ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ ಗಾಂಧಿ, ರಾಹುಲ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ ಇ.ಡಿ.

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಸಂಸದರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಮತ್ತು ಪಕ್ಷದ ಸಾಗರೋತ್ತರ ಘಟಕದ ಮುಖ್ಯಸ್ಥ ಸ್ಯಾಮ್ ಪಿತ್ರೋಡಾ ವಿರುದ್ಧ ಜಾರಿ ನಿರ್ದೇಶನಾಲಯ ಮಂಗಳವಾರ ಆರೋಪಪಟ್ಟಿ ಸಲ್ಲಿಸಿದೆ. ವಿಶೇಷ ನ್ಯಾಯಾಲಯವು ಏಪ್ರಿಲ್ 25 ಅನ್ನು ವಿಚಾರಣೆಯ ದಿನಾಂಕವಾಗಿ ನಿಗದಿಪಡಿಸಿದೆ. “ಪ್ರಸ್ತುತ ಪ್ರಾಸಿಕ್ಯೂಷನ್ ದೂರನ್ನು ಮುಂದಿನ ವಿಚಾರಣೆಗೆ ತೆಗೆದುಕೊಳ್ಳಲಾಗುವುದು, … Continued

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ, ರಾಹುಲ್ ಗಾಂಧಿಗೆ ಸಂಬಂಧಿಸಿದ ಆಸ್ತಿಗಳ ಮುಟ್ಟುಗೋಲಿಗೆ ಮುಂದಾದ ಇ.ಡಿ.

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ಸಂಬಂಧಿಸಿದ ಆಸ್ತಿಗಳನ್ನು ವಶಕ್ಕೆ ಪಡೆಯಲು ಜಾರಿ ನಿರ್ದೇಶನಾಲಯ (ED) ಪ್ರಕ್ರಿಯೆಗಳನ್ನು ಪ್ರಾರಂಭಿಸಿದೆ. ಕಾಂಗ್ರೆಸ್ ನಿಯಂತ್ರಿತ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (AJL) ವಿರುದ್ಧದ ಹಣ ವರ್ಗಾವಣೆ ಪ್ರಕರಣದ ತನಿಖೆಯಲ್ಲಿ ಜಪ್ತಿ ಮಾಡಿದ್ದ ₹661 ಕೋಟಿ ಮೌಲ್ಯದ ಸ್ಥಿರ … Continued

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು ; ವರದಿ

ನವದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ಗುರುವಾರ (ಫೆಬ್ರವರಿ 20) ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. 78 ವರ್ಷದ ಸೋನಿಯಾ ಗಾಂಧಿ ಅವರನ್ನು ಗುರುವಾರ ಬೆಳಿಗ್ಗೆ ಆಸ್ಪತ್ರೆಗೆ ದಾಖಲಿಸಲಾಯಿತು ಆದರೆ ನಿಖರವಾದ ಸಮಯ ತಿಳಿದಿಲ್ಲ. ವೈದ್ಯರ ತಂಡ ಆಕೆಯ ಆರೋಗ್ಯದ ಮೇಲೆ ನಿಗಾ ಇರಿಸಿದೆ ಎಂದು ವರದಿ ತಿಳಿಸಿದೆ. ಅವರು ಶುಕ್ರವಾರ … Continued

ರಾಷ್ಟ್ರಪತಿ ವಿರುದ್ಧ ಹೇಳಿಕೆ: ಸೋನಿಯಾ ಗಾಂಧಿ ವಿರುದ್ಧ ಹಕ್ಕುಚ್ಯುತಿ ಮಂಡನೆ

ನವದೆಹಲಿ : ಬಿಜೆಪಿ ಸಂಸದರ ಗುಂಪು ಸೋಮವಾರ (ಫೆಬ್ರವರಿ 3) ಕಾಂಗ್ರೆಸ್ ಸಂಸದೆ ಸೋನಿಯಾ ಗಾಂಧಿ ವಿರುದ್ಧ ಸಂಸತ್ತಿನ ವಿಶೇಷ ಹಕ್ಕು ಚ್ಯುತಿ ನಿರ್ಣಯ ಮಂಡಿಸಿದ್ದಾರೆ. ಕಳೆದ ವಾರ ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಅವಹೇಳನಕಾರಿ ಮತ್ತು ನಿಂದೆಯ ಪದಗಳನ್ನು ಬಳಸಿದ್ದಾರೆ ಎಂದು ಆರೋಪಿಸಿ ವಿಶೇಷ ಹಕ್ಕು ಚ್ಯುತಿ  … Continued

