“ಇದು ಪ್ರಜಾಪ್ರಭುತ್ವಕ್ಕೆ ಸಿಕ್ಕ ಜಯ” : ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನಂತರ ಸೋನಂ ವಾಂಗ್ಚುಕ್ ಮೊದಲ ಪ್ರತಿಕ್ರಿಯೆ

ನವದೆಹಲಿ: ದೇಶಾದ್ಯಂತ ತೀವ್ರ ಕಾವು ಪಡೆದುಕೊಂಡಿದ್ದ ಪಶ್ನೆಪತ್ರಿಕೆ ಸೋರಿಕೆ ಪ್ರಕರಣ ಹಾಗೂ ಪರೀಕ್ಷಾ ಅಕ್ರಮಗಳ ವಿವಾದ ಕೊನೆಗೂ ತಾರ್ಕಿಕ ಅಂತ್ಯ ಕಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಈ ನಿರ್ಧಾರವನ್ನು ಹೆಸರಾಂತ ಶಿಕ್ಷಣ ತಜ್ಞ ಹಾಗೂ ಸಾಮಾಜಿಕ ಹೋರಾಟಗಾರ ಲಡಾಖ್‌ನ ಸೋನಮ್ ವಾಂಗ್ಚುಕ್ “ಪ್ರಜಾಪ್ರಭುತ್ವದ ನಿಜವಾದ ಜಯ” ಎಂದು … Continued

ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯಗೊಳಿಸಲು ಸರ್ಕಾರ ಮನವೊಲಿಸಿದ್ದು ಹೇಗೆ..? ಮೋದಿ ಸಂದೇಶ, ಮಧ್ಯರಾತ್ರಿಯ 3 ಮಹತ್ವದ ಭರವಸೆಗಳು….

ನವದೆಹಲಿ: ಸಾಮಾಜಿಕ ಹೋರಾಟಗಾರ ಸೋನಂ ವಾಂಗ್ಚುಕ್ ಅವರು ಕೇಂದ್ರ ಸರ್ಕಾರದಿಂದ ಭರವಸೆಗಳು ದೊರೆತ ಹಿನ್ನೆಲೆಯಲ್ಲಿ 26 ದಿನಗಳ ಕಾಲ ನಡೆಸಿದ್ದ ಉಪವಾಸ ಸತ್ಯಾಗ್ರಹವನ್ನು ಗುರುವಾರ ರಾತ್ರಿ ಅಂತ್ಯಗೊಳಿಸಿದ್ದಾರೆ. ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಹಾಗೂ ಪ್ರಧಾನಮಂತ್ರಿ ಕಚೇರಿಯ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಅವರ ಸಮ್ಮುಖದಲ್ಲಿ ಅವರು ಗುರುವಾರ … Continued

ವಿಡಿಯೊ | 26 ದಿನಗಳ ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್ಚುಕ್ ; ಕೇಂದ್ರದ ಭರವಸೆ ಬಳಿಕ ಸೂಪ್ ಸೇವನೆ

ನವದೆಹಲಿ: 26 ದಿನಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸಿದ್ದ ಹವಾಮಾನ ಕಾರ್ಯಕರ್ತ ಸೋನಂ ವಾಂಗ್ಚುಕ್ ಅವರು ತಮ್ಮ ಉಪವಾಸವನ್ನು ಅಂತ್ಯಗೊಳಿಸಿದ್ದಾರೆ. ಗುರುಗ್ರಾಮದ ಮೆದಾಂತ ಆಸ್ಪತ್ರೆಯಲ್ಲಿ ಕೇಂದ್ರ ಸಚಿವರು, ಬೆಂಬಲಿಗರು, ವೈದ್ಯರು ಹಾಗೂ ಕುಟುಂಬ ಸದಸ್ಯರ ಸಮ್ಮುಖದಲ್ಲಿ ಅವರು ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಿದ್ದಾರೆ. ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರು ಕೇಂದ್ರ ಸರ್ಕಾರದ ಭರವಸೆಗಳ ಬಳಿಕ … Continued

ನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತು

ನವದೆಹಲಿ: ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಶಿಕ್ಷಣ ವ್ಯವಸ್ಥೆಯಲ್ಲಿ ಹೆಚ್ಚು ಪಾರದರ್ಶಕತೆ ಹಾಗೂ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕಾನೂನು ಕ್ರಮ ಕೈಗೊಳ್ಳುವುದಿಲ್ಲ ಎಂಬ ಸ್ಪಷ್ಟ ಭರವಸೆಯನ್ನು ಕೇಂದ್ರ ಸರ್ಕಾರ ನೀಡಿದರೆ ತಾವು ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಲು ಸಿದ್ಧ ಎಂದು ಸಾಮಾಜಿಕ ಹೋರಾಟಗಾರ ಸೋನಂ … Continued

