ತೆಲಂಗಾಣ ಶಾಸಕರ ಆಮಿಷ ಪ್ರಕರಣ: ಬಿಎಲ್‌ ಸಂತೋಷ ವಿಚಾರಣೆಗೆ ತೆಲಂಗಾಣ ಹೈಕೋರ್ಟ್‌ ತಡೆ

ಹೈದರಾಬಾದ್‌: ತೆಲಂಗಾಣದ ಟಿಆರ್‌ಎಸ್‌ನ ನಾಲ್ವರು ಶಾಸಕರನ್ನು ಖರೀದಿಸಲು ಸಂಚು ರೂಪಿಸಿದ ಆರೋಪದ ಪ್ರಕರಣದಲ್ಲಿ ಬಿಜೆಪಿಯ ಹಿರಿಯ ನಾಯಕ ಬಿ.ಎಲ್. ಸಂತೋಷ ಅವರನ್ನು ಸದ್ಯಕ್ಕೆ ಪ್ರಶ್ನಿಸಲಾಗುವುದಿಲ್ಲ ಎಂದು ತೆಲಂಗಾಣ ಹೈಕೋರ್ಟ್ ತಿಳಿಸಿದೆ. ಬಿ.ಎಲ್‌. ಸಂತೋಷ ಅವರಿಗೆ ನೀಡಲಾದ ಆರೋಪಗಳ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನೋಟಿಸ್‌ಗೆ ಡಿಸೆಂಬರ್ 5 ರವರೆಗೆ ತಡೆಯಾಜ್ಞೆ ನೀಡಿದೆ. ತೆಲಂಗಾಣ … Continued

ಶಾಸಕ ರಮೇಶ ಜಾರಕಿಹೊಳಿಗೆ ಎಸ್‌ಐಟಿ ನೊಟೀಸ್‌

ಬೆಳಗಾವಿ: ಶಾಸಕ ರಮೇಶ ಜಾರಕಿಹೊಳಿಗೆ ಸಂಬಂಧಿಸಿದ್ದೆನ್ನಲಾದ ಸಿಡಿ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ (ಎಸ್ಐಟಿ) ಅಧಿಕಾರಿಗಳು ಎಪ್ರಿಲ್‌ ೨೦ರಂದು ಸಂಜೆ ೪:೦೦ ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ರಮೇಶ ಜಾರಕಿಹೊಳಿ ಅವರಿಗೆ ನೊಟೀಸ್‌ ನೀಡಿದ್ದಾರೆ. ಎಸ್‌ಐಟಿಯ ಇಬ್ಬರು ಅಧಿಕಾರಿಗಳು ಶುಕ್ರವಾರ ಬೆಳಗಾವಿಗೆ ಭೇಟಿ ನೀಡಿ ಖುದ್ದಾಗಿ ನೊಟೀಸ್‌ ನೀಡಲು ಬಂದಿದ್ದರು. ಆದರೆ ಅಧಿಕಾರಿಗಳಿಗೆ ಶಾಸಕರು … Continued

ಅನವಶ್ಯಕ ಹೇಳಿಕೆಯಿಂದ ತನಿಖೆಯ ಗಂಭೀರತೆ ಹಾಳು ಮಾಡಬೇಡಿ: ಬೊಮ್ಮಾಯಿ

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ತಮ್ಮ ಸರ್ಕಾರವನ್ನು ಟೀಕಿಸುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿರುವ ಗೃಹ,  ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ, ಅನವಶ್ಯಕವಾಗಿ ಮಾತನಾಡಿ ಪ್ರಕರಣದ ತನಿಖೆಯ ಗಾಂಭೀರ್ಯತೆ ಹಾಳು ಮಾಡಬೇಡಿ ಎಂದು ಹೇಳಿದ್ದಾರೆ. ಬುಧವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಎಸ್ಐಟಿ ತನಿಖೆ … Continued

