ಶಿರಸಿ : ನರೆಬೈಲ್ ಸೋಮೇಶ್ವರ ದೇವಾಲಯದ ಶಿವಲಿಂಗದ ಮೇಲೆ ಗೀಚಿ ಕಿಡಿಗೇಡಿಗಳಿಂದ ವಿಕೃತಿ

ಶಿರಸಿ: ದೇವಸ್ಥಾನದ ಒಳ ಪ್ರವೇಶಿಸಿದ ಕಿಡಿಗೇಡಿಗಳು ದೇವರ ಮೂರ್ತಿಯ ಮೇಲೆ ಸುಣ್ಣದ ಪೀಸ್‌ನಿಂದ ಬರೆದಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ನರೆಬೈಲ್ ಗ್ರಾಮದ ಸೋಮೇಶ್ವರ ದೇವಸ್ಥಾನದಲ್ಲಿ ಶನಿವಾರ ರಾತ್ರಿ ನಡೆದಿದೆ ಎಂದು ವರದಿಯಾಗಿದೆ. ಸೋಮೇಶ್ವರ ದೇವಸ್ಥಾನದ ಶಿವಲಿಂಗದ ಮೇಲೆ ಶಿವಲಿಂಗದ ಮೇಲೆ ಜೆಸಿಸಿ 1026 ಎಂದು   ಕಿಡಿಗೇಡಿಗಳು ಇಂಗ್ಲಿಷ್‌ನಲ್ಲಿ ಬರೆದಂತೆ ತೋರುತ್ತದೆ.. ದೇವಾಲಯದಲ್ಲಿ … Continued

ಫೆಬ್ರವರಿ 22ರಂದು ಸ್ವರ್ಣವಲ್ಲೀ ಮಠದಲ್ಲಿ ಶಿಷ್ಯ ಸ್ವೀಕಾರ ಸಮಾರಂಭ : ಫೆ. 18 ರಿಂದ ವಿವಿಧ ಕಾರ್ಯಕ್ರಮಗಳು

ಶಿರಸಿ: ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನದ ಮಠಾಧೀಶರಾದ ಶ್ರೀ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮೀಜಿಗಳ ಶಿಷ್ಯ ಸ್ವೀಕಾರ ಮಹೋತ್ಸವ ಸ್ವರ್ಣವಲ್ಲೀ ಮಠದಲ್ಲಿ ಫೆ. ೨೨ರಂದು ನಡೆಯಲಿದ್ದು, ಈ ನಿಮಿತ್ತ ಫೆ.೧೮ರಿಂದಲೇ ವಿವಿಧ ಧಾರ್ಮಿಕ ಕಾರ್ಯಕ್ರಗಳನ್ನು ಆಯೋಜಿಸಲಾಗಿದೆ ಎಂದು ಸ್ವರ್ಣವಲ್ಲೀ ಮಹಾ ಸಂಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ವಿ.ಎನ್.ಹೆಗಡೆ ಬೊಮ್ನಳ್ಳಿ ಹೇಳಿದರು. ಇಲ್ಲಿನ ಯೋಗ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಕಾರ್ಯಕ್ರಮದ … Continued

ಉತ್ತರ ಕನ್ನಡ ಜಿಲ್ಲೆಗೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ : ನನ್ನ ಹೋರಾಟ ಜಿಲ್ಲೆಯ ಲಕ್ಷಾಂತರ ಜನರ ಹಕ್ಕೊತ್ತಾಯದ ಧ್ವನಿ- ಅನಂತಮೂರ್ತಿ ಹೆಗಡೆ

ಶಿರಸಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಆಗಬೇಕು ಎಂದು ನಾನು ಮಾಡುತ್ತಿರುವ ಹೋರಾಟದಲ್ಲಿ ಲಕ್ಷಾಂತರ ಜನರ ಒಳಿತು ಹಾಗೂ ಹಿತಾಸಕ್ತಿ ಅಡಗಿದೆ. ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಾಣವಾಗಬೇಕು ಎಂಬುದು ಈ ಜಿಲ್ಲೆಯ ಜನರ ಭಾವನೆ ಹಾಗೂ ಬಹುದಿನಗಳ ಬೇಡಿಕೆ. ಜನರ ಭಾವನೆಯ ಪ್ರತೀಕವಾಗಿಯೇ ನಾನು ಹೋರಾಟ ಮಾಡುತ್ತಿದ್ದೇನೆಯೇ ಹೊರತು ಇದರಲ್ಲಿ ಉಳಿದ ಯಾವುದೇ … Continued

ಹಿರಿಯ ಸಹಕಾರಿ ಧುರೀಣ, ಎಲ್ಲರ ʼಶಾಂತಣ್ಣʼ ಟಿಎಸ್‌ಎಸ್‌ ಮಾಜಿ ಅಧ್ಯಕ್ಷ ಶಾಂತಾರಾಮ ಹೆಗಡೆ ಶೀಗೇಹಳ್ಳಿ ಇನ್ನಿಲ್ಲ

