ತನ್ನ ಆದೇಶ ಧಿಕ್ಕರಿಸಿದ ತಮಿಳುನಾಡು ರಾಜ್ಯಪಾಲರ ವಿರುದ್ಧ ಸುಪ್ರೀಂ ಕೋರ್ಟ್‌ ಕೆಂಡಾಮಂಡಲ

ನವದೆಹಲಿ : ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಮುಖಂಡ ಕೆ ಪೊನ್ಮುಡಿ ಅವರಿಗೆ ಕ್ರಿಮಿನಲ್ ಪ್ರಕರಣವೊಂದರಲ್ಲಿ ವಿಧಿಸಲಾಗಿದ್ದ ಶಿಕ್ಷೆಗೆ ಸುಪ್ರೀಂ ಕೋರ್ಟ್ ಕಳೆದ ವಾರ ತಡೆಯಾಜ್ಞೆ ನೀಡಿದ ನಂತರವೂ ಅವರನ್ನು ಮತ್ತೆ ರಾಜ್ಯ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಲು ನಿರಾಕರಿಸಿದ ತಮಿಳುನಾಡು ರಾಜ್ಯಪಾಲ ಆರ್.ಎನ್. ರವಿ ಅವರ ನಡವಳಿಕೆಯ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಗರಂ ಆಗಿದೆ. … Continued

ದಾರಿ ತಪ್ಪಿಸುವ ಜಾಹೀರಾತು: ಸುಪ್ರೀಂ ಕೋರ್ಟ್‌ನಲ್ಲಿ ಬೇಷರತ್‌ ಕ್ಷಮೆಯಾಚಿಸಿದ ಪತಂಜಲಿ

ನವದೆಹಲಿ: ವೈಜ್ಞಾನಿಕ ತಳಹದಿಯ ಔಷಧಗಳನ್ನು (ಎವಿಡೆನ್ಸ್‌ ಬೇಸ್ಡ್‌ ಮೆಡಿಸಿನ್‌- ಇಬಿಎಂ) ಗುರಿಯಾಗಿಸಿಕೊಂಡು ಜಾಹೀರಾತು ನೀಡಿದ್ದ ಪತಂಜಲಿ ಆಯುರ್ವೇದ ಮತ್ತು ಅದರ ವ್ಯವಸ್ಥಾಪಕ ನಿರ್ದೇಶಕ ಆಚಾರ್ಯ ಬಾಲಕೃಷ್ಣ ಬುಧವಾರ ಸುಪ್ರೀಂ ಕೋರ್ಟ್‌ನಲ್ಲಿ ಬೇಷರತ್‌ ಕ್ಷಮೆಯಾಚಿಸಿದ್ದಾರೆ. ಆಯುರ್ವೇದಕ್ಕೆ ಪ್ರೋತ್ಸಾಹ ನೀಡಲೆಂದು ಹೊರತರಲಾದ ಈ ಜಾಹೀರಾತುಗಳನ್ನು ಕಂಪನಿ ಮತ್ತೆ ಪ್ರಕಟಿಸುವುದಿಲ್ಲ ಎಂದು ಬಾಲಕೃಷ್ಣ ಅವರು ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಸಿದ್ದಾರೆ. … Continued

ಮಾರ್ಚ್‌ 21ರೊಳಗೆ ಚುನಾವಣಾ ಬಾಂಡ್‌ಗಳ ಸಂಪೂರ್ಣ ವಿವರ ನೀಡಿ : ಎಸ್‌ಬಿಐಗೆ ಸುಪ್ರೀಂ ಕೋರ್ಟ್‌ ತಾಕೀತು

ನವದೆಹಲಿ: ಚುನಾವಣಾ ಬಾಂಡ್‌ ಕುರಿತ ಸಂಪೂರ್ಣ ಮಾಹಿತಿಯನ್ನು ಬಹಿರಂಗಗೊಳಿಸಬೇಕು ಎಂದು ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ(ಎಸ್‌ಬಿಐ)ಕ್ಕೆ ಸುಪ್ರೀಂ ಕೋರ್ಟ್‌ ಸೋಮವಾರ ತಾಕೀತು ಮಾಡಿದೆ. ಚುನಾವಣಾ ಬಾಂಡ್‌ಗಳಿಗೆ ಸಂಬಂಧಿಸಿದ ಸಂಪೂರ್ಣ ವಿವರಗಳನ್ನು ಇದೇ ತಿಂಗಳು ಮಾರ್ಚ್ 21ರೊಳಗೆ ಬಿಡುಗಡೆ ಮಾಡಬೇಕು ಎಂದು ಎಸ್‌ಬಿಐಗೆ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರ ನೇತೃತ್ವದ ಐವರು ನ್ಯಾಯಾಧೀಶರ ಪೀಠವು ತಾಕೀತು ಮಾಡಿದೆ. … Continued