ಸೋನಂ ವಾಂಗ್ಚುಕ್ ಉಪವಾಸ ಅಂತ್ಯಗೊಳಿಸಲು ಸಿದ್ಧ ಎಂದ ಪತ್ನಿ ; ಆದರೆ ಅದಕ್ಕೆ ಎರಡು ಷರತ್ತುಗಳು…

ನವದೆಹಲಿ: ಶಿಕ್ಷಣ ಕ್ಷೇತ್ರದಲ್ಲಿ ಪಾರದರ್ಶಕತೆಗೆ ಒತ್ತಾಯಿಸಿ ಹಾಗೂ ಇತ್ತೀಚಿನ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಕಳೆದ ಮೂರು ವಾರಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಹವಾಮಾನ ಹೋರಾಟಗಾರ ಹಾಗೂ ಶಿಕ್ಷಣ ತಜ್ಞ ಸೋನಮ್‌ ವಾಂಗ್ಚುಕ್‌ (Sonam Wangchuk) ಅವರು ತಮ್ಮ ಉಪವಾಸವನ್ನು ಸೋಮವಾರ ಅಂತ್ಯಗೊಳಿಸುವ ಸಾಧ್ಯತೆ ಇದೆ ಎಂದು ಅವರ … Continued

ವಿಡಿಯೊ | ಸಿಜೆಪಿ ಸಂಸ್ಥಾಪಕ ಅಭಿಜೀತ ದೀಪ್ಕೆ ಮುಖಕ್ಕೆ ಶಾಯಿ ಎಸೆದ ಮಹಿಳೆ ; ಹೈಡ್ರಾಮಾಕ್ಕೆ ಸಾಕ್ಷಿಯಾದ ಜಂತರ್ ಮಂತರ್‌ ಪ್ರತಿಭಟನೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ನೀಟ್ (NEET) ಪರೀಕ್ಷೆ ವಿವಾದಕ್ಕೆ ಸಂಬಂಧಿಸಿದ ಪ್ರತಿಭಟನೆಯ ವೇಳೆ, ಕಾಕ್ರೋಚ್‌ ಜನತಾ ಪಾರ್ಟಿ (CJP) ಸಂಸ್ಥಾಪಕ ಅಭಿಜೀತ ದಿಪ್ಕೆ ಅವರ ಮೇಲೆ ಮಹಿಳೆಯೊಬ್ಬರು ಶನಿವಾರ ನೀಲಿ ಶಾಯಿ ಮಾದರಿಯ ದ್ರವವನ್ನು ಎರಚಿದ ಘಟನೆ ಭಾರೀ ಗದ್ದಲಕ್ಕೆ ಕಾರಣವಾಯಿತು. ಹತ್ತಿರದಲ್ಲಿ ನಿಂತಿದ್ದ ಕೆಲವು ಜನರ ಟಿ-ಶರ್ಟ್‌ಗಳ ಮೇಲೂ ಶಾಯಿ ಬಿದ್ದಿದೆ. … Continued

ಉಪವಾಸ ಸತ್ಯಾಗ್ರಹದ 21ನೇ ದಿನ : ಜಂತರ್ ಮಂತರ್‌ನಿಂದ ಸೋನಂ ವಾಂಗ್ಚುಕ್‌ರನ್ನು ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ನವದೆಹಲಿ: ದೆಹಲಿ ಜಂತರ್ ಮಂತರ್‌ನಲ್ಲಿ ಕಳೆದ 20 ದಿನಗಳಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸಾಮಾಜಿಕ ಹೋರಾಟಗಾರ ಸೋನಂ ವಾಂಗ್ಚುಕ್ ಅವರನ್ನು ಶನಿವಾರ ಮುಂಜಾನೆ ಪೊಲೀಸರು ಪ್ರತಿಭಟನಾ ಸ್ಥಳದಿಂದ ತೆರವುಗೊಳಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸೋನಂ ವಾಂಗ್ಚುಕ್ ಅವರು ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ … Continued

