“ಒಂದೊಮ್ಮೆ ಪ್ರಣವ್ ಮುಖರ್ಜಿ ಪ್ರಧಾನಿಯಾಗಿದ್ದರೆ…”: ಕಾಂಗ್ರೆಸ್ 2014ರ ಹೀನಾಯ ಸೋಲಿನ ಬಗ್ಗೆ ಹಿರಿಯ ನಾಯಕ ಮಣಿಶಂಕರ ಅಯ್ಯರ್

ನವದೆಹಲಿ : ಯುಪಿಎ-2 ಸರ್ಕಾರದ ಅವಧಿಯಲ್ಲಿ ಪ್ರಣಬ್‌ ಮುಖರ್ಜಿ ಅವರನ್ನು ಪ್ರಧಾನಿ ಮತ್ತು ಡಾ. ಮನಮೋಹನ್‌ ಸಿಂಗ್‌ ಅವರನ್ನು ರಾಷ್ಟ್ರಪತಿಯನ್ನಾಗಿ ಮಾಡಿದ್ದರೆ, 2014ರ ಸಾರ್ವತ್ರಿಕ ಚುನಾವಣೆಯ ಫಲಿತಾಂಶವೇ ಬೇರೆಯಾಗುತ್ತಿತ್ತು ಮತ್ತು ಕಾಂಗ್ರೆಸ್‌ ಅಷ್ಟು ಹೀನಾಯ ಸೋಲನ್ನು ಅನುಭವಿಸುತ್ತಿರಲಿಲ್ಲ ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ ಅಯ್ಯರ್ ಹೇಳಿದ್ದಾರೆ. ಮಾಜಿ ಕೇಂದ್ರ ಸಚಿವರಾದ ಮಣಿಶಂಕರ ಅಯ್ಯರ್ ಅವರು, … Continued

ವಯನಾಡು ಲೋಕಸಭಾ ಕ್ಷೇತ್ರದ ಉಪಚುನಾವಣೆ ; ಕಾಂಗ್ರೆಸ್ ನಿಂದ ಪ್ರಿಯಾಂಕಾ ಗಾಂಧಿ ಹೆಸರು ಘೋಷಣೆ

ನವದೆಹಲಿ: ಚುನಾವಣಾ ಆಯೋಗವು (EC) ವಯನಾಡು ಮತ್ತು ನಾಂದೇಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆಯನ್ನು ಮಂಗಳವಾರ ಘೋಷಿಸಿದೆ. ಕೇರಳದ ವಯನಾಡು ಲೋಕಸಭಾ ಕ್ಷೇತ್ರಕ್ಕೆ ನವೆಂಬರ್ 13ರಂದು ಉಪಚುನಾವಣೆ ನಡೆಯಲಿದ್ದು, ಕಾಂಗ್ರೆಸ್‌ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ವಯನಾಡು ಲೋಕಸಭಾ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧೆ ಮಾಡಲಿದ್ದಾರೆ. ಈ ಬಗ್ಗೆ ಮಂಗಳವಾರ (ಅಕ್ಟೋಬರ್ 15) ಎಐಸಿಸಿ ಅಧಿಕೃತವಾಗಿ ಘೋಷಿಸಿದೆ. … Continued

‘ಬ್ರಿಟಿಷ್ ಪ್ರಜೆ’ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ರಕ್ಷಣೆ : ಪ್ರಧಾನಿ ಮೋದಿ, ಅಮಿತ್ ಶಾಗೆ ʼಕಾನೂನು ಕ್ರಮʼದ ಎಚ್ಚರಿಕೆ ನೀಡಿದ ಸುಬ್ರಮಣಿಯನ್ ಸ್ವಾಮಿ

ನವದೆಹಲಿ: ಬಿಜೆಪಿಯ ಹಿರಿಯ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಸುಬ್ರಮಣಿಯನ್ ಸ್ವಾಮಿ ಶನಿವಾರ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗುವುದಾಗಿ ಎಚ್ಚರಿಕೆ ನೀಡಿದ್ದಾರೆ. ಅವರಿಬ್ಬರು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ರಕ್ಷಿಸುತ್ತಿದ್ದಾರೆ ಎಂದು ಸುಬ್ರಮಣಿಯನ್ ಸ್ವಾಮಿ ಆರೋಪಿಸಿದ್ದಾರೆ. … Continued

ರಾಯ್ಬರೇಲಿ ಲೋಕಸಭಾ ಕ್ಷೇತ್ರ ಉಳಿಸಿಕೊಂಡ ರಾಹುಲ್‌ ಗಾಂಧಿ : ವಯನಾಡಿನಿಂದ ತಂಗಿ ಪ್ರಿಯಾಂಕಾ ಗಾಂಧಿ ಸ್ಪರ್ಧೆ…!

