ಬೆಳಗಾವಿ | ಅಕ್ಕನ ಮಗಳ ಮದುವೆಗೆ ರಜೆ ಕೊಟ್ಟಿಲ್ಲವೆಂದು ನೊಂದು ಬಸ್ಸಿನಲ್ಲೇ ಚಾಲಕ ಆತ್ಯಹತ್ಯೆ

ಬೆಳಗಾವಿ: ತಮ್ಮ ಮನೆಯಲ್ಲಿ ನಡೆಯುತ್ತಿರುವ ಮದುವೆಯಲ್ಲಿ ಪಾಲ್ಗೊಳ್ಳಲು ಮೇಲಧಿಕಾರಿಗಳು ರಜೆ (Leave) ಕೊಡಲಿಲ್ಲ ಎಂದು ತೀವ್ರವಾಗಿ ಮನನೊಂದ ರಾಜ್ಯ ಸಾರಿಗೆ ಸಂಸ್ಥೆ ಚಾಲಕನೊಬ್ಬ driver) ಬಸ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಈ ಘಟನೆ ಬೆಳಗಾವಿ ಡಿಪೋದ 2ನೇ ಘಟಕದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಚಾಲಕನನ್ನು ನಗರದ ಹಳೆ … Continued

ಚಿಕ್ಕಮಗಳೂರು| ಪತ್ನಿ ಬಿಟ್ಟು ಹೋದ ಕೋಪಕ್ಕೆ ಗುಂಡು ಹಾರಿಸಿ ಕುಟುಂಬದ ಮೂವರ ಹತ್ಯೆ; ನಂತರ ತಾನೂ ಆತ್ಮಹತ್ಯೆ..

ಚಿಕ್ಕಮಗಳೂರು: ಹೆಂಡತಿ ಮನೆ ಬಿಟ್ಟು ಹೋಗಿದ್ದಕ್ಕೆ ಮನನೊಂದು ಅತ್ತೆ, ನಾದಿನಿ ಹಾಗೂ 7 ವರ್ಷದ ಮಗುವನ್ನು ಗುಂಡುಹಾರಿಸಿ ಕೊಲೆ ಮಾಡಿ ನಂತರ ತಾನೂ ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯ ಬಾಳೆಹೊನ್ನೂರು ಸಮೀಪದ ಖಾಂಡ್ಯ ಬಳಿ ನಡೆದಿದೆ ಎಂದು ವರದಿಯಾಗಿದೆ. ರತ್ನಾಕರ ಎಂಬಾತ ಅತ್ತೆ ಜ್ಯೋತಿ (50), ನಾದಿನಿ ಸಿಂಧು (26) ಹಾಗೂ 7 ವರ್ಷದ ಮಗು … Continued

ಖಾನಾಪುರ | ಡಿಜಿಟಲ್ ಅರೆಸ್ಟ್‌ ಮಾಡಿ 50 ಲಕ್ಷ ರೂ. ವಂಚನೆ, ಹಣಕ್ಕಾಗಿ ಮತ್ತೆ ಬೆದರಿಕೆ : ಸೈಬರ್‌ ವಂಚಕರ ಕಾಟಕ್ಕೆ ವೃದ್ಧ ದಂಪತಿ ಆತ್ಮಹತ್ಯೆ

ಬೆಳಗಾವಿ: ಸೈಬರ್‌ ವಂಚಕರ (Cyber Crime) ಕಾಟ ತಾಳಲಾರದೇ ವೃದ್ಧ ದಂಪತಿ ಗುರುವಾರ ತಡರಾತ್ರಿ ಆತ್ಮಹತ್ಯೆಗೆ (Suicide) ಶರಣಾದ ಘಟನೆ ಜಿಲ್ಲೆಯ ಖಾನಾಪುರ ತಾಲೂಕಿನ ಬೀಡಿ ಗ್ರಾಮದಲ್ಲಿ ನಡೆದಿದೆ. ಫ್ಲೇವಿಯಾನಾ ನಜರೆತ್ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದರೆ, ಡಯಾಗೊ ಚಾಕುವಿನಿಂದ ಕುತ್ತಿಗೆ ಕೊಯ್ದು ಸೂಸೈಡ್‌ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಮುನ್ನ ದಂಪತಿ ಇಂಗ್ಲಿಷ್‌ನಲ್ಲಿ ಬರೆದ ಡೆತ್‌ನೋಟ್‌ … Continued

