ಬಾಬಾ ರಾಮದೇವ ಕಂಪನಿ ತಯಾರಿಸಿದ 14 ಔಷಧಗಳ ತಯಾರಿಕಾ ಪರವಾನಗಿ ಅಮಾನತು ಮಾಡಿದ ಉತ್ತರಾಖಂಡ ಸರ್ಕಾರ

ನವದೆಹಲಿ: ಉತ್ತರಾಖಂಡ ರಾಜ್ಯದ ಪರವಾನಗಿ ಪ್ರಾಧಿಕಾರವು ಬಾಬಾ ರಾಮದೇವ ಅವರ ಪತಂಜಲಿಯ ದಿವ್ಯ ಫಾರ್ಮಸಿಯ 14 ಉತ್ಪನ್ನಗಳ ಪರವಾನಗಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸೋಮವಾರ ಅಮಾನತುಗೊಳಿಸಿದೆ. ದಾರಿ ತಪ್ಪಿಸುವ ಜಾಹೀರಾತು ಪ್ರಕರಣದಲ್ಲಿ ಪತಂಜಲಿಯ ದಿವ್ಯ ಫಾರ್ಮಸಿ ತಯಾರಿಸಿದ 14 ಉತ್ಪನ್ನಗಳ ಪರವಾನಗಿಯನ್ನು ಅಮಾನತುಗೊಳಿಸಿರುವುದಾಗಿ ಪರವಾನಗಿ ಸಂಸ್ಥೆ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ತಿಳಿಸಿದೆ. ಉತ್ತರಾಖಂಡ ಸರ್ಕಾರವು … Continued

ಇವಿಎಂ ಮತಗಳ ಜೊತೆ ವಿವಿಪ್ಯಾಟ್ ಮತಗಳ ಸಂಪೂರ್ಣ ಎಣಿಕೆ : ಎಲ್ಲ ಅರ್ಜಿಗಳನ್ನು ವಜಾ ಮಾಡಿದ ಸುಪ್ರೀಂ ಕೋರ್ಟ್

ನವದೆಹಲಿ: ಚುನಾವಣಾ ಮತ ಎಣಿಕೆ ವೇಳೆ ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಮೂಲಕ ಚಲಾವಣೆಯಾದ ಮತಗಳೊಂದಿಗೆ ವಿವಿ- ಪ್ಯಾಟ್‌ನಲ್ಲಿನ ಮತಗಳನ್ನು ತಾಳೆ ಮಾಡಬೇಕು ಎಂದು ಕೋರಿ ಸಲ್ಲಿಸಿದ್ದ ಎಲ್ಲ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ ಶುಕ್ರವಾರ (ಏಪ್ರಿಲ್‌ 26) ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ಸಂಜೀವ ಖನ್ನಾ ಮತ್ತು ದೀಪಂಕರ ದತ್ತಾ ಅವರ ಪೀಠವು ಇವಿಎಂಗಳ ಬದಲಿಗೆ ಮತಪತ್ರ ಬಳಕೆ ಮಾಡಬೇಕು … Continued

