ಅಪ್ಪ ಸ್ಮಾರ್ಟ್‌ಫೋನ್ ಕೊಡಿಸಲಿಲ್ಲ ಎಂದು ಮಗ ಆತ್ಮಹತ್ಯೆ ; ಮನನೊಂದು ತಂದೆಯೂ ಅದೇ ಹಗ್ಗದಿಂದ ಬಿಗಿದುಕೊಂಡು ಆತ್ಮಹತ್ಯೆ…!

ಮುಂಬೈ : 16 ವರ್ಷದ ಹತ್ತನೇ ತರಗತಿಯ ವಿದ್ಯಾರ್ಥಿಯೊಬ್ಬ ತನ್ನ ತಂದೆ ಮೊಬೈಲ್ ಕೊಡಿಸಲಿಲ್ಲ ಎಂಬ ಕಾರಣಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದು, ರೈತನಾಗಿರುವ ತಂದೆ ತನ್ನ ಮಗನ ಆಸೆ ಈಡೇರಿಸಲು ಸಾಧ್ಯವಾಗದ ಕಾರಣಕ್ಕೆ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ನೋವಿನಿಂದ ತಾನೂ ಅದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. … Continued

ಬೆಂಗಳೂರು | ಇಬ್ಬರು ಮಕ್ಕಳನ್ನು ಕೊಂದು ಟೆಕ್ಕಿ ದಂಪತಿ ಆತ್ಮಹತ್ಯೆ..!

ಬೆಂಗಳೂರು: ಸಾಫ್ಟ್‌ವೇರ್ ಸಲಹೆಗಾರ, ಅವರ ಪತ್ನಿ ಮತ್ತು ಅವರ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರ ಕುಟುಂಬವು ಬೆಂಗಳೂರಿನ ತಮ್ಮ ಬಾಡಿಗೆ ಮನೆಯಲ್ಲಿ ಶವವಾಗಿ ಪತ್ತೆಯಾಗಿದೆ. ಪ್ರಕರಣವನ್ನು ಕೊಲೆ-ಆತ್ಮಹತ್ಯೆ ಎಂದು ಶಂಕಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಅನೂಪಕುಮಾರ (38), ಅವರ ಪತ್ನಿ ರಾಖಿ (35), ಅವರ 5 ವರ್ಷದ ಮಗಳು ಅನುಪ್ರಿಯಾ ಮತ್ತು … Continued

ಟಿವಿ ರಿಮೋಟ್ ; ಅಜ್ಜಿ ಬೈದಿದ್ದಕ್ಕೆ ಬಾಲಕಿ ಆತ್ಮಹತ್ಯೆ

ಶಿವಮೊಗ್ಗ: ಟಿವಿ ರಿಮೋಟ್ ಕೊಡಲಿಲ್ಲ ಎಂಬ ಕಾರಣಕ್ಕೆ ಇಲಿ ಪಾಷಾಣ ಸೇವಿಸಿ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಭದ್ರಾವತಿ ತಾಲೂಕಿನ ಸೂಳೆಬೈಲಿನಲ್ಲಿ ಎಂಬಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತ ಬಾಲಕಿಯನ್ನು ಭದ್ರಾವತಿ ತಾಲೂಕಿನ ಕಲ್ಲಿಹಾಳ ಗ್ರಾಮದ ಸಹನಾ (16) ಎಂದು ಗುರುತಿಸಲಾಗಿದೆ. ಟಿವಿ ರಿಮೋಟ್‍ಗಾಗಿ ಮಕ್ಕಳ ನಡುವೆ ಗಲಾಟೆ ನಡೆಯುತ್ತಿತ್ತು. ಈ ವೇಳೆ ಮೊಮ್ಮಗಳಿಗೆ … Continued

ಶಬರಿಮಲೆಯಲ್ಲಿ ಮೇಲ್ಸೇತುವೆ ಮೇಲಿಂದ ಜಿಗಿದು ಕರ್ನಾಟಕದ ಅಯ್ಯಪ್ಪ ಮಾಲಾಧಾರಿ ಆತ್ಮಹತ್ಯೆ

ಶಬರಿಮಲೆ : ಶಬರಿಮಲೆಯ ಶ್ರೀ ಅಯ್ಯಪ್ಪನ (Sabarimala Temple) ದೇವಸ್ಥಾನದಲ್ಲಿ, ಸಾವಿರಾರು ಭಕ್ತರ ಮುಂದೆಯೇ ಕರ್ನಾಟಕದ ಭಕ್ತರೊಬ್ಬರು ಮಾಳಿಗೆಯಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಕರ್ನಾಟಕದ ಕನಕಪುರದ ನಿವಾಸಿ ಕುಮಾರಸ್ವಾಮಿ (40) ಎಂದು ಗುರುತಿಸಲಾಗಿದೆ. ತುಪ್ಪದ ಅಭಿಷೇಕ ಕೌಂಟರ್‌ಗಳ ಮಂಟಪದ ಮೇಲಿನಿಂದ ಇವರು ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಸೋಮವಾರ ತಡರಾತ್ರಿ ನಡೆದಿದೆ. … Continued

