ಕಾಂಗ್ರೆಸ್‌ ಜೆಡಿಎಸ್‌ ಬಿ ಟೀಮ್‌ ಎಂಬುದು ಮೈಸೂರು ಪಾಲಿಕೆಯಲ್ಲಿ ಸಾಬೀತು

posted in: ರಾಜ್ಯ | 0

ಹಗರಿಬೊಮ್ಮನಹಳ್ಳಿ: ‘ಕರ್ನಾಕದಲ್ಲಿ ಕಾಂಗ್ರೆಸ್ ಪಕ್ಷವು ಜೆಡಿಎಸ್ ಪಕ್ಷದ ‘ಬಿ’ ಟೀಮ್ ಎನ್ನುವುದು ಮೈಸೂರು ಮಹಾನಗರ ಪಾಲಿಕೆ ಮೇಯರ್‌ ಆಯ್ಕೆ ವಿಚಾರದಲ್ಲಿ ಸಾಬೀತಾಗಿದೆ’ ಎಂದು ರಾಜ್ಯದ ಸಮಾಜ‌ ಕಲ್ಯಾಣ ಖಾತೆ ಸಚಿವ ಬಿ. ಶ್ರೀರಾಮುಲು ಹೇಳಿದರು. ನೂತನ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಉಪನಾಯಕನಹಳ್ಳಿ ಬಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ … Continued

ಸಿದ್ದರಾಮಯ್ಯನವರ ತವರಿನಲ್ಲಿಯೇ ಜೆಡಿಎಸ್‌ ತಾಕತ್ತು ತೋರಿಸಿದ್ದೇವೆ: ಜೆಡಿಎಸ್‌ ಶಾಸಕ ಸಾ.ರಾ. ಮಹೇಶ

posted in: ರಾಜ್ಯ | 0

ಮೈಸೂರು ಮಹಾನಗರ ಪಾಲಿಕೆ ಮೈತ್ರಿ ಗೊಂದಲಕ್ಕೆ ಕಾರಣರಾದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅವರ ತವರು ಜಿಲ್ಲೆಯಲ್ಲಿಯೇ ಜೆಡಿಎಸ್‌ ತಾಕತ್ತು ತೋರಿಸಿದ್ದೇವೆ ಎಂದು ಶಾಸಕ ಸಾ.ರಾ.ಮಹೇಶ ತಿಳಿಸಿದ್ದಾರೆ. ಪ್ರಾದೇಶಿಕ ಪಕ್ಷವನ್ನು ಹಗುರವಾಗಿ ನೋಡಬೇಡಿ. ಕೊನೆ ಕ್ಷಣದಲ್ಲಿ ಕಾಂಗ್ರೆಸ್‌ ಜೊತೆ ಮೈತ್ರಿ ಆಗಲು ಶಾಸಕ ಜಿ.ಟಿ.ದೇವೇಗೌಡ ಹಾಗೂ ಸಂದೇಶ್ ನಾಗರಾಜ್ ಕಾರಣ. ಮಾತಿನಂತೆ ಮುಂದಿನಂತೆ ಬಾರಿ ಕಾಂಗ್ರೆಸ್‌ಗೆ … Continued

ದೆಹಲಿಗೂ ತಲುಪಲಿದೆಯೇ ಕಾಂಗ್ರೆಸ್‌ ಬಣ ರಾಜಕೀಯದ ಜಗಳ..?

posted in: ರಾಜ್ಯ | 0

ಬೆಂಗಳೂರು:  ಮೈಸೂರು ಮಹಾನಗರ ಪಾಲಿಕೆಯ ಮೇಯರ್-ಉಪಮೇಯರ್ ಚುನಾವಣೆಯಲ್ಲಿ ಜೆಡಿಎಸ್ ಜತೆ ಕಾಂಗ್ರೆಸ್ ಕೊನೆಕ್ಷಣದಲ್ಲಿ ಮಾಡಿಕೊಂಡ ಮೈತ್ರಿ ಕಾಂಗ್ರೆಸ್‌ನಲ್ಲಿ ಆಂತರಿಕ ಜಗಳಕ್ಕೆ ಕಾರಣವಾಗಿದೆ. ಶುಕ್ರವಾರ ಶಾಸಕ ತನ್ವೀರ್‌ ಸೇಠ್‌ ಸಿದ್ದರಾಮಯ್ಯ ವಿರುದ್ಧ ಅಸಮಾದಾನ ವ್ಯಕ್ತಪಡಿಸಿದ ಬೆನ್ನಲ್ಲೇ ಏಕಪಕ್ಷೀಯವಾಗಿ ಮೈತ್ರಿ ನಿರ್ಧಾರ ತೆಗೆದುಕೊಂಡ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಹೈಕಮಾಂಡ್‌ಗೆ ದೂರು … Continued