ಬೆಳಗಾವಿ | ಪಿಜಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಎಂಬಿಎ ಪದವೀಧರೆ

ಬೆಳಗಾವಿ : ಎಂಬಿಎ ಪದವಿ ಪಡೆದು ಕಂಪನಿಯೊಂದರಲ್ಲಿ ತರಬೇತಿ ಪಡೆಯುತ್ತಿದ್ದ ಯುವತಿಯೊಬ್ಬಳು ಪಿಜಿಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಐಶ್ವರ್ಯ ಆತ್ಮಹತ್ಯೆಗೆ ಶರಣಗಿರುವ ಯುವತಿ. ವಿಜಯಪುರ ಮೂಲದ ಯುವತಿ ಎಂಬಿಎ ಬಳಿಕ ಕೆಲಸಕ್ಕಾಗಿ ಬೆಳಗಾವಿಗೆ ಬಂದು ನೆಹರು ನಗರದ ಪಿಜಿಯಲ್ಲಿ ವಾಸವಾಗಿದ್ದಳು. ಮೂರು ತಿಂಗಳಿಂದ ಕಂಪನಿಯೊಂದರಲ್ಲಿ ತರಬೇತಿ ಪಡೆಯುತ್ತಿದ್ದಳು. ಆತ್ಮಹತ್ಯೆಗೂ ಮುನ್ನ … Continued

ಕೊಪ್ಪ | ಹಲ್ಲುಗಳನ್ನು ಕಳೆದುಕೊಂಡಿದ್ದಕ್ಕೆ ಮನನೊಂದು ಆತ್ಮಹತ್ಯೆ

ಚಿಕ್ಕಮಗಳೂರು : ಅಪಘಾತದಲ್ಲಿ 17 ಹಲ್ಲುಗಳನ್ನ ಕಳೆದುಕೊಂಡಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಭುವನಕೋಟೆ ಸಮೀಪದ ಸಾಲುಮರ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ವಿಘ್ನೇಶ (18) ಎಂದು ಗುರುತಿಸಲಾಗಿದೆ. ಮೃತ ವಿದ್ಯಾರ್ಥಿ ಕೊಪ್ಪ ಪಟ್ಟಣದ ಐಟಿಐ ಕಾಲೇಜಿನಲ್ಲಿ ಮೊದಲ ವರ್ಷದ ಐಟಿಐ ಓದುತ್ತಿದ್ದ ಎನ್ನಲಾಗಿದೆ. … Continued

ಸರಿಯಾಗಿ ಓದುತ್ತಿಲ್ಲ ಎಂದು ಇಬ್ಬರು ಮಕ್ಕಳನ್ನು ನೀರಿನಲ್ಲಿ ಮುಳುಗಿಸಿ ಕೊಂದು, ತಾನೂ ಆತ್ಮಹತ್ಯೆಗೆ ಶರಣಾದ ತಂದೆ…!

ಕಾಕಿನಾಡು : ಆಂಧ್ರಪ್ರದೇಶದ ಕಾಕಿನಾಡದಲ್ಲಿ 37 ವರ್ಷದ ತೈಲ ಮತ್ತು ನೈಸರ್ಗಿಕ ಅನಿಲ ನಿಗಮ(ಒಎನ್‌ಜಿಸಿ)ದ ಉದ್ಯೋಗಿಯೊಬ್ಬರು ಶೈಕ್ಷಣಕವಾಗಿ ಉತ್ತಮ ಸಾಧನೆ ಮಾಡಿಲ್ಲ ಎಂಬ ಕಾರಣಕ್ಕೆ ತನ್ನ ಇಬ್ಬರು ಮಕ್ಕಳನ್ನು ಕೊಂದು ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡ ಹೃಯದವಿದ್ರಾವಕ ಘಟನೆ ನಡೆದಿದೆ. ಶುಕ್ರವಾರ ರಾತ್ರಿ 10 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಮಕ್ಕಳ ಕಳಪೆ ಶೈಕ್ಷಣಿಕ … Continued

ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ದಂಪತಿ….

