ವೀಡಿಯೊ | ಶಿರಸಿ : ಬಾವಿಗೆ ಬಿದ್ದ 2 ವರ್ಷದ ಮಗು; ಪಂಪ್‌ಸೆಟ್‌ ಪೈಪು ಹಿಡಿಕೊಂಡಿದ್ದ ಬಾಲೆ; ಕಾಪಾಡಿದ ಆಪದ್ಬಾಂಧವ

ಶಿರಸಿ: ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಬಾವಿಗೆ ಬಿದ್ದ ಎರಡು ವರ್ಷದ ಕಂದಮ್ಮ ಪವಾಡಸದೃಶರೀತಿಯಲ್ಲಿ ಪಾರಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಕಸ್ತೂರಬಾ ನಗರದಲ್ಲಿ ಸೋಮವಾರ ನಡೆದಿದೆ ಎಂದು ವರದಿಯಾಗಿದೆ. ವ್ಯಕ್ತಿಯೊಬ್ಬರು ತೋರಿದ ಸಮಯ ಪ್ರಜ್ಞೆಯಿಂದ ಮಗು ಅಪಾಯದಿಂದ ಪಾರಾಗಿದೆ. ಪ್ರಾಣದ ಹಂಗು ತೊರೆದು ಬಾವಿಗಿಳಿದ ಪಯ್ಯು ಚವಟಿ ಎಂಬವರು ಮಗುವನ್ನು ಮೇಲಕ್ಕೆತ್ತುವ ಮೂಲಕ ಮಗುವಿಗೆ ಮರುಜನ್ಮ … Continued

ಶಿರಸಿ: ಬುದ್ಧಿವಾದ ಹೇಳಿದ್ದಕ್ಕೆ ಮನನೊಂದ 9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

ಶಿರಸಿ: ಪರೀಕ್ಷೆಯ ಸಮಯದಲ್ಲಿ ಮೊಬೈಲ್ ವ್ಯಾಮೋಹ ಬಿಟ್ಟು ಓದಿನ ಕಡೆ ಗಮನಹರಿಸುವಂತೆ ಪೋಷಕರು ಹೇಳಿದ್ದಕ್ಕೆ ಮನನೊಂದ ವಿದ್ಯಾರ್ಥಿಯೊಬ್ಬ ನೇಣಿಗೆ ಶರಣಾಗಿರುವ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಶಿರಸಿ ನಗರದ ಗಣೇಶನಗರದ 15 ವರ್ಷದ ಶುಭಂ ನಾಯ್ಕ ಎಂಬಾತ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಎಂದು … Continued

ಶಿರಸಿ ಬಚಪನ್ ಶಾಲೆಗೆ ರಾಷ್ಟ್ರ ಮಟ್ಟದ ಪ್ರಶಸ್ತಿ

ಶಿರಸಿ: ಜಾಗೃತಿ ಫೌಂಡೇಶನ್ ಮೂಲಕ ಕಳೆದ ವರ್ಷವಷ್ಟೇ ಶಿರಸಿಯಲ್ಲಿ ಆರಂಭಗೊಂಡ “ಬಚಪನ್” ಪೂರ್ವ ಪ್ರಾಥಮಿಕ ಶಾಲೆಗೆ “ವರ್ಷದ ಎಡ್ ಟೆಕ್ ಶಾಲೆ” ಪ್ರಶಸ್ತಿ ಪ್ರಕಟಿಸಲಾಗಿದೆ. ರಾಷ್ಟ್ರ ಮಟ್ಟದಲ್ಲಿ ಕಲಿಕಾ ವಿಧಾನ, ಗುಣಮಟ್ಟ ಮತ್ತು ತಾಂತ್ರಿಕ ಅಳವಡಿಕೆಯನ್ನಾಧರಿಸಿ ಕೇವಲ 3 ಶಾಲೆಗಳಿಗೆ ಕೊಡಮಾಡುವ “ವರ್ಷದ ಎಡ್ ಟೆಕ್ ಶಾಲೆ” ಪ್ರಶಸ್ತಿಯನ್ನು ಶಿರಸಿಯ “ಬಚಪನ್” ಪೂರ್ವ ಪ್ರಾಥಮಿಕ ಶಾಲೆಗೆ … Continued

ಶಿರಸಿ : ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ

ಶಿರಸಿ: ಯುವಕನೋರ್ವ ನಾಡ ಬಂದೂಕಿನಿಂದ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಇಟಗುಳಿ ಸಮೀಪದ ಮುಡೇಸರ ಗ್ರಾಮದಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ರವೀಶ ನಾಯ್ಕ (22) ಎಂದು ಗುರುತಿಸಲಾಗಿದೆ.  ವೃತ್ತಿಯಲ್ಲಿ ಕೂಲಿ ಕಾರ್ಮಿಕರಾಗಿದ್ದ ಇವರು ಮದ್ಯ ವ್ಯಸನಿಯಾಗಿದ್ದರು ಎನ್ನಲಾಗಿದೆ. ಮಂಗಳವಾರ ತನ್ನ ಮನೆಯ ಪಕ್ಕದಲ್ಲಿರುವ … Continued

