ಕೇರಳ ಲಾಟರಿಯಲ್ಲಿ 1 ಕೋಟಿ ರೂ. ಗೆದ್ದ ಸುಳ್ಯದ ನಿವಾಸಿ…!

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ನಿವಾಸಿಯೊಬ್ಬರಿಗೆ ಕೇರಳ ಕೇರಳ ರಾಜ್ಯ ಲಾಟರಿಯಲ್ಲಿ 1 ಕೋಟಿ ರೂಪಾಯಿ ಬಂಪರ್ ಬಹುಮಾನ ಗೆದ್ದಿದ್ದಾರೆ. ಶನಿವಾರ ನಡೆದ ಡ್ರಾದಲ್ಲಿ, OG 445643 ಸಂಖ್ಯೆಯ ಟಿಕೆಟ್ ಸುಳ್ಯ ತಾಲೂಕಿನ ಉಬರಡ್ಕದ ವಿನಯ ಕ್ಯಾಟರರ್ಸ್ ಮಾಲೀಕ ವಿನಯ ಯಾವಟೆ ಅವರಿಗೆ ಅದೃಷ್ಟ ತಂದುಕೊಟ್ಟಿತು. ವಿನಯ ಯಾವಟೆ ಕೇರಳ ಲಾಟರಿಯ 1 … Continued

ಸುಳ್ಯ | ಕುಡಿದ ಮತ್ತಿನಲ್ಲಿ ಮಗನಿಗೆ ಗುರಿಯಿಟ್ಟ ಕೋವಿಗೆ ಪತ್ನಿ ಸಾವು ; ಮನನೊಂದು ಆ್ಯಸಿಡ್ ಸೇವಿಸಿ ಪತಿಯೂ ಆತ್ಮಹತ್ಯೆ…

ಮಂಗಳೂರು : ಕುಡಿತದ ಮತ್ತಿನಲ್ಲಿದ್ದ ವ್ಯಕ್ತಿಯೊಬ್ಬ ಪತ್ನಿಯನ್ನು ಗುಂಡು ಹಾರಿಸಿ ಕೊಲೆ ಮಾಡಿದ್ದು, ನಂತರ ತಾನೂ ಆ್ಯಸಿಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ನೆಲ್ಲೂರು ಕೆಮ್ರಾಜೆ ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ ಎಂದು ವರದಿಯಾಗಿದೆ. ಕೊಲೆಯಾದ ಮಹಿಳೆಯನ್ನು ವಿನೋದಾ ಕುಮಾರಿ ಎಂದು ಗುರುತಿಸಲಾಗಿದೆ. ಗುಂಡು ಹಾರಿಸಿ ನಂತರ ಆಸಿಡ್‌ … Continued

ಪ್ರವೀಣ ನೆಟ್ಟಾರು ಹತ್ಯೆ ಪ್ರಕರಣ ; 2 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಸೇರಿ ಮೂವರು ಅರೆಸ್ಟ್

ಮಂಗಳೂರು : ಬಿಜೆಪಿ ಕಾರ್ಯಕರ್ತ ಪ್ರವೀಣ ನೆಟ್ಟಾರು ಕೊಲೆ ಪ್ರಕರಣದ ಪ್ರಮುಖ ಆರೋಪಿ ಮುಸ್ತಾಫಾ ಪೈಚಾರು ಎಂಬವನನ್ನು ರಾಷ್ಟ್ರೀಯ ತನಿಖಾದಳ (ಎನ್ಐಎ) ಕೊನೆಗೂ ಬಂಧಿಸುವಲ್ಲಿ ಯಶಸ್ವಿಯಾಗಿದೆ. ಮುಸ್ತಫಾ ಪೈಚಾರ್ ಬಂಧಿತ ಆರೋಪಿ. ಇಂದು, ಶುಕ್ರವಾರ ಬೆಳಗ್ಗೆ ಸಕಲೇಶಪುರದಲ್ಲಿ ಬಂಧಿಸಲಾಗಿದೆ ಎಂದು ರಾಷ್ಟ್ರೀಯ ತನಿಖಾ ದಳ (NIA) ಮೂಲಗಳು ತಿಳಿಸಿವೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ 2022ರ … Continued

ವಿದೇಶದಿಂದಲೇ ವಾಟ್ಸಾಪ್‌ನಲ್ಲಿ ಪತ್ನಿಗೆ ತ್ರಿವಳಿ ತಲಾಖ್ ನೀಡಿದ ಪತಿ…!