ಪ್ರತಿಭಟನೆಗಳು ಎಸ್‌ಐಟಿ ತನಿಖೆ ಮೇಲೆ ಪ್ರಭಾವ ಬೀರಲ್ಲ: ಬೊಮ್ಮಾಯಿ

ಬೆಂಗಳೂರು: ರಮೇಶ ಜಾರಕಿಹೊಳಿ ಸಿಡಿ ವಿಚಾರಕ್ಕೆ ಸಂಬಂಧಿಸಿದಂತೆ ವಿವಿಧೆಡೆ ನಡೆಯುತ್ತಿರುವ ಪ್ರತಿಭಟನೆಗಳು ವಿಶೇಷ ತನಿಖಾ ದಳದ (ಎಸ್‌ಐಟಿ) ತನಿಖೆಯ ಮೇಲೆ ಯಾವುದೇ ರೀತಿಯ ಪ್ರಭಾವ ಬೀರುವುದಿಲ್ಲ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಭಾನುವಾರ ಬೆಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಪ್ರತಿಭಟನೆಗಳು ಅಲ್ಲಲ್ಲಿ‌ ನಡೆಯುತ್ತವೆ. ಅವುಗಳನ್ನು ಸ್ಥಳೀಯ … Continued

ಆರೋಪಿ ವಿಚಾರಣೆ ನಡೆಸದೆ ಸಂತ್ರಸ್ತೆ ಪೋಷಕರ ವಿಚಾರಣೆ ಎಷ್ಟು ಸರಿ: ವಕೀಲ ಜಗದೀಶ ಪ್ರಶ್ನೆ

ಬೆಂಗಳೂರು: ಅಶ್ಲೀಲ ಸಿಡಿ ಪ್ರಕರಣದಲ್ಲಿ ಆರೋಪಿಯನ್ನು ಈವರೆಗೂ ವಿಚಾರಣೆಗೆ ಒಳಪಡಿಸಿಲ್ಲ. ಆದರೆ ಸಂತ್ರಸ್ತೆಯ ಪೋಷಕರನ್ನು ವಿಚಾರಣೆ ನಡೆಸುತ್ತಿರುವುದು ಎಷ್ಟು ಸರಿಎಂದು ಯುವತಿ ಪರ ವಕೀಲ ಜಗದೀಶ್ ಪ್ರಶ್ನಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ರಮೇಶಜಾರಕಿಹೊಳಿ ಸಿಡಿ ಪ್ರಕರಣದ ಸಂಬಂಧ ಸಂತ್ರಸ್ತೆಯ ಪೋಷಕರು ಶನಿವಾರ ವಿಶೇಷ ತನಿಖಾ ತಂಡದ (ಎಸ್‌ಐಟಿ) ವಿಚಾರಣೆಗೆ ಹಾಜರಾಗಿದ್ದಾರೆ. ಹೀಗಾಗಿ … Continued

ಎಸ್‌ಐಟಿ ಮುಂದೆ ಸಿಡಿ ಯುವತಿ ತಂದೆ-ತಾಯಿ ಹಾಜರು

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಸಿಡಿ ಪ್ರಕರಣ ಕ್ಷಣಕ್ಷಣಕ್ಕೂ ತಿರುವು ಪಡೆದುಲಕೊಳ್ಳುತ್ತಿದೆ. ಶನಿವಾರ ಬೆಳಿಗ್ಗೆ ಸಿಡಿಯಲ್ಲಿದ್ದ ಯುವತಿಯ ಹೇಳಿಕೆಯುಳ್ಳ ವಿಡಿಯೋ ಬಿಡಗಡೆಯಾಗಿ ಅದರಲ್ಲಿ ತಮ್ಮ ಕುಟುಂಬಕ್ಕೆ ರಕ್ಷಣೆ ಕೋರಿದ ಬೆನ್ನಲ್ಲೇ ಯುವತಿಯ ಪೋಷಕರು ವಿಶೇಷ ತನಿಖಾ ದಳದ ಮುಂದೆ ಶನಿವಾರ ಹಾಜರಾಗಿದ್ದು, ಪ್ರಕರಣ ಮತ್ತೊಂದು ಟ್ವಿಸ್ಟ್‌ ಪಡೆದಿದೆ. ಅಜ್ಞಾತ ಸ್ಥಳದಲ್ಲಿರುವ ಯುವತಿ ಶನಿವಾರ … Continued

ಯಾರೇ ದೂರು ಸಲ್ಲಿಸಿದರೂ ಎಸ್‌ಐಟಿಯಿಂದ ಪರಿಶೀಲನೆ

ಬೆಂಗಳೂರು; ಮಾಜಿ ಸಚಿವ ರಮೇಶ ಜಾರಕಿಹೊಳಿ‌ ಸಿಡಿ ಪ್ರಕರಣದ ಕುರಿತು ಯಾರೇ ದೂರು ಸಲ್ಲಿಸಿದರೂ ಅದನ್ನು ವಿಶೇಷ ತನಿಖಾ ದಳ (ಎಸ್‌ಐಟಿ) ಕಾನೂನಾತ್ಮಕವಾಗಿ ಪರಿಶೀಲನೆ ನಡೆಸಿ ಕ್ರಮ‌ಕೈಗೊಳ್ಳುತ್ತದೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಶುಕ್ರವಾರ ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಿಡಿಯಲ್ಲಿನ ಯುವತಿಯೇ ಆಗಲಿ, … Continued

