ಶಿರಸಿ : ಇಂದಿನಿಂದ (ಜು.11) ಸಾಂಪ್ರದಾಯಿಕ ತರಕಾರಿ ಬೀಜ ಮೇಳ-ಮಲೆನಾಡು ಮೇಳ

ಶಿರಸಿ : ಉತ್ತರಕನ್ನಡ ಸಾವಯವ ಒಕ್ಕೂಟ , ಶಿರಸಿ ಮತ್ತು ವನಸ್ತ್ರೀ ಸಂಸ್ಥೆ ಸಹಯೋಗದಲ್ಲಿ ಎರಡು ದಿನಗಳ ಮಲೆನಾಡು ಮೇಳ ಹಾಗೂ ಸಾಂಪ್ರದಾಯಿಕ ತರಕಾರಿ ಬೀಜ ಮೇಳವನ್ನು ಜುಲೈ 11 ಮತ್ತು 12ರಂದು ಇಲ್ಲಿನ ಎಪಿಎಂಸಿಯ ಹೊಸ ಮಾರುಕಟ್ಟೆ ಆವರಣದಲ್ಲಿರುವ ಟಿಆರ್‌ಸಿ ಬ್ಯಾಂಕ್ ಪಕ್ಕದ ಪಿಸಿಆರ್‌ಡಿ ಬ್ಯಾಂಕ್ ಕಟ್ಟಡದ ನೆಲಸಿರಿ ಅರ್ಗ್ಯಾನಿಕ್ ಹಬ್‌ನಲ್ಲಿ ಆಯೋಜಿಸಲಾಗಿದೆ. ಜುಲೈ … Continued

ಸೋಂದಾ‌ ಸ್ವರ್ಣವಲ್ಲೀ‌ ಉಭಯ ಶ್ರೀಗಳ ಚಾತುರ್ಮಾಸ್ಯ ವ್ರತಾಚರಣೆ ಜುಲೈ 10ರಿಂದ ಆರಂಭ

ಶಿರಸಿ: ಸೋಂದಾ‌ ಸ್ವರ್ಣವಲ್ಲೀ‌ ಮಹಾಸಂಸ್ಥಾನದ‌ ಉಭಯ ಶ್ರೀಗಳ ಚಾತುರ್ಮಾಸ್ಯ ವ್ರತಾಚರಣೆ ಜುಲೈ 10ರಿಂದ ಸೆಪ್ಟೆಂಬರ್ 7ರ ತನಕ ನಡೆಯಲಿದೆ ಎಂದು‌ ಮಠದ ಆಡಳಿತ ಮಂಡಳಿ ಅಧ್ಯಕ್ಷ ವಿ‌.ಎನ್.ಹೆಗಡೆ ಬೊಮ್ನಳ್ಳಿ ತಿಳಿಸಿದ್ದಾರೆ. ಸೋಂದಾ‌ ಸ್ವರ್ಣವಲ್ಲೀ ಮಠದ ಶ್ರೀ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮೀಜಿ ಹಾಗೂ ಮಠದ ಕಿರಿಯ ಶ್ರೀಗಳಾದ ಶ್ರೀ ಆನಂದಬೋಧೇಂದ್ರ ಸರಸ್ವತೀ ಮಹಾಸ್ವಾಮೀಜಿ ವ್ಯಾಸ ಪೂಜೆ ನಡೆಸಿ … Continued

ಭಾರಿ ಮಳೆ : ಉತ್ತರ ಕನ್ನಡ ಜಿಲ್ಲೆ 4 ತಾಲೂಕುಗಳ ಶಾಲೆಗಳಿಗೆ ನಾಳೆ (ಜುಲೈ 4)ರಜೆ ಘೋಷಣೆ

ಕಾರವಾರ : ಉತ್ತರ ಕನ್ನಡದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಜಿಲ್ಲೆಯ ನಾಲ್ಕು ತಾಲೂಕುಗಳ ಅಂಗನವಾಡಿಗಳು, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಶುಕ್ರವಾರ ಜುಲೈ 4ರಂದು ರಜೆ ಘೋಷಿಸಲಾಗಿದೆ. ಹವಾಮಾನ ಇಲಾಖೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಜುಲೈ 3ರಿಂದ 4ರ ವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದ್ದು, ರೆಡ್‌ ಅಲರ್ಟ್‌ ನೀಡಿದೆ. ಈ ಹಿನ್ನೆಲೆಯಲ್ಲಿ ಮಕ್ಕಳ … Continued

ಉತ್ತರ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಮೂವರು ಹಿರಿಯ ಪತ್ರಕರ್ತರಿಗೆ ದತ್ತಿನಿಧಿ ಪ್ರಶಸ್ತಿ ಪ್ರದಾನ

