ಪ್ರಜ್ವಲ್ ರೇವಣ್ಣ ಪ್ರತ್ಯಕ್ಷ : ವಿದೇಶದಿಂದಲೇ ವೀಡಿಯೊ ಸಂದೇಶ; ಮೇ 31ರಂದು ವಿಚಾಣೆಗೆ ಹಾಜರಾಗ್ತಾರಂತೆ…

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ವಿದೇಶಕ್ಕೆ ಪರಾರಿಯಾಗಿರುವ ಪ್ರಜ್ವಲ್‌ ರೇವಣ್ಣ (Prajwal Revanna) ಅವರಿಗೆ ತಕ್ಷಣವೇ ಕರ್ನಾಟಕಕ್ಕೆ ವಾಪಸ್‌ ಆಗಬೇಕು ಹಾಗೂ ಈ ನೆಲದ ಕಾನೂನು ಗೌರವಿಸಬೇಕು ಎಂದು ಅಜ್ಜ, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ (H D Deve Gowda) ಅವರು ಬಹಿರಂಗ ಪತ್ರ ಬರೆದ ಬೆನ್ನಲ್ಲೇ ಪ್ರಜ್ವಲ್‌ ರೇವಣ್ಣ ಅವರು ಭಾರತಕ್ಕೆ ಬರುವುದಾಗಿ ಘೋಷಣೆ … Continued

ಮಹಿಳೆ ಅಪಹರಣ ಪ್ರಕರಣ : ಶಾಸಕ ಎಚ್‌.ಡಿ. ರೇವಣ್ಣಗೆ ಜಾಮೀನು ಮಂಜೂರು

ಬೆಂಗಳೂರು: ಮಹಿಳೆ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಜಹಾಗೂ ಜೆಡಿಎಸ್‌ ಶಾಸಕ ಎಚ್‌.ಡಿ ರೇವಣ್ಣ (HD Revanna) ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇಂದು ಸೋಮವಾರ ಬೆಳಗ್ಗೆಯಿಂದ ಸಂಜೆಯವರೆಗೆ ಕೋರ್ಟ್‌ ಸುಧೀರ್ಘ ವಿಚಾರಣೆ ನಡೆಸಿ ವಾದ-ಪ್ರತಿವಾದಗಳನ್ನು ಆಲಿಸಿದ ನಂತರ ಜಾಮೀನು ಮಂಜೂರು ಮಾಡಿದೆ. ಶಾಸಕರು- ಸಂಸದರ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳ ವಿಚಾರಣೆಯ … Continued

ಎಚ್.ಡಿ. ರೇವಣ್ಣಗೆ ನ್ಯಾಯಾಂಗ ಬಂಧನ

ಬೆಂಗಳೂರು : ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಗೆ ಕೋರ್ಟ್‌ ಮೇ 14ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ ಮಹಿಳೆ ಅಪಹರಣ ಆರೋಪದ ಮೇಲೆ ಎಸ್ಐಟಿ ವಶದಲ್ಲಿದ್ದ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ಕಸ್ಟಡಿ ಅವಧಿ ಇಂದು, ಬುಧವಾರ ಮುಕ್ತಾಯವಾದ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ 17ನೇ ಎಸಿಎಂಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ರೇವಣ್ಣ … Continued

ಎಚ್.ಡಿ ರೇವಣ್ಣ ಬೆಂಗಳೂರಿನಲ್ಲಿ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಹಿಳೆ ಕಿಡ್ನಾಪ್ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಮಾಜಿ ಸಚಿವ ಎಚ್.ಡಿ ರೇವಣ್ಣ (HD Revanna) ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಅವರನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿ (Victoria Hospital) ದಾಖಲು ಮಾಡಲಾಗಿದೆ. ಮಹಿಳೆ ಕಿಡ್ನಾಪ್ ಪ್ರಕರಣದಲ್ಲಿ ಎಸ್‌ಐಟಿ ವಶದಲ್ಲಿರುವ ರೇವಣ್ಣ ಅವರಿಗೆ ಎದೆನೋವು ಹಾಗೂ ಹೊಟ್ಟೆ ಉರಿ ಹಾಗೂ ಹೆಚ್ಚಾದ ಹಿನ್ನೆಲೆಯಲ್ಲಿ … Continued