ಸೋನಂ ವಾಂಗ್ಚುಕ್ ಆರೋಗ್ಯದ ಮೇಲೆ ಪ್ರತಿದಿನ ನಿಗಾ ವಹಿಸಿ ; ಕೇಂದ್ರ–ದೆಹಲಿ ಸರ್ಕಾರಗಳಿಗೆ ದೆಹಲಿ ಹೈಕೋರ್ಟ್‌ ನಿರ್ದೇಶನ

ನವದೆಹಲಿ: ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸಾಮಾಜಿಕ ಹೋರಾಟಗಾರ ಸೋನಂ ವಾಂಗ್ಚುಕ್ ಅವರ ಆರೋಗ್ಯ ಹಾಗೂ ವೈದ್ಯಕೀಯ ಸ್ಥಿತಿಯನ್ನು ಪ್ರತಿದಿನ ಸರ್ಕಾರಿ ವೈದ್ಯರು ಪರಿಶೀಲಿಸಬೇಕು ಮತ್ತು ಅವರ ಜೀವ ರಕ್ಷಿಸಲು ಅಗತ್ಯವಿರುವ ಎಲ್ಲ ವೈದ್ಯಕೀಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ದೆಹಲಿ ಹೈಕೋರ್ಟ್ ಗುರುವಾರ ಕೇಂದ್ರ ಹಾಗೂ ದೆಹಲಿ ಸರ್ಕಾರಗಳಿಗೆ ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ದೇವೇಂದ್ರಕುಮಾರ ಉಪಾಧ್ಯಾಯ … Continued

ರಾಜ್ಯ ಸ್ಥಾನಮಾನಕ್ಕೆ ಒತ್ತಾಯಿಸಿ ಲಡಾಖಿನಲ್ಲಿ ಹಿಂಸಾತ್ಮಕ ಪ್ರತಿಭಟನೆಗಳ ನಂತರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಬಂಧನ

ನವದೆಹಲಿ: ಲಡಾಖ್‌ನ ಲೇಹ್‌ನಲ್ಲಿ ರಾಜ್ಯಸ್ಥಾನ ಮಾನಕ್ಕೆ ಆಗ್ರಹಿಸಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ ನಾಲ್ವರು ಸಾವಿಗೀಡಾಗಿ, 70 ಕ್ಕೂ ಹೆಚ್ಚು ಜನರು ಗಾಯಗೊಂಡ ಎರಡು ದಿನಗಳ ನಂತರ, ಹವಾಮಾನ ಕಾರ್ಯಕರ್ತರಾದ ಸೋನಮ್ ವಾಂಗ್‌ಚುಕ್ ಅವರನ್ನು ಶುಕ್ರವಾರ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಬಂಧಿಸಲಾಗಿದೆ. ಲಡಾಖ್‌ಗೆ ರಾಜ್ಯ ಸ್ಥಾನಮಾನ ಕೋರುತ್ತಿರುವ ಪ್ರತಿಭಟನಾಕಾರರನ್ನು ಪ್ರಚೋದಿಸಿದ ಆರೋಪದ ಮೇಲೆ … Continued

ಲಡಾಖಿನಲ್ಲಿ ಹಿಂಸಾತ್ಮಕ ಪ್ರತಿಭಟನೆ ನಂತರ ಸೋನಮ್ ವಾಂಗ್‌ಚುಕ್ ಎನ್‌ಜಿಒದ ವಿದೇಶಿ ನಿಧಿ ಪರವಾನಗಿ ರದ್ದು ಮಾಡಿದ ಕೇಂದ್ರ ಸರ್ಕಾರ

ನವದೆಹಲಿ: ಗೃಹ ಸಚಿವಾಲಯವು ಗುರುವಾರ ಲಡಾಖ್‌ನ ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಚಳವಳಿ(SECMOL)ಯ ಎಫ್‌ಸಿಆರ್‌ಎ (FCRA) ನೋಂದಣಿಯನ್ನು ರದ್ದುಗೊಳಿಸಿದೆ. ಇದು ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆ (FCRA), 2010 ರ ಅಡಿಯಲ್ಲಿ ಅನೇಕ ಉಲ್ಲಂಘನೆಗಳನ್ನು ಉಲ್ಲೇಖಿಸಿದೆ. ಲಡಾಖ್‌ನಲ್ಲಿ ಹಿಂಸಾತ್ಮಕ ಪ್ರತಿಭಟನೆಗಳಲ್ಲಿ 4 ಜನರು ಸಾವಿಗೀಡಾದ ಒಂದು ದಿನದ ನಂತರ, ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ನೇತೃತ್ವದ … Continued