ಎಸ್‌ ಎಸ್‌ ಎಲ್‌ ಸಿ | ಕುಮಟಾ ಗಿಬ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿನಿ ಭೂಮಿಕಾ ಹೆಗಡೆ ರಾಜ್ಯಕ್ಕೆ ದ್ವಿತೀಯ

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಕೆನರಾ ಎಜ್ಯಕೇಶನ್ ಸೊಸೈಟಿಯ ಗಿಬ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಭೂಮಿಕಾ ನಾಗರಾಜ ಹೆಗಡೆ ಶೇ. ೯೯.೮೪ ಅಂಕದೊಂದಿಗೆ ರಾಜ್ಯಕ್ಕೆ ದ್ವಿತೀಯ ಹಾಗೂ ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿದ್ದಾಳೆ. ಗಿಬ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯು ಎಸ್‌ಎಸ್‌ಎಲ್‌ಸಿಯಲ್ಲಿ ಒಟ್ಟು ಶೇ. ೯೮.೧೪ ಫಳಿತಾಂಶ ದಾಖಲಿಸಿದ್ದು ೨೫ ಮಂದಿ … Continued

ಎಸ್‌ಎಸ್‌ಎಲ್‌ಸಿ ಪರೀಕ್ಷೆ : 625ಕ್ಕೆ 625 ಅಂಕ ಪಡೆದ 22 ಟಾಪರ್ಸ್‌ ಪಟ್ಟಿ

ಬೆಂಗಳೂರು : 2024-25ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ ಫಲಿತಾಂಶ ಶೇ.62.34ರಷ್ಟಾಗಿದೆ. ಇದು ಕಳೆದ ವರ್ಷಕ್ಕಿಂತ 8% ಹೆಚ್ಚಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ (ಶೇ.91.12), ಉಡುಪಿ ಜಿಲ್ಲೆ 2ನೇ ಸ್ಥಾನ (ಶೇ.89.96), ಉತ್ತರ ಕನ್ನಡ ಜಿಲ್ಲೆಗೆ 3ನೇ ಸ್ಥಾನ (ಶೇ.83.19), … Continued

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ ; 22 ವಿದ್ಯಾರ್ಥಿಗಳು ರಾಜ್ಯಕ್ಕೆ ಪ್ರಥಮ

ಬೆಂಗಳೂರು: ಕರ್ನಾಟಕದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ (SSLC result 2025) ಪ್ರಕಟವಾಗಿದ್ದು, ರಾಜ್ಯದಲ್ಲಿ ಈ ಬಾರಿ 66.14%ರಷ್ಟು ಫಲಿತಾಂಶ ಬಂದಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಪತ್ರಿಕಾಗೋಷ್ಠಿ ನಡೆಸಿ ಇದರ ಫಲಿತಾಂಶದ ವಿವರಗಳನ್ನು ನೀಡಿದ್ದಾರೆ.ಫಲಿತಾಂಶ ಕಳೆದ ವರ್ಷಕ್ಕಿಂತ ಶೇ.8ರಷ್ಟು ಹೆಚ್ಚಾಗಿದೆ. 22 ವಿದ್ಯಾರ್ಥಿಗಳು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದು, 625 ಅಂಕಗಳಲ್ಲಿ 625 ಅಂಕ ಪಡೆದಿದ್ದಾರೆ. … Continued

ನಾಳೆ (ಮೇ 2) ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ…; ನೋಡುವುದು ಹೇಗೆ…?

ಬೆಂಗಳೂರು : ಮೇ 2ರಂದು (ಶುಕ್ರವಾರ) ರಾಜ್ಯದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ (SSLC result 2025) ಪ್ರಕಟವಾಗಲಿದೆ. ಪರೀಕ್ಷೆ ಮೌಲ್ಯಮಾಪನ ಕಾರ್ಯ ಪೂರ್ಣಗೊಳಿಸಿರುವ ಕರ್ನಾಟಕ ರಾಜ್ಯ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮೇ 2ರಂದು ಫಲಿತಾಂಶ ಪ್ರಕಟಿಸಲಿದೆ. ಶುಕ್ರವಾರ (ಮೇ 2)ಬೆಳಗ್ಗೆ 11:30ಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಲಿದ್ದು, ಮಧ್ಯಾಹ್ನ … Continued

ಪ್ಲೀಸ್ ಪಾಸ್ ಮಾಡಿ, ನನ್ನ ಲವ್ ನಿಮ್ಮ ಕೈಯಲ್ಲಿದೆ : ಎಸ್‌ಎಸ್‌ಎಲ್‌ಸಿ ಉತ್ತರ ಪತ್ರಿಕೆಯಲ್ಲಿ 500 ರೂ. ಇಟ್ಟು ವಿದ್ಯಾರ್ಥಿಯ ವಿಚಿತ್ರ ಮನವಿ…!

ಬೆಳಗಾವಿ : ರಾಜ್ಯದಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಯುತ್ತಿದ್ದು, ವಿದ್ಯಾರ್ಥಿಗಳು ಉತ್ತರ ಪತ್ರಿಕೆಯಲ್ಲಿ ವಿಚಿತ್ರ ಬೇಡಿಕೆಯಿಟ್ಟು ಬರೆದ ಪತ್ರಗಳು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ (Chikkodi) ಮೌಲ್ಯಮಾಪನ ಕೇಂದ್ರಗಳಲ್ಲಿ ಪತ್ತೆಯಾಗಿದೆ. ವಿದ್ಯಾರ್ಥಿಯೊನ್ನ ತನ್ನ ಉತ್ತರ ಪತ್ರಿಕೆಗಳ ಒಳಗೆ ನಗದು ಹಣ ಮತ್ತು ತನ್ನ “ಪ್ರೇಮ”ದ ಬಗ್ಗೆಯೂ ಬರೆದು ತನ್ನನ್ನು ಪಾಸ್‌ ಮಾಡುವಂತೆ ವಿನಂತಿಸಿಕೊಂಡಿದ್ದಾನೆ. … Continued

