ತಿರುಪತಿ ಲಡ್ಡು ವಿವಾದ: ತನಿಖೆಗೆ ಸಿಬಿಐ ಉಸ್ತುವಾರಿಯಲ್ಲಿ ಎಸ್‌ಐಟಿ ರಚಿಸಿ ಸುಪ್ರೀಂ ಕೋರ್ಟ್‌ ಆದೇಶ

ನವದೆಹಲಿ: ತಿರುಪತಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂಬ ಆರೋಪದ ಕುರಿತು ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಈ ಬಗ್ಗೆ ತನಿಖೆ ನಡೆಸಲು ಸಿಬಿಐನ ಇಬ್ಬರು ಅಧಿಕಾರಿಗಳನ್ನು ಒಳಗೊಂಡ ಎಸ್‌ಐಟಿ ತಂಡ ರಚಿಸಿ ಶುಕ್ರವಾರ ಆದೇಶಿಸಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬಿ.ಆರ್‌. ಗವಾಯಿ … Continued

ಶಾಸಕ ಮುನಿರತ್ನ ಮನೆ ಮೇಲೆ ಎಸ್ ಐಟಿ ದಾಳಿ

ಬೆಂಗಳೂರು : ನ್ಯಾಯಾಂಗ ಬಂಧನದಲ್ಲಿರುವ ಬಿಜೆಪಿ ಶಾಸಕ ಮುನಿರತ್ನ ಮನೆ ಮೇಲೆ ವಿಶೇಷ ತನಿಖಾ ತಂಡ(SIT)ದ ಅಧಿಕಾರಿಗಳು ಶನಿವಾರ ಬೆಳಗ್ಗೆ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ. ಬೆಂಗಳೂರಿನ ವೈಯಾಲಿಕಾವಲ್ ಅವರ ನಿವಾಸದ ಮೇಲೆ ಎಸ್​ಐಟಿ ಎಸಿಪಿ ಕವಿತಾ ನೇತೃತ್ವದಲ್ಲಿ ದಾಳಿ ನಡೆಸಿದ ಅಧಿಕಾರಿಗಳ ತಂಡ ದಾಖಲೆಗಳ ಪರಿಶೀಲನೆ ನಡೆಸಿದೆ. ಒಟ್ಟು 15 ಕಡೆಗಳಲ್ಲಿ ಎಸ್​ಐಟಿ ಅಧಿಕಾರಿಗಳು … Continued

ಲೈಂಗಿಕ ದೌಜರ್ನ್ಯದ ಆರೋಪ : ನಟ-ಶಾಸಕ ಎಂ.ಮುಖೇಶ ಬಂಧನ

 ತಿರುವನಂತಪುರಂ :  ಮಲೆಯಾಳಂನ ಸಿನೆಮಾ ಉದ್ಯಮವನ್ನು ವ್ಯಾಪಿಸಿರುವ ಮೀಟೂ ಪ್ರಕರಣಗಳ ಇತ್ತೀಚಿನ ಅಲೆಯಲ್ಲಿ ಸಿಪಿಐ(ಎಂ) ಶಾಸಕ ಎಂ ಮುಖೇಶ ಅವರನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. ಮಾಜಿ ನಟಿಯೊಬ್ಬರು ಮಲಯಾಳಂ ನಟ-ರಾಜಕಾರಣಿಯ ಮೇಲೆ ಅತ್ಯಾಚಾರದ ಆರೋಪವನ್ನು ಮಾಡಿದ್ದರು, ಅದರ ಆಧಾರದ ಮೇಲೆ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆದಾಗ್ಯೂ, ಅವರು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಿಂದ ನಿರೀಕ್ಷಣಾ … Continued