ಹೈದರಾಬಾದ್ : ದಾರುಣ ಘಟನೆಯೊಂದರಲ್ಲಿ, ಆರ್ಥಿಕ ಸಮಸ್ಯೆಯಿಂದಾಗಿ ದಂಪತಿ ತಮ್ಮ 10 ಮತ್ತು 15 ವರ್ಷದ ಇಬ್ಬರು ಮಕ್ಕಳನ್ನು ಕೊಂದು ನಂತರ ತಾವೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೈದರಾಬಾದಿನಲ್ಲಿ ಸೋಮವಾರ ನಡೆದಿದೆ. ಉಸ್ಮಾನಿಯಾ ವಿಶ್ವವಿದ್ಯಾಲಯ ಪೊಲೀಸ್ ಠಾಣೆ ವ್ಯಾಪ್ತಿಯ ಹಬ್ಸಿಗುಡಾದ ರವೀಂದ್ರ ನಗರ ಕಾಲೋನಿಯಲ್ಲಿರುವ ದಂಪತಿಯ ಮನೆಯಲ್ಲಿ ಸೋಮವಾರ ನಾಲ್ಕು ಶವಗಳು ಪತ್ತೆಯಾಗಿವೆ. ಚಂದ್ರಶೇಖರ ರೆಡ್ಡಿ … Continued

ಮದುವೆಯ ಮೊದಲ ರಾತ್ರಿಯೇ ಶವವಾಗಿ ಪತ್ತೆಯಾದ ನವದಂಪತಿ…!

ಅಯೋಧ್ಯೆ : ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಮದುವೆಯ ಮೊದಲ ರಾತ್ರಿಯಂದು ನವದಂಪತಿ ತಮ್ಮ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಈ ಆಘಾತಕಾರಿ ಘಟನೆಯಿಂದಾಗಿ ಮದುವೆಯ ಸಂಭ್ರಮವು ಶೋಕಾಚರಣೆಯಾಗಿ ಮಾರ್ಪಟ್ಟಿತು. ಅಯೋಧ್ಯೆ ಕ್ಯಾಂಟ್ ಪೊಲೀಸ್ ಠಾಣೆ ವ್ಯಾಪ್ತಿಯ ಸಾದತ್ ಗಂಜ್ ಪ್ರದೇಶದ ಪ್ರದೀಪ ಎಂಬವರು ಶನಿವಾರ ಶಿವಾನಿ ಅವರನ್ನು ವಿವಾಹವಾಗಿದ್ದರು ಎಂದು ಪೊಲೀಸರು … Continued

ಪತ್ನಿ ಕೊಂದು ಆತ್ಮಹತ್ಯೆ ಮಾಡಿಕೊಂಡ ಮೊಮ್ಮಗನ ಚಿತೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಅಜ್ಜ…!

ಸಿಧಿ : ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ಪತ್ನಿಯನ್ನು ಕೊಂದ ನಂತರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಮೊಮ್ಮಗನ ಅಂತ್ಯಕ್ರಿಯೆ ವೇಳೆ ಚಿತೆಗೆ ಹಾರಿ ಅಜ್ಜ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಬಹ್ರಿ ಪೊಲೀಸ್ ಠಾಣೆ ವ್ಯಾಪ್ತಿಯ ಸಿಹೋಲಿಯಾ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಭಯರಾಜಯಾದವ್ (34) ಎಂದು ಗುರುತಿಸಲಾದ … Continued

ಬೆಳಗಾವಿ | ಮೂವರು ಮಕ್ಕಳೊಂದಿಗೆ ಕೃಷ್ಣಾ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಬೆಳಗಾವಿ: ಮೂವರು ಮಕ್ಕಳೊಂದಿಗೆ ಕೃಷ್ಣಾ ನದಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ (Belagavi) ಜಿಲ್ಲೆ ರಾಯಬಾಗ ತಾಲೂಕಿನ ಚಿಂಚಲಿ ಬಳಿ ಬುಧವಾರ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಶಾರದಾ ಡಾಲೆ(38), ಅನುಷಾ (10), ಅಮೃತಾ (14), ಆದರ್ಶ (8) ಎಂದು ಗುರುತಿಸಲಾಗಿದೆ. ಅನುಷಾ ಡಾಳೆ ಎಂಬ ಮಗಳನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದರು. … Continued