ಅಶ್ಲೀಲ‌ ವೀಡಿಯೊ ಇಟ್ಟುಕೊಳ್ಳುವುದು ಅಪರಾಧ, ಡಿಲೀಟ್‌ ಮಾಡಿ : ಎಸ್‌ಐಟಿ ಮುಖ್ಯಸ್ಥರು

ಬೆಂಗಳೂರು: ಅಶ್ಲೀಲ ವೀಡಿಯೊಗಳನ್ನು ಜನರು ತಮ್ಮ ಬಳಿ ಇಟ್ಟುಕೊಳ್ಳುವುದು ಕೂಡ ಅಪರಾಧ ಎಂದು ಹಾಸನ ಪೆನ್‌ಡ್ರೈವ್‌ ಪ್ರಕರಣದ ಕುರಿತ ವಿಚಾರಣೆಗೆ ರಚನೆಯಾಗಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಮುಖ್ಯಸ್ಥರು ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ” ಮಾಹಿತಿ ಮತ್ತು ತಂತ್ರಜ್ಞಾನ ಅಧಿನಿಯಮದಲ್ಲಿ ಯಾವುದೇ ವ್ಯಕ್ತಿ ಸಂದೇಶಗಳನ್ನು ರೂಪಿಸುವ, ಇಟ್ಟುಕೊಳ್ಳುವ, ಪ್ರಸಾರ ಮಾಡುವ … Continued

ಬಸವನಗುಡಿಯ ರೇವಣ್ಣ ನಿವಾಸದಲ್ಲಿ ಸ್ಥಳ ಮಹಜರು ನಡೆಸಿದ ಎಸ್‌ಐಟಿ

ಬೆಂಗಳೂರು: ಪ್ರಜ್ವಲ್‌ ರೇವಣ್ಣ ಅವರ ಆರೋಪಿತ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಪೊಲೀಸರು ಬಸವನಗುಡಿಯಲ್ಲಿರುವ ಎಚ್.ಡಿ. ರೇವಣ್ಣ ನಿವಾಸಕ್ಕೆ ಲೈಂಗಿಕ ದೌರ್ಜನ್ಯ ಸಂತ್ರಸ್ತೆಯನ್ನು ಕರೆತಂದು ಸ್ಥಳ ಮಹಜರು ನಡೆಸಿದ್ದಾರೆ. ಸೋಮವಾರ ಬೆಳಿಗ್ಗೆ ರೇವಣ್ಣ ಅವರ ನಿವಾಸಕ್ಕೆ ನಾಲ್ವರು ಮಹಿಳಾ ಅಧಿಕಾರಿಗಳು ಸೇರಿದಂತೆ ೬ ಮಂದಿ ಅಧಿಕಾರಿಗಳು ಆಗಮಿಸಿ ಸಂತ್ರಸ್ತೆಯನ್ನು ಕರೆತಂದರು. ನಂತರ ಸಂತ್ರಸ್ತೆ ಹೇಳಿಕೆ … Continued

ಮೇ 7ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ?

ಬೆಂಗಳೂರು : ವಿದೇಶದಲ್ಲಿರುವ ಲೈಂಗಿಕ ದೌರ್ಜನ್ಯ ವೀಡಿಯೊದ ಪ್ರಕರಣ ಪ್ರಮುಖ ಆರೋಪಿ ಸಂಸದ ಪ್ರಜ್ವಲ್‌ ರೇವಣ್ಣ ಅವರು ಮೇ 7ರಂದು ರಾಜ್ಯದಲ್ಲಿ ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ಮುಗಿದ ನಂತರ ಭಾರತಕ್ಕೆ ವಾಪಸಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ಮುಗಿದ ದಿನವೇ, ಅಂದರೆ ಏಪ್ರಿಲ್ 26ರ ಮಧ್ಯರಾತ್ರಿಯೇ ಪ್ರಜ್ವಲ್‌ … Continued

