ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ
ಬೆಂಗಳೂರು: 2020-21ನೇ ಸಾಲಿನ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಪೂರಕ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದ್ದಾರೆ. ಸೆಪ್ಟೆಂಬರ್ 27 ಹಾಗೂ 29ರಂದು ಪೂರಕ ನಡೆದಿತ್ತು. ಪರೀಕ್ಷೆಯಲ್ಲಿ ಒಟ್ಟು 53,155 ವಿದ್ಯಾರ್ಥಿಗಳು ಹಾಜರಾಗಿದ್ದರು. ಇದರಲ್ಲಿ 29,522 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಬಾರಿಯ ಪೂರಕ ಪರೀಕ್ಷೆಯಲ್ಲಿ ರಾಜ್ಯವು 55.54 ಪ್ರತಿಶತ ಫಲಿತಾಂಶ ದಾಖಲಿಸಿದೆ … Continued