ಸಿಡಿ ಹಗರಣ: ಈಗ ಮತ್ತೊಂದು ಸಿಡಿ ಬಿಡುಗಡೆ ಮಾಡಿದ ಯುವತಿ

ಬೆಂಗಳೂರು: ಮಾಜಿ ಸಚಿವ ರಮೇಶ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿಯಲ್ಲಿರುವ ಯುವತಿಯದ್ದು ಎನ್ನಲಾದ ಮತ್ತೊಂದು ವಿಡಿಯೋ ಹೊರಗೆ ಬಂದಿದೆ. ನನ್ನ ತಂದೆ-ತಾಯಿ ಸ್ವ ಇಚ್ಛೆಯಿಂದ ಪೊಲೀಸ್ ದೂರು ನೀಡಿಲ್ಲ. ನಾನು ತಪ್ಪು ಮಾಡಿಲ್ಲ ಎಂದು ಅವರಿಗೆ ಗೊತ್ತಿದೆ. ಹಾಗಾಗಿ ಅವರು ಸ್ವಇಚ್ಛೆಯಿಂದ ದೂರು ನೀಡಲು ಸಾಧ್ಯವೇ ಇಲ್ಲ ಎಂದು ಅವಳಿ ಈ ವಿಡೊಯೋದಲ್ಲಿ ಹೇಳಿದ್ದಾಳೆ. … Continued

ಬೇರೆ ತನಿಖಾ ಸಂಸ್ಥೆಗೆ ಸಿಡಿ ಪ್ರಕರಣ ವಹಿಸುವುದಿಲ್ಲ: ಬೊಮ್ಮಾಯಿ

ಧಾರವಾಡ: ಸಿಡಿ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ (ಎಸ್ ಐ ಟಿ) ಸಮರ್ಥವಾಗಿ  ನಡೆಸುತ್ತಿದೆ. ಹೀಗಾಗಿ  ಈ  ಪ್ರಕರಣದ ತನಿಖೆಯನ್ನು ಬೇರೆ ಸಂಸ್ಥೆ ಗೆ‌ ವಹಿಸುವುದಿಲ್ಲ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು. ಭಾನುವಾರ ಧಾರವಾಡದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು,  ಎಸ್ ಐ ಟಿ … Continued

ಸಿಡಿ ಪ್ರಕರಣ : ದೆಹಲಿಯಲ್ಲಿ ಎಸ್‍ಐಟಿ ಹುಡುಕಾಟ

ಬೆಂಗಳೂರು: ಸಿಡಿ ಪ್ರಕರಣದ ಕಿಂಗ್‍ಪಿನ್‍ಗಳು ಎನ್ನಲಾದ ಇಬ್ಬರು ವ್ಯಕ್ತಿಗಳು ಹಾಗೂ ಆ ಯುವತಿ ದೆಹಲಿಯಲ್ಲಿ ಇರಬಹುದೆಂಬ ಶಂಕೆ ಹಿನ್ನೆಲೆಯಲ್ಲಿ ಎಸ್‍ಐಟಿ ಪೊಲೀಸರು ದೆಹಲಿ ಹಾಗೂ ಸುತ್ತಮುತ್ತ ಶೋಧ ನಡೆಸುತ್ತಿದ್ದಾರೆ. ಕಿಂಗ್‍ಪಿನ್ ಎಂದು ಹೇಳಲಾದ ವ್ಯಕ್ತಿ ಬುಧವಾರ ವಿಡಿಯೋ ತುಣುಕು ಬಿಡುಗಡೆ ಮಾಡಿದ್ದಾರೆ. ಆ ವಿಡಿಯೋವನ್ನು ದೆಹಲಿಯಿಂದಲೇ ಅಪ್‍ಲೋಡ್ ಮಾಡಲಾಗಿದೆ ಎಂಬುದು ಎಸ್‍ಐಟಿ ಶಂಕೆ. ಈ ಹಿನ್ನೆಲೆಯಲ್ಲಿ … Continued