ಮಂಡ್ಯ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ ಬಿಜೆಪಿಗೆ ಸೇರ್ಪಡೆ

ಬೆಂಗಳೂರು: ನಟಿ-ಹಾಗೂ ಮಂಡ್ಯದ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ ಅಧಿಕೃತವಾಗಿ ಶುಕ್ರವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕರ್ನಾಟಕ ಚುನಾವಣಾ ಉಸ್ತುವಾರಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾ ಮೋಹನ್ ದಾಸ್ ಅಗರ್ವಾಲ್‌, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ , ಮಾಜಿ ಮುಖ್ಯಮಂತ್ರಿ ಡಿ ವಿ ಸದಾನಂದ ಗೌಡ, ವಿರೋಧ … Continued

ಸುಮಲತಾ ಅಂಬರೀಶ ಬಿಜೆಪಿ ಸೇರ್ಪಡೆಗೆ ದಿನಾಂಕ ಫಿಕ್ಸ್

ಬೆಂಗಳೂರು : ಕಳೆದ ಬಾರಿ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಭರ್ಜರಿ ಗೆಲುವು ಸಾಧಿಸಿದ್ದ ನಟಿ ಸುಮಲತಾ ಅಂಬರೀಶ ಈ ಬಾರಿ ಬಿಜೆಪಿ ಬೆಂಬಲಿಸಲು ನಿರ್ಧರಿಸಿ ಕಣದಿಂದ ಹಿಂದೆ ಸರಿದಿದ್ದಾರೆ. ಬುಧವಾರ (ಏಪ್ರಿಲ್‌ 3)ರಂದು ಕಣದಿಂದ ಹಿಂದೆ ಸರಿಯುವುದಾಗಿ ಹಾಗೂ ಬಿಜೆಪಿ ಬೆಂಬಲಿಸುವುದಾಗಿ ಘೋಷಿಸಿದ್ದರು. ಈಗ ಬಿಜೆಪಿ ಸೇರುವ ದಿನಾಂಕ ಘೋಷಣೆ ಮಾಡಿದ್ದು, … Continued

ಮಂಡ್ಯ : ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ ಎಂದು ಸುಮಲತಾ ಘೋಷಣೆ ; ಮುಂದಿನ ನಡೆ ಬಗ್ಗೆ ಹೇಳಿದ್ದೇನು..?

ಮಂಡ್ಯ : ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಿಂದ ಸ್ವತಂತ್ರವಾಗಿ ಸ್ಪರ್ಧೆ ಮಾಡುವುದಿಲ್ಲ ಎಂದು ಮಂಡ್ಯದ ಹಾಲಿ ಸಂಸದೆ ಸುಮಲತಾ ಅಂಬರೀಶ ಘೋಷಣೆ ಮಾಡಿದ್ದಾರೆ. ಹಾಗೂ ಇದೇ ವೇಳೆ ಬಿಜೆಪಿ ಸೇರುವುದಾಗಿ ಪ್ರಕಟಿಸಿದ್ದಾರೆ. ಮೈತ್ರಿ ಧರ್ಮ ಪಾಲನೆಗೆ ಮುಂದಾಗಿರುವ ಸುಮಲತಾ ಅಂಬರೀಶ ಜೆಡಿಎಸ್‌-ಬಿಜೆಪಿ ಮೈತ್ರಿ ಅಭ್ಯರ್ಥಿ ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಬೆಂಬಲ ಘೋಷಿಸಿದ್ದಾರೆ. ಮಂಡ್ಯದಲ್ಲಿ ಬುಧವಾರ … Continued

ಸುಮಲತಾ ಭೇಟಿ ಮಾಡಿದ ವಿಜಯೇಂದ್ರ : ಭೇಟಿ ನಂತರ ಸುಮಲತಾ ಹೇಳಿದ್ದೇನು..?