ಬೆಂಗಳೂರು | ಟೆಕ್ಕಿ ನಂತರ ಹೆಂಡತಿ ಕಾಟಕ್ಕೆ ಆತ್ಮಹತ್ಯೆ ಮಾಡಿಕೊಂಡ ಪೊಲೀಸ್‌ ಕಾನ್‌ಸ್ಟೆಬಲ್…! ಡೆತ್​ನೋಟ್​ನಲ್ಲಿ ಕಿರುಕುಳದ ಆರೋಪ

ಬೆಂಗಳೂರು : ನಗರದ ಪೊಲೀಸ್ ಪೇದೆಯೊಬ್ಬರು ಪತ್ನಿ ಮತ್ತು ಮಾವನ ಕಿರುಕುಳದ ಹಿನ್ನೆಲೆಯಲ್ಲಿ ಸಮವಸ್ತ್ರದಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಬೆಂಗಳೂರಿನ ಹುಳಿಮಾವು ಸಂಚಾರಿ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್‌ಸ್ಟೆಬಲ್ ಆಗಿದ್ದ 34 ವರ್ಷದ ಎಚ್‌ಸಿ ತಿಪ್ಪಣ್ಣ ಎಂದು ಪೊಲೀಸರು ಗುರುತಿಸಿದ್ದಾರೆ. ಇವರು ವಿಜಯಪುರ ಜಿಲ್ಲೆಯ ಸಿಂದಗಿ ಸಮೀಪದ ಹಂದಿಗನೂರು ಗ್ರಾಮದವರು. ಬೆಂಗಳೂರಿನಲ್ಲಿ … Continued

ಇನ್‌ಸ್ಟಂಟ್ ಲೋನ್ ಆ್ಯಪ್‌ನಿಂದ ₹ 2,000 ಸಾಲ ಪಡೆದ ನಂತರ ನಿರಂತರ ಕಿರುಕುಳ ; 47 ದಿನಗಳ ಹಿಂದೆ ವಿವಾಹವಾದ ಯುವಕ ಆತ್ಮಹತ್ಯೆ…!

ಹೈದರಾಬಾದ್ : ಇನ್‌ಸ್ಟಂಟ್ (ತ್ವರಿತ) ಲೋನ್ ಆ್ಯಪ್‌ನಿಂದ ಕೇವಲ ₹ 2,000 ಸಾಲ ತೆಗೆದುಕೊಂಡ ನಂತರ ನಿರಂತರವಾಗಿ ಕಿರುಕುಳ ಎದುರಿಸುತ್ತಿದ್ದ 27 ವರ್ಷದ ಯುವಕ ವಿವಾಹವಾದ 47 ದಿನಗಳ ನಂತರ ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಜೀವನೋಪಾಯಕ್ಕಾಗಿ ಮೀನು ಹಿಡಿಯುತ್ತಿದ್ದ ನರೇಂದ್ರ ಎಂಬವರು ಪ್ರತಿಕೂಲ ಹವಾಮಾನದ ಕಾರಣದಿಂದ ಕೆಲವು ತಿಂಗಳ ಹಿಂದೆ ಮೀನುಗಾರಿಕೆಗೆ … Continued

ಕನ್ನಡ ಧಾರಾವಾಹಿಗಳ ಖ್ಯಾತ ನಟಿ ಶೋಭಿತಾ ಶಿವಣ್ಣ ಆತ್ಮಹತ್ಯೆ

ಹೈದರಾಬಾದ್ : ಕನ್ನಡದ ಬ್ರಹ್ಮಗಂಟು ಸೀರಿಯಲ್ ಖ್ಯಾತಿಯ ನಟಿ ಶೋಭಿತಾ ಶಿವಣ್ಣ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ವರದಿಯಾಗಿದೆ. ಅವರು ಹೈದರಾಬಾದ್‌ನ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಹಾಸನ ಮೂಲದ ಸಕಲೇಶಪುರದವರಾದ ನಟಿ ಶೋಭಿತಾ ಅವರು ಎರಡು ವರ್ಷಗಳ ಹಿಂದೆ ವಿವಾಹವಾಗಿದ್ದು, ಮದುವೆಯ ಬಳಿಕ ಹೈದರಾಬಾದ್‌ನಲ್ಲಿ ವಾಸಿಸುತ್ತಿದ್ದರು. ಶನಿವಾರ ರಾತ್ರಿ ಶೋಭಿತಾ ಅವರು ಆತ್ಮಹತ್ಯೆ … Continued