ಚುನಾವಣಾ ಬಾಂಡ್‌ ಸಂಖ್ಯೆಗಳನ್ನು ಬಹಿರಂಗಪಡಿಸದ ಎಸ್‌ ಬಿಐ : ಸುಪ್ರೀಂ ಕೋರ್ಟ್‌ ನೋಟಿಸ್‌

ನವದೆಹಲಿ: ಚುನಾವಣಾ ಬಾಂಡ್‌ಗಳನ್ನು ಗುರುತಿಸಲು ಸಹಾಯ ಮಾಡುವ ಬಾಂಡ್‌ಗಳ ಸಂಖ್ಯೆಗಳನ್ನು ಬಹಿರಂಗಪಡಿಸದ ಹಿನ್ನೆಲೆಯಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್‌ಬಿಐ)ಕ್ಕೆ ಈ ಬಗ್ಗೆ ಪ್ರತಿಕ್ರಿಯಿಸುವಂತೆ ಸೂಚಿಸಿ ಸುಪ್ರೀಂ ಕೋರ್ಟ್‌ ಶುಕ್ರವಾರ ನೋಟಿಸ್‌ ಜಾರಿ ಮಾಡಿದೆ. ಚುನಾವಣಾ ಬಾಂಡ್‌ಗಳಿಗೆ ಸಂಬಂಧಿಸಿದ ಎಲ್ಲಾ ವಿವರಗಳನ್ನು ಬಹಿರಂಗಪಡಿಸುವಂತೆ ಮಾರ್ಚ್ 11ರಂದು ನ್ಯಾಯಾಲಯ ನೀಡಿದ್ದ ಆದೇಶವನ್ನು ಎಸ್‌ಬಿಐ ಸಂಪೂರ್ಣ ಪಾಲಿಸಿಲ್ಲ ಎಂದು ಮುಖ್ಯ … Continued

ಸಿಎಎ : ಮಾರ್ಚ್ 19 ರಂದು ಪೌರತ್ವ (ತಿದ್ದುಪಡಿ) ನಿಯಮಗಳ ವಿರುದ್ಧದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ನವದೆಹಲಿ: 2019 ರ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮತ್ತು ಇತ್ತೀಚೆಗೆ ಸೂಚಿಸಲಾದ 2024 ರ ಪೌರತ್ವ (ತಿದ್ದುಪಡಿ) ನಿಯಮಗಳಿಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ಮಾರ್ಚ್ 19ರಂದು ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ. ಭಾರತದ ಮುಖ್ಯ ನ್ಯಾಯಮೂರ್ತಿ (CJI) ಡಿ.ವೈ. ಚಂದ್ರಚೂಡ ನೇತೃತ್ವದ ಪೀಠವು ಎಲ್ಲ ಅರ್ಜಿಗಳನ್ನು ವಿಚಾರಣೆ ನಡೆಸಲಿದೆ ಎಂದು ಹೇಳಿದೆ. … Continued

ಸುಪ್ರೀಂ ಕೋರ್ಟ್‌ ಆದೇಶ : ಚುನಾವಣಾ ಬಾಂಡ್‌ ದತ್ತಾಂಶವನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಎಸ್‌ಬಿಐ

ನವದೆಹಲಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಮಂಗಳವಾರ ಭಾರತೀಯ ಚುನಾವಣಾ ಆಯೋಗಕ್ಕೆ (ಇಸಿಐ) 2019ರ ಏಪ್ರಿಲ್ 12ರಿಂದ ರಾಜಕೀಯ ಪಕ್ಷಗಳು ಎನ್‌ಕ್ಯಾಶ್ ಮಾಡಿದ ಚುನಾವಣಾ ಬಾಂಡ್‌ಗಳ ಎಲ್ಲಾ ವಿವರಗಳನ್ನು ರವಾನಿಸಿದೆ. ಮಂಗಳವಾರ (ಮಾರ್ಚ್ 12) ಸಂಜೆ 5:30ರೊಳಗೆ ಮಾಡಬೇಕೆಂದು ಸೋಮವಾರದ ಸುಪ್ರೀಂ ಕೋರ್ಟ್ ಆದೇಶಕ್ಕೆ ಅನುಗುಣವಾಗಿ ಅಂಕಿ-ಅಂಶವನ್ನು ಚುನಾವಣಾ ಆಯೋಗಕ್ಕೆ ಕಳುಹಿಸಿದೆ. ಮಾರ್ಚ್ 15, … Continued

ಕೇಂದ್ರ ಸರ್ಕಾರ ಚುನಾವಣಾ ಆಯುಕ್ತರ ನೇಮಿಸುವುದಕ್ಕೆ ತಡೆ ಕೋರಿ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ಕಾಂಗ್ರೆಸ್ ನಾಯಕಿ