ಮಂಗಳೂರು : ಮಹಿಳೆಗೆ ವಿದೇಶದಲ್ಲಿರುವ ಪತಿ ವಾಟ್ಸಾಪ್‌ ಸಂದೇಶದ ಮೂಲಕ ತ್ರಿವಳಿ ತಲಾಖ್‌ ನೀಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಜಯನಗರದ ನಡೆದಿದೆ ಎಂದು ವರದಿಯಾಗಿದೆ. ಈ ಬಗ್ಗೆ ಮಹಿಳೆ ಸುಳ್ಯ ಪೊಲೀಸ್‌ ಠಾಣೆಯಲ್ಲಿ ಪತಿಯ ವಿರುದ್ಧ ದೂರು ನೀಡಿದ್ದಾರೆ. ಕೇರಳ ತ್ರಿಶೂರ್‌ ಮೂಲದ ಅಬ್ದುಲ್‌ ರಶೀದ್‌ ಎಂಬಾತನ ವಿರುದ್ಧ ದೂರು ದಾಖಲಾಗಿದೆ. ಈತ … Continued

ಬಳ್ಪ: ಹೊಳೆಯಲ್ಲಿ ಮುಳುಗಿ ಬಾಲಕಯರಿಬ್ಬರು ಸಾವು

ಮಂಗಳೂರು: ಇಬ್ಬರು ವಿದ್ಯಾರ್ಥಿನಿಯರು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಬಳ್ಪ ಸಮೀಪದ ಕೇನ್ಯ ಕಣ್ಕಲ್ ಎಂಬಲ್ಲಿ ಹೊಳೆಯಲ್ಲಿ ನೀರುಪಾಲಾದ ಘಟನೆ ನಡೆದಿದೆ. ಇಬ್ಬರು ಬಾಲಕಿಯರ ಮೃತದೇಹವನ್ನು ಹೊರ ತೆಗೆಯಲಾಗಿದೆ. ಮೃತರನ್ನು ಬೆಂಗಳೂರಿನ ಸತೀಶ ಅಮ್ಮಣ್ಣಾಯ ಅವರ ಪುತ್ರಿಯರಾದ   ಆವಂತಿಕಾ (16) ಹಾಗೂ ಅಂಕಿತಾ (13) ಎಂದು ಗುರುತಿಸಲಾಗಿದೆ. ಇಬ್ಬರ ಮೃತದೇಹಗಳನ್ನು ಅಗ್ನಿಶಾಮಕ ದಳದ … Continued

ಸುಳ್ಯ: ರಾಜಕೀಯ ನಿವೃತ್ತಿ ಹಿಂಪಡೆದ ಶಾಸಕ ಎಸ್.ಅಂಗಾರ ; ಬಿಜೆಪಿ ಅಭ್ಯರ್ಥಿ ಪರ ಪ್ರಚಾರ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಕ್ಷೇತ್ರದ ಬಿಜೆಪಿ ಟಿಕೆಟ್ ಕೈ ತಪ್ಪಿದ ನಂತರ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದ ಸುಳ್ಯ ಶಾಸಕ ಎಸ್. ಅಂಗಾರ ಅವರು ಈಗ ತಮ್ಮ ನಿರ್ಧಾರ ಬದಲಾಯಿಸಿದ್ದಾರೆ. ಸಚಿವ ಎಸ್​. ಅಂಗಾರ ಅವರು ರಾಜಕೀಯ ನಿವೃತ್ತಿ ಘೋಷಣೆಯನ್ನು ಹಿಂಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಬಿಜೆಪಿ ಕಾರ್ಯಕರ್ತರ ಆಕ್ರೋಶ ವ್ಯಕ್ತವಾದ … Continued