ಸುಪ್ರೀಂ ಕೋರ್ಟ್ ತರಾಟೆ ನಂತರ ದೊಡ್ಡದಾಗಿ ಕ್ಷಮೆಯಾಚನೆ ಪ್ರಕಟಿಸಿದ ಪತಂಜಲಿ ಸಂಸ್ಥೆ

ನವದೆಹಲಿ: ದಾರಿ ತಪ್ಪಿಸುವ ಮತ್ತು ಅಲೋಪಥಿ ಪದ್ದತಿ ವಿರುದ್ಧ ಅವಹೇಳನಕರ ಜಾಹೀರಾತು ಅಭಿಯಾನ ಆರಂಭಿಸಿದ್ದಕ್ಕಾಗಿ ಪತಂಜಲಿ ಆಯುರ್ವೇದ ಪ್ರಕಟಿಸಿದ್ದ ಬೇಷರತ್‌ ಕ್ಷಮೆಯಾಚನೆ ಜಾಹೀರಾತಿನ ಗಾತ್ರದ ಬಗ್ಗೆ ಸುಪ್ರೀಂ ಕೋರ್ಟ್‌ ಆಕ್ಷೇಪ ವ್ಯಕ್ತಪಡಿಸಿದ ಒಂದು ದಿನದ ನಂತರ ಅದು ಜಾಹೀರಾತಿನ ಗಾತ್ರವನ್ನು ಹೆಚ್ಚಿಸಿ ಕಂಪೆನಿ ಕ್ಷಮಾಪಣೆ ಪ್ರಕಟಿಸಿದೆ. ವಿವಿಧ ದಿನಪತ್ರಿಕೆಗಳಲ್ಲಿ ಬುಧವಾರ ಪ್ರಕಟವಾದ ಜಾಹೀರಾತು ಈ ಹಿಂದೆ … Continued

ಹಾದಿ ತಪ್ಪಿಸುವ ಜಾಹೀರಾತು: ‘ನಾವೇನು ಕುರುಡರಲ್ಲ’ ; ಬಾಬಾ ರಾಮದೇವ ‘ಭೇಷರತ್ ಕ್ಷಮೆ’ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಪತಂಜಲಿ ಸಂಸ್ಥೆಯ ಹಾದಿ ತಪ್ಪಿಸುವ ಜಾಹಿರಾತು ಪ್ರಕರಣಕ್ಕೆ ಸಂಬಂಧಿಸಿದಂತೆ ಪತಂಜಲಿ ಸಂಸ್ಥಾಪಕರಾದ ಯೋಗ ಗುರು ಬಾಬಾ ರಾಮದೇವ ಮತ್ತು ಆಚಾರ್ಯ ಬಾಲಕೃಷ್ಣ ಅವರು ಸಲ್ಲಿಸಿದ ಮತ್ತೊಂದು ಬೇಷರತ್‌ ಕ್ಷಮೆಯಾಚನೆಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. “ನಾವು ಕುರುಡರಲ್ಲ” ಮತ್ತು ಈ ಪ್ರಕರಣದಲ್ಲಿ “ಉದಾರವಾಗಿರಲು ಬಯಸುವುದಿಲ್ಲ” ಎಂದು ಹೇಳಿ ಅದನ್ನು ತಿರಸ್ಕರಿಸಿದೆ. ಇಷ್ಟು ದಿನ ಪತಂಜಲಿ ವಿರುದ್ಧ … Continued

ಬರ ಪರಿಹಾರಕ್ಕೆ ಕರ್ನಾಟಕದ ಅರ್ಜಿ : ಕೇಂದ್ರ-ರಾಜ್ಯಗಳ ನಡುವೆ ವ್ಯಾಜ್ಯ ಬೇಡ ಎಂದ ಸುಪ್ರೀಂ ಕೋರ್ಟ್‌

ನವದೆಹಲಿ: ಕೇಂದ್ರ ಸರ್ಕಾರವು ಬರ ಪರಿಹಾರ ಬಿಡುಗಡೆ ಮಾಡುತ್ತಿಲ್ಲ ಎಂದು ಕರ್ನಾಟಕ ಸರ್ಕಾರ ಆಕ್ಷೇಪಿಸಿರುವ ಅರ್ಜಿಯ ವಿಚಾರಣೆಯ ವೇಳೆ ಸರ್ವೋಚ್ಚ ನ್ಯಾಯಾಲಯವು ಕೇಂದ್ರ ಮತ್ತು ರಾಜ್ಯ ಸರ್ಕಾರದ ನಡುವೆ ವ್ಯಾಜ್ಯ ಬೇಡ ಎಂದು ಸೋಮವಾರ ಕಿವಿಮಾತು ಹೇಳಿದ್ದು, ಕರ್ನಾಟಕದ ಅರ್ಜಿಗೆ ಪ್ರತಿಕ್ರಿಯಿಸುವಂತೆ ಕೇಂದ್ರಕ್ಕೆ ಸೂಚಿಸಿದೆ. ಕರ್ನಾಟಕದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬಿ.ಆರ್‌. ಗವಾಯಿ ಮತ್ತು … Continued

