ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ದಂಪತಿ….

ಹೈದರಾಬಾದ್ : ದಾರುಣ ಘಟನೆಯೊಂದರಲ್ಲಿ, ಆರ್ಥಿಕ ಸಮಸ್ಯೆಯಿಂದಾಗಿ ದಂಪತಿ ತಮ್ಮ 10 ಮತ್ತು 15 ವರ್ಷದ ಇಬ್ಬರು ಮಕ್ಕಳನ್ನು ಕೊಂದು ನಂತರ ತಾವೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೈದರಾಬಾದಿನಲ್ಲಿ ಸೋಮವಾರ ನಡೆದಿದೆ. ಉಸ್ಮಾನಿಯಾ ವಿಶ್ವವಿದ್ಯಾಲಯ ಪೊಲೀಸ್ ಠಾಣೆ ವ್ಯಾಪ್ತಿಯ ಹಬ್ಸಿಗುಡಾದ ರವೀಂದ್ರ ನಗರ ಕಾಲೋನಿಯಲ್ಲಿರುವ ದಂಪತಿಯ ಮನೆಯಲ್ಲಿ ಸೋಮವಾರ ನಾಲ್ಕು ಶವಗಳು ಪತ್ತೆಯಾಗಿವೆ. ಚಂದ್ರಶೇಖರ ರೆಡ್ಡಿ … Continued

ಮದುವೆಯ ಮೊದಲ ರಾತ್ರಿಯೇ ಶವವಾಗಿ ಪತ್ತೆಯಾದ ನವದಂಪತಿ…!

ಅಯೋಧ್ಯೆ : ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಮದುವೆಯ ಮೊದಲ ರಾತ್ರಿಯಂದು ನವದಂಪತಿ ತಮ್ಮ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಈ ಆಘಾತಕಾರಿ ಘಟನೆಯಿಂದಾಗಿ ಮದುವೆಯ ಸಂಭ್ರಮವು ಶೋಕಾಚರಣೆಯಾಗಿ ಮಾರ್ಪಟ್ಟಿತು. ಅಯೋಧ್ಯೆ ಕ್ಯಾಂಟ್ ಪೊಲೀಸ್ ಠಾಣೆ ವ್ಯಾಪ್ತಿಯ ಸಾದತ್ ಗಂಜ್ ಪ್ರದೇಶದ ಪ್ರದೀಪ ಎಂಬವರು ಶನಿವಾರ ಶಿವಾನಿ ಅವರನ್ನು ವಿವಾಹವಾಗಿದ್ದರು ಎಂದು ಪೊಲೀಸರು … Continued

ಪತ್ನಿ ಕೊಂದು ಆತ್ಮಹತ್ಯೆ ಮಾಡಿಕೊಂಡ ಮೊಮ್ಮಗನ ಚಿತೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಅಜ್ಜ…!

ಸಿಧಿ : ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ಪತ್ನಿಯನ್ನು ಕೊಂದ ನಂತರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಮೊಮ್ಮಗನ ಅಂತ್ಯಕ್ರಿಯೆ ವೇಳೆ ಚಿತೆಗೆ ಹಾರಿ ಅಜ್ಜ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಬಹ್ರಿ ಪೊಲೀಸ್ ಠಾಣೆ ವ್ಯಾಪ್ತಿಯ ಸಿಹೋಲಿಯಾ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಭಯರಾಜಯಾದವ್ (34) ಎಂದು ಗುರುತಿಸಲಾದ … Continued

ಬೆಳಗಾವಿ | ಮೂವರು ಮಕ್ಕಳೊಂದಿಗೆ ಕೃಷ್ಣಾ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಬೆಳಗಾವಿ: ಮೂವರು ಮಕ್ಕಳೊಂದಿಗೆ ಕೃಷ್ಣಾ ನದಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ (Belagavi) ಜಿಲ್ಲೆ ರಾಯಬಾಗ ತಾಲೂಕಿನ ಚಿಂಚಲಿ ಬಳಿ ಬುಧವಾರ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಶಾರದಾ ಡಾಲೆ(38), ಅನುಷಾ (10), ಅಮೃತಾ (14), ಆದರ್ಶ (8) ಎಂದು ಗುರುತಿಸಲಾಗಿದೆ. ಅನುಷಾ ಡಾಳೆ ಎಂಬ ಮಗಳನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದರು. … Continued