ತಿರುಪತಿ ದೇವಸ್ಥಾನದ ಆಡಳಿತ ಮಂಡಳಿಯಲ್ಲಿ ನಡೆದಿರುವ ಅಕ್ರಮಗಳ ತನಿಖೆಗೆ ವಿಶೇಷ ತನಿಖಾ ತಂಡ

ಹೈದರಾಬಾದ್: ದೇವಸ್ಥಾನದ ಲಡ್ಡುಗಳಲ್ಲಿ ಪ್ರಾಣಿಗಳ ಕೊಬ್ಬು ಕಂಡುಬಂದ ಆರೋಪದ ಹಿನ್ನೆಲೆಯಲ್ಲಿ ತಿರುಪತಿ ದೇವಸ್ಥಾನದ ಅವ್ಯವಹಾರದ ತನಿಖೆಗಾಗಿ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು ವಿಶೇಷ ತನಿಖಾ ತಂಡವನ್ನು ರಚಿಸಿದ್ದಾರೆ. ಉಂಡವಳ್ಳಿ ನಿವಾಸದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಾಯ್ಡು, “ಇನ್‌ಸ್ಪೆಕ್ಟರ್ ಜನರಲ್ ಅಥವಾ ಅದಕ್ಕಿಂತ ಉನ್ನತ ಅಧಿಕಾರಿಗಳನ್ನು ಒಳಗೊಂಡ ಎಸ್‌ಐಟಿ ರಚಿಸಲಾಗುವುದು. ಇದು ಈ ಬಗ್ಗೆ ತನಿಖೆ … Continued

ಸಂತ್ರಸ್ತೆ ಅಪಹರಣ ಪ್ರಕರಣ: ಎಚ್​​.ಡಿ. ರೇವಣ್ಣಗೆ ಹೈಕೋರ್ಟಿನಿಂದ ಬಿಗ್​ ರಿಲೀಫ್

ಬೆಂಗಳೂರು : ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿರುವ ಸಂತ್ರಸ್ತೆ ಅಪಹರಣದ ಪ್ರಕರಣದ ಮೊದಲನೇ ಆರೋಪಿ, ಜೆಡಿಎಸ್‌ ಶಾಸಕ ಎಚ್‌ ಡಿ ರೇವಣ್ಣಗೆ ವಿಚಾರಣಾಧೀನ ನ್ಯಾಯಾಲಯ ಜಾಮೀನು ಮಂಜೂರು ಮಾಡಿರುವ ಆದೇಶವನ್ನು ಕರ್ನಾಟಕ ಹೈಕೋರ್ಟ್‌ ಬುಧವಾರ ಎತ್ತಿ ಹಿಡಿದಿದೆ. ಎಚ್‌.ಡಿ. ರೇವಣ್ಣಗೆ ವಿಚಾರಣಾಧೀನ ನ್ಯಾಯಾಲಯ ಜಾಮೀನು ಮಂಜೂರು ಮಾಡಿರುವುದನ್ನು ಪ್ರಶ್ನಿಸಿ ವಿಶೇಷ … Continued

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ಚಿಕ್ಕಣ್ಣಗೆ ಮತ್ತೆ ಸಂಕಷ್ಟ..?

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸ್ಯನಟ ಚಿಕ್ಕಣ್ಣ ಅವರಿಗೆ ಮತ್ತೆ ಸಂಕಷ್ಟ ಎದುರಾಗುವ ಸಾಧ್ಯತೆಯಿದೆ. ಆರೋಪಿ ನಟ ದರ್ಶನ್ ಮತ್ತು ತಂಡದ ವಿರುದ್ಧ ಪ್ರಮುಖ ಸಾಕ್ಷಿಯಾಗಿರುವ ನಟ ಚಿಕ್ಕಣ್ಣ ಸೆಕ್ಷನ್ ಸಿಆರ್‌ಪಿಸಿ 164ರ ಅಡಿಯಲ್ಲಿ ನ್ಯಾಯಾಧೀಶರ ಮುಂದೆ ಈಗಾಗಲೇ ಹೇಳಿಕೆ ನೀಡಿದ್ದಾರೆ. ಹೇಳಿಕೆ ನೀಡಿದ ನಂತರ ಚಿಕ್ಕಣ್ಣ ಅವರು ದರ್ಶನ್ ಅವರನ್ನು … Continued

ವಾಲ್ಮೀಕಿ ನಿಗಮ ಹಗರಣ: ಇ. ಡಿ. ವಶಕ್ಕೆ ಆರೋಪಿ ವರ್ಮಾ ನೀಡಲು ಹೈಕೋರ್ಟ್‌ ಆದೇಶ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ (ಕೆಎಂವಿಎಸ್‌ಟಿಡಿಸಿಎಲ್‌) ಹಣ ದುರ್ಬಳಕೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಸತ್ಯನಾರಾಯಣ ವರ್ಮಾ ಅವರನ್ನು ಆಗಸ್ಟ್‌ 13ರಂದು ತನಿಖೆಗಾಗಿ ಜಾರಿ ನಿರ್ದೇಶನಾಲಯದ ವಶಕ್ಕೆ ನೀಡಬೇಕು ಎಂದು ವಿಶೇಷ ತನಿಖಾ ದಳಕ್ಕೆ (ಎಸ್‌ಐಟಿ) ಕರ್ನಾಟಕ ಹೈಕೋರ್ಟ್‌ ಶುಕ್ರವಾರ ಆದೇಶಿಸಿದೆ. ಆಗಸ್ಟ್‌ 2ರಂದು ಸತ್ಯನಾರಾಯಣ ವರ್ಮಾ ಅವರನ್ನು ಎಸ್‌ಐಟಿ ಕಸ್ಟಡಿಗೆ … Continued

