ಕುಮಟಾ: ಡಾ. ಬಾಳಿಗಾ ಪ್ರೌಢ ಶಾಲೆ ವಿದ್ಯಾರ್ಥಿಗೆ ರಾಜ್ಯಮಟ್ಟದಲ್ಲಿ 2ನೇ ರ‍್ಯಾಂಕ್

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಡಾ. ಎ.ವಿ.ಬಾಳಿಗಾ ಪ್ರೌಢಶಾಲಾ ವಿದ್ಯಾರ್ಥಿಗಲ್ಲಿ ಹತ್ತನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ ಎರಡನೇ ರ‍್ಯಾಂಕ್  ಗಳಿಸಿದ್ದಾರೆ. ಒಟ್ಟು 30 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತಿದ್ದು ಅವರಲ್ಲಿ 25 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ ಉತ್ತೀರ್ಣರಾಗಿದ್ದಾರೆ. 5 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರಲ್ಲಿ ದಿಶಾಂತ ದಯಾನಂದ್ ನಾಯ್ಕ 625ಕ್ಕೆ 624 … Continued

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ

ಬೆಂಗಳೂರು: ಕರ್ನಾಟಕದ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು. ಶೇ..94.1 ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಏಳು ವಿದ್ಯಾರ್ಥಿಗಳು 625 ಕ್ಕೆ 625 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ದಾವಣಗೆರೆಯ ಭರತ, ರಾಯಚೂರಿನ ಸುಖದೇವ, ಚಿಕ್ಕೋಡಿಯ ಪ್ರಾರ್ಥನಾ, ಚಿಕ್ಕಮಗಳೂರಿನ ಬೃಂದಾ, ಉಡುಪಿಯ ಪ್ರೀತಂ, ವಿಜಯಪುರದ ಸೌಜನ್ಯ, ಬೆಂಗಳೂರು ಉತ್ತರದ ಧನುಷ್‌ … Continued

ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ (Karnataka SSLC Result 2026) ಗುರುವಾರ (ಏ.23) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ. ಈ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಮಾಹಿತಿ ನೀಡಿದ್ದು, ವಿದ್ಯಾರ್ಥಿಗಳು ಫಲಿತಾಂಶವನ್ನು https://karresults.nic.in/ ಮತ್ತು ಕರ್ನಾಟಕ ಒನ್‌ ಆ್ಯಪ್‌ (KarnatakaOne Mobile App) ಮೂಲಕ ನೋಡಬಹುದಾಗಿದೆ. ಹಾಗೂ ವಿದ್ಯಾರ್ಥಿಗಳ ನೊಂದಾಯಿತ … Continued

ಕುಂದಗೋಳ ; ಅಪ್ರಾಪ್ತರಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯ ಹತ್ಯೆ

ಹುಬ್ಬಳ್ಳಿ : ಧಾರವಾಡ (Dharawad) ಜಿಲ್ಲೆಯ ಕುಂದಗೋಳ ಪಟ್ಟಣದಲ್ಲಿ ಶಾಲಾ ಬಾಲಕರೇ ಎಸ್‌ಎಸ್‌ಎಲ್‌ಸಿ (SSLC) ವಿದ್ಯಾರ್ಥಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಧಾರವಾಡ ಜಿಲ್ಲೆಯ ಕುಂದಗೋಳ ಪಟ್ಟಣದಲ್ಲಿ ಬುಧವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ. ಬಾಲಕನನ್ನು ಮೂವರು ಬಾಲಕರು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ ಎನ್ನಲಾಗಿದ್ದು, ಈ ಸಂಬಂಧ ಮೂವರನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ. … Continued

ಎಸ್ ​ಎಸ್ ​ಎಲ್ ​​ಸಿ, ದ್ವಿತೀಯ ಪಿಯು ಪರೀಕ್ಷೆ 1, 2ರ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು : ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯು ಪರೀಕ್ಷೆಗಳ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ. ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯು ಪರೀಕ್ಷೆ-1 ಮತ್ತು 2ರ ಅಂತಿಮ ವೇಳಾಪಟ್ಟಿಯನ್ನು ಅಂತಿಮಗೊಳಿಸಿ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಬುಧವಾರ (ನವೆಂಬರ್ 5) ಪ್ರಕಟಿಸಿದೆ. ಎಸ್​​ಎಸ್​ಎಲ್​ಸಿ ಪರೀಕ್ಷೆ-1 ಮಾರ್ಚ್ 18ರಿಂದ ಏಪ್ರಿಲ್ 2ರವರೆಗೆ ನಡೆಯುಲಿದ್ದು, ಪಿಯುಸಿ ಪರೀಕ್ಷೆ-1ರ ಪರೀಕ್ಷೆಗಳು 2026ರ … Continued

ವಿದ್ಯಾರ್ಥಿಗಳ ಪಾಸಿಂಗ್‌ ಅಂಕ ಇಳಿಕೆ ಬೇಡ : ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ಸಭಾಪತಿ ಹೊರಟ್ಟಿ ಪತ್ರ