ದ್ವೇಷ ಬಿತ್ತುವ ಬಿಜೆಪಿಯವರು ಅಲ್ಪಮಾನವರು: ಸಿದ್ದರಾಮಯ್ಯ

posted in: ರಾಜ್ಯ | 0

ಬೆಂಗಳೂರು: ಧರ್ಮದ ಹೆಸರಿನಲ್ಲಿ ಸಮಾಜವನ್ನು ಒಡೆದು, ದ್ವೇಷಭಾವನೆ ಬಿತ್ತುವ ಬಿಜೆಪಿಯವರು ಅಲ್ಪಮಾನವರು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಜಾತಿ, ಧರ್ಮಗಳನ್ನು ಮೀರಿ ಪ್ರತಿಯೊಬ್ಬನನ್ನು ಸಮಾನವಾಗಿ ಕಾಣುವುದೇ ಜಾತ್ಯತೀತತೆ. ಇದು ಕುವೆಂಪುರವರ ವಿಶ್ವಮಾನವ ತತ್ವಕ್ಕೆ ಅನುಗುಣವಾಗಿದೆ. ಧರ್ಮದ ಹೆಸರಿನಲ್ಲಿ ಸಮಾಜ ಒಡೆಯುವ ಬಿಜೆಪಿಯವರು ಅಲ್ಪಮಾನವರು ಎಂದು ತಿಳಿಸಿದ್ದಾರೆ. ಸರ್ವಧರ್ಮ ಸಮನ್ವಯತೆಯ ತವರಾಗಿದ್ದ ದಕ್ಷಿಣ ಕನ್ನಡವನ್ನು ಬಿಜೆಪಿ … Continued

ತಮಿಳುನಾಡು ಕಾವೇರಿ-ವೆಲ್ಲಾರು-ಗುಂಡಾರು ನದಿ ಜೋಡಣೆ ಯೋಜನೆ ಕೈಬಿಡಬೇಕು: ಸಿದ್ದು ಆಗ್ರಹ

posted in: ರಾಜ್ಯ | 0

ತಮಿಳುನಾಡು ಕೈಗೊಂಡಿರುವ ಕಾವೇರಿ-ವೆಲ್ಲಾರು-ವೈಗೈ-ಗುಂಡಾರು ನದಿ ಜೋಡಣೆ ಯೋಜನೆಯನ್ನು ಕೂಡಲೇ ಕೈಬಿಡಬೇಕೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ತಮಿಳುನಾಡು ಸರಕಾರ ಕಾವೇರಿ ನದಿಯ ೪೫ ಟಿಎಂಸಿ ನೀರನ್ನು ಅಕ್ರಮವಾಗಿ ಬಳಕೆ ಮಾಡಿಕೊಂಡು ಕೈಗೊಂಡಿರುವ ನದಿ ಜೋಡಣೆಯನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಒತ್ತಾಯಿಸಿದ್ದಾರೆ. ಈ ಕುರಿತು ತಮಿಳುನಾಡು ಮುಖ್ಯಮಂತ್ರಿಗೆ ಪತ್ರ ಬರೆದು ಆಗ್ರಹಿಸುತ್ತೇನೆ. ಮುಖ್ಯಮಂತ್ರಿ ಯಡಿಯೂರಪ್ಪ ಈ ವಿಚಾರವನ್ನು … Continued

