ಹುಬ್ಬಳ್ಳಿ: ವಿವಾದಿತ ಪೋಸ್ಟ್​ನಿಂದ ಹಳೇ ಹುಬ್ಬಳ್ಳಿ ಉದ್ವಿಗ್ನ, ಹಲವರ ಬಂಧನ, ನಿಷೇಧಾಜ್ಞೆ ಜಾರಿ

ಹುಬ್ಬಳ್ಳಿ: ಸಾಮಾಜಿಕ ಜಾಲತಾಣದಲ್ಲಿ ವಿವಾದಿತ ಪೋಸ್ಟ್‌ ಕಂಡುಬಂದ ನಂತರ ಹುಬ್ಬಳ್ಳಿಯಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಏ.20ರ ಬೆಳಗ್ಗೆ 6 ಗಂಟೆವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ನಗರದೆಲ್ಲೆಡೆ ಪೊಲೀಸರು ಹದ್ದಿನ ಕಣ್ಣು ಇಟ್ಟಿದ್ದಾರೆ. ಹೆಚ್ಚಿನ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ. ಕಿಡಿಗೇಡಿಗಳು  ಶನಿವಾರ ರಾತ್ರಿ ಹಳೇಹುಬ್ಬಳ್ಳಿ ಪೊಲೀಸ್‌ ಠಾಣೆ ಎದುರು ಕಲ್ಲು ತೂರಾಟ ನಡೆಸಿದ್ದು, ನೂರಾರು ಜನರು ಠಾಣೆಯ ಎದುರು ಜಮಾಯಿಸಿ … Continued

ದೆಹಲಿಯ ಹನುಮ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಹಿಂಸಾಚಾರ

ನವದೆಹಲಿ: ಶನಿವಾರ (ಏಪ್ರಿಲ್ 16) ದೆಹಲಿಯ ಜಹಾಂಗೀರ್ ಪುರಿ ಪ್ರದೇಶದಲ್ಲಿ ಹನುಮಾನ್ ಜಯಂತಿ ಮೆರವಣಿಗೆಯಲ್ಲಿ ಹಿಂಸಾಚಾರ ಸಂಭವಿಸಿದೆ. ಘಟನೆಯಲ್ಲಿ ಹಲವಾರು ವಾಹನಗಳನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿದ್ದು, ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಬಾಬು ಜಗಜೀವನ್ ರಾಮ್ ಸ್ಮಾರಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಪೊಲೀಸರು ಸ್ಥಳದಲ್ಲೇ ಪರಿಸ್ಥಿತಿ ನಿಭಾಯಿಸಲು ಯತ್ನಿಸಿದಾಗ ಅವರ ಮೇಲೂ ದುಷ್ಕರ್ಮಿಗಳು … Continued

ಕೋಲಾರ: ಮುಳಬಾಗಿಲಿನಲ್ಲಿ ಶ್ರೀರಾಮ ಶೋಭಾಯಾತ್ರೆ ವೇಳೆ ಕಲ್ಲುತೂರಾಟ, ಪೊಲೀಸರಿಂದ ಲಾಠಿ ಪ್ರಹಾರ

ಕೋಲಾರ: ಶ್ರೀರಾಮ ಶೋಭಾಯಾತ್ರೆಯ ಸಂದರ್ಭದಲ್ಲಿ ದುಷ್ಕರ್ಮಿಗಳ ಗುಂಪೊಂದು ಕಲ್ಲು ತೂರಾಟ ನಡೆಸಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ಪಟ್ಟಣದಲ್ಲಿ ಶುಕ್ರವಾರ ನಡೆದ ಬಗ್ಗೆ ವರದಿಯಾಗಿದೆ. ಕೋಲಾರ ಜಿಲ್ಲೆಯ ಮುಳಬಾಗಿಲು ಪಟ್ಟಣದಲ್ಲಿ ಶ್ರೀರಾಮನವಮಿ ಅಂಗವಾಗಿ ಬೃಹತ್ ಹಿಂದೂ ಶೋಭಾಯಾತ್ರೆ ಮತ್ತು ಶ್ರೀರಾಮ ಪಟ್ಟಾಭಿಷೇಕ, ಶ್ರೀರಾಮ ಕಲ್ಯಾಣೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಶೋಭಾಯಾತ್ರೆ ಹಾಗೂ ಬೃಹತ್ ಶ್ರೀರಾಮ ಮೂರ್ತಿ ಮೆರವಣಿಗೆ … Continued