ನವದೆಹಲಿ: ಎರಡು ಕ್ಷೇತ್ರಗಳಲ್ಲಿ ರಾಹುಲ್‌ ಗಾಂಧಿ ಯಾವ ಕ್ಷೇತ್ರವನ್ನು ಉಳಿಸಿಕೊಳ್ಳುತ್ತಾರೆ ಎಂಬ ಊಹಾಪೋಹಗಳಿಗೆ ಸೋಮವಾರ (ಜೂನ್‌ 17) ತೆರೆಬಿದ್ದಿದೆ. ರಾಹುಲ್ ಗಾಂಧಿ ತಮ್ಮ ಕುಟುಂಬದ ಭದ್ರಕೋಟೆಯಾದ ರಾಯ್‌ಬರೇಲಿ ಲೋಕಸಭಾ ಕ್ಷೇತ್ರವನ್ನು ಉಳಿಸಿಕೊಳ್ಳಲು ನಿರ್ಧರಿಸಿದ್ದು, ವಯನಾಡ ಕ್ಷೇತ್ರವನ್ನು ತೊರೆಯಲಿದ್ದಾರೆ. ಆದರೆ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ಅವರು ವಯನಾಡಿನಿಂದ ಉಪ ಚುನಾವಣೆಯಲ್ಲಿ ಕಣಕ್ಕಿಳಿಯಲಿದ್ದಾರೆ. ವಯಾನಾಡಿನಿಂದ ಪ್ರಿಯಾಂಕಾ ಗಾಂಧಿ … Continued

ಕಾಂಗ್ರೆಸ್‍ನ ಸಂಸದೀಯ ಪಕ್ಷದ ನಾಯಾಕಿಯಾಗಿ ಸೋನಿಯಾ ಗಾಂಧಿ ಪುನಃ ಆಯ್ಕೆ

ನವದೆಹಲಿ: ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ಶನಿವಾರ ನಡೆದ ಕಾಂಗ್ರೆಸ್ ಪಕ್ಷದ ಸಂಸದೀಯ ಪಕ್ಷದ ಸಭೆಯಲ್ಲಿ ಪಕ್ಷದ ಮಾಜಿ ಅಧ್ಯಕ್ಷೆ ಮತ್ತು ರಾಜ್ಯಸಭಾ ಸಂಸದೆ ಸೋನಿಯಾ ಗಾಂಧಿ ಅವರನ್ನು ಪಕ್ಷದ ಸಂಸದೀಯ ಪಾರ್ಟಿ ಅಧ್ಯಕ್ಷರಾಗಿ (Congress Parliamentary Party Chairperson) ಅವಿರೋಧವಾಗಿ ಮರು ಆಯ್ಕೆ ಮಾಡಲಾಯಿತು. ಅವರ ಹೆಸರನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ನಾಯಕರಾದ … Continued

ಲೋಕಸಭೆ ಚುನಾವಣೆ ; ಮತ್ತೊಂದು ಕ್ಷೇತ್ರದಿಂದಲೂ ರಾಹುಲ್‌ ಗಾಂಧಿ ಸ್ಪರ್ಧೆ

ನವದೆಹಲಿ : ರಾಹುಲ್‌ ಗಾಂಧಿ ಅಮೇಥಿಯನ್ನು ಮರಳಿ ಗೆಲ್ಲಲು ಸಂಪೂರ್ಣ ಪ್ರಯತ್ನ ನಡೆಸಲಿದ್ದಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಕಾಂಗ್ರೆಸ್‌ ಪಕ್ಷವು ರಾಹುಲ್ ಗಾಂಧಿ ಅವರನ್ನು ರಾಯ್ಬರೇಲಿಯಿಂದ ಕಣಕ್ಕಿಳಿಸುವುದಾಗಿ ಪ್ರಕಟಿಸಿದೆ. ಕಾಂಗ್ರೆಸ್ ಶುಕ್ರವಾರ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ರಾಯ್ಬರೇಲಿಯಿಂದ ರಾಹುಲ್ ಗಾಂಧಿ ಮತ್ತು ಅಮೇಥಿಯಿಂದ ಕಿಶೋರಿ ಲಾಲ್ ಶರ್ಮಾ ಅವರನ್ನು ಕಣಕ್ಕಿಳಿಸಿದೆ. ಉತ್ತರ ಪ್ರದೇಶದ … Continued

ರಾಯಬರೇಲಿಯಿಂದ ಅಕ್ಕನ ವಿರುದ್ಧ ಸ್ಪರ್ಧಿಸಲು ಬಿಜೆಪಿ ನೀಡಿದ್ದ ಆಫರ್‌ ತಿರಸ್ಕರಿಸಿದರೇ ವರುಣ್‌ ಗಾಂಧಿ..?