ಬೆಂಗಳೂರು : ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಮಂಡ್ಯದ ಸಂಸದೆ ಸುಮಲತಾರನ್ನು ಶುಕ್ರವಾರ ಅವರ ನಿವಾಸದಲ್ಲಿ ಭೇಟಿಯಾಗಿದ್ದಾರೆ. ಈ ವೇಳೆ ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಯನ್ನು ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಬೆಂಬಲಿಸುವಂತೆ ಅವರು ಮನವಿ ಮಾಡಿದ್ದಾರೆ. ಪ್ರೀತಂ ಗೌಡ ಅವರ ಜೊತೆ ಸುಮಲತಾ ನಿವಾಸಕ್ಕೆ ಆಗಮಿಸಿದ ಬಿಜೆಪಿ ರಾಜ್ಯಾಧಕ್ಷ ವಿಜಯೇಂದ್ರ ಬಿಜೆಪಿ ಸೇರ್ಪಡೆಯಾಗುವಂತೆ ಮನವಿ … Continued

ನಡ್ಡಾ, ಬಿ.ಎಲ್‌. ಸಂತೋಷ ಭೇಟಿ ನಂತರ ಪ್ರಧಾನಿ ಮೋದಿ ಭೇಟಿ ಮಾಡಿದ ಸುಮಲತಾ ಅಂಬರೀಷ : ಮಂಡ್ಯ ಟಿಕೆಟ್‌ ಬಗ್ಗೆ ಚರ್ಚೆ..?

ನವದೆಹಲಿ : ಗುರುವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹಾಗೂ ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್‌. ಸಂತೋಷ ಅವರನ್ನು ಭೇಟಿಯಾಗಿದ್ದ ಸುಮಲತಾ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ಮಂಡ್ಯ ಟಿಕೆಟ್‌ ಬಗ್ಗೆ ಮೋದಿ ಅವರ ಜೊತೆ ಸುಮಲತಾ ಚರ್ಚೆ ನಡೆಸಿದ್ದು, ಪ್ರಧಾನಿ ಟಿಕೆಟ್‌ ಭರವಸೆ … Continued

ಮಗನ ಮದುವೆಗೆ ಪ್ರಧಾನಿ ಮೋದಿಗೆ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ ನೀಡಿದ ಸುಮಲತಾ ಅಂಬರೀಷ

ಬೆಂಗಳೂರು: ತಮ್ಮ ಪುತ್ರ ಅಭಿಷೇಕ ಅಂಬರೀಷ್‌ ಜೊತೆ ತೆರಳಿ ಇಂದು, ಬುಧವಾರ ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿದ ಸುಮಲತಾ ಅಂಬರೀಷ ಅವರು ತಮ್ಮ ಮಗನ ಮದುವೆ ಆಮಂತ್ರಣ ಪತ್ರಿಕೆ ನೀಡಿ ಮದುವೆಗೆ ಬರುವಂತೆ ಆಹ್ವಾನ ನೀಡಿದ್ದಾರೆ. ಅಭಿಷೇಕ ಅಂಬರೀಷ ಅವರು ತನ್ನ ಬಾಲ್ಯದ ಗೆಳತಿ ಅವಿವಾ ಬಿದ್ದಪ್ಪ ಜೊತೆ ಕೆಲವೇ ದಿನಗಳಲ್ಲಿ ವೈವಾಹಿಕಿ ಜೀವನಕ್ಕೆ … Continued

ಮುಸ್ಕಾನ್‌ ತನಿಖೆ ಮಾಡಿದರೆ ತಪ್ಪೇನೂ ಇಲ್ಲ, ಆದರೆ ರಾಜಕಾರಣ ಮಾಡಿ ಶಾಂತಿ ಹದಗೆಡಿಸಬಾರದು: ಸುಮಲತಾ ಅಂಬರೀಷ್

