಾಮಿ ತಿಳಿಸಿದ್ದಾರೆ. ಜಿಲ್ಲೆಗೆ ಕೆ.ಸಿ.ವ್ಯಾಲಿ ಯೋಜನೆ ಕೊಡುಗೆ ನೀಡಿದ ಸಿದ್ದರಾಮಯ್ಯ ಅವರೇ ಕೋಲಾರ ಕ್ಷೇತ್ರಕ್ಕೆ ಮುಂದಿನ ಅಭ್ಯರ್ಥಿ. ಅವರು ಶಾಸಕರಾದರೆ ಜಿಲ್ಲೆಯ ಸಮಗ್ರ ಅಭಿವೃದ್ಧಿಯಾಗಲಿದೆ ಎಂದರು. ರಮೇಶಕುಮಾರ, ನಂಜೇಗೌಡ, ನಜೀರ್‌ ಅಹ್ಮದ್‌ ಸೇರಿದಂತೆ ಪಕ್ಷದ ಮುಖಂಡರು ಕೋಲಾರದಿಂದ … Continued

ಕಾಂಗ್ರೆಸ್‌ನಿಂದ ಅಮಾನತು ಮಾಡಿದರೂ ಡೋಂಟ್‌ ಕೇರ್:‌ ಶಾಸಕ ತನ್ವೀರ್‌ ಸೇಠ್‌

ಮೈಸೂರು: ಕಾಂಗ್ರೆಸ್‌ ಪಕ್ಷದಿಂದ ನನ್ನನ್ನು ಅಮಾನತು ಮಾಡಿದರೂ ನಾನು ಹೆದರುವುದಿಲ್ಲ, ನಾನು ಎಲ್ಲದಕ್ಕೂ ಸಿದ್ಧನಾಗಿದ್ದೇನೆ ಎಂದು ಕಾಂಗ್ರೆಸ್‌ ಶಾಸಕ ತನ್ವೀರ ಸೇಠ್‌ ಪಕ್ಷದ ಮುಖಂಡರ ವಿರುದ್ಧ ಆಕ್ರೋಷ ಹೊರಹಾಕಿದ್ದಾರೆ. ಸಿದ್ದರಾಮಯ್ಯ ಅವರ ಬೆಂಬಲಿಗರು  ತನ್ವೀರ್‌ ಸೇಠ್‌ ವಿರುದ್ಧ ಹರಿಹಾಯ್ದ ಮರುದಿನ ಸೇಠ್‌ ತಮ್ಮ ಅಸಮಾಧಾನ ತೋಡಿಕೊಂಡಿದ್ದಾರೆ. ನಾನು ಕೂಡ 5 ಬಾರಿ ಗೆದ್ದಿದ್ದೇನೆ . ಒಬ್ಬರ … Continued

ರಾಜ್ಯ ಸರಕಾರಕ್ಕೆ ದುಡ್ಡು ಹೊಡೆಯೋದು ಮಾತ್ರ ಗೊತ್ತು: ಸಿದ್ದರಾಮಯ್ಯ ವ್ಯಂಗ್ಯ

ಮೈಸೂರು: ಬಿಜೆಪಿ ಸರಕಾರಕ್ಕೆ ದುಡ್ಡು ಹೊಡೆಯುವುದು ಬಿಟ್ಟರೆ ಬೇರೆ ಯಾವ ಕೆಲಸವೂ ಗೊತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯ ಮಾಡಿದ್ದಾರೆ. ಗಡಿ ಜಿಲ್ಲೆಗಳಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಆದರೆ ಸರಕಾರ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದೆ. ಕೊರೊನಾ ಎರಡನೇ ಅಲೆ ಶುರುವಾಗುತ್ತದೆ ಎಂಬ ಅರಿವಿದ್ದರೂ ಮುಂಜಾಗ್ರತೆ ಕ್ರಮ ಕೈಗೊಳ್ಳುತ್ತಿಲ್ಲ. ಈಗಿನ ಸರ್ಕಾರಕ್ಕೆ ಗಂಭೀರತೆ … Continued