ಶಿರಸಿ: ಉತ್ತರ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಕೊಡಮಾಡುವ ಪ್ರತಿಷ್ಠಿತ ಪ್ರಶಸ್ತಿಗಳಾದ ಕೆ.ಶಾಮರಾವ ದತ್ತಿನಿಧಿ ಪ್ರಶಸ್ತಿಯನ್ನು ಹಿರಿಯ ಪತ್ರಕರ್ತೆ ಶೈಲಜಾ ಗೋರನಮನೆ ಅವರಿಗೆ, ಡಾ.ಯು ಚಿತ್ತರಂಜನ್ ದತ್ತಿನಿಧಿ ಪ್ರಶಸ್ತಿಯನ್ನು ಹಿರಿಯ ಪತ್ರಕರ್ತರಾದ ಗಣೇಶ ಇಟಗಿ ಹಾಗೂ ಜಿ.ಎಸ್ ಹೆಗಡೆ ಅಜ್ಜೀಬಳ ಪ್ರಶಸ್ತಿಯನ್ನು ದೀಪಕಕುಮಾರ ಶೇಣ್ವಿ ಅವರಿಗೆ ನೀಡಿ ಗೌರವಿಸಲಾಯಿತು. ಮಂಗಳವಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ … Continued

ಕಾರ್ಮಿಕರನ್ನು ಒಯ್ಯುತ್ತಿದ್ದ ವಾಹನದ ಮೇಲೆ ಬಿದ್ದ ವಿದ್ಯುತ್‌ ಕಂಬ

ಶಿರಸಿ : ಉತ್ತರ ಕನ್ನಡ ಜಿಲ್ಲೆಯ ಶಿರಸಿ ಹಾಗೂ ಮುಂಡಗೋಡ ತಾಲೂಕುಗಳಿಗೆ ಹೊಂದಿಕೊಂಡಿರುವ ಗಡಿ ಭಾಗದ ಬೆಡಸಗಾಂವನಲ್ಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವಾಹನದ ಮೇಲೆ ವಿದ್ಯುತ್ ಕಂಬ ಮುರಿದು ಬಿದ್ದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಯಾವುದೇ ಅಪಾಯ ಸಂಭವಿಸಿದ ವರದಿಯಾಗಿಲ್ಲ. ರಾಮಾಪುರದಿಂದ ಹುಲೆಕಲ್‌ಗೆ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರನ್ನು ಒಯ್ಯುತ್ತಿದ್ದ ವಾಹನದ ಮೇಲೆ ವಿದ್ಯುತ್‌ ಕಂಬ ಮುರಿದು … Continued

ಶಿರಸಿ-ಕುಮಟಾ ರಸ್ತೆಯಲ್ಲಿ ರಾತ್ರಿ ಸಂಚಾರ ನಿಷೇಧ

ಶಿರಸಿ : ಉತ್ತರ ಕನ್ನಡ ಜಿಲ್ಲೆಯ ಶಿರಸಿ-ಕುಮಟಾ ರಸ್ತೆಯ ದೇವಿಮನೆ ಘಟ್ಟ ಪ್ರದೇಶದಲ್ಲಿ ಮೂರ್ನಾಲ್ಕು ದಿನಗಳ ಅವಧಿಯಲ್ಲಿ ಮೂರ್ನಾಲ್ಕು ಬಾರಿ ಗುಡ್ಡ ಕುಸಿತ ಉಂಟಾಗಿದೆ. ಬಹುತೇಕ ರಾತ್ರಿ ವೇಳೆಯೇ ಗುಡ್ಡ ಕುಸಿತ ಆಗುವುದನ್ನು ಪರಿಗಣಿಸಿ ಈ ಮಾರ್ಗವಾಗಿ ರಾತ್ರಿ ಸಂಚಾರ ನಿಷೇಧಿಸಲಾಗಿದೆ. ಈ ಮಾರ್ಗದ ರಸ್ತೆ ನಿರ್ಮಾಣ ಕಾರ್ಯ ನಡೆಯುತ್ತಿರುವುದರಿಂದ ಹಾಗೂ ಮತ್ತೆ ಕುಸಿಯುವ ಆತಂಕವಿರುವುದರಿಂದ … Continued

ಮಂಗಳೂರು ವಿವಿ ‘ಯಕ್ಷಮಂಗಳ ಕೃತಿ ಪ್ರಶಸ್ತಿʼಗೆ ಅಶೋಕ ಹಾಸ್ಯಗಾರರ ‘ದಶರೂಪಕಗಳ ದಶಾವತಾರ’ ಸಂಶೋಧನಾ ಪುಸ್ತಕ ಆಯ್ಕೆ

ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯದ ಡಾ.ಪಿ.ದಯಾನಂದ ಪೈ ಮತ್ತು ಪಿ.ಸತೀಶ​​​​ ಪೈ ಯಕ್ಷಗಾನ ಅಧ್ಯಯನ ಕೇಂದ್ರದಿಂದ ಕೊಡಮಾಡುವ 2024ನೇ ಸಾಲಿನ ಯಕ್ಷಮಂಗಳ ಪ್ರಶಸ್ತಿಗೆ ಯಕ್ಷಗಾನ ಹಿರಿಯ ಅರ್ಥದಾರಿ, ವಿದ್ವಾಂಸ ಡಾ.ರಮಾನಂದ ಬನಾರಿ, ಹಿರಿಯ ಯಕ್ಷಗಾನ ಕಲಾವಿದ ಪ್ರೊ.ಎಂ.ಎಲ್.ಸಾಮಗ ಹಾಗೂ ತೆಂಕುತಿಟ್ಟು ಯಕ್ಷಗಾನದ ಹಿರಿಯ ವೇಷಧಾರಿ ಸದಾಶಿವ ಶೆಟ್ಟಿಗಾರ ಸಿದ್ಧಕಟ್ಟೆ ಆಯ್ಕೆಯಾಗಿದ್ದಾರೆ. ಯಕ್ಷಮಂಗಳ ಕೃತಿ ಪ್ರಶಸ್ತಿಗೆ ಲೇಖಕ, … Continued

ಶಿರಸಿ | ಮೇ 10ರಿಂದ ಸ್ವರ್ಣವಲ್ಲಿಯಲ್ಲಿ ಎರಡು ದಿನಗಳ ಕೃಷಿ ಜಯಂತಿ

ಶಿರಸಿ: ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ ಸ್ವರ್ಣ ವಲ್ಲೀ ಕೃಷಿ ಪ್ರತಿಷ್ಠಾನದ ಸಹಯೋಗದಲ್ಲಿ ಶ್ರೀ ಲಕ್ಷ್ಮಿನೃಸಿಂಹ ರಥೋತ್ಸವದ ಸಂದರ್ಭದಲ್ಲಿ 16ನೇ ವರ್ಷದ ಕೃಷಿ ಜಯಂತಿ ಯನ್ನು  ಮೇ 10 ಮತ್ತು 11ರಂದು ಎರಡು ದಿನಗಳ ಕಾಲ ನಡೆಸ ಲಾಗುವುದು ಎಂದು ಅಧ್ಯಕ್ಷ ವಿ.ಎನ್. ಹೆಗಡೆ ಹೇಳಿದರು. ಶನಿವಾರ ನಗರದ ಯೋಗ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಳ್ಳಿಗಳು … Continued

ವೀಡಿಯೊ..| ಶಿರಸಿ : ಬಚ್ಚಲು ಮನೆಗೆ ಬಂದ ಚಿರತೆ

ಶಿರಸಿ: ಚಿರತೆಯೊಂದು ಊರಿನೊಳಗೆ ಬಂದು ಬಚ್ಚಲು (ಸ್ನಾನದ) ಮನೆಯಲ್ಲಿ ಅಡಗಿ ಕುಳಿತು ಮನೆಯವರ ಬೆಚ್ಚಿ ಬೀಳುವಂತೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರಕ್ಕೆ ಹೊಂದಿಕೊಂಡಿರುವ ಮೂಲೆ ಮನೆಯಲ್ಲಿ ಶುಕ್ರವಾರ ನಡೆದಿದೆ. ಶಿರಸಿ ನಗರದಿಂದ ಅನತಿ ದೂರದ ಮೂಲೆಮನೆ ಹಳ್ಳಿಯಲ್ಲಿ ಶುಕ್ರವಾರ ಬೆಳ್ಳಂಬೆಳಗ್ಗೆ ಈ ಘಟನೆ ನಡೆದಿದ್ದು, ನೀರು ಕಾಯಿಸಲು ಬಚ್ಚಲ ಮನೆಗೆ ಹೋದಾಗ  … Continued

ಕಾರವಾರ | ತಲೆಮರೆಸಿಕೊಂಡಿದ್ದ ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಮುಖ ಆರೋಪಿ ಬಂಧನ

ಕಾರವಾರ: 2020ರ ಕೆಜಿ ಹಳ್ಳಿ, ಡಿಜೆ ಹಳ್ಳಿ (KG Halli-DJ Halli) ಗಲಭೆ ಪ್ರಕರಣದ ಮೋಸ್ಟ್ ವಾಂಟೆಡ್ ಆರೋಪಿಯನ್ನು ಉತ್ತರ ಕನ್ನಡ ಜಿಲ್ಲೆ ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಶಿರಸಿಯ ಟಿಪ್ಪು ನಗರ ನಿವಾಸಿ ಮೌಸೀನ್ ಅಲಿಯಾಸ್ ಇಮ್ತಿಯಾಝ್ ಶುಕುರ್ ಬಂಧಿತ ಆರೋಪಿ ಎಂದು ಹೇಳಲಾಗಿದೆ. ಆರೋಪಿ ಮೌಸೀನ್ ಪಿಎಫ್‌ಐ (PFI) ಕಾರ್ಯಕರ್ತನಾಗಿದ್ದ ಹಾಗೂ … Continued