ಆದಾಯ ತೆರಿಗೆ ಪ್ರಕರಣ: ಚುನಾವಣೆ ಮುಗಿಯುವವರೆಗೂ ಕಾಂಗ್ರೆಸ್ ವಿರುದ್ಧ ಕ್ರಮ ಇಲ್ಲ ಎಂದು ಸುಪ್ರೀಂ ಕೋರ್ಟಿಗೆ ಕೇಂದ್ರದ ಸ್ಪಷ್ಟನೆ

ನವದೆಹಲಿ: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (ಐಎನ್‌ಸಿ) ಪಕ್ಷದಿಂದ ಸುಮಾರು 3,500 ಕೋಟಿ ರೂ.ಗಳ ಆದಾಯ ತೆರಿಗೆ ಬಾಕಿ ವಸೂಲಿ ಕುರಿತಂತೆ ಮುಂಬರುವ ಸಾರ್ವತ್ರಿಕ ಚುನಾವಣೆ ಮುಗಿಯುವವರೆಗೆ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಎಂದು ಕೇಂದ್ರ ಸರ್ಕಾರ ಸೋಮವಾರ ಸುಪ್ರೀಂ ಕೋರ್ಟ್‌ಗೆ ಭರವಸೆ ನೀಡಿದೆ. ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರಿದ್ದ ಪೀಠದ ಎದುರು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ … Continued

ಇ.ಡಿ. ಬಂಧಿಸಿದ್ದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿ ಹಿಂಪಡೆದ ಅರವಿಂದ ಕೇಜ್ರಿವಾಲ್

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮುಂದೆ ಸಲ್ಲಿಸಿದ್ದ ಅರ್ಜಿಯನ್ನು ಹಿಂಪಡೆಯಲು ದೆಹಲಿ ಮುಖ್ಯಮಂತ್ರಿ (ಸಿಎಂ) ಅರವಿಂದ ಕೇಜ್ರಿವಾಲ್ ನಿರ್ಧರಿಸಿದ್ದಾರೆ. ಕೇಜ್ರಿವಾಲ್ ಅವರನ್ನು ದೆಹಲಿಯ ರೌಸ್ ಅವೆನ್ಯೂ ನ್ಯಾಯಾಲಯಕ್ಕೆ ಇ.ಡಿ. ಹಾಜರುಪಡಿಸಿದಾಗ ಅವರ ರಿಮಾಂಡ್‌ಗೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರೇಟ್ ಮುಂದೆ ಪ್ರಕರಣವನ್ನು ವಾದಿಸುವುದಾಗಿ ಕೇಜ್ರಿವಾಲ್ ಪರ … Continued

ತನ್ನ ಆದೇಶ ಧಿಕ್ಕರಿಸಿದ ತಮಿಳುನಾಡು ರಾಜ್ಯಪಾಲರ ವಿರುದ್ಧ ಸುಪ್ರೀಂ ಕೋರ್ಟ್‌ ಕೆಂಡಾಮಂಡಲ

ನವದೆಹಲಿ : ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಮುಖಂಡ ಕೆ ಪೊನ್ಮುಡಿ ಅವರಿಗೆ ಕ್ರಿಮಿನಲ್ ಪ್ರಕರಣವೊಂದರಲ್ಲಿ ವಿಧಿಸಲಾಗಿದ್ದ ಶಿಕ್ಷೆಗೆ ಸುಪ್ರೀಂ ಕೋರ್ಟ್ ಕಳೆದ ವಾರ ತಡೆಯಾಜ್ಞೆ ನೀಡಿದ ನಂತರವೂ ಅವರನ್ನು ಮತ್ತೆ ರಾಜ್ಯ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಲು ನಿರಾಕರಿಸಿದ ತಮಿಳುನಾಡು ರಾಜ್ಯಪಾಲ ಆರ್.ಎನ್. ರವಿ ಅವರ ನಡವಳಿಕೆಯ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಗರಂ ಆಗಿದೆ. … Continued