ಸಿದ್ದು ಮುಂದಿನ ಸಿಎಂ ಎಂದು ಜಮೀರ್‌ ಹೇಳಿದ್ದರಲ್ಲಿ ತಪ್ಪಿಲ್ಲ

posted in: ರಾಜ್ಯ | 0

ಬೆಳಗಾವಿ: ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ ಎಂದು ಶಾಸಕ ಜಮೀರ್‌ ಅಹ್ಮದ್‌ ಹೇಳಿದ್ದರಲ್ಲಿ ಯಾವುದೇ ತಪ್ಪಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದ್ದಾರೆ. ಮಂದಿನ ಮುಖ್ಯಮಂತ್ರಿ ನೀವೇ ಎಂದು ಕೆಲವು ಅಭಿಮಾನಿಗಳು ನನಗೂ ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶ ಕಳಿಸುತ್ತಾರೆ. ಜಮೀರ್‌ ಅಹ್ಮದ್‌ ಅವರು ಸಿದ್ದರಾಮಯ್ಯ ಅವರ ಅಭಿಮಾನಿ. ಆದ್ದರಿಂದ ಜಮೀರ್‌ ಹೇಳಿಕೆಯಲ್ಲಿ ಏನೂ ತಪ್ಪಿಲ್ಲ. ಮುಂದಿನ … Continued

ಸಿದ್ದರಾಮಯ್ಯ ಸಿಎಂ ಇದ್ದಾಗಲೇ ಕುರುಬರಿಗೆ ಹೆಚ್ಚು ಅನ್ಯಾಯ: ಎಚ್‌.ವಿಶ್ವನಾಥ ಆರೋಪ

posted in: ರಾಜ್ಯ | 0

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗಲೇ ಕುರುಬರಿಗೆ ಹೆಚ್ಚು ಅನ್ಯಾಯವಾಗಿದೆ ಎಂದು ವಿಧಾನ ಪರಿಷತ್‌ ಸದಸ್ಯ ಎಚ್‌.ವಿಶ್ವನಾಥ ಅಭಿಪ್ರಾಯಪಟ್ಟಿದ್ದಾರೆ. ಸಿದ್ದರಾಮಯ್ಯ ಕುರುಬರ ಅಭಿವೃದ್ಧಿಗೆ ಏನೂ ಮಾಡಲಿಲ್ಲ. ಅವರ ಸಿಎಂ ಅವಧಿಯಲ್ಲಿಯೇ ಕುರುಬರಿಗೆ ಹೆಚ್ಚು ಅನ್ಯಾಯವಾಗಿದೆ. ಕೇವಲ ದರ್ಪ, ಅಹಂಕಾರದಿಂದ ಸರಕಾರ ನಡೆಸಲು ಸಾಧ್ಯವಿಲ್ಲ. ಸಿದ್ದು ತಮ್ಮ ಅಹಂಕಾರದಿಂದಲೇ ಅಧಿಕಾರ ಕಳೆದುಕೊಂಡರು. ಸಿದ್ದರಾಮಯ್ಯನನ್ನು ಉದ್ಧಾರ ಮಾಡಲು ಹೋಗಿ ನಾನು … Continued

ಟೀಕಿಸುವುದರಲ್ಲೇ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ: ಎಚ್‌ಡಿಕೆ ಲೇವಡಿ

posted in: ರಾಜ್ಯ | 0

ಬೆಂಗಳೂರು: ಸವಾಲು ಸ್ವೀಕರಿಸಲಾಗದವರು ಜೆಡಿಎಸ್ ಅನ್ನು ಟೀಕಿಸುವುದರಲ್ಲೇ ತಮ್ಮ ಶಕ್ತಿ ಪರೀಕ್ಷೆ ಮಾಡಿಕೊಳ್ಳುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್. ಡಿ.ಕುಮಾರಸ್ವಾಮಿ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಲೇವಡಿ ಮಾಡಿದ್ದಾರೆ. ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಸಿದ್ದರಾಮಯ್ಯನವರು ಸ್ವತಂತ್ರ ಪಕ್ಷ ಕಟ್ಟಿ, ತಾವೂ ಸೇರಿದಂತೆ 5 ಸ್ಥಾನಗಳನ್ನು ಗೆದ್ದು ತೋರಿಸಿದ ಮೇಲೆ ಜೆಡಿಎಸ್ … Continued