ಗಮನಿಸಿ….| ಎಸ್​ ಎಸ್ ​ಎಲ್​ ಸಿ, ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು : ರಾಜ್ಯದಲ್ಲಿ 2024-25ನೇ ಸಾಲಿನ ಶೈಕ್ಷಣಿಕ ವರ್ಷದ ಎಸ್ಎಸ್ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ. ಮಾರ್ಚ್ 21ರಿಂದ ಏಪ್ರಿಲ್ 04ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ -1 ನಡೆಯಲಿದೆ ಹಾಗೂ ಮಾರ್ಚ್ 1ರಿಂದ ಮಾರ್ಚ್ 20ರವರೆಗೆ ದ್ವಿತೀಯ ಪಿಯು ಪರೀಕ್ಷೆ -1 ನಡೆಯಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ … Continued

ಎಸ್ಎಸ್ಎಲ್‌ಸಿ (SSLC), ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು 2024-25 ನೇ ದ್ವೀತಿಯ ಪಿಯುಸಿ ಮತ್ತು ಎಸ್ಎಸ್ಎಲ್‌ಸಿ ವಾರ್ಷಿಕ ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ಪ್ರಕಟಿಸಿದ ತಾತ್ಕಾಲಿಕ ವೇಳಾಪಟ್ಟಿಯ ಪ್ರಕಾರ, ದ್ವಿತೀಯ ಪಿಯುಸಿ ಪರೀಕ್ಷೆಗಳು ಮಾರ್ಚ್ 1ರಿಂದ ಮಾರ್ಚ್ 19 ರ ವರೆಗೆ ಹಾಗೂ ಎಸ್ಎಸ್ಎಲ್‌ಸಿ ಪರೀಕ್ಷೆಗಳನ್ನು … Continued

ಎಸ್.ಎಸ್.ಎಲ್.ಸಿ. ಪರೀಕ್ಷೆ : ಧಾರವಾಡ ಜೆ ಎಸ್ ಎಸ್ ಸಂಸ್ಥೆ ಎಸ್‌ಎಂಇಎಂ ಶಾಲೆ ಉತ್ತಮ ಸಾಧನೆ

ಧಾರವಾಡ: ೨೦೨೩ -೨೪ ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಧಾರವಾಡದ ಸವದತ್ತಿ ರಸ್ತೆಯ ಮ್ಯತ್ಯುಂಜಯ ನಗರದ ಜೆ.ಎಸ್.ಎಸ್. ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಫಲಿತಾಂಶ ೯೮% ರಷ್ಟು ಆಗಿದ್ದು, ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಸ್ನೇಹಾ ಹಿರೇಮಠ ೯೫.೫೨% (೫೯೭) ಅಂಕಗಳನ್ನು ಪಡೆದು ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾಳೆ. ಹರ್ಷಿತಾ ಹೊಸೂರು ೯೫.೨೦% (೫೯೫) … Continued

ಎಸ್‌ಎಸ್‌ಎಲ್‌ಸಿ ಪರೀಕ್ಷೆ -2ರ ವೇಳಾಪಟ್ಟಿ ಬಿಡುಗಡೆ

ಬೆಂಗಳೂರು : 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಗುರುವಾರ (ಮೇ 9) ಪ್ರಕಟವಾಗಿದೆ. ಇದರ ಬೆನ್ನಲ್ಲೇ ಈಗ ಎಸ್‌ಎಸ್‌ಎಲ್‌ಸಿ ಪರೀಕ್ಷೆ -2ರ ವೇಳಾಪಟ್ಟಿ ಬಿಡುಗಡೆಯಾಗಿದೆ. ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಇನ್ನೂ ಉತ್ತಮ ಅಂಕಗಳನ್ನು ಗಳಿಸಲು ಪರೀಕ್ಷಾ ಮಂಡಳಿ ಅವಕಾಶ ಕಲ್ಪಿಸಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರ ವೇಳಾಪಟ್ಟಿ (SSLC 2 … Continued

ಎಸ್.ಎಸ್.ಎಲ್.ಸಿ ಫಲಿತಾಂಶ : ಕುಮಟಾ ಕೊಂಕಣ ಎಜ್ಯುಕೇಶನ್ ಟ್ರಸ್ಟ್ ಪ್ರೌಢಶಾಲೆ ನೂರಕ್ಕೆ ನೂರು ಫಲಿತಾಂಶ, ರಾಜ್ಯಮಟ್ಟದಲ್ಲಿ 7 ರ‍್ಯಾಂಕ್‌

 ಕುಮಟಾ : ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಕೊಂಕಣ ಎಜ್ಯುಕೇಶನ್ ಟ್ರಸ್ಟ್ ನ ಸಿ.ವಿ.ಎಸ್.ಕೆ ಪ್ರೌಢಶಾಲಾ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಶಾಲೆಗೆ ನೂರಕ್ಕೆ ನೂರು ಫಲಿತಾಂಶ ಬಂದಿದ್ದು, ರಾಜ್ಯಕ್ಕೆ ಏಳು ರ‍್ಯಾಂಕ್‌ ಗಳಿಸಿದ್ದಾರೆ. ಪರೀಕ್ಷೆ ಬರೆದ ಒಟ್ಟೂ 154 ವಿದ್ಯಾರ್ಥಿಗಳಲ್ಲಿ, 105 ಮಂದಿ ಡಿಸ್ಟಿಂಕ್ಷನ್‌, … Continued