ರಾಷ್ಟ್ರಪತಿ ಮುರ್ಮು ಬಗ್ಗೆ ಹೇಳಿಕೆ; ಸೋನಿಯಾ ಗಾಂಧಿಗೆ ಎದುರಾಯ್ತು ಸಂಕಷ್ಟ

ಪಾಟ್ನಾ: ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರನ್ನು ‘ಪೂವರ್ ಲೇಡಿ’ (Poor lady) ಎಂದು ಕರೆದ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ (Sonia Gandhi) ವಿರುದ್ಧ ಬಿಹಾರದ ಮುಜಫರ್‌ಪುರದಲ್ಲಿ ಪ್ರಕರಣ ದಾಖಲಾಗಿದೆ. ವಕೀಲ ಸುಧೀರ ಓಜಾ ಎಂಬವರು ಸಿಜಿಎಂ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದು, ಫೆ. 10ರಂದು ಪ್ರಕರಣದ ವಿಚಾರಣೆ ನಡೆಯಲಿದೆ. ಗೌರವಾನ್ವಿತ ರಾಷ್ಟ್ರಪತಿ ಅವರ … Continued

ಹುದ್ದೆಯ ಘನತೆಗೆ ಧಕ್ಕೆ ತಂದಿದೆ; ಸೋನಿಯಾ ಗಾಂಧಿ ಹೇಳಿಕೆಗೆ ರಾಷ್ಟ್ರಪತಿ ಭವನ

ನವದೆಹಲಿ : ಸಂಸತ್ತಿನ ಬಜೆಟ್‌ ಅಧಿವೇಶನದಲ್ಲಿ ಉಭಯ ಸದನಗಳನ್ನುದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಾತನಾಡಿದ್ದಕ್ಕೆ ಸಂಸತ್‌ನ ಹೊರಗೆ ಪ್ರತಿಕ್ರಿಯೆ ನೀಡಿವಾಗ ರಾಜ್ಯಸಭಾ ಸದಸ್ಯೆ ಸೋನಿಯಾ ಗಾಂಧಿ ಪೂರ್‌ ಥಿಂಗ್‌ (Poor thing) ಎಂದು ಹೇಳಿರುವುದು ಈಗ ವಿವಾದಕ್ಕೆ ಕಾರಣವಾಗಿದೆ. ರಾಷ್ಟ್ರಪತಿಗಳ ಭಾಷಣ ಬಳಿಕ ಸಂಸತ್‌ ಹೊರಗಡೆ ಬಂದ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ, ಪ್ರಿಯಾಂಕ … Continued

“ಒಂದೊಮ್ಮೆ ಪ್ರಣವ್ ಮುಖರ್ಜಿ ಪ್ರಧಾನಿಯಾಗಿದ್ದರೆ…”: ಕಾಂಗ್ರೆಸ್ 2014ರ ಹೀನಾಯ ಸೋಲಿನ ಬಗ್ಗೆ ಹಿರಿಯ ನಾಯಕ ಮಣಿಶಂಕರ ಅಯ್ಯರ್

ನವದೆಹಲಿ : ಯುಪಿಎ-2 ಸರ್ಕಾರದ ಅವಧಿಯಲ್ಲಿ ಪ್ರಣಬ್‌ ಮುಖರ್ಜಿ ಅವರನ್ನು ಪ್ರಧಾನಿ ಮತ್ತು ಡಾ. ಮನಮೋಹನ್‌ ಸಿಂಗ್‌ ಅವರನ್ನು ರಾಷ್ಟ್ರಪತಿಯನ್ನಾಗಿ ಮಾಡಿದ್ದರೆ, 2014ರ ಸಾರ್ವತ್ರಿಕ ಚುನಾವಣೆಯ ಫಲಿತಾಂಶವೇ ಬೇರೆಯಾಗುತ್ತಿತ್ತು ಮತ್ತು ಕಾಂಗ್ರೆಸ್‌ ಅಷ್ಟು ಹೀನಾಯ ಸೋಲನ್ನು ಅನುಭವಿಸುತ್ತಿರಲಿಲ್ಲ ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ ಅಯ್ಯರ್ ಹೇಳಿದ್ದಾರೆ. ಮಾಜಿ ಕೇಂದ್ರ ಸಚಿವರಾದ ಮಣಿಶಂಕರ ಅಯ್ಯರ್ ಅವರು, … Continued