ಕಾಂಗ್ರೆಸ್‌ ಆಂತರಿಕ ತಿಕ್ಕಾಟ ಮೊದಲು ಬಗೆಹರಿಸಿಕೊಳ್ಳಲಿ: ಸಿದ್ದುಗೆ ಬಿಜೆಪಿ ಟಾಂಗ್‌

ಬೆಂಗಳೂರು: ನಿಮ್ಮ ಪಕ್ಷದೊಳಗಿನ ಆಂತರಿಕ ಹೋರಾಟವನ್ನು ಮೊದಲು ಬಗೆಹರಿಸಿಕೊಳ್ಳಿ ಎಂದು ಬಿಜೆಪಿ ಸಿದ್ದರಾಮಯ್ಯ ಅವರಿಗೆ ಸಲಹೆ ನೀಡಿದೆ. ಕಾಂಗ್ರೆಸ್‌ನಲ್ಲಿ ಅಹಿಂದ ವಿಚಾರವಾಗಿ ಪರ ಹಾಗೂ ವಿರೋಧ ಚರ್ಚೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಟ್ವೀಟ್ ಮೂಲಕ ಟಾಂಗ್ ನೀಡಿದೆ. ಅಹಿಂದ ಎಂದು ಹೊರಟಿದ್ದ ಸಿದ್ದರಾಮಯ್ಯ ದಿಢೀರನೆ ಅಲ್ಪಸಂಖ್ಯಾತರನ್ನು ಕೈಬಿಟ್ಟು ಹಿಂದ ಎನ್ನುತ್ತಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಪರಾಭವಗೊಂಡಾಗಲೇ ಜಾತಿ, … Continued

ರಾಮಮಂದಿರ ಕುರಿತು ಸಿದ್ದು ಹೇಳಿಕೆ ಸರ್ವೋಚ್ಚ ನ್ಯಾಯಾಲಯದ ತೀರ್ಪಿಗೆ ವಿರುದ್ಧ: ಸಿಎಂ ಯಡಿಯೂರಪ್ಪ

ರಾಮಮಂದಿರ ನಿರ್ಮಾಣ ಕುರಿತು ವಿಧಾನಸಭೆ ಪ್ರತಿ ಪಕ್ಷ ನಾಯಕ ಸಿದ್ದರಾಮಯ್ಯ ನೀಡಿದ ಹೇಳಿಕೆ ಸರ್ವೋಚ್ಚ ನ್ಯಾಯಾಲಯದ ತೀರ್ಪಿಗೆ ವಿರುದ್ಧವಾಗಿದ್ದು, ನ್ಯಾಯಾಲಯ ಅವರ ಮೇಲೆ ಕ್ರಮ ಜರುಗಿಸುವ ಸಾಧ್ಯತೆಯಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದರು. ಹಿಂದೂಗಳು, ಮುಸಲ್ಮಾನರು ಹಾಗೂ ಕ್ರೈಸ್ತರು ಎಲ್ಲ ಧರ್ಮದವರು ರಾಮಮಂದಿರ ನಿರ್ಮಾಣಕ್ಕೆ ಉದಾರವಾಗಿ ದೇಣಿಗೆ ನೀಡುತ್ತಿದ್ದಾರೆ. ಇದನ್ನು ಸಹಿಸದೇ ಕೆಲವರು ಅನಗತ್ಯ ಟೀಕೆ … Continued

ಸಿಎಂ ಹಣದ ಅವ್ಯವಹಾರ: ಉನ್ನತ ಮಟ್ಟದ ತನಿಖೆಗೆ ಸಿದ್ದರಾಮಯ್ಯ ಆಗ್ರಹ

ಮುಖ್ಯಮಂತ್ರಿ ಯಡಿಯೂರಪ್ಪ ಕುಟುಂಬ ಮಾರಿಷಿಸ್‌ಗೆ ತೆರಳಿ ಅಕ್ರಮ ಹಣ ಇರಿಸಿದ್ದಾರೆ ಎಂಬ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆರೋಪದ ಕುರಿತು ಪ್ರಧಾನಿ ಮೋದಿ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಕಾಂಗ್ರೆಸ್‌ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಬುಜೆಪಿ ಶಾಸಕ ಮಾಡಿದ ಆರೋಪವನ್ನು ಗಂಭೀರವಾಗಿ ಪರಿಗಣಿಸಬೇಕು. ಆರೋಪ ಕುರಿತು ಸರ್ವೋಚ್ಚ ನ್ಯಾಯಾಲಯದ … Continued

ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡುವುದಿಲ್ಲ: ಸಿದ್ದರಾಮಯ್ಯ

ಸದ್ಯ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮ ಮಂದಿರ ವಿವಾದಿತವಾಗಿರುವುದರಿಂದ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಕೇಳಲು ನನ್ನ ಬಳಿಯೂ ಬಂದಿದ್ದರು. ಆದರೆ ವಿವಾದಿತ ಮಂದಿರಕ್ಕೆ ಹಣ ಕೊಡುವುದಿಲ್ಲ ಎಂದು ಹೇಳಿ ಅವರನ್ನು ಹಿಂದೆ ಕಳುಹಿಸಿದ್ದೇನೆ ಎಂದು ಹೇಳಿದ್ದಾರೆ. ಅಲ್ಲದೇ ಒಂದು ವೇಳೆ ಬೇರೆ … Continued

