ಪ್ರಧಾನಿ ಮೋದಿ ವಿರುದ್ಧ ‘ಭಯೋತ್ಪಾದಕ’ ಪದ ಬಳಕೆ : ಕಾಂಗ್ರೆಸ್‌ ಅಧ್ಯಕ್ಷ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ‘ಭಯೋತ್ಪಾದಕ’ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಮಂಗಳವಾರ ಚುನಾವಣಾ ಆಯೋಗಕ್ಕೆ (EC) ದೂರು ನೀಡಿದೆ. ಖರ್ಗೆ ಅವರು ತಮ್ಮ ಹೇಳಿಕೆಗೆ ಬಹಿರಂಗ ಕ್ಷಮೆಯಾಚಿಸುವಂತೆ ನಿರ್ದೇಶನ ನೀಡಬೇಕು ಎಂದು ಬಿಜೆಪಿ … Continued

ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ನವದೆಹಲಿ : ಕೇರಳದ ಚುನಾವಣಾ ರ್ಯಾಲಿಯಲ್ಲಿ ಗುಜರಾತ್ ಜನತೆಯ ಕುರಿತು ತಾವು ನೀಡಿದ್ದ ಹೇಳಿಕೆ ಭಾರೀ ವಿವಾದಕ್ಕೆ ಕಾರಣವಾದ ಬೆನ್ನಲ್ಲೇ, ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಹೇಳಿಕೆಗೆ “ವಿಷಾದ” ವ್ಯಕ್ತಪಡಿಸಿದ್ದಾರೆ. ಆದಾಗ್ಯೂ, ತಮ್ಮ ಮಾತುಗಳನ್ನು ಉದ್ದೇಶಪೂರ್ವಕವಾಗಿ ತಪ್ಪಾಗಿ ಅರ್ಥೈಸಲಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ. ಈ ಕುರಿತು ಎಕ್ಸ್ (ಟ್ವಿಟರ್) ಖಾತೆಯಲ್ಲಿ ಪೋಸ್ಟ್ … Continued

ಸೂರ್ಯ ಉದಯಿಸುವುದು ಎಷ್ಟು ಸತ್ಯವೋ ಸತೀಶ ಜಾರಕಿಹೊಳಿ ಸಿಎಂ ಆಗುವುದು ಅಷ್ಟೇ ಸತ್ಯ: ಸಂಚಲನ ಮೂಡಿಸಿದ ಸವದತ್ತಿ ಶಾಸಕರ ಹೇಳಿಕೆ

ಬೆಳಗಾವಿ: ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಸ್ಥಾನದ ಬಗ್ಗೆ ಮುಸುಕಿನ ಗುದ್ದಾಟ ಇನ್ನೂ ನಿಂತಿಲ್ಲ. ಕಾಂಗ್ರೆಸ್‌ ಶಾಸಕರು ತಮ್ಮ ನಾಯಕರು ಮುಖ್ಯಮಂತ್ರಿಯಾಗುತ್ತಾರೆ ಎಂದು ಹೇಳುವುದು ಈಗ ಹೊಸ ಟ್ರೆಂಡ್‌ ಆಗಿ ಪರಿಣಮಿಸಿದೆ. ಈಗ ಮತ್ತೊಬ್ಬ ಕಾಂಗ್ರೆಸ್‌ ಶಾಸಕ ಕೂಡ ಈ ಬಗ್ಗೆ ಮಾತನಾಡಿದ್ದಾರೆ. ಕಾಂಗ್ರೆಸ್‌ನಲ್ಲಿ ಮತ್ತೆ ಮುಂದಿನ ಮುಖ್ಯಮಂತ್ರಿ ಬಗ್ಗೆ ಚರ್ಚೆ ಮಾಡುವುದು ಬೇಡ ಎಂದು ಕಾಂಗ್ರೆಸ್‌ ಹೈಕಮಾಂಡ್‌ … Continued