ಮಂಗಳೂರಲ್ಲಿ ವ್ಯಕ್ತಿ ಆತ್ಮಹತ್ಯೆ ; ಮಹಿಳಾ ಸಿಐಎಸ್ಎಫ್ ಅಧಿಕಾರಿ ವಿರುದ್ಧ ಶೋಷಣೆ ಆರೋಪ

ಮಂಗಳೂರು: ಸಿಐಎಸ್ಎಫ್ ಮಹಿಳಾ ಅಧಿಕಾರಿಯಿಂದ ವಂಚನೆ ಮತ್ತು ಶೋಷಣೆಗೆ ಒಳಗಾಗಿದ್ದೇನೆ ಎಂದು ಆರೋಪಿಸಿ ಉತ್ತರ ಪ್ರದೇಶದ ವ್ಯಕ್ತಿಯೊಬ್ಬರು ಮಂಗಳೂರಿನಲ್ಲಿ ಜೀವನವನ್ನೇ ಕೊನೆಗೊಳಿಸಿದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಉತ್ತರ ಪ್ರದೇಶದ ಗಾಜಿಪುರ ಮೂಲದ ಅಭಿಷೇಕ ಸಿಂಗ್ (40) ರಾವ್ ಮತ್ತು ರಾವ್ ಸರ್ಕಲ್ ಬಳಿಯ ಲಾಡ್ಜ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ 20 ನಿಮಿಷಗಳ … Continued

ಸಾಕು ಬೆಕ್ಕಿನ ಶವದೊಂದಿಗೆ ಎರಡು ದಿನ ಕಳೆದ ಮಹಿಳೆ…! ನಂತರ ಮನನೊಂದು ಆತ್ಮಹತ್ಯೆ…!!

ಲಕ್ನೋ: ಮಹಿಳೆಯೊಬ್ಬರು ತನ್ನ ಸಾಕು ಬೆಕ್ಕು ಸತ್ತ ನಂತರ ಅದರ ಶವದ ಜೊತೆ ಎರಡು ದಿನ ಕಾಲ ಕಳೆದ ಬಳಿಕ ನೇಣಿಗೆ ಶರಣಾದ ಹೃದಯ ವಿದ್ರಾವಕ ಘಟನೆ ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯಲ್ಲಿ ನಡೆದಿದೆ. 35 ವರ್ಷದ ಮಹಿಳೆ ಪೂಜಾ ಎಂಬವರು ತನ್ನ ಪ್ರೀತಿಯ ಮುದ್ದಿನ ಬೆಕ್ಕಿನ ಸಾವಿನಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಸನ್‌ಪುರ ಪಟ್ಟಣದ … Continued