ಬೆಂಗಳೂರು: ಮಂಡ್ಯದ ಮುಸ್ಕಾನ್‌ ಅವರನ್ನು ತನಿಖೆ ನಡೆಸಿದರೆ ತಪ್ಪೇನೂ ಇಲ್ಲ. ತನಿಖೆ ನಡೆದರೆ ಸತ್ಯ ಹೊರಗೆ ಬರುತ್ತದೆ ಎಂದು ಸಂಸದೆ ಸುಮಲತಾ ಅಂಬರೀಶ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತನಿಖೆ ಮಾಡುವುದರಲ್ಲಿ ತಪ್ಪೇನಿಲ್ಲ, ತನಿಖೆ ಆಗಿ ನಿಜ ಹೊರಗೆ ಬರಬೇಕು. ಆದರೆ ರಾಜಕಾರಣ ಮಾಡಿ ವಾತಾವರಣ ಹದಗೆಡಿಸುವ ಕೆಲಸ ಮಾಡಬಾರದು ಎಂದು ಸ್ಪಷ್ಟಪಡಿಸಿದರು. ಮಂಡ್ಯ ಹಾಗೂ … Continued

ಬಿಕಿನಿ ಬೀಚಿಗೆ ವಿನಃ ಕಾಲೇಜಿಗಲ್ಲ, ಎಲ್ಲದಕ್ಕೂ ಡ್ರೆಸ್ ಕೋಡ್ ಇರುತ್ತದೆ: ಸುಮಲತಾ ಅಂಬರೀಶ

ಬೆಂಗಳೂರು : ಪ್ರತಿ ಸ್ಥಳಕ್ಕೂ ಅದರದ್ದೇ ಆದ ಡ್ರೆಸ್ ಕೋಡ್ ಇರುತ್ತದೆ. ನೀವು ಬೀಚ್ ಅಥವಾ ಸ್ವಿಮ್ಮಿಂಗ್ ಪೂಲ್​ನಲ್ಲಿ ಬಿಕಿನಿ ಧರಿಸಬಹುದು. ಆದ್ರೆ, ಅದನ್ನ ಶಾಲೆಯಲ್ಲಿ ಧರಿಸಲು ಸಾಧ್ಯವಿಲ್ಲ” ಎಂದು ಸಂಸದೆ ಸುಮಲತಾ ಅಂಬರೀಶ್ ಅವರು ಕಾಂಗ್ರೆಸ್‌ ನಾಯಕ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಹಿಜಾಬ್ ವಿವಾದದ ಬಗ್ಗೆ ಮಾತನಾಡಿದ ಅವರು “ನಾವು … Continued

ಅಕ್ರಮ ಗಣಿಗಾರಿಕೆ ವಿರುದ್ಧದ ನಮ್ಮ ಹೋರಾಟ ನಿಲ್ಲುವುದಿಲ್ಲ: ಸುಮಲತಾ

ಬೆಂಗಳೂರು: ಅಕ್ರಮ ಗಣಿಗಾರಿಕೆ ತಡೆಯುವುದು ಕಷ್ಟ. ಆದರೆ, ನಮ್ಮ ಹೋರಾಟ ಮುಂದುವರಿಯುತ್ತದೆ ಎಂದು ಸಂಸದೆ ಸುಮಲತಾ ಘೋಷಣೆ ಮಾಡಿದ್ದಾರೆ. ರಾಜ್ಯಪಾಲರ ಪ್ರಮಾಣವಚನ ಕಾರ್ಯಕ್ರಮದ ನಂತರ ರಾಜಭವನದಲ್ಲಿ ಭಾನುವಾರ ಮಾತನಾಡಿದ ಅವರು, ನಾವು ಅಡ್ಡದಾರಿಯಲ್ಲಿ ಹೋಗುವುದು ಬೇಡ. ನಮ್ಮ ನೋವನ್ನು ಶಾಂತಿಯುತವಾಗಿ ಪ್ರಕಟ ಮಾಡೋಣ. ನಾನು ಯಾರ ವಿರುದ್ಧ ಹೋರಾಟ ಮಾಡಿಲ್ಲ. ನನ್ನ ಹೋರಾಟ ಅಕ್ರಮ ಗಣಿಗಾರಿಕೆ … Continued