ನಾನು ಕೇಂದ್ರ ಸಚಿವನಾಗಿದ್ದಾಗ ಯಡಿಯೂರಪ್ಪ ಮಂತ್ರಿಯೂ ಆಗಿರಲಿಲ್ಲ: ಯತ್ನಾಳ ಗುಡುಗು

posted in: ರಾಜ್ಯ | 0

ಮೈಸೂರು: ‌ಬಿಜೆಪಿಯಲ್ಲಿ ಬಿ.ಎಸ್‌.ಯಡಿಯೂರಪ್ಪ ಮಂತ್ರಿನೂ ಆಗಿರಲಿಲ್ಲ, ನಾನಾಗಲೇ ಕೇಂದ್ರ ಸಚಿವನಾಗಿದ್ದೆ ಎಂದು ಬಿಎಸ್‌ವೈ ವಿರುದ್ಧ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಮತ್ತೆ ಗುಡುಗಿದರು. ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಹಿಂದೆಯೇ ಮುಖ್ಯಮಂತ್ರಿ ಆಗಬೇಕಿತ್ತು. ನಾನೇ ಕೆಲವು ಅವಕಾಶಗಳನ್ನು ಮಿಸ್ ಮಾಡಿಕೊಂಡಿದ್ದೇನೆ. ಸದಾನಂದಗೌಡ, ಜಗದೀಶ್ ಶೆಟ್ಟರ್‌ಗಿಂತ ನಾನು ಹಿರಿಯ. ಯಡಿಯೂರಪ್ಪ ಮಂತ್ರಿನೂ ಆಗಿರಲಿಲ್ಲ, ಆಗಲೇ … Continued

ಸಿಡಿ ಪ್ರಕರಣ: ಎಸ್‌ಐಟಿಗೆ ಲಿಖಿತ ಹೇಳಿಕೆ ನೀಡಿದ ಕಲ್ಲಹಳ್ಳಿ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಸಂಬಂಧ ದೂರುದಾರ ದಿನೇಶ್ ಕಲ್ಲಹಳ್ಳಿ “ದೂರು ವೃತ್ತಾಂತ”ದ ಬಗ್ಗೆ ಎಸ್‌ಐಟಿಗೆ ಮೂರು ಪುಟಗಳ ಹೇಳಿಕೆ ನೀಡಿದ್ದಾರೆ. ಮಾ. 2ರಂದು ದಿನೇಶ್ ಕಲ್ಲಹಳ್ಳಿ ಜನ ಸಂಪನ್ಮೂಲ ಸಚಿವರಾಗಿದ್ದ ರಮೇಶ್ ಜಾರಕಿಹೊಳಿ ವಿರುದ್ಧ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಅವರಿಗೆ ದೂರು ನೀಡಿದ್ದರು. ದೂರು ದಾಖಲು ಮೊದಲೇ ಅಶ್ಲೀಲ … Continued

ಸಿಡಿ ಪ್ರಕರಣ: ಎಸ್‌ಐಟಿಗೆ ದಾಖಲಿಸಿದ ಜಾರಕಿಹೊಳಿ ಹೇಳಿಕೆಯಲ್ಲಿ ಇರುವುದೇನು?

ಬೆಂಗಳೂರು: ಸಚಿವ ಸ್ಥಾನಕ್ಕೆ ಕಾರಣವಾದ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಮೇಶ್ ಜಾರಕಿಹೊಳಿ ಅವರಿಂದ ವಿಶೇಷ ತನಿಖಾ ತಂಡ ಹೇಳಿಕೆ ದಾಖಲಿಸಿಕೊಂಡಿದೆ. ಅವರು ನೀಡಿದ ನಾಲ್ಕು ಪುಟಗಳ ಹೇಳಿಕೆಯಲ್ಲಿ ರಮೇಶ್ ಜಾರಕಿಹೊಳಿ ಕೆಲವು ಸ್ಫೋಟಕ ಸಂಗತಿಗಳನ್ನು ಬಿಚ್ಚಿಟ್ಟಿದ್ದಾರೆ ಎಂದು ತಿಳುದಬಂದಿದೆ. ಸದಾಶಿವನಗರ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದ ಅಂಶಗಳನ್ನೇ ಆಧಾರವಾಗಿಟ್ಟುಕೊಂಡು ಅವರು ತಮ್ಮ ಹೇಳಿಕೆ ದಾಖಲಿಸಿದ್ದು, … Continued