ಶಿಕ್ಷಕರ ಮೇಲಿನ ಪ್ರೀತಿಗೆ ರೈಲನ್ನೇ ತಡೆಹಿಡಿದ ವಿದ್ಯಾರ್ಥಿಗಳು…!

ಕೋಲ್ಕತ್ತಾ: ಶಿಕ್ಷಕರ ವರ್ಗಾವಣೆ ಮಾಡಬೇಡಿ ಎಂದು ಪ್ರತಿಭಟನೆ ನಡೆಸಿದ ಸುದ್ದಿಯನ್ನು ಕೇಳಿದ್ದೇವೆ. ಆದರೆ ಅದಕ್ಕಾಗಿ ರೈಲನ್ನೇ ತಡೆದರೆ…!ಇಥದ್ದೊಂದು ವಿದ್ಯಾಮನ ಕೋಲ್ಕತ್ತಾದ ಸೀಲ್ದಾಹ್ ದಕ್ಷಿಣ ವಿಭಾಗದ ಗೌರ್ದಾಹ್ ನಿಲ್ದಾಣದಲ್ಲಿ ವಿದ್ಯಾರ್ಥಿಗಳು ರೈಲು ತಡೆದು ಪ್ರತಿಭಟನೆ ನಡೆಸಿದ್ದಾರೆ. ಕೋಲ್ಕತ್ತಾದ ಕ್ಯಾನಿಂಗ್‌ನಲ್ಲಿರುವ ಗೌರ್ದಾಹ್ ನಾರಾಯಣಪುರ ಅಕ್ಷಯ ವಿದ್ಯಾಮಂದಿರದ ವಿದ್ಯಾರ್ಥಿಗಳು ತಮ್ಮ ಶಾಲೆಯ ಶಿಕ್ಷಕರನ್ನು ವರ್ಗಾವಣೆ ಮಾಡಿದ್ದನ್ನು ವಿರೋಧಿಸಿ ಈ ರೈಲು … Continued

ಅಲಿಗಢ ಕಾಲೇಜಿನ ತಿರಂಗಾ ಸಮಾವೇಶದಲ್ಲಿ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ: ವಿದ್ಯಾರ್ಥಿಗಳು, ಪ್ರಾಂಶುಪಾಲರ ವಿರುದ್ಧ ಪ್ರಕರಣ

ನವದೆಹಲಿ: ಉತ್ತರ ಪ್ರದೇಶದ ಅಲಿಘರ್‌ನಲ್ಲಿ ತಿರಂಗಾ ಯಾತ್ರೆಯ ವೇಳೆ ಪಾಕಿಸ್ತಾನವನ್ನು ಬೆಂಬಲಿಸಿ ಘೋಷಣೆಗಳನ್ನು ಕೂಗಿದ ವೀಡಿಯೋಗಳು ಹೊರಬಿದ್ದ ನಂತರ ಹಲವಾರು ವಿದ್ಯಾರ್ಥಿಗಳ ಮೇಲೆ ಪೊಲೀಸರು ಆರೋಪ ಹೊರಿಸಿದ್ದಾರೆ. ಅವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸಂಬಂಧಿತ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆಗಸ್ಟ್ 13 ರಂದು, ಉತ್ತರ ಪ್ರದೇಶದ ಅಲಿಘರ್‌ನಲ್ಲಿ ಕಾಲೇಜೊಂದು ತಿರಂಗಾ ರ್ಯಾಲಿ ಆಯೋಜಿಸಿತ್ತು, … Continued