ಲೈಂಗಿಕ ದೌರ್ಜನ್ಯ ಪ್ರಕರಣ: ಮಹಿಳೆ ಅಪಹರಣ ಪ್ರಕರಣದಲ್ಲಿ ಎಚ್.ಡಿ. ರೇವಣ್ಣ ಬಂಧನ

ಬೆಂಗಳೂರು : ಪ್ರಜ್ವಲ್ ರೇವಣ್ಣ ಮಹಿಳೆಯರ ಮೇಲೆ ನಡೆಸಿದ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಹೊಂದಿಕೊಂಡ ಕ್ರಿಮಿನಲ್ ಪ್ರಕರಣದಲ್ಲಿ ಸಂತ್ರಸ್ತೆಯೊಬ್ಬರ ಅಪಹರಣದ ಪ್ರತ್ಯೇಕ ಎಫ್ಐಆರ್‌ಗೆ ಸಂಬಂಧಿಸಿದಂತೆ ಹೊಳೆನರಸೀಪುರ ಶಾಸಕ‌ ಎಚ್.ಡಿ. ರೇವಣ್ಣ ಅವರಿಗೆ ನ್ಯಾಯಾಲಯ ಮಧ್ಯಂತರ ನಿರೀಕ್ಷಣಾ ಜಾಮೀನು ನಿರಾಕರಿಸಿದ ಬೆನ್ನಲ್ಲೇ ಎಸ್‌ಐಟಿ ಅಧಿಕಾರಿಗಳು ಶನಿವಾರ ಸಂಜೆ ಅವರನ್ನು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಪದ್ಮನಾಭ ನಗರದಲ್ಲಿರುವ ಮಾಜಿ … Continued

ರೇವಣ್ಣ, ಪ್ರಜ್ವಲ್ ಎಸ್‌ಐಟಿ ವಿಚಾರಣೆಗೆ ಹಾಜರಾಗದಿದ್ದರೆ ಕಾನೂನು ಪ್ರಕಾರ ಬಂಧನ: ಗೃಹ ಸಚಿವ ಪರಮೇಶ್ವರ

ಕಲಬುರಗಿ: ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಎರಡನೇ ಪ್ರಕರಣ ದಾಖಲಾಗಿದ್ದು, ಈ ಪ್ರಕರಣಗಳಲ್ಲಿ ಯಾರನ್ನೂ ರಕ್ಷಿಸುವ ಮಾತೇ ಇಲ್ಲ. ನೋಟಿಸ್‌ಗೆ ಬೆಲೆ ನೀಡಿ ರೇವಣ್ಣ ಅವರು ತನಿಖೆಗೆ ಹಾಜರಾಗಬೇಕು. ಇಲ್ಲದಿದ್ದರೆ ಕಾನೂನಿನಂತೆ ಅವರನ್ನು ಬಂಧಿಸಲಾಗುತ್ತದೆ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದ್ದಾರೆ. ಕಲಬುರಗಿ ನಗರ ಕಾಂಗ್ರೆಸ್‌ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಗತ್ತೇ … Continued

ಎಸ್‌ಐಟಿ ನೋಟಿಸ್​: ವಿಚಾರಣೆಗೆ ಹಾಜರಾಗಲು ಸಮಯ ಕೇಳಿದ ಪ್ರಜ್ವಲ್‌ ; ಪತ್ರದಲ್ಲೇನಿದೆ..?

ಹಾಸನ : ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣದ ಕುರಿತಾದ ಎಸ್​ಐಟಿ ತನಿಖೆ ಚುರುಕುಗೊಂಡಿದ್ದು, ಪ್ರಜ್ವಲ್‌ ರೇವಣ್ಣ ಹಾಗೂ ಅವರ ತಂದೆ ಶಾಸಕ ಎಚ್‌.ಡಿ.ರೇವಣ್ಣ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಸ್‌ ಜಾರಿ ಮಾಡಿದೆ. ಇದರ ಬೆನ್ನಲ್ಲೇ ವಿಚಾರಣೆಗೆ ಹಾಜರಾಗಲು ಏಳು ದಿನ ಕಾಲಾವಕಾಶ ಬೇಕು ಎಂದು … Continued