ಸುಳ್ಯ: ಕೈ ತಪ್ಪಿದ ಟಿಕೆಟ್, ಬಿಜೆಪಿಯ ಎಸ್. ಅಂಗಾರ ಸಕ್ರಿಯ ರಾಜಕಾರಣಕ್ಕೆ ಗುಡ್‌ ಬೈ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ಹಾಗೂ ಸಚಿವ ಎಸ್. ಅಂಗಾರ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪಕ್ಷ ಟಿಕೆಟ್ ನೀಡಿದ ಕುರಿತು ನನ್ನ ಅಸಮಾಧಾನವಿಲ್ಲ. ಆದರೆ ಇಷ್ಟು ವರ್ಷ ಪಕ್ಷಕ್ಕಾಗಿ ಮತ್ತು ಸಮಾಜಕ್ಕಾಗಿ ಯಾವುದೇ ಕಪ್ಪು ಚುಕ್ಕೆ ಬಾರದಂತೆ ಮಾಡಿದ ಸೇವೆಯನ್ನು ಪಕ್ಷವು … Continued

ಮೃತ ಪ್ರವೀಣ ಕುಟುಂಬಕ್ಕೆ 10 ಲಕ್ಷ ರೂ.ಗಳ ವೈಯಕ್ತಿಕ ನೆರವು: ಡಾ.ಅಶ್ವತ್ಥ ನಾರಾಯಣ

ಬೆಂಗಳೂರು: ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಕುಟುಂಬಕ್ಕೆ ವೈಯಕ್ತಿಕವಾಗಿ 10 ಲಕ್ಷ ರೂ. ನೆರವು ನೀಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ. ಗುರುವಾರ ಮಾಧ್ಯಮದವರ ಜೊತೆ ಜತೆ ಮಾತನಾಡಿದ ಅವರು, ”ಇದನ್ನು ನೆರವು ಎಂದು ಹೇಳಲು ಇಷ್ಟ ಪಡುವುದಿಲ್ಲ. ಇದು ನನ್ನ ಕರ್ತವ್ಯ ವಾಗಿದೆ … Continued

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳನ್ನು ಬಂಧಿಸಿದ ಪೊಲೀಸರು

ಬೆಂಗಳೂರು: ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ದಕ್ಷಿಣ ಕನ್ನಡ ಎಸ್​ಪಿ ಋಷಿಕೇಶ್ ಸೋನಾವಣೆ ಮಾಹಿತಿ ನೀಡಿದ್ದು, ಮೊಹ್ಮದ್​ ಶಫೀಕ್​ ಹಾಗೂ ಜಾಕೀರ್ ಸವಣೂರು ಎಂಬವರನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ. ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಶಂಕೆ ಇದ್ದು, ತನಿಖೆ ನಡೆಯುತ್ತಿದೆ ಎಂದು … Continued

ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ ಹತ್ಯೆ ಪ್ರಕರಣ : 21 ಶಂಕಿತರ ವಶಕ್ಕೆ ಪಡೆದು ವಿಚಾರಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರಿಯಲ್ಲಿ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಯಾದ ಒಂದು ದಿನದ ನಂತರ, ಬುಧವಾರ ತಡರಾತ್ರಿ ಮತ್ತೊಂದು ಶಂಕಿತನನ್ನು ವಶಕ್ಕೆ ಪಡೆಯಲಾಗಿದ್ದು, ಈವರೆಗೆ ಒಟ್ಟು 21 ವಶಕ್ಕೆ ಪಡೆಯಲಾಗಿದೆ. ವಶಕ್ಕೆ ಪಡೆದ ಈ 21 ಶಂಕಿತರಲ್ಲಿ ಪಿಎಫ್‌ಐ ಹಾಗೂ ಎಸ್‌ಡಿಪಿಐ ಸಂಘಟನೆಯ ಸದಸ್ಯರೂ ಇದ್ದಾರೆ ಎಂದು ಹೇಳಲಾಗಿದೆ. ಅವರನ್ನು … Continued