ದ್ವಿತೀಯ ಪಿಯು ಪರೀಕ್ಷೆ‌ ಬರೆಯುವ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಕೆಎಸ್ಆರ್‌ಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯ

posted in: ರಾಜ್ಯ | 0

ಬೆಂಗಳೂರು: ಏಪ್ರಿಲ್‌ 22ರಿಂದ ಆರಂಭವಾಗುವ ದ್ವಿತೀಯ ಪಿಯು ಪರೀಕ್ಷೆಗೆ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ತೆರಳಲು ಹಾಗೂ ಬರೆದು ವಾಪಸ್ ಬರಲು ಕೆಎಸ್ಆರ್‌ಟಿಸಿ ಬಸ್ಸಿನಲ್ಲಿ ಉಚಿತ ಪ್ರಯಾಣ ಸೌಲಭ್ಯ ನೀಡಲಾಗಿದೆ. ಈ ಕುರಿತು ಕೆಎಸ್ಆರ್‌ಟಿಸಿ ಪತ್ರಿಕಾ ಪ್ರಕಟಣೆ ನೀಡಿದ್ದು, ಏಪ್ರಿಲ್‌ 22ರಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಗಳು ಪ್ರಾರಂಭವಾಗಲಿವೆ. ಪರೀಕ್ಷೆಗಾಗಿ ವಿದ್ಯಾಸಂಸ್ಥೆಯ ಹೊರತಾಗಿ ಇತರೆ ವಿದ್ಯಾ ಸಂಸ್ಥೆಗಳಿಗೆ … Continued

ಸರ್ಕಾರಿ ಶಾಲೆಯಲ್ಲೇ ವಿದ್ಯಾರ್ಥಿಗಳಿಂದ ನಮಾಜ್..!?

posted in: ರಾಜ್ಯ | 0

ಮಂಗಳೂರು:ಹಿಜಾಬ್​ ವಿವಾದ ರಾಷ್ಟ್ರಾದ್ಯಂತ ಸದ್ದು ಮಾಡುತ್ತಿರುವಾಗ, ಮತ್ತೊಂದು ಹೊಸ ವಿವಾದಕ್ಕೆ ಎಡೆ ಮಾಡಿಕೊಡುವ ಘಟನೆ ನಡೆದ ಬಗ್ಗೆ ವರದಿಯಾಗಿದೆ. ಕೆಲವು ವಿದ್ಯಾರ್ಥಿಗಳು ಶಾಲೆಯಲ್ಲೇ ನಮಾಜ್ ಮಾಡಿದ್ದಾರೆ ಎಂದು ಹೇಳಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಅಂಕತ್ತಡ್ಕ ಸರ್ಕಾರಿ ಶಾಲೆಯಲ್ಲಿ ಈ ನಮಾಜ್ ಪ್ರಕರಣ ನಡೆದಿದೆ ಎಂದು ವರದಿಯಾಗಿದ್ದು, ಇಲ್ಲಿ 6-7ನೇ ತರಗತಿಯ ಐದು ಮಂದಿ … Continued

ಈಗ ಬೈಂದೂರು ಕಾಲೇಜಿನಲ್ಲೂ ಹಿಜಾಬ್ ವಿವಾದ: ಕೇಸರಿ ಶಾಲು ಧರಿಸಿದ ಬಂದ ವಿದ್ಯಾರ್ಥಿಗಳು

posted in: ರಾಜ್ಯ | 0

ಬೈಂದೂರು: ಉಡುಪಿ , ಕುಂದಾಪುರ ಕಾಲೇಜಿನಲ್ಲಿ ಹಿಜಾಬ್ ವಿವಾದ ಪ್ರಕರಣದ ಬೆನ್ನಲ್ಲೇ ಇದೀಗ ಬೈಂದೂರು ಕಾಲೇಜಿನಲ್ಲಿ ಇಂಥದ್ದೇ ವಿವಾದ ಉಂಟಾಗಿದೆ. ಬೈಂದೂರು ಸರಕಾರಿ ಪದವಿಪೂರ್ವ ಕಾಲೇಜಿನ ಮುನ್ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಹಾಜರಾಗಿದ್ದಾರೆ, ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರೂ ತರಗತಿಗೆ ಪ್ರವೇಶ ಪಡೆದಿದ್ದಾರೆ. ಬೈಂದೂರಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗೆ ಹಿಜಾಬ್‌ … Continued