ದಾರಿ ತಪ್ಪಿಸುವ ಜಾಹೀರಾತು: ಸುಪ್ರೀಂ ಕೋರ್ಟ್‌ನಲ್ಲಿ ಬೇಷರತ್‌ ಕ್ಷಮೆಯಾಚಿಸಿದ ಪತಂಜಲಿ

ನವದೆಹಲಿ: ವೈಜ್ಞಾನಿಕ ತಳಹದಿಯ ಔಷಧಗಳನ್ನು (ಎವಿಡೆನ್ಸ್‌ ಬೇಸ್ಡ್‌ ಮೆಡಿಸಿನ್‌- ಇಬಿಎಂ) ಗುರಿಯಾಗಿಸಿಕೊಂಡು ಜಾಹೀರಾತು ನೀಡಿದ್ದ ಪತಂಜಲಿ ಆಯುರ್ವೇದ ಮತ್ತು ಅದರ ವ್ಯವಸ್ಥಾಪಕ ನಿರ್ದೇಶಕ ಆಚಾರ್ಯ ಬಾಲಕೃಷ್ಣ ಬುಧವಾರ ಸುಪ್ರೀಂ ಕೋರ್ಟ್‌ನಲ್ಲಿ ಬೇಷರತ್‌ ಕ್ಷಮೆಯಾಚಿಸಿದ್ದಾರೆ. ಆಯುರ್ವೇದಕ್ಕೆ ಪ್ರೋತ್ಸಾಹ ನೀಡಲೆಂದು ಹೊರತರಲಾದ ಈ ಜಾಹೀರಾತುಗಳನ್ನು ಕಂಪನಿ ಮತ್ತೆ ಪ್ರಕಟಿಸುವುದಿಲ್ಲ ಎಂದು ಬಾಲಕೃಷ್ಣ ಅವರು ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಸಿದ್ದಾರೆ. … Continued

ಮಾರ್ಚ್‌ 21ರೊಳಗೆ ಚುನಾವಣಾ ಬಾಂಡ್‌ಗಳ ಸಂಪೂರ್ಣ ವಿವರ ನೀಡಿ : ಎಸ್‌ಬಿಐಗೆ ಸುಪ್ರೀಂ ಕೋರ್ಟ್‌ ತಾಕೀತು

ನವದೆಹಲಿ: ಚುನಾವಣಾ ಬಾಂಡ್‌ ಕುರಿತ ಸಂಪೂರ್ಣ ಮಾಹಿತಿಯನ್ನು ಬಹಿರಂಗಗೊಳಿಸಬೇಕು ಎಂದು ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ(ಎಸ್‌ಬಿಐ)ಕ್ಕೆ ಸುಪ್ರೀಂ ಕೋರ್ಟ್‌ ಸೋಮವಾರ ತಾಕೀತು ಮಾಡಿದೆ. ಚುನಾವಣಾ ಬಾಂಡ್‌ಗಳಿಗೆ ಸಂಬಂಧಿಸಿದ ಸಂಪೂರ್ಣ ವಿವರಗಳನ್ನು ಇದೇ ತಿಂಗಳು ಮಾರ್ಚ್ 21ರೊಳಗೆ ಬಿಡುಗಡೆ ಮಾಡಬೇಕು ಎಂದು ಎಸ್‌ಬಿಐಗೆ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರ ನೇತೃತ್ವದ ಐವರು ನ್ಯಾಯಾಧೀಶರ ಪೀಠವು ತಾಕೀತು ಮಾಡಿದೆ. … Continued