ನವದೆಹಲಿ: ಖಾಲಿ ಇರುವ ಇಬ್ಬರು ಚುನಾವಣಾ ಆಯುಕ್ತರುಗಳನ್ನು ಕೇಂದ್ರ ಸರ್ಕಾರ ನೇಮಿಸುವುದಕ್ಕೆ ತಡೆ ನೀಡಬೇಕು ಎಂದು ಕೋರಿ ಕಾಂಗ್ರೆಸ್ ಮುಖಂಡರೊಬ್ಬರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಮಧ್ಯಪ್ರದೇಶದ ಕಾಂಗ್ರೆಸ್ ನಾಯಕಿ ಡಾ.ಜಯಾ ಠಾಕೂರ್‌ ಅವರು 2023 ರ ಸುಪ್ರೀಂ ಕೋರ್ಟ್‌ ತೀರ್ಪನ್ನು ಉಲ್ಲೇಖಿಸಿ ಕೇಂದ್ರ ಸರ್ಕಾರಕ್ಕೆ ಚುನಾವಣಾ ಆಯುಕ್ತರನ್ನು ನೇಮಿಸದಂತೆ ಸೂಚಿಸಬೇಕು ಎಂದು ಆಗ್ರಹಿಸಿ ಅರ್ಜಿಯಲ್ಲಿ … Continued

ಲೋಕಪಾಲದ ಮುಖ್ಯಸ್ಥರಾಗಿ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎ.ಎಂ.ಖಾನ್ವಿಲ್ಕರ ನೇಮಕ

ನವದೆಹಲಿ : ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ನಿವೃತ್ತರಾದ ಸುಮಾರು 19 ತಿಂಗಳ ನಂತರ, ನ್ಯಾಯಮೂರ್ತಿ ಎ.ಎಂ. ಖಾನ್ವಿಲ್ಕರ್ ಅವರನ್ನು ಭ್ರಷ್ಟಾಚಾರ ವಿರೋಧಿ ಒಂಬುಡ್ಸ್‌ಮನ್ ಲೋಕಪಾಲದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಸುಮಾರು ಎರಡು ವರ್ಷಗಳಿಂದ ಹುದ್ದೆ ಖಾಲಿ ಇತ್ತು. ನ್ಯಾಯಮೂರ್ತಿ ಅಜಯ ಮಾಣಿಕ್‌ ರಾವ್‌ ಖಾನ್ವಿಲ್ಕರ್ ಅವರನ್ನು ಲೋಕಪಾಲ್ ಅಧ್ಯಕ್ಷರನ್ನಾಗಿ ನೇಮಿಸಲು ರಾಷ್ಟ್ರಪತಿ ದ್ರೌಪದಿ ಮುರ್ಮು ಸಂತಸ ವ್ಯಕ್ತಪಡಿಸಿದ್ದಾರೆ” … Continued

ಸಿಎಂ ಸಿದ್ದರಾಮಯ್ಯಗೆ ದಂಡ: ಹೈಕೋರ್ಟ್‌ ಆದೇಶಕ್ಕೆ ತಡೆ ನೀಡಿದ ಸುಪ್ರಿಂ ಕೋರ್ಟ್‌

ನವದೆಹಲಿ : ಪ್ರತಿಭಟನಾ ಮೆರವಣಿಗೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮ್ಯಯ ಮತ್ತು ಇತರ ನಾಯಕರಿಗೆ ತಲಾ ₹10 ಸಾವಿರ ದಂಡ ವಿಧಿಸಿದ್ದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆ ನೀಡಿದೆ. ಹಾಗೂ ಮಾರ್ಚ್‌ 6ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಕರ್ನಾಟಕ ಮುಖ್ಯಮಂತ್ರಿ (ಸಿಎಂ) ಸಿದ್ದರಾಮಯ್ಯ, ಸಚಿವರಾದ ರಾಮಲಿಂಗಾ ರೆಡ್ಡಿ ಮತ್ತು ಎಂ.ಬಿ.ಪಾಟೀಲ, ಹಾಗೂ ಮತ್ತು ಕರ್ನಾಟಕ ಕಾಂಗ್ರೆಸ್‌ … Continued

‘ಚುನಾವಣಾ ಬಾಂಡ್‌ ಯೋಜನೆ ಅಸಂವಿಧಾನಿಕ..’ : ಮಹತ್ವದ ತೀರ್ಪಿನಲ್ಲಿ ಚುನಾವಣಾ ಬಾಂಡ್ ಯೋಜನೆ ರದ್ದುಗೊಳಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ: ರಾಜಕೀಯ ನಿಧಿಗಾಗಿ ಚುನಾವಣಾ ಬಾಂಡ್ ಯೋಜನೆಯು ನಾಗರಿಕರ ಮಾಹಿತಿಯ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ಪರಿಗಣಿಸಿರುವ ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪಿನಲ್ಲಿ ರಾಜಕೀಯ ಪಕ್ಷಗಳಿಗೆ ಅನಾಮಧೇಯ ದೇಣಿಗೆಗಳನ್ನು ನೀಡಲು ಅನುಮತಿಸುವ ಚುನಾವಣಾ ಬಾಂಡ್ ಯೋಜನೆಯನ್ನು ಗುರುವಾರ ರದ್ದುಗೊಳಿಸಿದೆ. ಯೋಜನೆ ಜಾರಿಗೆ ತರಲೆಂದು ಆದಾಯ ತೆರಿಗೆ ಕಾಯಿದೆ ಮತ್ತು ಜನ ಪ್ರತಿನಿಧಿ ಕಾಯಿದೆಗೆ ಮಾಡಿದ ತಿದ್ದುಪಡಿಗಳನ್ನು ಮುಖ್ಯ … Continued