ವಾಲ್ಮೀಕಿ ಅಭಿವೃದ್ದಿ ನಿಗಮ ಹಗರಣ: ತನಿಖೆಗೆ ಎಸ್‌ಐಟಿ ರಚಿಸಿದ ಸರ್ಕಾರ

ಬೆಂಗಳೂರು : ಶಿವಮೊಗ್ಗ ಜಿಲ್ಲೆಯ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧೀಕ್ಷಕರಾದ ಚಂದ್ರಶೇಖರನ್‌ ಆತ್ಮಹತ್ಯೆ ಪ್ರಕರಣ ಹಾಗೂ ನಿಗಮದಲ್ಲಿ ನಡೆದಿರುವ ಆರ್ಥಿಕ ಅವ್ಯವಹಾರಗಳ ಪ್ರಕರಣಗಳ ಸಮಗ್ರ ತನಿಖೆಯನ್ನು ವಿಶೇಷ ತನಿಖಾ ತಂಡ ರಚಿಸಿ ನಡೆಸಲು ರಾಜ್ಯ ಸರ್ಕಾರವು ನಿರ್ಧರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆಯ ನಂತರ ಎಸ್‌ಐಟಿ ರಚಿಸಿ ಸರ್ಕಾರದಿಂದ ಅಧಿಕೃತ ಆದೇಶ ಹೊಡಿಸಲಾಗಿದೆ. … Continued