ಬನಹಟ್ಟಿ :ಹಿಜಾಬ್ ವಿವಾದ, ಕಲ್ಲುತೂರಾಟ

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಬನಹಟ್ಟಿ ಪದವಿಪೂರ್ವ ಕಾಲೇಜಿನಲ್ಲಿ ಹಿಜಾಬ್ ಕುರಿತು ಎರಡು ವಿದ್ಯಾರ್ಥಿಗಳ ಗುಂಪಿನ ನಡುವೆ ವಿವಾದ ಉಂಟಾಗಿದ್ದು, ಇದು ವಿಕೋಪಕ್ಕೆ ಹೋಗಿ ಕಾಲೇಜು ಎದುರಿಗೆ ಕಲ್ಲು ತೂರಾಟ ನಡೆದ ಬಗ್ಗೆ ವರದಿಯಾಗಿದೆ. ಹೀಗಾಗಿ ಕಾಲೇಜಿಗೆ ರಜೆ ಘೋಷಿಸಲಾಗಿದೆ. ವಿದ್ಯಾರ್ಥಿಗಳನ್ನು ಮನೆಗೆ ಕಳಿಸಲು ಪ್ರಾಧ್ಯಾಪಕರು ಹರಸಾಹಸ ಪಡುತ್ತಿದ್ದು, ಶಾಲೆ ಹತ್ತಿರ ಜಮಾವಣೆಗೊಂಡ … Continued

ಮಹಾರಾಷ್ಟ್ರದಲ್ಲಿ, ಕನ್ನಡಿಗರ ವಾಹನಗಳ ಮೇಲೆ ಕಲ್ಲು ತೂರಾಟ; ಗಡಿಭಾಗದ ವರೆಗೆ ಮಾತ್ರ ಬಸ್ ಸಂಚಾರ

ಸಾಂಗ್ಲಿ/ಬೆಳಗಾವಿ: ಕರ್ನಾಟಕ ಹಾಗೂ ಮಹಾರಾಷ್ಟ್ರದ ನಡುವಿನ ಸಂಬಂಧದ ಬಿರುಕು ಹೆಚ್ಚಾಗುತ್ತಿದೆ. ಶಿವಸೇನಾ ಕಾರ್ಯಕರ್ತರು ಕರ್ನಾಟಕದ ಬಸ್‌ಗಳು ಹಾಗೂ ಖಾಸಗಿ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಹಾಗೆಯೇ ಅಂಗಡಿಗಳನ್ನೂ ಧ್ವಂಸಗೊಳಿಸಿದ್ದಾರೆ. ಬೆಂಗಳೂರಿನಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ಅವಮಾನ ಮಾಡಿದ ಬೆನ್ನಲ್ಲೇ ಈ ಬೆಳವಣಿಗೆ ಕಂಡುಬಂದಿದೆ. ಪರಿಣಾಮ ಮಹಾರಾಷ್ಟ್ರದಲ್ಲಿ ಶಿವಸೇನಾ ಕಾರ್ಯಕರ್ತರು ಕನ್ನಡಿಗರ ಹಾಗೂ ಕರ್ನಾಟಕದ … Continued

ಡಿಕೆಶಿ, ಬೆಂಬಲಿಗರ ಕಾರಿನ ಮೇಲೆ ರಮೇಶ ಜಾರಕಿಹೊಳಿ ಬೆಂಬಲಿಗರ ಕಲ್ಲು ತೂರಾಟ, ಗನ್‌ಮ್ಯಾನ್‌ ಎಳೆದಾಡಿದರು

ಬೆಳಗಾವಿ: ಬೆಳಗಾವಿ ಸಾಂಬ್ರಾ ಏರ್ಪೋರ್ಟ್ನಿಂದ ತೆರಳುವ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಅವರ ಬೆಂಬಲಿಗರ ವಾಹನಗಳ ಮೇಲೆ ಹಾಗೂ ಎಸ್ಕಾರ್ಟ್‌ ವಾಹನದ ಮೇಲೆ  ರಮೇಶ್ ಜಾರಕಿಹೊಳಿ ಬೆಂಬಲಿಗರು ಕಲ್ಲು ತೂರಾಟ ಮಾಡಿದ್ದಾರೆ. ಡಿ.ಕೆ. ಶಿವಕುಮಾರ ಬೆಂಗಲಿಗರ ಕಾರಿನ ಗಾಜುಗಳು ಪುಡಿಯಾಗಿದೆ. ಅಲ್ಲದೆ ಡಿ.ಕೆ.ಶಿವಕುಮಾರ ಅವರ ಗನ್‌ಮ್ಯಾನ್‌ ಅವರನ್ನು  ಎಳೆದಾಡಿದ್ದಾರೆ. ನಂತರ ಗನ್‌ಮ್ಯಾನ್‌ ಬೇರೆ … Continued