ಹುಬ್ಬಳ್ಳಿ: ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಕಾನೂನು ವಿವಿ ಕುಲಪತಿ ಮೇಲೆ ಮಸಿ-ಹಲವರು ವಶಕ್ಕೆ

ಹುಬ್ಬಳ್ಳಿ: ಕಾನೂನು ಪದವಿ ವಿದ್ಯಾರ್ಥಿಗಳ ಬೇಡಿಕೆಗೆ ಸರಕಾರ, ಕುಲಪತಿ ಸ್ಪಂದಿಸುತ್ತಿಲ್ಲ ಎಂದು ಅಸಮಧಾನ ವ್ಯಕ್ತಪಡಿಸಿದ ಪ್ರತಿಭಟನಾ ನಿರತ ವಿದ್ಯಾರ್ಥಿಯೊಬ್ಬ ಕಾನೂನು ವಿವಿ ಕುಲಪತಿ ಮೇಲೆ ಮಸಿ ಎರಚಿದ ಘಟನೆ ಬುಧವಾರ ನಡೆದಿದೆ. ಸ್ಥಳದಲ್ಲಿದ್ದ ಹಿರಿಯ ಪೊಲೀಸ್ ಅಧಿಕಾರಿಗಳ ಮೇಲೂ ಮಸಿ ಬಿದ್ದಿದೆ. ಘಟನೆ ತೀವ್ರ ರೂಪ ಪಡೆಯುತ್ತಿದ್ದಂತೆ ಕೆಲ ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ಪ್ರತಿಭಟನಾ … Continued

ವಿದ್ಯಾರ್ಥಿಗಳಿಗೆ ಬಸ್‌ಪಾಸ್‌: ಸೇವಾ-ಸಿಂಧು ಆನ್‌ಲೈನ್ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಲು ಎನ್‌ಡಬ್ಲ್ಯೂಕೆಆರ್ಟಿಸಿ ಎಂಡಿ ಸೂಚನೆ

posted in: ರಾಜ್ಯ | 0

ಹುಬ್ಬಳ್ಳಿ: ಶಾಲಾ ಕಾಲೇಜುಗಳು ಹಂತ, ಹಂತವಾಗಿ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿದಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಬಸ್ ವಿತರಿಸುತ್ತಿದೆ. ಈ ಕುರಿತು ಶಾಲಾ ಕಾಲೇಜುಗಳಿಗೆ ಮಾಹಿತಿ ನೀಡಲಾಗಿದ್ದು, ಸೇವಾ ಸಿಂಧು ಆನ್‌ಲೈನ್ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿ ಸಂಬಂಧಪಟ್ಟ ಪಾಸ್ ಕೌಂಟರ್‌ಗಳಿಂದ ಬಸ್ ಪಾಸ್ ಪಡೆಯಲು ಸಂಸ್ಥೆಯ ವ್ಯವಸ್ಥಾಪಕ … Continued

ಶಾಲಾ ಸಮಯದಲ್ಲಿ ಹೆಚ್ಚಿನ ಬಸ್‌ ಬಿಡಲು ಮನವಿ

posted in: ರಾಜ್ಯ | 0

ಬೆಂಗಳೂರು: ರಾಜ್ಯದಲ್ಲಿ ಶಾಲಾ ಕಾಲೇಜುಗಳು ಪೂರ್ಣಪ್ರಮಾಣದಲ್ಲಿ ಆರಂಭವಾಗಿರುವ ಹಿನ್ನೆಲೆಯಲ್ಲಿ ಮಕ್ಕಳ ಶಾಲಾ ಸಮಯಕ್ಕೆ ಅನುಕೂಲವಾಗುವಂತೆ ಸಾರಿಗೆ ಸಂಸ್ಥೆಯ ಬಸ್ಸುಗಳ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸಾರಿಗೆ ಸಚಿವರೂ ಆದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರಿಗೆ ಮನವಿ ಮಾಡಿದ್ದಾರೆ. ಈ ಕುರಿತು ಸಾರಿಗೆ ಸಚಿವರಿಗೆ ಆ ಪತ್ರ ಬರೆದಿರುವ … Continued