ವೀಡಿಯೊ…| ಮೊಬೈಲ್ ಕಸಿದುಕೊಂಡ ಶಿಕ್ಷಕನಿಗೆ ಕ್ಲಾಸ್​ ರೂಂನಲ್ಲೇ ಚಾಕುವಿನಿಂದ ಇರಿದ ವಿದ್ಯಾರ್ಥಿಗಳು…!

ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯ ಮಿಹಿನ್‌ಪುರವಾದಲ್ಲಿರುವ ನವಯುಗ ಇಂಟರ್ ಕಾಲೇಜಿನಲ್ಲಿ ಓದುತ್ತಿರುವ 11 ನೇ ತರಗತಿಯ ವಿದ್ಯಾರ್ಥಿ ಗುರುವಾರ (ಡಿಸೆಂಬರ್ 12) ತರಗತಿಯಲ್ಲಿ ತನ್ನ ಮೊಬೈಲ್ ಫೋನ್ ಜಪ್ತಿ ಮಾಡಿದ್ದಕ್ಕಾಗಿ ತನ್ನ ಇಂಗ್ಲಿಷ್ ಶಿಕ್ಷಕರಿಗೆ ಚಾಕುವಿನಿಂದ ಇರಿದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಶಿಕ್ಷಕ ರಾಜೇಂದ್ರ ಪ್ರಸಾದ ಅವರಿಗೆ ಗಂಭೀರ ಗಾಯಗಳಾಗಿದ್ದು, ಜಿಲ್ಲಾ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ … Continued

ಬೆಳಗಾವಿ : ಗಣೇಶ ವಿಸರ್ಜನೆ ವೇಳೆ ಮೂವರಿಗೆ ಚಾಕು ಇರಿತ

ಬೆಳಗಾವಿ: ಗಣೇಶ ಮೂರ್ತಿ ವಿಸರ್ಜನೆ ವೇಳೆ ಮಂಗಳವಾರ ತಡರಾತ್ರಿ (ಸೆ.17) ರಾಣಿ ಚನ್ನಮ್ಮ ವೃತ್ತದ ಬಳಿ ಮೂವರು ಯುವಕರಿಗೆ ಚಾಕು ಇರಿತ ಮಾಡಲಾಗಿದೆ ಎಂದು ವರದಿಯಾಗಿದೆ. ಭಾರೀ ಜನಸಂದಣಿಯಲ್ಲಿ ಡಾನ್ಸ್ ಮಾಡುತ್ತಿದ್ದ ವೇಳೆ ಕಾಲು ತಗುಲಿತು ಎಂಬ ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಇರಿಯಲಾಗಿದೆ ಎಂದು ಹೇಳಲಾಗುತ್ತಿದೆ. ಗಾಯಾಳುಗಳನ್ನು ಗಾಯಾಳುಗಳನ್ನು ಸಮಾಜ ಕಲ್ಯಾಣ ವಸತಿ ನಿಲಯದ ವಿದ್ಯಾರ್ಥಿಗಳಾದ … Continued

ವಿಜಯೋತ್ಸವ ಮುಗಿಸಿ ಹೋಗುತ್ತಿದ್ದ ಬಿಜೆಪಿ ಕಾರ್ಯಕರ್ತರಿಗೆ ಚೂರಿ ಇರಿತ : ಮೂವರು ವಶಕ್ಕೆ

ಮಂಗಳೂರು : ಬಿಜೆಪಿಯ ವಿಜಯೋತ್ಸವ ಮೆರವಣಿಗೆ ಬಳಿಕ ಪಕ್ಷದ ಇಬ್ಬರು ಕಾರ್ಯಕರ್ತರಿಗೆ ಅನ್ಯಕೋಮಿನ ಯುವಕರ ತಂಡವೊಂದು ಚೂರಿಯಿಂದ ಇರಿದು ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕೊಣಾಜೆ ಠಾಣಾ ವ್ಯಾಪ್ತಿಯ ಮುಡಿಪು ಸಮೀಪದ ಬೋಳಿಯಾರ್ ಬಳಿ ಭಾನುವಾರ ರಾತ್ರಿ ನಡೆದಿದೆ ಎಂದು ವರದಿಯಾಗಿದೆ. ಘಟನೆ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ತನಿಖೆ … Continued