ಶಿರಸಿ: ʼಶಾಂತಣ್ಣʼ ಎಂದೇ ಆಪ್ತವಲಯದಲ್ಲಿ ಜನಪ್ರಿಯರಾಗಿದ್ದ ಹಿರಿಯ ಸಹಕಾರಿ ಧುರೀಣ, ಸಜ್ಜನ ರಾಜಕಾರಣಿ, ಸಹೃದಯಿ ಟಿಎಸ್‌ಎಸ್‌ ಮಾಜಿ ಅಧ್ಯಕ್ಷರಾಗಿದ್ದ ಶಾಂತಾರಾಮ ಹೆಗಡೆ ಶೀಗೇಹಳ್ಳಿ ವಯೋ ಸಹಜ ಖಾಯಿಲೆಯಿಂದ ಬುಧವಾರ ನಿಧನರಾಗಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ, ಒಬ್ಬ ಪುತ್ರ ಇಬ್ಬರು ಪುತ್ರಿಯರು ಹಾಗೂ ಅಪಾರ ಅಭಿಮಾನಿ ಬಳಗವನ್ನು ಅಗಲಿದ್ದಾರೆ. ಇವರು ಶಿಕ್ಷಣ, ಸಹಕಾರ, … Continued

ಮಾರ್ಚ್ 19 ರಿಂದ ಶಿರಸಿಯ ಶ್ರೀ ಮಾರಿಕಾಂಬಾ ದೇವಿ ಜಾತ್ರೆ

ಶಿರಸಿ: ಕರ್ನಾಟಕದ ಅತಿ ದೊಡ್ಡ ಜಾತ್ರೆಯಾದ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ‌ ಮಾರಿಕಾಂಬಾ ದೇವಿ ಜಾತ್ರೆ ಮಾರ್ಚ್‌ 19 ರಿಂದ 27 ರ ವರೆಗೆ ನಡೆಯಲಿದೆ. ನಗರದ ಮಾರಿಕಾಂಬಾ ದೇವಾಲಯದಲ್ಲಿ ಭಾನುವಾರ ನಡೆದ ಜಾತ್ರಾ ಮುಹೂರ್ತ ನಿಗದಿ ಕಾರ್ಯಕ್ರಮದಲ್ಲಿ ಮುಹೂರ್ತ ನಿಗದಿಗೊಳಿಸಿದ ನಂತರ ಶರಣ ಆಚಾರ್ಯ ಅವರು ದಿನಾಂಕವನ್ನು ಪ್ರಕಟಿಸಿದರು. ಎರಡು ವರ್ಷಕ್ಕೊಮ್ಮೆ ನಡೆಯುವ ಜಾತ್ರಾ … Continued

ಪೂರ್ವಜರು ವೇದ ಉಳಿಸಿಕೊಟ್ಟಿದ್ದರಿಂದ ಈವರೆಗೆ ಆಹಾರ ಸಮಸ್ಯೆ ಆಗಲಿಲ್ಲ : ಸ್ವರ್ಣವಲ್ಲೀ ಶ್ರೀಗಳು

ಶಿರಸಿ: ಪೂರ್ವಜರು ವೇದ ಉಳಿಸಿಕೊಟ್ಟಿದ್ದರಿಂದ ಈವರೆಗೆ ಆಹಾರ ಸಮಸ್ಯೆ ಆಗಲಿಲ್ಲ. ವೇದಕ್ಕೂ ಯಜ್ಞಕ್ಕೂ, ಮಳೆಗೂ, ಆಹಾರಕ್ಕೂ ನಿಕಟ ಸಂಬಂಧವಿದೆ. ವೇದ ಮತ್ತು ಯಜ್ಞ ಸಮೃದ್ಧವಾಗಿ ಆಚರಣೆ ಆಗಿದ್ದರೆ ಆಹಾರದಲ್ಲಿಯೂ ಸಮೃದ್ಧಿಯಾಗುತ್ತದೆ. ಹಾಗೂ ಬದುಕಿನಲ್ಲಿ‌ ನೆಮ್ಮದಿ‌ ದೊರೆಯುತ್ತದೆ ಎಂದು ಸ್ವರ್ಣವಲ್ಲೀ ಮಠದ ಶ್ರೀ ಗಂಗಾಧರೇಂದ್ರ ಸ್ವಾಮೀಜಿ ಅಭಿಪ್ರಾಯಪಟ್ಟರು. ಸ್ವರ್ಣವಲ್ಲೀಯಲ್ಲಿ ಶ್ರೀರಾಜರಾಜೇಶ್ವರಿ ವಿದ್ಯಾ ಸಂಸ್ಥೆ ಹಾಗೂ ಮಹರ್ಷಿ ಸಾಂದೀಪನಿ … Continued