ಸಿದ್ದರಾಮಯ್ಯ ದೆಹಲಿ ದೌಡ್:‌ ನಾಳೆ ರಾಹುಲ್‌ ಗಾಂಧಿ ಭೇಟಿ

ಬೆಂಗಳೂರು: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮಂಗಳವಾರ ದೆಹಲಿಗೆ ತೆರಳಲಿದ್ದು, ಪಕ್ಷದ ಮುಖಂಡ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಚರ್ಚಿಸಲಿದ್ದಾರೆ. ದಿಢೀರ್‌ ಆಗಿ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿಯನ್ನು ಭೇಟಿ ಮಾಡುತ್ತಿರುವುದು ರಾಜ್ಯ ಕಾಂಗ್ರೆಸ್‌ ವಲಯದಲ್ಲಿ ಕುತೂಹಲ ಮೂಡಿಸಿದೆ. ಮಂಗಳವಾರ ಬೆಳಗ್ಗೆ ಸಿದ್ದರಾಮಯ್ಯ ದೆಹಲಿಗೆ ತೆರಳಲಿದ್ದಾರೆ. ಸಂಜೆ ನಾಲ್ಕು ಗಂಟೆಗೆ ರಾಹುಲ್ ಗಾಂಧಿ … Continued

ಸಂಘ ಪರಿವಾರ ಸಾಮಾಜಿಕ ನ್ಯಾಯ ಹೋರಾಟದ ದಾರಿ ತಪ್ಪಿಸುತ್ತಿದೆ: ಸಿದ್ದರಾಮಯ್ಯ ಆರೋಪ

ನಾವೆಲ್ಲ ಹಿಂದೂ ನಾವೆಲ್ಲ ಒಂದು ಎಂದು ಹೇಳುತ್ತಿದ್ದ ಸಂಘ ಪರಿವಾರ ಈಗ ಯಾಕೆ ಜಾತಿ ಸಮಾವೇಶಗಳಿಗೆ ಪ್ರಾಯೋಜಕತ್ವ ವಹಿಸುತ್ತಿದೆ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಕಾಂಗ್ರೆಸ್‌ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮೀಸಲಾತಿಯನ್ನು ನೇರವಾಗಿ ವಿರೋಧಿಸದ ಸಂಘ ಪರಿವಾರದ ಮುಖಂಡರು ಜಾತಿ ಜಾತಿಗಳ ಮಧ್ಯೆ ವಿವಾದ ಸೃಷ್ಟಿಸಿ ಸಾಮಾಜಿಕ ನ್ಯಾಯ ಹೋರಾಟದ ದಾರಿ ತಪ್ಪಿಸುತ್ತಿದ್ದಾರೆ. … Continued

ಹಿಂದಿ ಹೇರಿದರೆ ರಕ್ತಪಾತವಾದೀತು: ಸಿದ್ದರಾಮಯ್ಯ ಅಬ್ಬರ

ಮಂಡ್ಯ: ಹಿಂದಿ ರಾಷ್ಟ್ರೀಯ ಭಾಷೆಯಲ್ಲ, ಅದನ್ನು ಬಲವಂತವಾಗಿ ರಾಜ್ಯದ ಜನರ ಮೇಲೆ ಹೇರಿದರೆ ರಕ್ತಪಾತ ಉಂಟಾಗುವ ಸಾಧ್ಯತೆಯಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಬ್ಬರಿಸಿದ್ದಾರೆ. ಉತ್ತರ ಭಾರತದ ಐದಾರು ರಾಜ್ಯಗಳನ್ನು ಹೊರತುಪಡಿಸಿದರೆ ಪಂಜಾಬ್‌, ತಮಿಳುನಾಡು, ಕೇರಳ, ಆಂಧ್ರ ಪ್ರದೇಶ, ಮಹಾರಾಷ್ಟ್ರ, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಹಿಂದಿ ಮಾತಾಡುವವರೇ ಇಲ್ಲ. ಇದರಿಂದಾಗಿ ಹಿಂದಿ ರಾಷ್ಟ್ರ ಭಾಷೆಯಾಗಲು … Continued