ನವದೆಹಲಿ: ಕಾಂಗ್ರೆಸ್ ನಾಯಕರಾದ ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿ ಅವರ ಚಿಕ್ಕಪ್ಪನ ಮಗ ಹಾಗೂ ಬಿಜೆಪಿ ನಾಯಕ ವರುಣ್ ಗಾಂಧಿ ಅವರು ಉತ್ತರ ಪ್ರದೇಶದ ಗಾಂಧಿ ಮನೆತನದ ಭದ್ರಕೋಟೆ ರಾಯ್ ಬರೇಲಿ ಕ್ಷೇತ್ರದಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ತಮ್ಮ ಪಕ್ಷ ನೀಡಿದ್ದ ಪ್ರಸ್ತಾಪವನ್ನು ತಿರಸ್ಕರಿಸಿದ್ದಾರೆ ಎಂದು ವರದಿಯಾಗಿದೆ. ಬಿಜೆಪಿಯು ಪ್ರಸ್ತಾವನೆ ಮುಂದಿಟ್ಟ ನಂತರ ಒಂದು ವಾರದವರೆಗೆ … Continued

ಲೋಕಸಭೆ ಚುನಾವಣೆ : ಕಾಂಗ್ರೆಸ್‌ ಸ್ಟಾರ್‌ ಪ್ರಚಾರಕರ ಪಟ್ಟಿ ಬಿಡುಗಡೆ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ (Congress)ನಿಂದ ಸ್ಟಾರ್‌ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಲಾಗಿದೆ. ರ್ನಾಟಕದಲ್ಲಿ ಏಪ್ರಿಲ್ 26 ಹಾಗೂ ಮೇ 7 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯುತ್ತಿದ್ದು, ಕಾಂಗ್ರೆಸ್‌ ಒಟ್ಟು 40 ಸ್ಟಾರ್‌ ಪ್ರಚಾರಕರ ಹೆಸರನ್ನು ಘೋಷಣೆ ಮಾಡಿದೆ. ಪಟ್ಟಿಯಲ್ಲಿ ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ರಾಹುಲ್ ಗಾಂಧಿ ಸಹ ಸೇರಿದ್ದಾರೆ. … Continued

ರಾಜ್ಯಸಭೆ ಚುನಾವಣೆ: ರಾಜಸ್ಥಾನದಿಂದ ಸೋನಿಯಾ ಗಾಂಧಿ ಸ್ಪರ್ಧೆ, ಇಂದು ನಾಮಪತ್ರ ಸಲ್ಲಿಕೆ

ನವದೆಹಲಿ: ಐದು ಬಾರಿ ಲೋಕಸಭಾ ಸದಸ್ಯೆಯಾಗಿರುವ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಫೆಬ್ರವರಿ 27 ರಂದು ನಡೆಯುವ ರಾಜ್ಯಸಭಾ ಚುನಾವಣೆಯಲ್ಲಿ ರಾಜಸ್ಥಾನದಿಂದ ಸ್ಪರ್ಧಿಸಲಿದ್ದಾರೆ ಎಂದು ಪಕ್ಷವು ಬುಧವಾರ ಪ್ರಕಟಿಸಿದೆ. ಅವರು, ಇಂದು (ಬುಧವಾರ) ನಾಮಪತ್ರ ಸಲ್ಲಿಸಿದ್ದಾರೆ. ತಮ್ಮ ಪುತ್ರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗಾಗಿ ಅವರು ಉತ್ತರ ಪ್ರದೇಶದ ರಾಯ್‌ ಬರೇಲಿ ಲೋಕಸಭಾ … Continued

ಲೋಕಸಭೆ ಚುನಾವಣೆ ಸ್ಪರ್ಧಾ ಕಣಕ್ಕೆ ಪ್ರಿಯಾಂಕಾ ಗಾಂಧಿ ಎಂಟ್ರಿ..? ಮಗಳಿಗಾಗಿ ರಾಯ್ಬರೇಲಿ ಕ್ಷೇತ್ರ ಬಿಟ್ಕೊಟ್ಟು ರಾಜ್ಯಸಭೆಗೆ ಸ್ಪರ್ಧೆ ಮಾಡ್ತಾರಾ ಸೋನಿಯಾ ಗಾಂಧಿ..?!

ನವದೆಹಲಿ: ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಅವರು ರಾಜಸ್ಥಾನದಿಂದ ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸಬಹುದು ಎಂದು ಮೂಲಗಳು ತಿಳಿಸಿವೆ. ಪ್ರಸ್ತುತ, ಅವರು ರಾಯ್‌ಬರೇಲಿ ಕ್ಷೇತ್ರದ ಲೋಕಸಭಾ ಸದಸ್ಯರಾಗಿದ್ದಾರೆ. ಬಿಹಾರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜ್ಯಸಭಾ ಸಂಸದ ಅಖಿಲೇಶ್ ಪ್ರಸಾದ್ ಸಿಂಗ್ ನಾಮನಿರ್ದೇಶನಗೊಳ್ಳಬಹುದು. ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ನಿಂದ ಕಣಕ್ಕಿಳಿಯುವ ಸಾಧ್ಯತೆಯಿರುವ ಇತರ ನಾಯಕರಲ್ಲಿ ಅಭಿಷೇಕ್ ಮನು ಸಿಂಘ್ವಿ ಮತ್ತು … Continued