ಶಿರಸಿ : ಫೆ.22ರಂದು ಸ್ವರ್ಣವಲ್ಲೀ ಶ್ರೀಗಳಿಂದ ನೂತನ ಶಿಷ್ಯ ಸ್ವೀಕಾರ

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಸೋಂದಾ ಸ್ವರ್ಣವಲ್ಲೀ ಶ್ರೀಮಠದ ಪೀಠಾಧೀಶರಾದ ಶ್ರೀ ಗಂಗಾಧರೇಂದ್ರ ಸರಸ್ವತೀ ಶ್ರೀಗಳ ಶಿಷ್ಯತ್ವ ಸ್ವೀಕಾರ ಕಾರ್ಯಕ್ರಮ ಫೆಬ್ರವರಿ 22 ರಂದು ನಡೆಯಲಿದೆ. ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನದ ಮಠಾಧೀಶ ಶ್ರೀಮಜ್ಜಗದ್ಗುರು ಶಂಕರಾಚಾರ‍್ಯ ಶ್ರೀಗಂಗಾಧರೇಂದ್ರ ಸರಸ್ವತೀ ಮಹಾ ಸ್ವಾಮೀಜಿಗಳು ನೂತನ ಶಿಷ್ಯರ ಸ್ವೀಕಾರಕ್ಕೆ ತೀರ್ಮಾನಿಸಿ, ನೇಮಕಗೊಳಿಸಿದ್ದಾರೆ. ಶ್ರೀ ಗಂಗಾಧರೇಂದ್ರ ಸರಸ್ವತೀ … Continued

ಸ್ವರ್ಣವಲ್ಲೀ ಶ್ರೀಗಳಿಗೆ ‘ಗೀತಾಭಿಯಾನಾರ್ಣವ’ ಬಿರುದು ಪ್ರದಾನ

ಶಿರಸಿ: ಎಲ್ಲ ಮಠಗಳ ಮಧ್ಯೆ ಆತ್ಮೀಯತೆ ಬಂದರೆ, ಎಲ್ಲ ಧಾರ್ಮಿಕ ಸಂಪ್ರದಾಯಗಳೂ ಒಂದಾದರೆ ದೇಶ ಅಖಂಡವಾಗುತ್ತದೆ, ದೇಶದ ಎಲ್ಲ ಸಮಸ್ಯೆಗಳೂ ಪರಿಹಾರವಾಗುತ್ತವೆ ಎಂದು ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ಹಾಗೂ ಗುರುಶಾಂತೇಶ್ವರ ಸಂಸ್ಥಾನ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅಭಿಪ್ರಾಯ ಪಟ್ಟಿದ್ದಾರೆ. ಹುಕ್ಕೇರಿ ಹಿರೇಮಠದ ಬೆಳಗಾವಿ ಶಾಖೆಯಲ್ಲಿ ಮಂಗಳವಾರ ಹಿರೇಮಠದ … Continued

ಶಿರಸಿ: ಈಜಲು ತೆರಳಿದ್ದ ಒಂದೇ ಕುಟುಂಬದ ಐವರು ನೀರು ಪಾಲು

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಭೈರುಂಬೆ ಸಮೀಪದ ಶಾಲ್ಮಲಾ ನದಿಯ ಭೂತನಗುಂಡಿ ಪ್ರದೇಶದಲ್ಲಿ ಸ್ನಾನಕ್ಕೆ ತೆರಳಿದ್ದ ಶಿರಸಿ ನಗರದ ಒಂದೇ ಕುಟುಂಬದ ಐವರು ನೀರು ಪಾಲಾದ ಘಟನೆ ನಡೆದಿದೆ ಎಂದು ವರದಿಯಾಗಿದೆ. ನೀರು ಪಾಲಾದವರನ್ನು ಶಿರಸಿ ನಗರದ ರಾಮನಬೈಲಿನ ಮಹಮದ್ ಸಲೀಂ (44), ಉಮರ್ ಸಿದ್ದೀಕ್ (14), ನಾಬಿಲ್ (22), ನಾದಿಯಾ ಶೇಖ್ … Continued

ಶಿರಸಿ : ಬಂಡಲ ಬಳಿ ಬಸ್‌-ಕಾರು ಡಿಕ್ಕಿ, ಐವರು ಸಾವು

ಶಿರಸಿ: ಬಸ್ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಐವರು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಕುಮಟಾ-ಶಿರಸಿ ಹೆದ್ದಾರಿಯ ಬಂಡಲ್ ಸಮೀಪದ ಪೆಟ್ರೋಲ್ ಬಂಕ್ ಬಳಿ ನಡೆದಿದೆ ಎಂದು ವರದಿಯಾಗಿದೆ. ಅಪಘಾತದಲ್ಲಿ ಮಂಗಳೂರು ತಾಲೂಕಿನ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದು, ಕಾರು ಚಾಲಕ ಚೆನ್ನೈ ಮೂಲದವರು ಎಂದು ಹೇಳಲಾಗಿದೆ. ಮೃತರನ್ನು … Continued