ವಯನಾಡು ಲೋಕಸಭಾ ಕ್ಷೇತ್ರದ ಉಪಚುನಾವಣೆ ; ಕಾಂಗ್ರೆಸ್ ನಿಂದ ಪ್ರಿಯಾಂಕಾ ಗಾಂಧಿ ಹೆಸರು ಘೋಷಣೆ

ನವದೆಹಲಿ: ಚುನಾವಣಾ ಆಯೋಗವು (EC) ವಯನಾಡು ಮತ್ತು ನಾಂದೇಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆಯನ್ನು ಮಂಗಳವಾರ ಘೋಷಿಸಿದೆ. ಕೇರಳದ ವಯನಾಡು ಲೋಕಸಭಾ ಕ್ಷೇತ್ರಕ್ಕೆ ನವೆಂಬರ್ 13ರಂದು ಉಪಚುನಾವಣೆ ನಡೆಯಲಿದ್ದು, ಕಾಂಗ್ರೆಸ್‌ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ವಯನಾಡು ಲೋಕಸಭಾ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧೆ ಮಾಡಲಿದ್ದಾರೆ. ಈ ಬಗ್ಗೆ ಮಂಗಳವಾರ (ಅಕ್ಟೋಬರ್ 15) ಎಐಸಿಸಿ ಅಧಿಕೃತವಾಗಿ ಘೋಷಿಸಿದೆ. … Continued

‘ಬ್ರಿಟಿಷ್ ಪ್ರಜೆ’ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ರಕ್ಷಣೆ : ಪ್ರಧಾನಿ ಮೋದಿ, ಅಮಿತ್ ಶಾಗೆ ʼಕಾನೂನು ಕ್ರಮʼದ ಎಚ್ಚರಿಕೆ ನೀಡಿದ ಸುಬ್ರಮಣಿಯನ್ ಸ್ವಾಮಿ

ನವದೆಹಲಿ: ಬಿಜೆಪಿಯ ಹಿರಿಯ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಸುಬ್ರಮಣಿಯನ್ ಸ್ವಾಮಿ ಶನಿವಾರ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗುವುದಾಗಿ ಎಚ್ಚರಿಕೆ ನೀಡಿದ್ದಾರೆ. ಅವರಿಬ್ಬರು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ರಕ್ಷಿಸುತ್ತಿದ್ದಾರೆ ಎಂದು ಸುಬ್ರಮಣಿಯನ್ ಸ್ವಾಮಿ ಆರೋಪಿಸಿದ್ದಾರೆ. … Continued

ರಾಯ್ಬರೇಲಿ ಲೋಕಸಭಾ ಕ್ಷೇತ್ರ ಉಳಿಸಿಕೊಂಡ ರಾಹುಲ್‌ ಗಾಂಧಿ : ವಯನಾಡಿನಿಂದ ತಂಗಿ ಪ್ರಿಯಾಂಕಾ ಗಾಂಧಿ ಸ್ಪರ್ಧೆ…!

ನವದೆಹಲಿ: ಎರಡು ಕ್ಷೇತ್ರಗಳಲ್ಲಿ ರಾಹುಲ್‌ ಗಾಂಧಿ ಯಾವ ಕ್ಷೇತ್ರವನ್ನು ಉಳಿಸಿಕೊಳ್ಳುತ್ತಾರೆ ಎಂಬ ಊಹಾಪೋಹಗಳಿಗೆ ಸೋಮವಾರ (ಜೂನ್‌ 17) ತೆರೆಬಿದ್ದಿದೆ. ರಾಹುಲ್ ಗಾಂಧಿ ತಮ್ಮ ಕುಟುಂಬದ ಭದ್ರಕೋಟೆಯಾದ ರಾಯ್‌ಬರೇಲಿ ಲೋಕಸಭಾ ಕ್ಷೇತ್ರವನ್ನು ಉಳಿಸಿಕೊಳ್ಳಲು ನಿರ್ಧರಿಸಿದ್ದು, ವಯನಾಡ ಕ್ಷೇತ್ರವನ್ನು ತೊರೆಯಲಿದ್ದಾರೆ. ಆದರೆ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ಅವರು ವಯನಾಡಿನಿಂದ ಉಪ ಚುನಾವಣೆಯಲ್ಲಿ ಕಣಕ್ಕಿಳಿಯಲಿದ್ದಾರೆ. ವಯಾನಾಡಿನಿಂದ ಪ್ರಿಯಾಂಕಾ ಗಾಂಧಿ … Continued