ರೈಲು ಹಳಿ ಮೇಲೆ ಮಹಿಳೆ, ಇಬ್ಬರು ಪುತ್ರಿಯರ ಶವ ಪತ್ತೆ

ಕೊಟ್ಟಾಯಂ : ಶುಕ್ರವಾರ ಮುಂಜಾನೆ ಕೇರಳದ ಕೊಟ್ಟಾಯಂ ಜಿಲ್ಲೆಯ ಎಟ್ಟುಮನೂರ್ ಬಳಿ ರೈಲ್ವೆ ಹಳಿಗಳ ಮೇಲೆ ಮಹಿಳೆ ಮತ್ತು ಆಕೆಯ ಇಬ್ಬರು ಹೆಣ್ಣುಮಕ್ಕಳು ಶವವಾಗಿ ಪತ್ತೆಯಾಗಿದ್ದಾರೆ. ಮೃತರನ್ನು 42 ವರ್ಷ ವಯಸ್ಸಿನ ಶೈನಿ ಕುರಿಯಾಕೋಸ್ ಮತ್ತು ಅವರ ಪುತ್ರಿಯರಾದ 11 ವರ್ಷದ ಅಲೀನಾ ಮತ್ತು 10 ವರ್ಷದ ಇವಾನಾ ಎಂದು ಗುರುತಿಸಲಾಗಿದ್ದು, ಇವರಿಬ್ಬರೂ ಕೇರಳದ ಥೆಲ್ಲಕೋಮ್‌ನ … Continued

ನಾಲೆಗೆ ಹಾರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಮಂಡ್ಯ: ಒಂದೇ ಕುಟುಂಬದ ಮೂವರು ವಿಷ ಸೇವಿಸಿ, ನಂತರ ವಿಸಿ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಮಾಸ್ತಪ್ಪ, ಪತ್ನಿ ರತ್ನಮ್ಮ ಹಾಗೂ ಮಗಳು ಲಕ್ಷ್ಮೀ ಎಂದು ಗುರುತಿಸಲಾಗಿದ್ದು, ದಂಪತಿಯ ಮೃತದೇಹ ಪತ್ತೆ ಆಗಿದೆ. ಮಗಳ ಮೃತದೇಹಕ್ಕಾಗಿ ಶೋಧಕಾರ್ಯ ಮುಂದುವರಿದಿದೆ. ಮೃತರು ಶ್ರೀರಂಗಪಟ್ಟಣದ ಗಂಜಾಂ … Continued

ಬೆಳಗಾವಿ | ಸಾಲದ ಬಾಧೆ ; ವಿಷ ಸೇವಿಸಿ ರೈತ ಆತ್ಮಹತ್ಯೆ

ಬೆಳಗಾವಿ :  ಕಿರುಕುಳ ತಾಳಲಾರದೇ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯ ರಾಯಬಾಗ ತಾಲೂಕಿನ ಅಳಗವಾಡಿ ಗ್ರಾಮದಲ್ಲಿ ಸೋಮವಾರ ನಡೆದಿದೆ ಎಂದು ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಅಳಗವಾಡಿಯ ಶಿವನಪ್ಪ ಧರ್ಮಟ್ಟಿ (66) ಎಂದು ಗುರುತಿಸಲಾಗಿದೆ. ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗೆ ವಿವಿಧ ಫೈನಾನ್ಸ್ ಕಂಪನಿಯಲ್ಲಿ ಅವರು 10 ಲಕ್ಷ ರೂ. ಸಾಲ ಮಾಡಿದ್ದರು ಎನ್ನಲಾಗಿದೆ. … Continued

ಬೆಂಗಳೂರು ವಿವಿ ಹಾಸ್ಟೆಲ್‌ ನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ನಡೆದಿದೆ ಎಂದು ವರದಿಯಾಗಿದೆ. ವಿದ್ಯಾರ್ಥಿನಿಯು ನಗರದ ಜ್ಞಾನಭಾರತಿ ಕ್ಯಾಂಪಸ್‌ನ ಕನ್ನಡ ಅಧ್ಯಯನ ಕೇಂದ್ರದಲ್ಲಿ ದ್ವಿತೀಯ ವರ್ಷದ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದಳು ಎನ್ನಲಾಗಿದೆ. ಹಾಸ್ಟೆಲ್‌ನಲ್ಲಿ ಮಧ್ಯಾಹ್ನ ನೇಣು ಬಿಗಿದುಕೊಂಡಿದ್ದು, ಘಟನೆಗೆ ಕಾರಣ ತಿಳಿದುಬಂದಿಲ್ಲ. ಮೃತ ವಿದ್ಯಾರ್ಥಿನಿಯನ್ನು 22 ವರ್ಷದ ಪಾವನಾ … Continued