ದ್ವಿತೀಯ ಪಿಯು ಫಲಿತಾಂಶ ಪ್ರಕಟ, ಶೇ 81.15 ಮಂದಿ ಉತ್ತೀರ್ಣ ; ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ

ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ -1ರ ಫಲಿತಾಂಶವನ್ನು (2nd PUC Result) ಬುಧವಾರ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. ಒಟ್ಟಾರೆ 81.15ರಷ್ಟು %ಮಂದಿ ಉತ್ತೀರ್ಣರಾಗಿದ್ದಾರೆ. ಹೊಸದಾಗಿ ಪರೀಕ್ಷೆ ಬರೆದವರು ಶೇ.84.59 ಫಲಿತಾಂಶ ದಾಖಲಿಸಿದ್ದಾರೆ. ವಿಜ್ಞಾನ ವಿಭಾಗದಲ್ಲಿ 2,49,927 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 1,74,315 ವಿದ್ಯಾರ್ಥಿಗಳು, ಕಲಾ ವಿಭಾಗದಲ್ಲಿ … Continued

ಬೆಳ್ತಂಗಡಿ : ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ ; ಮೂವರು ಸಾವು

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಗೋಳಿಯಂಗಡಿ ಸಮೀಪದ ಕಡ್ತ್ಯಾರು ಬಳಿ ಪಟಾಕಿ ಗೋದಾಮಿನಲ್ಲಿ ಸ್ಫೋಟಗೊಂಡು ಮೂವರು ಕಾರ್ಮಿಕರು ಮೃತಪಟ್ಟು, ಅನೇಕ ಮಂದಿ ಗಾಯಗೊಂಡ ಘಟನೆ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಕೇರಳದ ಸ್ವಾಮಿ(55), ವರ್ಗೀಸ್‌ (68), ಹಾಸನದ ಅರಸೀಕೆರೆ ನಿವಾಸಿ ಚೇತನ್(25) ಎಂದು ಗುರುತಿಸಲಾಗಿದೆ, ದಿನೇಶ ಹಾಸನ, ಕಿರಣ ಹಾಸನ, ಕುಮಾರ ಅರಸೀಕೆರೆ, ಕಲ್ಲೇಶ … Continued

ಹೊಳೆಗೆ ಬಿದ್ದ ಕಾರು : ಓರ್ವ ಸಾವು, ಮತ್ತೋರ್ವ ಗಂಭೀರ

ಮಂಗಳೂರು : ಚಾಲಕನ ನಿಯಂತ್ರಣ ತಪ್ಪಿದ ಕಾರು ಸೇತುವೆಗೆ ಡಿಕ್ಕಿ ಹೊಡೆದು ಕೆಳಗೆ ನೀರಿಗೆ ಬಿದ್ದು ಓರ್ವ ಮೃತಪಟ್ಟು ಇನ್ನೋರ್ವ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕು ಶಿರಾಡಿ ಗ್ರಾಮದ ಅಡ್ಡಹೊಳೆ ಎಂಬಲ್ಲಿ ಸಂಭವಿಸಿದೆ. ಕಾರಿನಲ್ಲಿದ್ದ ತಮಿಳುನಾಡಿನ ಹೊಸೂರು ಕೃಷ್ಣಗಿರಿ ಮೂಲದ ಹರಿಪ್ರಸಾದ (44) ಎಂಬವರ ಮೃತಪಟ್ಟಿದ್ದು, ಗಾಯಗೊಂಡ … Continued

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತದ ಜಾರಿ ಮಾಡಿದ್ದ ನಿಷೇಧಾಜ್ಞೆ ಆಗಸ್ಟ್‌ 6ರ ವರೆಗೆ ವಿಸ್ತರಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂವರು ಹತ್ಯೆಯ ಬಳಿಕ 144 ಸೆಕ್ಷನ್ ಅಡಿಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಈಗ ಈ ನಿಷೇಧಾಜ್ಞೆಯನ್ನು ಆಗಸ್ಟ್ 6ರ ವರೆಗೆ ವಿಸ್ತರಿಸಲಾಗಿದೆ. ಈ ಸಂಬಂಧ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದು, ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಮುಂದುವರೆಸಲಾಗಿದೆ ಎಂದು ತಿಳಿಸಿದ್ದಾರೆ. … Continued

ಕೊಡಗು, ದಕ್ಷಿಣ ಕನ್ನಡ ಜಿಲ್ಲೆಯ ಕೆಲವೆಡೆ ಕಂಪಿಸಿದ ಭೂಮಿ

ಮಡಿಕೇರಿ/ಮಂಗಳೂರು: ಕೊಡಗು, ದಕ್ಷಿಣ ಕನ್ನಡ ಜಿಲ್ಲೆಗಳ ಗಡಿ ಪ್ರದೇಶದಲ್ಲಿ ಮಂಗಳವಾರ ಬೆಳಿಗ್ಗೆ ಭೂಕಂಪನದ ಅನುಭವವಾಗಿದ್ದು, ದಕ್ಷಿಣ ಕನ್ನಡಕ್ಕೆ ಹೊಂದಿಕೊಂಡಿರುವ ಕೇರಳದ ಕಾಸರಗೋಡು ಜಿಲ್ಲೆಯಲ್ಲಿಯೂ ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಹೇಳಲಾಗಿದೆ. ಈ ಭೂಕಂಪನದಲ್ಲಿ ಯಾರಿಗೂ ಹಾನಿಯಾದ ಬಗ್ಗೆ ವರದಿಯಾಗಿಲ್ಲ. ಆದರೆ, ಹಲವು ಸೆಕೆಂಡ್ ಗಳಷ್ಟು ಸಮಯ ಕಂಪನದ ಅನುಭವವಾಗಿದೆ. ಸುಮಾರು 50 ಕಿ.ಮೀ ಪ್ರದೇಶದವರೆಗೂ … Continued