ವೀಡಿಯೊ | ಕರ್ನಾಟಕದ ಸುಪ್ರಸಿದ್ಧ ಶಿರಸಿ ಮಾರಿಕಾಂಬಾ ದೇವಿ ಜಾತ್ರೆ ಆರಂಭ : ಗದ್ದುಗೆಯಲ್ಲಿ ದೇವಿ ವಿರಾಜಮಾನ

ಶಿರಸಿ: ಕರ್ನಾಟಕದ ಅತಿದೊಡ್ಡ ಜಾತ್ರೆಯಾದ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಶ್ರೀ ಮಾರಿಕಾಂಬಾ ದೇವಿಯ ಜಾತ್ರೆಯು ರಥೋತ್ಸವ ಬುಧವಾರ ಅತ್ಯಂತ ಸಡಗಡ ಸಂಭ್ರಮದಿಂದ ಚಾಲನೆಗೊಂಡಿತು. ರಥದಲ್ಲಿ ಆಗಮಿಸಿದ ಭಕ್ತರ ಆರಾಧ್ಯ ದೈವ ಮಾರಿಕಾಂಬಾ ದೇವಿಯು  ಜಾತ್ರಾ  ಗದ್ದುಗೆಗೆ ಆಗಮಿಸಿ ಬುಧವಾರ ಪ್ರತಿಷ್ಠಾಪನೆಗೊಂಡಿದ್ದಾಳೆ..  ಶ್ರೀ ಮಾರಿಕಾಂಬೆಯ ದರ್ಶನಕ್ಕಾಗಿ ಆಗಮಿಸಿದ ಲಕ್ಷಾಂತರ ಭಕ್ತರು ಈ ರಥೋತ್ಸವಕ್ಕೆ ಸಾಕ್ಷಿಯಾಗುವ ಮೂಲಕ … Continued

ಶಿರಸಿ: ಕೆಡಿಸಿಸಿ ಬ್ಯಾಂಕ್‌ ಅಧ್ಯಕ್ಷರಾಗಿ ಶಿವರಾಮ ಹೆಬ್ಬಾರ ಅವಿರೋಧ ಆಯ್ಕೆ

ಶಿರಸಿ: ತೀವ್ರ ಕುತೂಹಲ ಕೆರಳಿಸಿದ್ದ ಉತ್ತರ ಕನ್ನಡ ಜಿಲ್ಲಾ ಮಧ್ಯವರ್ತಿ ಸಹಕಾರಿ (ಕೆಡಿಸಿಸಿ) ಬ್ಯಾಂಕಿನ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳ ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ನಿರೀಕ್ಷೆಯಂತೆ ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅವರು ಸತತವಾಗಿ ಎರಡನೇ ಬಾರಿಗೆ ಕೆಡಿಸಿಸಿ ಬ್ಯಾಂಕ್‌ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಜೊಯಿಡಾದ ಕೃಷ್ಣ ದೇಸಾಯಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. … Continued

ಶಿರಸಿ : ಐದು ದಿನಗಳ ಡಿಜಿಟಲ್ ಮಾರ್ಕೆಟಿಂಗ್ ಮ್ಯಾನೇಜ್ಮೆಂಟ್ ಡೆವಲಪ್ಮೆಂಟ್ ಪ್ರೋಗ್ರಾಂ ಉದ್ಘಾಟನೆ

ಶಿರಸಿ: ಉದ್ಯಮಿಗಳಿಗಾಗಿ ವಿಶೇಷವಾಗಿ ಆಯೋಜಿಸಲಾದ ಐದು ದಿನಗಳ ಡಿಜಿಟಲ್ ಮಾರ್ಕೆಟಿಂಗ್ ಕುರಿತು ಮ್ಯಾನೇಜ್ಮೆಂಟ್ ಡೆವಲಪ್ಮೆಂಟ್ ಪ್ರೋಗ್ರಾಂ (MDP) ಫೆ.13 ರಂದು ಶಿರಸಿಯ ಕದಂಬ ಆರ್ಗಾನಿಕ್ ಪಾಯಿಂಟ್‌ನಲ್ಲಿ ಪ್ರಾರಂಭವಾಯಿತು. ಈ ಕಾರ್ಯಕ್ರಮವನ್ನು ಹುಬ್ಬಳ್ಳಿಯ ಎಂಎಸ್‌ಎಂಇ (MSME) ಅಭಿವೃದ್ಧಿ ಮತ್ತು ಸೌಲಭ್ಯ ಕೇಂದ್ರವು ಶಿರಸಿಯ ಕದಂಬ ಮಾರ್ಕೆಟಿಂಗ್ ಸೌಹಾರ್ದ ಸಹಕಾರಿ ಹಾಗೂ ನೆಲಸಿರಿ ರೈತ ಉತ್ಪಾದಕ ಕಂಪನಿಯ ಸಹಯೋಗದಲ್ಲಿ … Continued