ಬೆಂಗಳೂರು: ಶಾಲಾ ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಇದ್ದ ಕನಿಷ್ಠ ಅಂಕಗಳನ್ನು 35ರಿಂದ 33ಕ್ಕೆ ಇಳಿಸಲು ಸರ್ಕಾರ ಮುಂದಾಗಿರುವುದಕ್ಕೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ (Basavaraj horatti) ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಧು ಬಂಗಾರಪ್ಪ ಅವರಿಗೆ ಪತ್ರ ಬರೆದಿರುವ ಬಸವರಾಜ ಹೊರಟ್ಟಿಯವರು 33 ಅಂಕದ ಬದಲಿಗೆ 35 ಅಂಕಗಳನ್ನೇ ನಿಗದಿಪಡಿಸಬೇಕು. ವಿದ್ಯಾರ್ಥಿಗಳ ಭವಿಷ್ಯತ್ತಿನ ದೃಷ್ಟಿಯಿಂದ … Continued

ಎಸ್ ಎಸ್ ಎಲ್ ಸಿ-ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ; ಪಾಸಿಂಗ್ ಮಾರ್ಕ್ಸ್ ಇಳಿಕೆ ಮಾಡಿದ ಸರ್ಕಾರ…!

ಬೆಂಗಳೂರು: ಹಬ್ಬದ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದೆ. ಇದೇ ವರ್ಷದಿಂದ ಜಾರಿಯಾಗುವಂತೆ, ಪಾಸ್‌ ಆಗಲು ಬೇಕಾದ ಕನಿಷ್ಠ ಅಂಕಗಳನ್ನು ಕಡಿಮೆ ಮಾಡಲಾಗಿದೆ. ಎಸ್‌ಎಸ್‌ಎಲ್‌ಸಿಯಲ್ಲಿ ಇನ್ಮುಂದೆ ಪಾಸ್‌ ಆಗಲು 33% ಅಂಕ ಪಡೆದರೆ ಸಾಕು ಹಾಗೂ ಪಿಯುಸಿಯಲ್ಲಿ ಉತ್ತೀರ್ಣರಾಗಲು 30% ಅಂಕ ಪಡೆದರೆ ತೇರ್ಗಡೆ ಆಗಲಿದ್ದಾರೆ. ಈ ವರೆಗೆ ಎಸ್‌ಎಸ್‌ಎಲ್‌ಸಿ ಯಲ್ಲಿ ಪಾಸ್‌ … Continued

ಎಸ್​ಎಸ್​ಎಲ್​ಸಿ, ದ್ವಿತೀಯ ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಬೆಂಗಳೂರು: 2026ರ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿ.ಯು.ಸಿ ಪರೀಕ್ಷೆ-1 ಮತ್ತು 2ರ ತಾತ್ಕಾಲಿಕ ವೇಳಾಪಟ್ಟಿಗಳನ್ನು (SSLC, PUC Exam) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಪ್ರಕಟಿಸಿದೆ. ದ್ವಿತೀಯ ಪಿಯುಸಿ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ದ್ವಿತೀಯ ಪಿಯುಸಿ ಪರೀಕ್ಷೆ-1, 2026ರ ಫೆ.28ರಿಂದ ಮಾ.17ರವರೆಗೆ ನಡೆಯಲಿದೆ. ದ್ವಿತೀಯ ಪಿಯುಸಿ ಪರೀಕ್ಷೆ-2, ಏ.25ರಿಂದ ಮೇ 9ರವರೆಗೆ ನಡೆಯಲಿದೆ.ದ್ವಿತೀಯ … Continued

ಎಸ್‌ ಎಸ್‌ ಎಲ್‌ ಸಿ | ಕುಮಟಾ ಗಿಬ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿನಿ ಭೂಮಿಕಾ ಹೆಗಡೆ ರಾಜ್ಯಕ್ಕೆ ದ್ವಿತೀಯ

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಕೆನರಾ ಎಜ್ಯಕೇಶನ್ ಸೊಸೈಟಿಯ ಗಿಬ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಭೂಮಿಕಾ ನಾಗರಾಜ ಹೆಗಡೆ ಶೇ. ೯೯.೮೪ ಅಂಕದೊಂದಿಗೆ ರಾಜ್ಯಕ್ಕೆ ದ್ವಿತೀಯ ಹಾಗೂ ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿದ್ದಾಳೆ. ಗಿಬ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯು ಎಸ್‌ಎಸ್‌ಎಲ್‌ಸಿಯಲ್ಲಿ ಒಟ್ಟು ಶೇ. ೯೮.೧೪ ಫಳಿತಾಂಶ ದಾಖಲಿಸಿದ್ದು ೨೫ ಮಂದಿ … Continued

ಎಸ್‌ಎಸ್‌ಎಲ್‌ಸಿ ಪರೀಕ್ಷೆ : 625ಕ್ಕೆ 625 ಅಂಕ ಪಡೆದ 22 ಟಾಪರ್ಸ್‌ ಪಟ್ಟಿ

ಬೆಂಗಳೂರು : 2024-25ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ ಫಲಿತಾಂಶ ಶೇ.62.34ರಷ್ಟಾಗಿದೆ. ಇದು ಕಳೆದ ವರ್ಷಕ್ಕಿಂತ 8% ಹೆಚ್ಚಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ (ಶೇ.91.12), ಉಡುಪಿ ಜಿಲ್ಲೆ 2ನೇ ಸ್ಥಾನ (ಶೇ.89.96), ಉತ್ತರ ಕನ್ನಡ ಜಿಲ್ಲೆಗೆ 3ನೇ ಸ್ಥಾನ (ಶೇ.83.19), … Continued