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ: ಸಚಿವ ನಾಗೇಂದ್ರ ರಾಜೀನಾಮೆ..?

ಬೆಂಗಳೂರು: ವಾಲ್ಮೀಕಿ ನಿಗಮದ ಬಹುಕೋಟಿ ಹಗರಣದ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡ ಬೆನ್ನಲ್ಲೇ ಸಚಿವ ಬಿ. ನಾಗೇಂದ್ರ ಗುರುವಾರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರಾಗಿರುವ ನಾಗೇಂದ್ರ ಅವರಿಗೆ ತನಿಖೆ ಮುಗಿಯುವರೆಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸಿದ್ದರಾಮಯ್ಯ ಸೂಚಿಸಿದ್ದರಿಂದ ಇಂದೇ ರಾಜೀನಾಮೆ ನೀಡುವ ಸಾಧ್ಯತೆಯಿದೆ ಎನ್ನಲಾಗಿದೆ. ವಾಲ್ಮೀಕಿ … Continued

ಹಾಸನ: ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸಿಗೆ, ದಿಂಬು ವಶಕ್ಕೆ ಪಡೆದ ಎಸ್‌ಐಟಿ

ಹಾಸನ: ನೂರಾರು ಮಹಿಳೆಯರಿಗೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಎದುರಿಸುತ್ತಿರುವ ಪ್ರಜ್ವಲ್ ರೇವಣ್ಣ ವಿದೇಶದಿಂದ ಬೆಂಗಳೂರಿಗೆ ಮರಳುವ ದಿನಾಂಕ ಸಮೀಪಿಸುತ್ತಿದ್ದಂತೆಯೇ ಎಸ್ ಐಟಿ ತನಿಖೆ ಚುರುಕುಗೊಳಿಸಿದೆ. ಪಈ ಪ್ರಕರಣದ ತನಿಖೆಗಾಗಿ ರಚಿಸಲಾದ ವಿಶೇಷ ತನಿಖಾ ತಂಡ (ಎಸ್‌ಐಟಿ) ಮತ್ತು ವಿಧಿ ವಿಜ್ಞಾನ ಪ್ರಯೋಗಾಲಯದ (ಎಸ್‌ಎಫ್‌ಎಲ್) ಅಧಿಕಾರಿಗಳು ಪ್ರಜ್ವಲ್ ರೇವಣ್ಣ ಅವರ ಅಧಿಕೃತ ಕ್ವಾರ್ಟರ್ಸ್‌ಗೆ ಮಂಗಳವಾರ ರಾತ್ರಿ ಭೇಟಿ … Continued

ವೀಡಿಯೊ ಬಿಡುಗಡೆ ಮಾಡಿದ ಬೆನ್ನಲ್ಲೇ ಬೆಂಗಳೂರಿಗೆ ವಿಮಾನ ಟಿಕೆಟ್ ಬುಕ್ ಮಾಡಿದ ಪ್ರಜ್ವಲ್ ರೇವಣ್ಣ…!

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯಾಗಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಮೇ 31ರಂದು ಜರ್ಮನಿಯಿಂದ ಭಾರತಕ್ಕೆ ಬರಲು ವಿಮಾನದ ಟಿಕೆಟ್‌ ಬುಕ್‌ ಆಗಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ. ವಿಶೇಷ ತನಿಖಾ ತಂಡದ (ಎಸ್‌ಐಟಿ) ಎದುರು ವಿಚಾರಣೆಗೆ ಮೇ 31ರಂದು ಹಾಜರಾಗುವುದಾಗಿ ತಿಳಿಸಲು ಅಜ್ಞಾತ ಸ್ಥಳದಿಂದ ವೀಡಿಯೊ ಬಿಡುಗಡೆ ಮಾಡಿದ್ದ ಪ್ರಜ್ವಲ್‌ ರೇವಣ್ಣ, … Continued