ಕೇಂದ್ರದ ಅಬಕಾರಿ ಸುಂಕ ಕಡಿತ ಮಾಡಿದ್ರೂ ಕೆಲವು ರಾಜ್ಯಗಳು ಪೆಟ್ರೋಲ್, ಡೀಸೆಲ್ ಮೇಲಿನ ಸ್ಥಳೀಯ ತೆರಿಗೆ ಕಡಿಮೆ ಮಾಡಿಲ್ಲ: ಪ್ರಧಾನಿ ಮೋದಿ
ನವದೆಹಲಿ: ಕಳೆದ ನವೆಂಬರ್‌ನಲ್ಲಿ ಕೇಂದ್ರವು ಅಬಕಾರಿ ಸುಂಕವನ್ನು ಕಡಿತಗೊಳಿಸಿದ್ದರೂ ಕೆಲವು ರಾಜ್ಯಗಳು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ಕಡಿಮೆ ಮಾಡದೆ “ಅನ್ಯಾಯ” ಮಾಡಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಹೇಳಿದ್ದಾರೆ. ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯ ಕುರಿತು ಮುಖ್ಯಮಂತ್ರಿಗಳೊಂದಿಗಿನ ಸಂವಾದದಲ್ಲಿ ಮಾತನಾಡಿದ ಮೋದಿ, ಜಾಗತಿಕ ಪರಿಸ್ಥಿತಿಯಿಂದಾಗಿ ಜನರು ಎದುರಿಸುತ್ತಿರುವ ಸವಾಲುಗಳ ಪ್ರತ್ಯೇಕ ವಿಷಯವನ್ನು ಈ … Continued