ಬೆಳಗಾವಿ ಎಸ್‍ಡಿಎ ಸಾವು ಆತ್ಮಹತ್ಯೆಯಲ್ಲ, ಕೊಲೆ.. : ಎಸಿಪಿ ಕಚೇರಿಗೆ ಅನಾಮಧೇಯ ಪತ್ರ

ಬೆಳಗಾವಿ : ಬೆಳಗಾವಿ ತಹಶೀಲ್ದಾರ್ ಕಚೇರಿ ಎಸ್ ಡಿಎ ರುದ್ರಣ್ಣ ಯಡವಣ್ಣವರದ್ದು ಆತ್ಮಹತ್ಯೆಯಲ್ಲ, ಕೊಲೆ ಎಂದು ಬರೆದ ಅನಾಮಧೇಯ ಪತ್ರವೊಂದು ಖಡೇ ಬಜಾರ್ ಎಸಿಪಿ ಅವರಿಗೆ ಬಂದಿದೆ. ಇದು ಸಂಚಲನಕ್ಕೆ ಕಾರಣವಾಗಿದೆ. ಬಿಳಿ ಹಾಳೆಯ ಮೇಲೆ ಟೈಪ್ ಮಾಡಿ ಪ್ರಿಂಟ್ ತೆಗೆದು ಲಕೋಟೆಯಲ್ಲಿ ಹಾಕಿ ಬೆಳಗಾವಿಯ ಖಡೇ ಬಜಾರ್ ಪೊಲೀಸ್ ಠಾಣೆಗೆ ಈ ಪತ್ರವನ್ನು ಪೋಸ್ಟ್ … Continued

ಮೂಲ್ಕಿ ಬಳಿ ಘೋರ ದುರಂತ: ಪತ್ನಿ, ಮಗುವನ್ನು ಕೊಲೆಗೈದು ಆತ್ಮಹತ್ಯೆಗೆ ಶರಣಾದ ಪತಿ

ಮಂಗಳೂರು : ಕಿನ್ನಿಗೋಳಿ ಪಕ್ಷಿಕೆರೆಯ ಮನೆಯೊಂದರಲ್ಲಿ ತನ್ನ ಪತ್ನಿ, ಮಗುವನ್ನು ಕೊಲೆಗೈದು ನಂತರ ತಾನೂ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ (ನ.9) ಮಧ್ಯಾಹ್ನ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಪಕ್ಷಿಕೆರೆ ನಿವಾಸಿ ಕಾರ್ತಿಕ್ ಭಟ್ (32) ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು, ಇದಕ್ಕೂ ಮೊದಲು ಆತ ಪತ್ನಿ ಪ್ರಿಯಾಂಕ (28), ಮಗ ಹೃದಯ್ (4) … Continued

ಮೂವರು ಮಕ್ಕಳನ್ನು ತುಂಗಭದ್ರಾ ನದಿಗೆ ಎಸೆದು ತಾನೂ ಹಾರಿದ ವ್ಯಕ್ತಿ…!

ಗದಗ : ಕೌಟುಂಬಿಕ ಕಲಹದ ಕಾರಣಕ್ಕೆ ಮನನೊಂದು ಮೂರು ಮಕ್ಕಳನ್ನು ತುಂಗಭದ್ರಾ ನದಿಗೆ ಎಸೆದು ವ್ಯಕ್ತಿಯೊಬ್ಬ ತಾನೂ ನದಿಗೆ ಹಾರಿದ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಬಳಿ ಮಂಗಳವಾರ ನಡೆದಿದೆ ಎಂದು ವರದಿಯಾಗಿದೆ. ಮುಂಡರಗಿ ತಾಲೂಕಿನ ಮಕ್ತುಂಪೂರ ಗ್ರಾಮದ ನಿವಾಸಿ ಮಂಜುನಾಥ ಅರಕೇರಿ (38) ಎಂಬಾತ ತನ್ನ ಮಕ್ಕಳಾದ ವೇದಾಂತ (3), ಪವನ … Continued