ಹೈಕೋರ್ಟಿನಲ್ಲಿ ಹಿಜಾಬ್‌ ಪ್ರಕರಣ: ಹಿಜಾಬ್ ಕಡ್ಡಾಯವಲ್ಲ, ಆಯ್ಕೆಯಷ್ಟೇ: ಯಾವುದೇ ಉಡುಪು ಧರಿಸಲು ಮಹಿಳೆಯನ್ನು ಒತ್ತಾಯಿಸಲಾಗದು-ಹೈಕೋರ್ಟ್‌ ಮುಂದೆ ಸರ್ಕಾರದ ವಾದ

ಬೆಂಗಳೂರು: ಹಿಜಾಬ್ ಧರಿಸುವುದನ್ನು ಇಸ್ಲಾಮಿನ ಅತ್ಯಗತ್ಯ ಧಾರ್ಮಿಕ ಆಚರಣೆ ಎಂದು ಪರಿಗಣಿಸುವುದು ಮುಸ್ಲಿಂ ಮಹಿಳೆಯರನ್ನು ನಿರ್ದಿಷ್ಟ ಉಡುಪನ್ನು ಧರಿಸಲು ಒತ್ತಾಯಿಸಿದಂತಾಗುತ್ತದೆ ಎಂದು ರಾಜ್ಯ ಸರ್ಕಾರವು ಮಂಗಳವಾರ ಕರ್ನಾಟಕ ಹೈಕೋರ್ಟ್‌ಗೆ ತಿಳಿಸಿದೆ. ಹಿಜಾಬ್‌ ಧರಿಸಿ ಕಾಲೇಜಿಗೆ ತೆರಳುವುದನ್ನು ನಿರ್ಬಂಧಿಸಿ ರಾಜ್ಯ ಸರ್ಕಾರವು ಹೊರಡಿಸಿರುವ ಆದೇಶದ ಹಿನ್ನೆಲೆಯಲ್ಲಿ ತಮ್ಮನ್ನು ಕಾಲೇಜಿಗೆ ಪ್ರವೇಶಿಸಲು ಬಿಡುತ್ತಿಲ್ಲ ಎಂದು ಆಕ್ಷೇಪಿಸಿ ಮುಸ್ಲಿಮ್‌ ವಿದ್ಯಾರ್ಥಿನಿಯರು … Continued