ನದಿ ಜೋಡಣೆಗೆ ವಿರೋಧ ; ಮಾಜಿ ಸಚಿವ ದೇಶಪಾಂಡೆಗೆ ಮನವಿ ಸಲ್ಲಿಸಿದ ಬೇಡ್ತಿ-ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿ ನಿಯೋಗ

ಶಿರಸಿ: “ಉತ್ತರ ಕನ್ನಡ ಜಿಲ್ಲೆಯು ಈಗಾಗಲೇ ಕಾಳಿ, ಶರಾವತಿ, ಸೀಬರ್ಡ್ ಹಾಗೂ ಕೈಗಾದಂತಹ ಬೃಹತ್ ಯೋಜನೆಗಳ ಭಾರದಿಂದ ತನ್ನ ಧಾರಣ ಸಾಮರ್ಥ್ಯವನ್ನು ಕಳೆದುಕೊಂಡಿದೆ. ಇಂತಹ ಪರಿಸ್ಥಿತಿಯಲ್ಲಿ ಪಶ್ಚಿಮಘಟ್ಟದ ಸೂಕ್ಷ್ಮ ಪ್ರದೇಶದಲ್ಲಿ ಮತ್ತೆ ಹೊಸ ನದಿ ತಿರುವು ಯೋಜನೆಗಳನ್ನು ಹೇರುವುದು ಸರಿಯಲ್ಲ ಎಂದು ಮಾಜಿ ಸಚಿವ ಆರ್.ವಿ. ದೇಶಪಾಂಡೆ ಅಭಿಪ್ರಾಯಪಟ್ಟಿದ್ದಾರೆ. ಶನಿವಾರ (ಫೆ. 14) ಶಿರಸಿಯಲ್ಲಿ ತಮ್ಮನ್ನು … Continued

ರಾಜ್ಯಮಟ್ಟದ ಪ್ರತಿಭಾ ಕಾರಂಜಿ : ಚಿನ್ಮಯ ಕೆರೆಗದ್ದೆ ಪ್ರಥಮ

ಶಿರಸಿ; ಶಾಲಾ ಶಿಕ್ಷಣ ಇಲಾಖೆಯಿಂದ ಕೊಪ್ಪಳ ಜಿಲ್ಲೆಯ ಕಾರಟಗಿಯಲ್ಲಿ ನಡೆದ ರಾಜ್ಯಮಟ್ಟದ ಪ್ರತಿಭಾ ಕಾರಂಜಿಯ ಸಂಸ್ಕೃತ ಭಾಷಣ ಸ್ಪರ್ಧೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಲಯನ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಚಿನ್ಮಯ ಕೆರೆಗದ್ದೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾನೆ. ಈತ ಪತ್ರಕರ್ತ ಕೃಷ್ಣಮೂರ್ತಿ ಕೆರೆಗದ್ದೆ ಮತ್ತು ಆಶಾ ಕೆರೆಗದ್ದೆ ದಂಪತಿ ಪುತ್ರ. … Continued

ಬೇಡ್ತಿ, ಅಘನಾಶಿ ನದಿ ಜೋಡಣೆ ವಿರೋಧಿಸಿ ದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಉತ್ತರ ಕನ್ನಡ ಜಿಲ್ಲೆ ಸರ್ವಪಕ್ಷ ನಿಯೋಗ

ಶಿರಸಿ : ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ ನೇತೃತ್ವದ  ಉತ್ತರ ಕನ್ನಡ ಜಿಲ್ಲೆಯ ಸರ್ವಪಕ್ಷ ನಿಯೋಗವು ಸೋಮವಾರ (ಫೆ.9) ನವದೆಹಲಿಯಲ್ಲಿ ಕೇಂದ್ರದ ಪ್ರಮುಖ ಸಚಿವರನ್ನು ಭೇಟಿ ಮಾಡಿ, ಬೇಡ್ತಿ-ಹಿರೇವಡ್ಡತ್ತಿ ಹಾಗೂ ಅಘನಾಶಿನಿ-ವೇದಾವತಿ ನದಿ ಜೋಡಣೆ ಯೋಜನೆಗಳಿಂದ ಜಿಲ್ಲೆಯ ಪರಿಸರಕ್ಕಾಗುವ ಹಾನಿಯ ಕುರಿತು ಗಂಭೀರ ಚರ್ಚೆ ನಡೆಸಿತು. ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ, ಪರಿಸರ ಸಚಿವ … Continued